• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

cknewsnow desk by cknewsnow desk
April 25, 2021
in COVID-19, STATE
Reading Time: 1 min read
0
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
914
VIEWS
FacebookTwitterWhatsuplinkedinEmail

ಎಲ್ಲಿಯೂ ರೆಮಿಡಿಸ್ವೀರ್‌ ಕೊರತೆಯೂ ಇಲ್ಲ. ದಿನಕ್ಕೆ 15-20 ಸಾವಿರ ವೇಲ್‌ಗಳು ಪೂರೈಕೆ ಆಗುತ್ತಿವೆ. ಅಷ್ಟೂ ರಾಜ್ಯದಲ್ಲೇ ತಯಾರಾಗುತ್ತಿವೆ. ಹಾಗಾದರೆ, ದಿನಕ್ಕೆ ಹೊಸದಾಗಿ ದಾಖಲಾಗುತ್ತಿರುವ ಸೋಂಕಿತರೆಷ್ಟು? ದಿನಕ್ಕೆ 15,000 ಸೋಂಕಿತರು ದಾಖಲಾಗುತ್ತಿದ್ದಾರಾ, ಹೇಗೆ? ಆಸ್ಪತ್ರೆಗಳಿಗೆ ಬರುತ್ತಿರುವ ರೆಮಿಡಿಸ್ವೀರ್‌ ಎಲ್ಲಿ ಹೋಗುತ್ತಿದೆ?

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್‌ ಆಗಲಿ ಅಥವಾ ರೆಮಿಡಿಸ್ವೀರ್‌ ಇಂಜೆಕ್ಷನ್ ಕೊರತೆ ಇಲ್ಲ. ಜನರಿಗೆ ತೊಂದರೆ ಕೊಡಲು ಹಾಗೂ ಸರಕಾರಕ್ಕೆ ಕೆಟ್ಟ ಹೆಸರು ತರಲು ಯಾರೋ ಹಣದಾಸೆಗೆ ಬಿದ್ದು ಕೃತಕ ಅಭಾವ ಸೃಷ್ಟಿ ಮಾಡುತ್ತಿರುವ ಅನುಮಾನವಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಂಶಯ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಶನಿವಾರ ಅವರು ರಾಮನಗರ ಜಿಲ್ಲೆಯ ಕೋವಿಡ್‌ ಪರಿಸ್ಥಿತಿಯ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ತಜ್ಞರ ಜತೆ ವರ್ಚುಯಲ್‌ ಮೂಲಕ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಸ್ವಲ್ಪ ಮಟ್ಟಿಗೆ ಅಲ್ಲಲ್ಲಿ ಲಾಜಿಸ್ಟಿಕ್ ಸಮಸ್ಯೆ ಬಿಟ್ಟರೆ ರಾಜ್ಯದಲ್ಲಿ ಆಮ್ಲಜನಕದ ಕೊರತೆ ಆಗಿಲ್ಲ. ಮೊದಲನೇ ಅಲೆ ಬಂದಾಗ ಎಲ್ಲ ಆಸ್ಪತ್ರೆಗಳ ಬೆಡ್‌ಗಳು ತುಂಬಿದ್ದವು. ಈಗಲೂ ತುಂಬಿವೆ. ಹಾಸಿಗೆಗಳ ಸಂಖ್ಯೆಯಲ್ಲೂ ವ್ಯತ್ಯಯವೇನೂ ಆಗಿಲ್ಲ. ಆಗ ದಿನಕ್ಕೆ 100ರಿಂದ 150 ಮೆಟ್ರಿಕ್‌ ಟನ್‌ ಆಮ್ಲಜನಕ ಬಳಕೆಯಾಗಿತ್ತು. ಈಗ 400ರಿಂದ 417 ಮೆಟ್ರಿಕ್‌ ಟನ್‌ವರೆಗೂ ನೀಡಲಾಗುತ್ತಿದೆ. ಕೊರತೆ ಯಾಕೆ ಆಗುತ್ತಿದೆಯೋ ಅರ್ಥವಾಗುತ್ತಿಲ್ಲ. ಇದು ಅನುಮಾನಕ್ಕೆ ಕಾರಣವಾಗಿದೆ. ಇದರ ಮೇಲೆ ಸರಕಾರ ಹದ್ದಿನ ಕಣ್ಣಿಟ್ಟಿದೆ ಎಂದವರು ಹೇಳಿದರು.

ಎಲ್ಲಿಯೂ ರೆಮಿಡಿಸ್ವೀರ್‌ ಕೊರತೆಯೂ ಆಗುತ್ತಿಲ್ಲ. ದಿನಕ್ಕೆ 15ರಿಂದ 20 ಸಾವಿರ ವೇಲ್‌ಗಳು ನಮಗೆ ಪೂರೈಕೆ ಆಗುತ್ತಿವೆ. ಅಷ್ಟೂ ರಾಜ್ಯದಲ್ಲೇ ತಯಾರಾಗುತ್ತಿವೆ. ಹಾಗಾದರೆ, ದಿನಕ್ಕೆ ಹೊಸದಾಗಿ ದಾಖಲಾಗುತ್ತಿರುವ ಸೋಂಕಿತರೆಷ್ಟು? ದಿನಕ್ಕೆ 15  ಸಾವಿರ ಸೋಂಕಿತರು ದಾಖಲಾಗುತ್ತಿದ್ದಾರಾ ಹೇಗೆ? ಆಸ್ಪತ್ರೆಗಳಿಗೆ ಬರುತ್ತಿರುವ ರೆಮಿಡಿಸ್ವೀರ್‌ ಎಲ್ಲಿ ಹೋಗುತ್ತಿದೆ? ಒಂದಕ್ಕೂ ತಾಳ-ಮೇಳವಿಲ್ಲ. ಯಾರೋ ಕಿಡಿಗೇಡಿಗಳು ಹಣದಾಸೆಗೆ ಕೃತಕ ಅಭಾವ ಸೃಷ್ಟಿ ಮಾಡುತ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಕೊರತೆ ಎನ್ನುವ ಭೀತಿಯ ಉಲ್ಬಣ

ಈ ಕೃತಕ ಅಭಾವಕ್ಕೆ ಯಾರು ಕಾರಣರು? ಎಲ್ಲಿ ತಪ್ಪಾಗುತ್ತಿದೆ? ಎಂಬುದನ್ನು ನೋಡೆಲ್‌ ಅಧಿಕಾರಿಗಳು ಪತ್ತೆ ಹಚ್ಚಬೇಕು. ಕಿಡಿಗೇಡಿಗಳು ಸೋಂಕಿಗಿಂತ ಆಮ್ಲಜನಕ ಸಿಗುತ್ತಿಲ್ಲ, ರೆಮಿಡಿಸ್ವೀರ್‌ ಸಿಗುತ್ತಿಲ್ಲ ಎಂಬ ಭೀತಿಯನ್ನೇ ಉಲ್ಬಣಗೊಳಿಸಿ ತಮ್ಮ ಸ್ವಾರ್ಥ ಸಾಧನೆ ಮಾಡಿಕೊಳ್ಳುತ್ತಿದ್ದಾರೆ ಎನಿಸುತ್ತಿದೆ.

ಮುಖ್ಯಮಂತ್ರಿಗಳು ಮುನ್ನೆಚ್ಚರಿಕೆಯಿಂದ ಕೇಂದ್ರ ಸರಕಾರಕ್ಕೆ ಹೆಚ್ಚಿನ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿದ್ದಾರೆ. ಇನ್ನು ನಮ್ಮ ರಾಜ್ಯದಲ್ಲೂ 800 ಮೆಟ್ರಿಕ್‌ ಟನ್‌ ಆಮ್ಲಜನಕ ಉತ್ಪಾದನೆ ಆಗುತ್ತಿದೆ. ಆದರೆ, ಇದ್ದಕ್ಕಿದಂತೆ ಗಾಬರಿಯಾಗುವ ರೀತಿಯಲ್ಲಿ ಆಮ್ಲಜನಕ ಬಳಕೆಯಾಗುತ್ತಿದೆ ಅನ್ನುವ ಮಾತು ಕೇಳಿಬರುತ್ತಿದೆ. ಹೊಸ ಬೆಡ್‌ಗಳೇ ಮಾಡಿಲ್ಲ ಎಂದ ಮೇಲೆ ಪೂರೈಕೆ ಆಗುತ್ತಿರುವ ಆಮ್ಲಜನಕವೆಲ್ಲ ಎಲ್ಲಿಗೆ ಹೋಗುತ್ತಿದೆ? ರಾಜ್ಯಕ್ಕೆ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಆಗುತ್ತಿದೆ? ಎಷ್ಟು ಬಳಕೆ ಆಗುತ್ತಿದೆ? ಎಂಬುದರ ಆಡಿಟ್ ಮಾಡಿಸಲಾಗುವುದು  ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

Oxyegen ಹಾಗೂ Remdesivir ಸರಬರಾಜು ಬಗ್ಗೆ ಗೊಂದಲ ಮೂಡಿಸದೆ, ತಕ್ಷಣದ ಮಾಹಿತಿಯನ್ನು ಆಯಾ ನೋಡಲ್ ಅಧಿಕಾರಿಗಳು ಪಾರದರ್ಶಕವಾಗಿ ಪ್ರಕಟಿಸುತ್ತಿರಬೇಕು ಹಾಗೂ ಕೃತಕ ಅಭಾವ ಸೃಷ್ಟಿಯಾಗುವುದಕ್ಕೆ ಅನುವು ಕೊಡಬಾರದು.

2/3

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 24, 2021

ಆರಂಭದಲ್ಲೇ ಚಿಕಿತ್ಸೆ ಕೊಡಬೇಕು

ಸೋಂಕಿತರಿಗೆ ಚಿಕಿತ್ಸೆ ಕೊಡುವ ಕಾರ್ಯತಂತ್ರವನ್ನು ಬದಲಿಸಬೇಕಿದೆ. ನಿಧಾನವಾಗಿ ಪರೀಕ್ಷೆ ಮಾಡುವ, 45-70 ಗಂಟೆಗಳಲ್ಲಿ ರಿಸಲ್ಟ್‌ ಕೊಡುವ ಹಾಗೂ ವಿಳಂಬವಾಗಿ ಚಿಕಿತ್ಸೆ ಆರಂಭಿಸುವ ಪರಿಸ್ಥಿತಿಯಲ್ಲಿ ನಾವಿಲ್ಲ. ಈಗ ಪರಿಸ್ಥಿತಿ ನಮ್ಮ ಕೈಮೀರಿದೆ. ಒಂದೇ ದಿನದಲ್ಲಿ ಪರೀಕ್ಷೆ, ಫಲಿತಾಂಶ ನೀಡುವುದು, ಚಿಕಿತ್ಸೆ ಆರಂಭಿಸುವುದು ಅಗಬೇಕು. ಸೋಂಕು ಉಲ್ಬಣ ಆಗವುದಕ್ಕೆ ಮೊದಲು ಚಿಕಿತ್ಸೆ ಕೊಡದಿದ್ದರೆ ಪರಿಸ್ಥಿತಿ ಕಷ್ಟ ಆಗುತ್ತದೆ ಎಂದು ಅವರು ಹೇಳಿದರು.

24 ಗಂಟೆ ಒಳಗೆ ರಿಸಲ್ಟ್‌ ಕೊಡಬೇಕು

ಯಾವುದೇ ಕೋವಿಡ್‌ ಲ್ಯಾಬ್‌ಗಳು ಸ್ಯಾಂಪಲ್‌ ಸ್ವೀಕರಿಸಿದ 24 ಗಂಟೆ ಒಳಗೆ ರಿಸಲ್ಟ್‌ ಕೊಡಬೇಕು. ಆ ಬಗ್ಗೆ ಸರಕಾರವೂ ಆದೇಶ ನೀಡಿದೆ. ನ್ಯಾಯಾಲಯ ಕೂಡ ಸ್ಪಷ್ಟವಾಗಿ ಆದೇಶ ಕೊಟ್ಟಿದೆ. ಹೀಗಾಗಿ ರಿಸಲ್ಟ್‌ ಅನ್ನು ಯಾವ ಕಾರಣಕ್ಕೂ ತಡ ಮಾಡುವಂತಿಲ್ಲ. ಅಷ್ಟೇ ಅಲ್ಲ, ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಬೆಂಗಳೂರಿನಂಥ ನಗರದಲ್ಲಿ 6ರಿಂದ 7 ಗಂಟೆ ಒಳಗೆ ಫಲಿತಾಂಶ ಕೊಡಬೇಕು ಎಂದು ಹೇಳಿದ್ದೇವೆ. ಇದರಲ್ಲಿ ಯಾವ ಅಧಿಕಾರಿಯೂ ನಿರ್ಲಕ್ಷ್ಯ ಮಾಡುವ ಹಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿ ದಿನ ಬ್ಯಾಚ್‌ ಪ್ರಕಾರ ಸ್ಯಾಂಪಲ್‌ಗಳು ಲ್ಯಾಬ್‌ಗೆ ಹೋಗಬೇಕು, ಪ್ರತಿ ಮೂರು ಗಂಟೆಗೊಮ್ಮೆ ರಿಸಲ್ಟ್‌ ಹೊರಗೆ ಬರಬೇಕು. ಬರೀ ಹೇಳಿಕೆಗಳಿಂದ ಈ ಸಮಸ್ಯೆ ಬಗೆಹರಿಯಲ್ಲ. ಸಮಸ್ಯೆಯ ಮೂಲಕ್ಕೆ ಹೋಗಬೇಕು. ಸಮಸ್ಯೆ ಉಲ್ಬಣ ಆದ ಮೇಲೆ ಚಿಕಿತ್ಸೆ ಕೊಟ್ಟು ಲಾಭವೇನು? ರೈಲು ಹೋದ ಮೇಲೆ ಟಿಕೆಟ್‌ ತೆಗೆದುಕೊಂಡರೆ ಲಾಭವೇನು ಎಂದು ಅವರು ಖಾರವಾಗಿ ಪ್ರಶ್ನಿಸಿದರು.

Tags: Bengalurucovid19dr cn ashwath narayankarnatakaoxygen scarcityremdesivirಆಮ್ಲಜನಕ
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಇಟ್ಟಿಗೆರಾಯನ ದುರ್ಗವೆಂಬ 700 ವರ್ಷಗಳ ಐತಿಹಾಸಿಕ ಕೋಟೆ! ಆಡಳಿತ ನಡೆಸುವವರ ಅನಾದರಕ್ಕೆ ಪರಾಕಾಷ್ಠೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಂದು ಹಾಳುಹಂಪೆ!!

ಇಟ್ಟಿಗೆರಾಯನ ದುರ್ಗವೆಂಬ 700 ವರ್ಷಗಳ ಐತಿಹಾಸಿಕ ಕೋಟೆ! ಆಡಳಿತ ನಡೆಸುವವರ ಅನಾದರಕ್ಕೆ ಪರಾಕಾಷ್ಠೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಂದು ಹಾಳುಹಂಪೆ!!

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ