• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಪ್ರತಿ ಬಿಪಿಎಲ್‌ ಕುಟುಂಬಕ್ಕೆ ಮಾಸಿಕ ₹10,000, ರೈತರಿಗೆ ಬೀಜ, ಗೊಬ್ಬರ, ಔಷಧ ಉಚಿತ, ಅನ್ನದಾತನಿಗೆ ಬಡ್ಡಿರಹಿತ ಸಾಲ ಸೇರಿ ವಿಶೇಷ ಪ್ಯಾಕೇಜ್‌ ನಿಡಲು ಸರಕಾರಕ್ಕೆ ಸಿದ್ದು ಡಿಮಾಂಡ್‌

cknewsnow desk by cknewsnow desk
April 30, 2021
in COVID-19, STATE
Reading Time: 2 mins read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
920
VIEWS
FacebookTwitterWhatsuplinkedinEmail

ಕೋವಿಡ್‌ನಿಂದ ಕಂಗೆಟ್ಟ ಕರ್ನಾಟಕ; ದುಡಿಯುವ ವರ್ಗ-ರೈತರಿಗೆ ನೆರವು ನೀಡುವಂತೆ ಆಗ್ರಹಿಸಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಈಗ ಲಾಕ್‍ಡೌನ್ ಹೇರಿಕೆ ಮಾಡಿರುವುದರಿಂದ ಈಗಾಗಲೇ ಬಸವಳಿದು ಹೋಗಿರುವ ದುಡಿಯುವ ವರ್ಗದ ಜನರಿಗೆ ನ್ಯಾಯಯುತವಾದ ಆರ್ಥಿಕ ಪ್ಯಾಕೇಜನ್ನು ಘೋಷಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಬಿಕ್ಕಟ್ಟಿನಲ್ಲಿರುವ ರಾಜ್ಯದ ದುಡಿಯುವ ಸಮುದಾಯಗಳ ಸಂಕಷ್ಟವನ್ನು ಹೋಗಲಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರ ಸಲಹೆಗಳು

ಉಚಿತ ಬೀಜ, ಗೊಬ್ಬರ, ಔಷಧ

ಉತ್ತರ ಕರ್ನಾಟಕವೂ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ ಅದನ್ನು ಮುಂಗಾರಿನ ಕೃಷಿ ಕೆಲಸಗಳಿಗೆ ವಿನಿಯೋಗಿಸುತ್ತಾರೆ. ಈಗ ಲಾಕ್ಡೌನ್ ಹೇರಿಕೆ ಮಾಡಿರುವುದರಿಂದ ಅವರ ದುಡಿಮೆ ಸಂಪೂರ್ಣ ಹಾಳಾಗಿದೆ. ದುಡಿಯಲೆಂದು ಬಂದವರು ಮರಳಿ ವಾಪಸ್ಸು ಹೋಗಿದ್ದಾರೆ. ಆದ್ದರಿಂದ ಸರಕಾರ ಈ ಎಲ್ಲ ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಮುಂತಾದವುಗಳನ್ನು ಉಚಿತವಾಗಿ ವಿತರಿಸಬೇಕು.

10,000 ರೂ. ಆರ್ಥಿಕ ನೆರವು

ರಾಜ್ಯದಲ್ಲಿ ಸುಮಾರು 1.30 ಲಕ್ಷ ಬಿಪಿಎಲ್ ವರ್ಗಕ್ಕೆ ಸೇರಿದ ಕುಟುಂಬಗಳಿವೆ. ಈ ಕುಟುಂಬಗಳಿಗೆ ಸೇರಿದ ಬಹುಪಾಲು ಜನರು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿದ್ದಾರೆ. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಂಖ್ಯೆ ಸುಮಾರು 1.5 ಕೋಟಿಗಳಷ್ಟಿದೆ. ಎಲ್ಲ ದುಡಿಯುವ ವರ್ಗಗಳು, ಸಮುದಾಯಗಳು ಹಾಗೂ ಬಿಪಿಎಲ್ ವರ್ಗದಡಿ ಬರುವ ಕುಟುಂಬಗಳು ದುಡಿಮೆ ಇಲ್ಲದೆ ಆರ್ಥಿಕ ಚೈತನ್ಯ ಕಳೆದುಕೊಂಡು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ. ಅವರೆಲ್ಲರಿಗೂ ಪ್ರತಿ ತಿಂಗಳು ಕೊನೆಪಕ್ಷ 10,000 ರೂ. ಆರ್ಥಿಕ ನೆರವನ್ನು ಈ ಕೂಡಲೇ ಘೋಷಿಸಬೇಕು.

ರೈತರಿಗೂ 10,000 ರೂ. ಆರ್ಥಿಕ ನೆರವು

ರಾಜ್ಯದಲ್ಲಿ 87 ಲಕ್ಷ ರೈತಾಪಿ ಕುಟುಂಬಗಳಿವೆ. ರೈತರಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಪ್ರಮಾಣದ ಹಿಡುವಳಿಗಳನ್ನು ಹೊಂದಿರುವ ಕಟುಂಬಗಳು ಶೇ.90ರಷ್ಟಿವೆ. ಬಹುಪಾಲು ಈ ಕುಟುಂಬಗಳೂ ಸಹ ಬಿಪಿಎಲ್ ವರ್ಗದಡಿಯೇ ಇವೆ. ಹಾಗಾಗಿ ಈ ರೈತಾಪಿ ಕುಟುಂಬಗಳಿಗೂ ಸಹ ತಿಂಗಳಿಗೆ 10.000 ರೂ.ಗಳ ನೆರವು ಘೋಷಿಸಬೇಕು.

ಬಡ್ಡಿರಹಿತ ಕೃಷಿ ಸಾಲ

ರಾಜ್ಯದ ಕೃಷಿಕರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಸಹಕಾರಿ ಬ್ಯಾಂಕುಗಳು, ವಾಣಿಜ್ಯ ಬ್ಯಾಂಕುಗಳ ಮೂಲಕ ಬಡ್ಡಿರಹಿತ ಕೃಷಿ ಸಾಲಗಳನ್ನು ಕನಿಷ್ಟ 5 ಲಕ್ಷ ರೂ.ಗಳವರೆಗೆ ನೀಡಬೇಕು. ಇದನ್ನು ಮಾಡುವುದು ಕಷ್ಟದ ವಿಚಾರವೇನೂ ಅಲ್ಲ. ದೇಶದ ದೊಡ್ಡ ದೊಡ್ಡ ಕಾರ್ಪೊರೇಟ್ ಕುಳಗಳಿಗೆ ಸಂಬಂಧಿಸಿದ ಸುಮಾರು 10.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ವಸೂಲು ಮಾಡದೆ ಕೈ ಬಿಡಲಾಗಿದೆ. ಅಂಥದ್ದರಲ್ಲಿ ರೈತಾಪಿ ವರ್ಗಗಳಿಗೆ ನೀಡುವ ಕೆಲವೇ ಸಾವಿರ ಕೋಟಿಗಳಷ್ಟು ಬಡ್ಡಿ ರಹಿತ ಸಾಲದಿಂದ ದೇಶದ ಆರ್ಥಿಕತೆ ಮುಳುಗಿ ಹೋಗುವುದಿಲ್ಲ. ಬದಲಿಗೆ ಆರ್ಥಿಕತೆ ಸುಧಾರಣೆಯಾಗುತ್ತದೆ. ಆದ್ದರಿಂದ ಬಡ್ಡಿ ರಹಿತ ಸಾಲವನ್ನು ನೀಡಿ ರೈತರ ನೆರವಿಗೆ ನಿಲ್ಲಬೇಕು.

ಉಚಿತವಾಗಿ ರಸಗೊಬ್ಬರ ವಿತರಿಸಿ

ಗ್ರಾಮೀಣ ಪ್ರದೇಶಗಳಿಗೆ ವ್ಯಾಪಕ ವಲಸೆ ಹೋಗುತ್ತಿರುವುದರಿಂದ ಕಳೆದ ವರ್ಷದಂತೆ ಈ ವರ್ಷವೂ ಸಹ ಕೃಷಿ ಕ್ಷೇತ್ರದ ಮೇಲೆ ಒತ್ತಡ ಹೆಚ್ಚುತ್ತದೆ. ಆದ್ದರಿಂದ ಕೃಷಿ ಅವಶ್ಯಕ ವಸ್ತುಗಳಾದ ಬೀಜ, ಔಷಧ, ರಸಗೊಬ್ಬರಗಳ ಪೂರೈಕೆಯನ್ನು, ದಾಸ್ತಾನನ್ನು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿಸಬೇಕು. 2021 ಏಪ್ರಿಲ್‌ 15ರಂದು ರಸಗೊಬ್ಬರಗಳ ಬೆಲೆಗಳನ್ನು ಅದರಲ್ಲೂ ಮುಖ್ಯವಾಗಿ ಡಿಎಪಿ ಕಾಂಪ್ಲೆಕ್ಸ್‌ಗಳ ಬೆಲೆಯನ್ನು ಪ್ರತೀ ಕ್ವಿಂಟಾಲಿಗೆ 1,250ರಿಂದ ರಿಂದ 1,400 ರೂ.ಗಳವರೆಗೆ ಹೆಚ್ಚಿಸಿ ಸರಕಾರ ಆದೇಶ ಮಾಡಿದೆ. ಈ ಆದೇಶವನ್ನು ಹಿಂಪಡೆದು ಹಳೆಯ ದರಗಳಲ್ಲೇ ರಸಗೊಬ್ಬರವನ್ನು ಮಾರಾಟ ಮಾಡಬೇಕು. ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರಿಯಾಯಿತಿ ದರಗಳಲ್ಲಿ ಸಾಧ್ಯವಾದರೆ ಉಚಿತವಾಗಿ ರಸಗೊಬ್ಬರವನ್ನು ವಿತರಿಸಬೇಕು.

ನರೇಗಾದಿಂದ ಹೆಚ್ಚು ಕೆಲಸ ಕೊಡಿ

ನಗರಗಳಿಂದ ಗ್ರಾಮಗಳಿಗೆ ವಲಸೆ ಹೊರಟ ಕಾರ್ಮಿಕರಿಗೆ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯಡಿ (ನರೇಗಾ) ಯೋಜನೆಯಡಿ ಕೊನೆಪಕ್ಷ 150 ಮಾನವ ದಿನಗಳಷ್ಟು ಮತ್ತು ಅದಕ್ಕೂ ಹೆಚ್ಚು ಬೇಡಿಕೆಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು. ಹಿಂದೆ ನಿಮ್ಮದೇ ಸರಕಾರ ಇದ್ದಾಗ ಡಾ.ಮನಮೋಹನ ಸಿಂಗ್‌ ಅವರು ಪ್ರಧಾನಮಂತ್ರಿಗಳಾಗಿದ್ದಾಗ ರಾಜ್ಯ ಸರಕಾರ ಪ್ರತಿಯೊಬ್ಬರಿಗೆ 150 ಮಾನವ ದಿನಗಳಿಗೆ ಹೆಚ್ಚಿಸಿ ಎಂದಾಗ ಅವರು ಅದಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಿದ್ದರು. ಈಗಲೂ ರಾಜ್ಯ ಸರಕಾರ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ರಾಜ್ಯದ ಬಿಜೆಪಿ ಸಂಸದರು ಈ ಕುರಿತು ಪ್ರಧಾನಿಗಳನ್ನು ಒತ್ತಾಯ ಮಾಡಿ ರಾಜ್ಯದ ಜನರ ನೆರವಿಗೆ ನಿಲ್ಲಬೇಕು. ಈ ಯೋಜನೆಯನ್ನು ಕೃಷಿಯ ವಿಸ್ತರಿತ ಪ್ರದೇಶಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಜನರಿಗೂ ವಿಸ್ತಿರಿಸಬೇಕು. ಅವರೂ ಸಹ ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ನರೇಗಾ ಯೋಜನೆಯ ಕೂಲಿ ದರಗಳನ್ನು ಹಣದುಬ್ಬರವನ್ನು ಆಧರಿಸಿ ಕೂಡಲೇ ಹೆಚ್ಚು ಮಾಡಬೇಕು.

ಬಡವರಿಗೆ ಆಹಾರ ಕಿಟ್

ರಾಜ್ಯದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪಕ್ಕದ ಕೇರಳ ರಾಜ್ಯದಂತೆ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳ, ಜೀವನಾವಶ್ಯಕ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್‍ಗಳನ್ನು ಒದಗಿಸಬೇಕು. ಕಿಟ್ʼಗಳಲ್ಲಿ ಪ್ರತಿಯೊಬ್ಬರಿಗೆ ಕೊನೆಪಕ್ಷ 10 ಕೆಜಿ ಅಕ್ಕಿ, ಗೋಧಿ, ಅಡುಗೆ ಎಣ್ಣೆ, ಬೇಳೆಕಾಳುಗಳು ಮುಂತಾದ ದಿನಸಿ ಪದಾರ್ಥಗಳು ಇರುವಂತೆ ನೋಡಿಕೊಳ್ಳಬೇಕು.

ಸ‌ಣ್ಣ ಕೈಗಾರಿಕೆಗಳಿಗೆ ನೆರವಾಗಿ

ಸಣ್ಣ, ಅತಿ ಸಣ್ಣ, ಗೃಹ ಮತ್ತು ಮಧ್ಯ ಪ್ರಮಾಣದ ಕೈಗಾರಿಕೆಗಳು ಕೇಂದ್ರದ ನಿರಂತರ ಗದಾ ಪ್ರಹಾರಗಳಿಂದ ಬಸವಳಿದು ಹೋಗಿವೆ. ಮೊದಲು ಕಷ್ಟದಲ್ಲಿರುವವರಿಗೆ ಉಸಿರಾಡಲು ವ್ಯವಸ್ಥೆ ಕಲ್ಪಿಸಬೇಕು. ಉತ್ತಮ ಸ್ಥಿತಿಯಲ್ಲಿರುವವರಿಗೂ ನೆರವಾಗಬೇಕು. ಆದ್ದರಿಂದ ಈ ವಲಯಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸುಗಮವಾಗಿ ಸಿಗುವಂತೆ ನೋಡಿಕೊಳ್ಳಬೇಕು. ಇವರ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕುದುರುವವರೆಗೆ ಸಾಲದ ಮೇಲಿನ ಬಡ್ಡಿಗಳನ್ನು ಮನ್ನಾ ಮಾಡಬೇಕು. ಇದಕ್ಕಾಗಿ ತಾವು ಕೇಂದ್ರವನ್ನು ಒತ್ತಾಯಿಸಬೇಕು. ಶತಾಯಗತಾಯ ಪ್ರಯತ್ನ ಮಾಡಿ ಇವರ ನೆರವಿಗೆ ಸರಕಾರ ನಿಲ್ಲಬೇಕು.

ಸಣ್ಣ ಕೈಗಾಗಿಕೆಗಳಿಗೆ ಉಚಿತ ವಿದ್ಯುತ್‌

ರಾಜ್ಯದಲ್ಲಿ ಯಥೇಚ್ಛವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಹಾಗಾಗಿ ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ, ಮಧ್ಯಮ ಪ್ರಮಾಣದ ಈ ಕಂಪನಿಗಳಿಗೆ ಉಚಿತವಾಗಿ ವಿದ್ಯುತ್ ಪೂರೈಸಬೇಕು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಲ್ಲದಿದ್ದರೂ ಅದಾನಿ ಮುಂತಾದವರಿಗೆ ವರ್ಷಕ್ಕೆ ಅನಾಮತ್ತಾಗಿ ಸಾವಿರಾರು ಕೋಟಿಗಳನ್ನು ನೀಡಲಾಗುತ್ತಿದೆ. ಅದನ್ನು ನಿಲ್ಲಿಸಿ ಸರಕಾರ ಉದ್ಯೋಗ ಸೃಷ್ಟಿಸುವ ಈ ಕೈಗಾರಿಕೆಗಳ ನೆರವಿಗೆ ನಿಲ್ಲಬೇಕು. ಈ ಕಂಪನಿಗಳು ಉತ್ಪಾದಿಸಿ ರಫ್ತು ಮಾಡುವ ಉತ್ಪನ್ನಗಳಿಗೆ ರಫ್ತು ಶುಲ್ಕಕ್ಕೆ ವಿನಾಯಿತಿ ನೀಡಬೇಕು. ಆಮದು ಶುಲ್ಕವನ್ನೂ ಕಡಿಮೆ ಮಾಡಬೇಕು.

ಚಾಲಕರಿಗೆ ಸಹಾಯ ಮಾಡಿ

ಆಟೋ, ಕ್ಯಾಬ್, ಟ್ಯಾಕ್ಸಿ ಮುಂತಾದ ವಾಹನಗಳಿಗೆ ಕಳೆದ ಒಂದು ವರ್ಷದಿಂದ ಬಾಡಿಗೆ ಇಲ್ಲ. ಪ್ರಮುಖ ಪ್ರಯಾಣಿಕರಾಗಿದ್ದ ಐಟಿ-ಬಿಟಿ ಮುಂತಾದ ಕಂಪನಿಗಳ ಉದ್ಯೋಗಿಗಳು ಮನೆಗಳಿಂದಲೇ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ವಾಹನಗಳ ದುಡಿಮೆ ನೆಚ್ಚಿಕೊಂಡಿದ್ದ ಚಾಲಕರು, ಮಾಲಿಕರು ವಿಪರೀತ ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ವಲಯದ ಕೆಲವರು ನಷ್ಟದಿಂದ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿಗಳು ಬರುತ್ತಿವೆ. ಸರಕಾರ ಕಣ್ಣು ಮುಚ್ಚಿಕೊಂಡು ಮೌನವಾಗಿರುವುದು ಭೀಕರ ಅಮಾನವೀಯತೆಗೆ ಸಾಕ್ಷಿ. ನಿಮ್ಮ ಪ್ಯಾಕೇಜು ಮತ್ತು ಕೇಂದ್ರದ ಆತ್ಮನಿರ್ಭರ ಪ್ಯಾಕೇಜು ಸಮರ್ಪಕವಾಗಿ ಈ ವರ್ಗಗಳಿಗೆ ತಲುಪಿದ್ದರೆ ಅವರುಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ರಾಜ್ಯ ಸರಕಾರ ಘೋಷಿಸಿದ್ದ ಪ್ಯಾಕೇಜಿನಲ್ಲಿ ಕಾಲು ಭಾಗದಷ್ಟು ಚಾಲಕರಿಗೂ ಅನುಕೂಲವಾಗಲಿಲ್ಲ. ಆದ್ದರಿಂದ ಸರಳ ನಿಯಮಗಳನ್ನು ಮಾಡಿ ಕಳೆದ ವರ್ಷ ಬಾಕಿಯಾಗಿರುವ ಎಲ್ಲರಿಗೂ ಘೋಷಿತ ಪರಿಹಾರವನ್ನು ನೀಡಬೇಕು. ಈ ವರ್ಷ ಮತ್ತೆ ಲಾಕ್ಡೌನ್ ಹೇರಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಪ್ರತಿ ತಿಂಗಳು ಕೊನೆಪಕ್ಷ 10,000 ರೂ. ನೀಡುವ ಪ್ಯಾಕೇಜನ್ನು ಘೋಷಿಸಬೇಕು.

ಈ ವಾಹನಗಳ ಮಾಲೀಕರಿಗೆ ವಿಮೆಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ವಿವಿಧ ತೆರಿಗೆಗಳನ್ನು ಮನ್ನಾ ಮಾಡಬೇಕು. ಸಾಲದ ಅಸಲು ಮೊತ್ತದ ವಸೂಲಿಯನ್ನು ಮುಂದೂಡಬೇಕು.

ಶಾಲಾ ಶುಲ್ಕ ಕಡಿತ ಮಾಡಿ

ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕಕ್ಕೆ ಸಂಬಂಧಿಸಿದಂತೆ ಸರಕಾರ ದೊಡ್ಡ ಮಟ್ಟದ ರಿಯಾಯಿತಿ ಕೊಡಿಸುವುದಾಗಿ ಘೋಷಿಸಿತು. ಆದರೆ ಅದು ಜಾರಿಗೆ ಬರಲಿಲ್ಲ. ಈ ವರ್ಷ ಮತ್ತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಶುಲ್ಕ ಮನ್ನಾ ಮಾಡಲು ಅಥವಾ ಶೇ.50ರಷ್ಟಾದರೂ ಕಡಿತಗೊಳಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸಬೇಕು.

Tags: covid19demand for special packagekarnatakaletter to chief ministersiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಮಂತ್ರಿಗಳೇ ಕೋವಿಡ್‌ ಕಾಲದಲ್ಲೂ ಕಮಿಷನ್ ತಿಂದಿದ್ದು ಸಾಕು, ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಕೊಡಿ, ಜನರ ಕಷ್ಟ ನೋಡಿ ಎಂದು ಒತ್ತಾಯ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Leave a Reply Cancel reply

Your email address will not be published. Required fields are marked *

Recommended

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

6 years ago
ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ

ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ