• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

cknewsnow desk by cknewsnow desk
May 2, 2021
in NATION, POLITICS, STATE
Reading Time: 4 mins read
0
ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್
915
VIEWS
FacebookTwitterWhatsuplinkedinEmail

ಹ್ಯಾಟ್ರಿಕ್‌ ಹೊಡೆದ ಮಮತಾ ಬ್ಯಾನರ್ಜಿ I ಕೇರಳದಲ್ಲಿ ಇನ್ನೊಮ್ಮೆ ಪಿಣರಾಯಿ ವಿಜಯನ್‌ I ತಮಿಳುನಾಡಿನಲ್ಲಿ ಸ್ಟಾಲಿನ್‌ I ಪುದುಚೆರಿಯಲ್ಲಿ ರಂಗಸ್ವಾಮಿ I ಅಸೋಮ್‌ನಲ್ಲಿ ಮತ್ತೊಮ್ಮೆ ಸರ್ಬಾನಂದ

ಈಶಾನ್ಯದಲ್ಲಿ ಗೆದ್ದರೂ ಬಂಗಾಳದಲ್ಲಿ ಕಮಲ ಪಾಳಯಕ್ಕೆ ನಿರಾಶೆ I ದ್ರಾವಿಡ ನೆಲದಲ್ಲಿ ಕಾಂಗ್ರೆಸ್‌ಗಿಂತ ಹಿಂದೆ ಬಿದ್ದ ಬಿಜೆಪಿ I ದೇವರನಾಡಿನಲ್ಲಿ ಬಿಜೆಪಿ ಶೂನ್ಯ ಸಂಪಾದನೆ

ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಪಿಣರಾಯಿ ವಿಜಯನ್‌, ಎನ್.ರಂಗಸ್ವಾಮಿ, ಸರ್ಬಾನಂದ ಸೋನೋವಾಲ

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಬಹತೇಕ ಹೊರಬಿದ್ದಿದ್ದು, ಚುನಾವಣಾ ಆಯೋಗದ ಅಂತಿಮ ಅಂಕಿ-ಅಂಶ ಹೊರ ಬೀಳುವುದೊಂದೇ ಬಾಕಿ.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಇಡೀ ಬಿಜೆಪಿಯ ಸವಾಲನ್ನು ಗಟ್ಟಿಯಾಗಿ ಎದುರಿಸಿದ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಸೋಮ್‌ನಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆಯಾದರೂ, ಕೇರಳದಲ್ಲಿ ಆ ಪಕ್ಷದ್ದು ಶೂನ್ಯ ಸಾಧನೆ. ಕೇರಳದಲ್ಲಿ ಮೆಟ್ರೋಮ್ಯಾನ್‌ ಇ.ಶ್ರೀಧರನ್‌ ಮ್ಯಾಜಿಕ್‌ ನಡೆದಿಲ್ಲ. ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಪುನರಾಯ್ಕೆ ಆಗಿದೆ.

ತಮಿಳುನಾಡಿನಲ್ಲಿ ನಿರೀಕ್ಷೆಯಂತೆ ಡಿಎಂಕೆ ಭರ್ಜರಿ ಜಯ ಸಾಧಿಸಿದೆ. ಅಲ್ಲಿ ದಿವಂಗತ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್‌ ಮುಖ್ಯಮಂತ್ರಿ ಆಗಲಿದ್ದಾರೆ. ಪುದುಚೆರಿಯಲ್ಲಿ ಎನ್‌.ಆರ್.‌ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಮೈತ್ರಿ ಸರಕಾರದ ಭಾಗವಾಗಲಿದೆ. ಎನ್‌.ಆರ್.‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಂಗಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ

ನಿರೀಕ್ಷೆಯಂತೆ ತಮಿಳುನಾಡಿನಲ್ಲಿ ಡಿಎಂಕೆ ಭರ್ಜರಿ ಗೆಲುವು ಸಾಧಿಸಿದೆ. ಈ ವರದಿ ಬರೆಯುವ ಹೊತ್ತಿಗೆ ಸಿಕ್ಕಿರುವ ಅಂಕಿ-ಅಂಶಗಳ ಪ್ರಕಾರ ಡಿಎಂಕೆ ಮೈತ್ರಿಕೂಟ 154 ಕ್ಷೇತ್ರಗಳಲ್ಲಿ ಗೆದ್ದರೆ, ಎಐಡಿಎಂಕೆ ಕೂಟ 77 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿವೆ.

ಎಐಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಎಡವಿದ್ದು, ಎರಡಂಕಿ ದಾಟಿಲ್ಲ. ಎಐಡಿಎಂಕೆ ಮತ್ತು ಬಿಜೆಪಿ ಪಳನಿಸ್ವಾಮಿ ಹಾಗೂ ಪನ್ನೀರ್‌ಸೆಲ್ವಂ ಸರಕಾರ ವಿರೋಧಿ ಅಲೆ ಎಐಡಿಎಂಕೆಯನ್ನು ಸೋಲಿನ ದವಡೆಗೆ ತಳ್ಳಿದೆ. ಇದೇ ಮೊದಲ ಬಾರಿಗೆ ರಾಜಕೀಯ ಭವಿಷ್ಯಕ್ಕೆ ಹೊಸ ಪಕ್ಷ ಸ್ಥಾಪಿಸಿ ಕಣಕ್ಕಿಳಿದಿದ್ದ ಕಮಲ್‌ ಹಾಸನ್‌ ಅವರು ಕೊಯಮತ್ತೂರು ದಕ್ಷಿಣದಲ್ಲಿ ಸೋಲನುಭವಿಸಿದ್ದಾರೆ. ಕರ್ನಾಟಕದ ಸಿ.ಟಿ.ರವಿ ಉಸ್ತುವಾರಿಯಲ್ಲಿದ್ದ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ, 3 ಕ್ಷೇತ್ರಗಳಲ್ಲಿ ಮಾತ್ರ ಆ ಪಕ್ಷ ಗೆದ್ದಿದೆ. ಇನ್ನು, ಕಾಂಗ್ರೆಸ್‌ 16 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿ ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ.

ಪುದುಚೆರಿಯಲ್ಲಿ ಎನ್‌.ಆರ್.‌ಕಾಂಗ್ರೆಸ್‌ & ಬಿಜೆಪಿ

ಇನ್ನು, ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಬಿಜೆಪಿ ಮತ್ತು ಎನ್‌.ಆರ್.‌ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಚಿತ. ಒಟ್ಟು 30 ಕ್ಷೇತ್ರಗಳಿರುವ ಎನ್‌.ಆರ್.‌ಕಾಂಗ್ರೆಸ್‌ 10 ಕ್ಷೇತ್ರಗಳಲ್ಲಿ, ಬಿಜೆಪಿ 6, ಕಾಂಗ್ರೆಸ್‌ 2, ಡಿಎಂಕೆ 6 ಹಾಗೂ ಪಕ್ಷೇತರರು 6 ಕಡೆಗಳಲ್ಲಿ ಗೆದ್ದಿದ್ದಾರೆ. ಎನ್.ಆರ್.‌ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ರಂಗಸ್ವಾಮಿ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಆದರೆ, ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ.

ಪಶ್ಚಿಮ ಬಂಗಾಳದಲ್ಲಿ ಮತ್ತೆ ತೃಣಮೂಲ ಕಾಂಗ್ರೆಸ್‌

ಪಂಚ ರಾಜ್ಯಗಳ ಪೈಕಿ ಅತಿ ಹೆಚ್ಚು ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸಡ್ಡು ಹೊಡೆದ ಮಮತಾ ಬ್ಯಾನರ್ಜಿ ಅಧಿಕಾರ ಉಳಿಸಿಕೊಂಡಿದ್ದಾರೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಣಕ್ಕಿದಳಿದರೂ, ತೃಣಮೂಲ ಕಾಂಗ್ರೆಸ್‌ನಿಂದ ತಂಡೋಪ ತಂಡವಾಗಿ ನಾಯಕರನ್ನು ಗುಳೆ ಎಬ್ಬಿಸಿದರೂ ಬಿಜೆಪಿ ಸಕ್ಸಸ್‌ ಆಗಿಲ್ಲ. ಒಂಟಿಯಾಗಿ ಸೆಣಸಿದ ಮಮತಾ ಸ್ವತಃ ನಂದಿಗ್ರಾಮದಲ್ಲಿ ಅದ್ಭುತ ಗೆಲುವು ಸಾಧಿಸಿದ್ದಾರೆ.

‌ಒಟ್ಟು 292 ಕ್ಷೇತ್ರಗಳಿರುವ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ 214 ಹಾಗೂ ಬಿಜೆಪಿ 76 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ದಶಕಗಳ ಬಂಗಾಳವನ್ನು ಆಳಿ ಭಾರೀ ಪ್ರಮಾಣದ ಕಾರ್ಯಕರ್ತರ ಪಡ ಹೊಂದಿದ್ದ ಎಡರಂಗದ್ದು ಶೂನ್ಯ ಸಂಪಾದನೆ. ಕೇರಳಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಲ್ಲಿ ಎಡಪಕ್ಷಗಳಿವೆ ಇಲ್ಲಿ. ಇನ್ನು ರಾಷ್ಟ್ರೀಯ ಸೆಕ್ಯೂಲರ್ ಮಜ್ಲೀಸ್‌ ಪಕ್ಷ 01‌ ಹಾಗೂ ಪಕ್ಷೇತರರೊಬ್ಬರು 01 ಸ್ಥಾನದಲ್ಲಿ ಗೆಲುವುದ ಸಾಧಿಸಿದ್ದಾರೆ.

ಅಸೋಮ್‌ನಲ್ಲಿ ಬಿಜೆಪಿ

ಅಸ್ಸೋಂನಲ್ಲಿ ಪುನಾ ಎನ್‍ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಒಟ್ಟು 126 ಕ್ಷೇತ್ರಗಳ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 76 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ 58 ಹಾಗೂ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟ 49 ಕಡೆ ಜಯ ಗಳಿಸಿದೆ.

ಮತ್ತೊಮ್ಮೆ ಸರಕಾರ ರಚಿಸಲು ಮತದಾರ ನಮಗೆ ಆಶೀರ್ವಾದ ನೀಡಿದ್ದು, ಮಿತ್ರಪಕ್ಷಗಳ ನೆರವಿನೊಂದಿಗೆ ಮತ್ತೆ ಸರಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ ತಿಳಿಸಿದ್ದಾರೆ.

ಕೇರಳದಲ್ಲಿ ಮತ್ತೆ ಎಲ್‌ಡಿಎಫ್‌

ಉಳಿದಂತೆ ಕೇರಳದಲ್ಲಿ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟ ಅಧಿಕಾರ ಉಳಿಸಿಕೊಂಡಿದೆ. ಪಿಣರಾಯಿ ವಿಜಯನ್‌ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಒಟ್ಟು 140 ಕ್ಷೇತ್ರಗಳ ಪೈಕಿ ಎಡರಂಗ 97, ಕಾಂಗ್ರೆಸ್‌ ನೇತೃತ್ವದ ಎಲ್‌ಡಿಎಫ್‌ 41 ಕ್ಷೇತ್ರಗಳಲ್ಲಿ ಗೆದಿದ್ದರೆ, ಇದ್ದ ಒಂದು ಕ್ಷೇತ್ರವನ್ನೂ ಬಿಜೆಪಿ ಕಳೆದುಕೊಂಡಿದೆ. ಇತರರು 2 ಕಡೆ ಗೆದ್ದಿದ್ದಾರೆ.

Charts courtesy: Election Commission Of India

Tags: assam puducherryelection 2021keralamamata banerjeetamilnaduwest bengal
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ಡಜನ್‌+ ಕಾರಣಗಳು! ಮಮತಾ ಬ್ಯಾನರ್ಜಿ ಅವರನ್ನು ಮಣಿಸುವ ಭರದಲ್ಲಿ ಆಗುತ್ತಿದ್ದ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿಲ್ಲ ಬಿಜೆಪಿ!!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ಡಜನ್‌+ ಕಾರಣಗಳು! ಮಮತಾ ಬ್ಯಾನರ್ಜಿ ಅವರನ್ನು ಮಣಿಸುವ ಭರದಲ್ಲಿ ಆಗುತ್ತಿದ್ದ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿಲ್ಲ ಬಿಜೆಪಿ!!

Leave a Reply Cancel reply

Your email address will not be published. Required fields are marked *

Recommended

ಮೈಸೂರು ದಸರಾ ಟೂರಿಸಂ ಪ್ಯಾಕೇಜ್; ಸರಕಾರಕ್ಕೆ ಒಳ್ಳೇ ಸಲಹೆ ಕೊಟ್ಟ ಎಸ್.ಎಂ.ಕೃಷ್ಣ

ಮೈಸೂರು ದಸರಾ ಟೂರಿಸಂ ಪ್ಯಾಕೇಜ್; ಸರಕಾರಕ್ಕೆ ಒಳ್ಳೇ ಸಲಹೆ ಕೊಟ್ಟ ಎಸ್.ಎಂ.ಕೃಷ್ಣ

5 years ago
ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆ

ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ