• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ವಿಶ್ವ ಕಾರ್ಮಿಕರ ದಿನ: ಕಾರ್ಮಿಕರ ದನಿಗೆ ಶಕ್ತ ತುಂಬಿದ ಮೇ 1; ಬಂಡವಾಳಶಾಹಿಗಳ ಶೋಷಣೆಗೆ ಸಡ್ಡು ಹೊಡೆದ ಮಹಾದಿನ, ಯಜಮಾನಿಕೆಯ ವಿರುದ್ಧ ಜಯಿಸಿದ ಸುದಿನ

cknewsnow desk by cknewsnow desk
May 1, 2021
in CKPLUS, GUEST COLUMN, NEWS & VIEWS
Reading Time: 2 mins read
0
ಕೋವಿಡ್ ಕಾಲದ ಕಣ್ಣೀರು ಮತ್ತು ಕಣ್ಮುಂದೆ ಬಂದ ಕಮ್ಯೂನಿಸ್ಟ್‌  ಮ್ಯಾನಿಫೆಸ್ಟೋ
934
VIEWS
FacebookTwitterWhatsuplinkedinEmail

Photo by CkPhotography ಸಿಕೆಪಿ@ckphotographi

ಮೇ 1 ಎಂದರೆ ಇಡೀ ಜಗತ್ತಿನ ಕಾರ್ಮಿಕರೆಲ್ಲ ಪುಳಕಗೊಳ್ಳುವ ಮಹಾದಿನ. ಶ್ರಮವನ್ನೇ ದೈವವೆಂದು ನಂಬಿ ದುಡಿಯುವ ಕೋಟ್ಯಂತರ ಜನರ ಪಾಲಿನ ಹಬ್ಬ. ತಮ್ಮ ಹೋರಾಟಕ್ಕೆ ಜಯ ಸಿಕ್ಕ ದಿನದ ಮೇಲೆ ಎಲ್ಲ ಕಾರ್ಮಿಕರಿಗೂ ಬಹಳ ಅಕ್ಕರೆ.

Dr. Guruprasada H S

ಯಾವುದೇ ದೇಶ ರಾಜ್ಯದ ಅಭಿವೃದ್ಧಿ ಆಯಾ ದೇಶದ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ದಕ್ಷ ಕಾರ್ಮಿಕರ ವರ್ಗದಿಂದ ದೇಶದ ಆರ್ಥಿಕ ಪ್ರಗತಿಯನ್ನು ಕಾಣಲು ಸಾಧ್ಯ. ಕಾರ್ಮಿಕ ಎಂದರೆ ಸಾಮಾನ್ಯ ಅರ್ಥದಲ್ಲಿ ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾರಾಟ ಮಾಡಿ ಹಣ ಗಳಸುತ್ತಿರುವ ವ್ಯಕ್ತಿಗೆ ಕಾರ್ಮಿಕ ಎನ್ನುತ್ತೇವೆ.

ಈ ರೀತಿ ಆದಾಯ ಗಳಿಸುವ ವರ್ಗಕ್ಕೆ ಕಾರ್ಮಿಕ ವರ್ಗವೆಂದು ಕರೆಯುತ್ತಿದ್ದು, ಜಗತ್ತಿನ ಪ್ರತಿಯೊಂದು ದೇಶದಲ್ಲಿ ಶೇ.60ರಷ್ಟು ಕಾರ್ಮಿಕ ವರ್ಗದವರು ಕಂಡು ಬರುತ್ತಾರೆ. ಕೈಗಾರಿಕಾ ಕ್ರಾಂತಿಯ ನಂತರ ಅದರ ಫಲವಾಗಿ ಸಮಾಜದಲ್ಲಿ ಎರಡು ವರ್ಗಗಳು ಉದಯವಾದವು. ಒಂದು ಬಂಡವಾಳಶಾಹಿ ವರ್ಗ ಹಾಗೂ ಇನ್ನೊಂದು ಕಾರ್ಮಿಕ ವರ್ಗ. ಅಂದಿನಿಂದ ಇಂದಿನವರೆಗೂ ಕಾರ್ಮಿಕರ ಮೇಲಿನ ಶೋಷಣೆ ಹಾಗೆ ನಡೆಯುತ್ತಲೇ ಬಂದಿದೆ.

ಕಾರ್ಮಿಕ ದಿನ ಆಚರಣೆ ಹಿನ್ನಲೆ

ಸುಮಾರು 150 ವರ್ಷಗಳ ಹಿಂದೆ ಯುರೋಪ್, ಅಮೆರಿಕ ಮುಂತಾದ ರಾಷ್ಟ್ರಗಳಲ್ಲಿ ಕಾರ್ಮಿಕರನ್ನು ಬಂಡವಾಳ ಶಾಹಿಗಳು ಅನಿರ್ದಿಷ್ಟಾವಧಿ ತನಕ ದುಡಿಸಿ ಕೊಳ್ಳುತ್ತಿದ್ದರು. ಇದನ್ನು ವಿರೋಧಿಸಿದ ಕಾರ್ಮಿಕರು ದಿನದ 8 ಗಂಟೆ ದುಡಿಯುವ ಅವಧಿ ಎಂಬ ಬೇಡಿಕೆ ಮುಂದಿಟ್ಟರು. ದಿನದ 24 ಗಂಟೆಗಳಲ್ಲಿ 8 ಗಂಟೆ ದೈನಂದಿನ ಚಟುವಟಿಕೆಗಳನ್ನು ಪೂರೈಸುವ 8 ಗಂಟೆ ದುಡಿಯುವ ಅವಧಿ ಹಾಗೂ ಇನ್ನುಳಿದ 8 ಗಂಟೆ ವಿಶ್ರಾಂತಿಗಾಗಿ ಮೀಸಲು ಎಂಬ ಲೆಕ್ಕಾಚಾರ ಮುಂದಿಡಲಾಯಿತು.

8 ಗಂಟೆ ದುಡಿವ ಅವಧಿ ಎಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾರ್ಮಿಕರು ಅಮೆರಿಕದ ಚಿಕಾಗೋ ನಗರದಲ್ಲಿ ಮೇ 1, 1886 ರಂದು ಸಹಸ್ರಾರು ಸಂಖ್ಯೆಯಲ್ಲಿ ಹೋರಾಟ ಮಾಡುತ್ತಿದ್ದರು. ಹೋರಾಟವು ತೀವ್ರ ಸ್ವರೂಪ ಪಡಿದಿದ್ದರಿಂದ ಇದನ್ನು ಹತ್ತಿಕ್ಕುವುದಕ್ಕಾಗಿ ಮೇ 4ರಂದು ಪೋಲಿಸರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಇದರಲ್ಲಿ ನೂರಾರು ಕಾರ್ಮಿಕರು ಸಾವನ್ನಪ್ಪಿದ್ದರು. ಇದನ್ನು ಲೆಕ್ಕಿಸದೇ ಕಾರ್ಮಿಕರು ಹೋರಾಟವನ್ನು ಮುಂದುವರಿಸಿದ್ದರಿಂದ ಕೊನೆಗೆ ನ್ಯಾಯಯುತವಾದ ದಿನದ 8 ಗಂಟೆ ಕಾರ್ಮಿಕರ ಕೆಲಸದ ಅವಧಿಯನ್ನು ಚಾಲನೆ ತಂದರು. ಇದರ ನೆನಪಿಗೆ ಮೇ 1ರಂದು ಕಾರ್ಮಿಕರ ದಿನಾಚರಣೆಯನ್ನು ಅಂತಾರಾಷ್ಟೀಯ ಮಟ್ಟದಲ್ಲಿ ಆಚರಿಸುತ್ತಾ ಬರಲಾಗುತ್ತಿದೆ.

ಭಾರತದಲ್ಲಿ ಕಾರ್ಮಿಕ ದಿನ. 20ನೆಯ ಶತಮಾನದ ಎರಡನೆಯ ದಶಕದ ದ್ವಿತೀಯಾರ್ಧದಲ್ಲಿ-ಕಾರ್ಮಿಕ ಸಂಘ ಚಳವಳಿಯ ಪ್ರಭಾವ ಹೆಚ್ಚಿದಾಗಿನಿಂದ-ಇದರ ಆಚರಣೆ ಆರಂಭವಾಯಿತು. ಭಾರತೀಯ ಕಾರ್ಮಿಕರು ಮೊತ್ತ ಮೊದಲನೆಯದಾಗಿ ಕಾರ್ಮಿಕ ದಿನಾಚರಣೆಯಲ್ಲಿ ಭಾಗವಹಿಸಿದ್ದು ಇಂಗ್ಲೆಂಡ್‌ನಲ್ಲಿ ಅದು ಭಾರತೀಯ ನಾವಿಕರು. 1925ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ನೀಡಬೇಕೆಂಬ ಘೋಷಣೆಯನ್ನೊಳಗೊಂಡ ಪೋಸ್ಟರ್ʼಗಳನ್ನು ಹಿಡಿದು ಲಂಡನ್ʼನ ಹೈಡ್ ಪಾರ್ಕಿನ ಮೇ ದಿನದ ಉತ್ಸವ ಸಭೆಗೆ ಹೋದರು. ನಂತರ 1927ರಲ್ಲಿ ಮುಂಬಯಿಯಲ್ಲಿ ನಡೆದ ಕಾರ್ಮಿಕ ದಿನ ಆಚರಣೆಯಲ್ಲಿ ಅನೇಕ ಕಾರ್ಮಿಕ ಮುಖಂಡರು ಭಾಗವಹಿಸಿ ಆರಂಭಿಸಿದರು. 1927ರಿಂದ ಪ್ರತಿವರ್ಷವೂ ದೇಶದಲ್ಲಿ ಕಾರ್ಮಿಕರು ಈ ದಿನವನ್ನಾಚರಿಸುತ್ತಿದ್ದಾರೆ.

ಅದೇ ವರ್ಷ ಕೊಲ್ಕತಾದಲ್ಲಿ ಬಂಗಾಳ ಪ್ರದೇಶ ಕಾರ್ಮಿಕ ಸಂಘವು ಮೇ ದಿನವನ್ನಾಚರಿಸಿದಾಗ ಪೋಲೀಸರು ಅನೇಕ ನಿರ್ಬಂಧಗಳನ್ನು ವಿಧಿಸಿದರೆಂದು ತಿಳಿದು ಬರುತ್ತದೆ. 1928ರಿಂದ 1934ರವರೆಗೆ ಆ ಉತ್ಸವಾಚರಣೆಯ ದಿನದಂದು ದಿನಾಚರಣೆಯ ಕಾರ್ಮಿಕರ ಅನೇಕ ಮುಷ್ಕರಗಳು ನಡೆದವು. ಎರಡನೇ ಮಹಾಯುದ್ಧ ನಂತರ ಆ ದಿನವನ್ನು ಹೆಚ್ಚು ವ್ಯಾಪಕವಾಗಿ ಆಚರಿಸಲು ಪ್ರಾರಂಭವಾಯಿತು. ಕಾರ್ಮಿಕರೂ, ಕಾರ್ಮಿಕ ಸಂಘಗಳೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸತೊಡಗಿದವು. 1969ರಲ್ಲಿ ಭಾರತ ರಾಷ್ಟ್ರೀಯ ಕಾರ್ಮಿಕ ಸಂಘಗಳ ಕಾಂಗ್ರೆಸ್ ಒಂದನ್ನು ಬಿಟ್ಟು ಉಳಿದೆಲ್ಲ ಕಾರ್ಮಿಕ ಸಂಘಗಳೂ ಒಟ್ಟಾಗಿ, ತಮ್ಮ ಹಕ್ಕುಗಳನ್ನು ಸಾಧಿಸಲು ಭಾರಿ ಮೆರವಣಿಗೆಯಲ್ಲಿ ಪಾರ್ಲಿಮೆಂಟ್ ಭವನದ ಬಳಿಗೆ ಮೆರವಣಿಗೆಯಲ್ಲಿ ಹೋಗಿ ಪ್ರದರ್ಶನ ನಡೆಸಿದವು.

ಭಾರತದಲ್ಲಿ ಕಾರ್ಮಿಕರನ್ನು ಸಂಘಟಿತ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರೆಂದು ವಿಭಾಗಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಾಮ್ಯದ ಅಡಿ ದುಡಿಯುವ ಕಾರ್ಮಿಕರು ಬಹುತೇಕ ಸಂಘಟಿತ ಕಾರ್ಮಿಕರಾಗಿದ್ದು, ದೇಶದಲ್ಲಿ ಕೇವಲ ಪ್ರತಿಶತ 12ರಿಂದ 15 ರವರೆಗೆ ಮಾತ್ರ ಕಂಡುಬಂದಿದ್ದು ತಮ್ಮ ಸಂಘಟಿತ ಹೋರಾಟದ ಮೂಲಕ ಬೇಡಿಕೆಗಳನ್ನು ತಕ್ಕ ಮಟ್ಟಿಗೆ ಈಡೇರಿಸಿಕೊಳ್ಳುತ್ತಿದ್ದಾರೆ.

ಇನ್ನುಳಿದ ಶೇ.85ರಷ್ಟು ಕಾರ್ಮಿಕರು, ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಭೂ ರಹಿತ ಮಹಿಳೆ ಹಾಗೂ ಪುರುಷ ಕಾರ್ಮಿಕರು ನಗರಗಳಲ್ಲಿ ಹೋಟೆಲ್‌ಗಳಲ್ಲಿ ದುಡಿಯುವ ಕಾರ್ಮಿಕರು, ಸಣ್ಣ ಉದ್ದಿಮೆಗಳಲ್ಲಿ ದುಡಿಯುವವರು, ಈ ಮುಂತಾದ ಕ್ಷೇತ್ರಗಳಲ್ಲಿ ದುಡಿವ ಕೆಲಸಗಾರರು ಅಸಂಘಟಿತ ಕಾರ್ಮಿಕರು. ಇವರಿಗೆ ಮೂಲತಃ ನಿರ್ದಿಷ್ಟ ಕೂಲಿ ಇರುವುದಿಲ್ಲ,ಇಂತಹ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಸ್ವಾತಂತ್ರ ನಂತರ ಕೇಂದ್ರ ಸರ್ಕಾರ 1949ರಲ್ಲಿ ಕನಿಷ್ಠ ಕೂಲಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಆ ಕಾಯ್ದೆಯು ಬಹುತೇಕವಾಗಿ ಹಲ್ಲಿಲ್ಲದ ಕಾಯ್ದೆಯಾಗಿದ್ದು ಪರಿಪೂರ್ಣವಾಗಿ ಜಾರಿಯಲ್ಲಿ ತರಲು ಸಾಧ್ಯವಾಗಿಲ್ಲ.

ಕಳೆದ ವರ್ಷದಿಂದ ದೇಶದಲ್ಲಿ ಕೋವಿಡ್ ಯಿಂದಾಗಿ ಸುಮಾರು 20 ಕೋಟಿ ಕಾರ್ಮಿಕರ ಬದುಕು ಅತಂತ್ರ ಸ್ಥಿತಿಗೆ ತಲುಪಿತು, ಉದ್ಯೋಗಕ್ಕಾಗಿ ನಗರಕ್ಕೆ ವಲಸೆ ಬಂದಂತಹವರು ಲಾಕ್ ಡೌನ್ ಕಾರಣಕ್ಕೆ ತಮ್ಮ ಹಳ್ಳಗಳಿಗೆ ಹಿಂದಿರುಗಿದರು, ಇದರಿಂದಾಗಿ ಅರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿಹಾಕಿತು, ಅನೇಕ ಸಣ್ಣ ಮತ್ತು ಮಾದ್ಯಮ ವರ್ಗ ಕೈಗಾರಿಕೆಗಳು ಮಚ್ಚಿದವು ಸರ್ಕಾರ ಅನೇಕ ಯೋಜನೆಗಳನ್ನು, ಸಹಾಯ ಧನವನ್ನು ನೀಡಿದರು. ಅದು ಅವರ ಬದುಕಿಗೆ ಕೊಂಚಮಟ್ಟಿಗೆ ನೆಮ್ಮದಿ ತಂದರು, ಮುಂದೇನು? ಎಂಬ ಪ್ರಶ್ನೆ ಹಾಗೆ ಉಳಿಯಿತು, ಕೋವಿಡ್ ಕಡಿಮೆ ಆಯಿತು, ಮತ್ತೆ ಆರ್ಥಿಕ ವ್ಯವಸ್ಥೆ ಸಹಜ ಸ್ಥಿತಿಯತ್ತ ಮರಳುತಿದೆ ಎನ್ನುವಷ್ಟರಲ್ಲಿಯೇ 2ನೇ ಅಲೆ ಪ್ರಾರಂಭವಾಯಿತು, ಮತ್ತೆ ಕಾರ್ಮಿಕರ ಬದುಕು ಅತಂತ್ರೆಗೆ ಸಿಲುಕಿದೆ, ಇಡೀ ದೇಶಾದ್ಯಂತ ನಗರ ಹಳ್ಳಿ ಎನ್ನದೇ ಕೊರೊನಾ ವಕ್ಕರಿಸಿ ಸಾವು-ನೋವುಗಳು ಸಂಭವಿಸುತ್ತಿದೆ,
ಒಟ್ಟಾರೆ ಭಾರತದಲ್ಲಿ ಕಾರ್ಮಿಕರು ಶೋಷಣೆಯಲ್ಲೇ ಬದುಕು ಸಾಗಿಸುತ್ತಿದ್ದು ಶ್ರಿಮಂತರು ಶ್ರೀಮಂತರಾಗಿಯೇ ಮಂದುವರೆದರೆ ಬಡವರು ಬಡವರಾಗಿಯೇ ಸಾಗುತ್ತಿದ್ದಾರೆ. ಇಂತಹ ಬಂಡವಾಳಶಾಹಿ ಶೋಷಣೆಯ ವಿರುದ್ದ ಕಾರ್ಮಿಕರಿಗೆ ಬಲ ತುಂಬ ಬೇಕಿದೆ ಅದು ಕಾನೂನುಗಳ ಮೂಲಕ, ಅವರ ಹೋರಾಟಕ್ಕೆ ನೈತಿಕ ಸ್ಥೈರ್ಯ ನೀಡ ಬೇಕಿರುವುದು ನಮ್ಮಲ್ಲರ ಕರ್ತವ್ಯ.

***

ಡಾ.ಗುರುಪ್ರಸಾದ ಎಚ್ ಎಸ್
  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: indiainternational labour day 2021karnatakamay daymay1
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

ಸ್ಥಳೀಯವಾಗಿ ಆಗುವ ತಪ್ಪುಗಳಿಂದ ಸರಕಾರಕ್ಕೆ ಮುಜಗರ; ಕರ್ತವ್ಯ ನಿರ್ವಹಿಸದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಎಚ್ಚರಿಸಿದ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಮುರುಘಾ ಶರಣರು ಅರೆಸ್ಟ್‌

ಮುರುಘಾ ಶರಣರು ಅರೆಸ್ಟ್‌

4 years ago
ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ