• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ

cknewsnow desk by cknewsnow desk
May 3, 2021
in COVID-19, STATE
Reading Time: 2 mins read
0
CHAMARAJANAGAR OXYGEN TRAGEDY: ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ
911
VIEWS
FacebookTwitterWhatsuplinkedinEmail

ಆಕ್ಸಿಜನ್‌ ಇಲ್ಲದೆ ರಾಜ್ಯದಲ್ಲಿ ಜನರ ಜೀವ ಹರಣವಾಗುತ್ತಿರುವ ವಿಷಯ ಇದೀಗ ರಾಜಕೀಯ ತಿರುವು ಪಡೆದುಕೊಂದಿದೆ. ಚಾಮರಾಜನಗರ ಆಮ್ಲಜನಕ ದುರಂತಕ್ಕೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಬೇಕು ಎಂದು ಕಾಂಗ್ರೆಸ್‌ ಒತ್ತಾಯ ಮಾಡಿದೆ.

ಬೆಂಗಳೂರು: ಕೋಲಾರ ಮತ್ತು ಚಾಮನಗರಗಳ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ವೈಫಲ್ಯದಿಂದ ಕೋವಿಡ್‌ ಸೋಂಕಿತರು ಸಾವನ್ನಪ್ಪಿದ ಘಟನೆಯ ನೈತಿಕ ಹೊಣೆಹೊತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷ ಒತ್ತಾಯ ಮಾಡಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಪ್ರತ್ಯೇಕವಾಗಿ ಮಾತನಾಡಿದ್ದು, ಕೂಡಲೇ ಡಾ.ಸುಧಾಕರ್‌ ಪದತ್ಯಾಗ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದ ತನಿಖೆಗೆ ಸಿದ್ದು ಆಗ್ರಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಮಂದಿ ರೋಗಿಗಳು ಸಾವಿಗೀಡಾದ ದುರ್ಘಟನೆ ಬಹಳ ಆಘಾತಕಾರಿ. ಈ ಘಟನೆಗೆ ಸರಕಾರವೇ ನೇರ ಹೊಣೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಅವರು ತಕ್ಷಣ ರಾಜೀನಾಮೆ ಪಡೆಯಬೇಕು. ಅಲ್ಲದೆ, ಸಚಿವರು ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದ್ದಾರೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ @BSYBJP ಹಾಗೂ ಆರೋಗ್ಯ ಸಚಿವ @mla_sudhakar ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. 4/4 #ResignBSY

— Siddaramaiah (@siddaramaiah) May 3, 2021

ಈ ಸಾವುಗಳಿಗೆ ಯಾರು ಹೊಣೆ?: ಡಿಕೆಶಿ ಪ್ರಶ್ನೆ

ಆಕ್ಸಿಜನ್ ಕೊರತೆಯಿಂದ 24 ಜನರ ಸಾವಿಗೆ ಹೊಣೆಯಾರು? ಇವರನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೇಗೆ ಧೈರ್ಯ ತುಂಬಬೇಕು ಎಂಬುದೇ ತೋಚುತ್ತಿಲ್ಲ. ಈ ಸರಕಾರ ನಂಬಿಕೆ ಕಳೆದುಕೊಂಡಿದ್ದು, ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಮಾಡಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಹೇಳಿದ್ದಿಷ್ಟು:

ಇದು ಪ್ರಚಾರ ಪ್ರಿಯ ಸರಕಾರ. ಆಕ್ಸಿಜನ್ ವಿಚಾರದಲ್ಲಿ ಯಾರೂ ಮೇಲ್ವಿಚಾರಣೆ ಮಾಡುತ್ತಿಲ್ಲ. ನಮ್ಮ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು ಎಂದು ಹೇಳಿದ್ದರು. ಅವರಿಗೆ ಮುಖ್ಯಮಂತ್ರಿಗಳು ಸಮಯಾವಕಾಶ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಈ ಸರ್ಕಾರದಿಂದಾಗಲಿ ಮುಖ್ಯಮಂತ್ರಿಗಳಿಂದಾಗಲಿ, ಮಂತ್ರಿಗಳಿಂದಾಗಲಿ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಅವರ ಆದ್ಯತೆಗಳೇ ಬೇರೆ. ನಮ್ಮ ಮರ್ಯಾದೆ ಹೋದರೂ ಪರವಾಗಿಲ್ಲ, ಶಾಸಕಾಂಗ ಪಕ್ಷದ ಸಭೆ ನಂತರ ನಾನೇ ಮುಖ್ಯಕಾರ್ಯದರ್ಶಿಗಳ ಸಮಾಯಾವಕಾಶ ಕೇಳಿ ಅವರು ಎಲ್ಲಿರುತ್ತಾರೋ ಅಲ್ಲಿಗೇ ಹೋಗಿ ಭೇಟಿ ಮಾಡಿ ಈ ರಾಜ್ಯದ ಜನತೆಗೆ ವಾಸ್ತವಾಂಶ ಏನಿದೆ ಎಂದು ತಿಳಿಸಲು ಕೇಳಿಕೊಳ್ಳುತ್ತೇನೆ.

ನನಗೆ ಬರುತ್ತಿರುವ ಕರೆಗಳನ್ನು ಸ್ವೀಕರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಎಲ್ಲಿಗೆ ಕಳುಹಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬುದು ತೋಚುತ್ತಿಲ್ಲ. ಜನ ಆಕ್ಸಿಜನ್ ಮಟ್ಟದ ಕುಸಿತದಿಂದ ಆತಂಕಕ್ಕೆ ಸಿಲುಕಿದ್ದಾರೆ. ನಮಗೆ ಮುಖ್ಯಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳ ಬದ್ಧತೆ ಬಗ್ಗೆ ಪ್ರಶ್ನೆ ಇಲ್ಲ. ಆದರೆ ಜನರಿಗೆ ವಾಸ್ತವಾಂಶವನ್ನು ನೀವಾದರೂ ತಿಳಿಸಿ. ತಜ್ಞರು ಎಂದು ಇಟ್ಟುಕೊಂಡಿರುವವರು ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಭಾಯಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಿ.

ಈ ಸಮಯದಲ್ಲಿ ನಾನು ಉದ್ಯಮಿಗಳು, ಸಂಘ-ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ. ಜನರ ಜೀವ ಉಳಿಸಲು ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ನೆರವು ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ.

ಹೊರ ರಾಜ್ಯಗಳಲ್ಲಿ ಅಭಾವ ನೀಗಿಸಲು ಹೊರ ದೇಶಗಳಿಂದ ತರಿಸುತ್ತಿದ್ದಾರೆ. ಹುಟ್ಟಿದ ಮಗುವಿಗೆ ಮೊದಲು ಬೇಕಾಗಿರುವುದು ಉಸಿರಾಡುವ ಗಾಳಿ. ಜನ ಆ ಆಕ್ಸಿಜನ್ ಕೇಳಿದರೆ ಅದನ್ನು ಕೊಡಲು ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಇದನ್ನೆಲ್ಲ ನೋಡುವಂತಹ ಶಿಕ್ಷೆ ಭಗವಂತ ನಮಗೆ ಯಾಕೆ ಕೊಡುತ್ತಿದ್ದಾನೆ ಅಂತಾ ನೋವಾಗುತ್ತಿದೆ.

ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ಸರ್ಕಾರ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ ಎನ್ನುತ್ತಿದೆ ಎಂದರೆ ಮಾಧ್ಯಮಗಳು ಸುಳ್ಳು ವರದಿ ಪ್ರಸಾರ ಮಾಡಿವೆಯೇ? ನೀವು ತಪ್ಪು ಮಾಡಿದ್ದೀರಾ? ಅಥವಾ ಸರ್ಕಾರ ತಪ್ಪು ಮಾಡುತ್ತಿದೆಯಾ? ಇದೇ ಕಾರಣಕ್ಕೆ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಹೇಳುತ್ತಿದ್ದೇನೆ.

ಯಾರಿಗೆ ಆಗಲಿ ಪೂರ್ವ ಸಿದ್ಧತೆ, ಹೊಣೆಗಾರಿಕೆ ಇರಬೇಕು. ಇದ್ಯಾವುದು ಈ ಸರ್ಕಾರದಲ್ಲಿಲ್ಲ. ಆಕ್ಸಿಜನ್ ಕೊರತೆಯಿಂದ ಸತ್ತಿರುವ 24 ಜನರ ಕುಟುಂಬದ ಸದಸ್ಯರಿಗೆ ಯಾವ ರೀತಿ ಶಕ್ತಿ ತುಂಬಬೇಕೋ ತೋಚುತ್ತಿಲ್ಲ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿ ಎಂದು ನಾನು ಪಕ್ಷದ ಜಿಲ್ಲಾ ಸಮಿತಿಗೆ ಮನವಿ ಮಾಡುತ್ತೇನೆ.’

ಚಾಮರಾಜನಗರ ದುರಂತವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಖಂಡಿಸಿದ್ದಾರೆ.

Died or Killed?

My heartfelt condolences to their families.

How much more suffering before the ‘system’ wakes up? pic.twitter.com/JrfZbIo7zm

— Rahul Gandhi (@RahulGandhi) May 3, 2021
  • ಈ ಸುದ್ದಿಯನ್ನುಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ದಿಲ್ಲಿಗಿಂತ ಕರಾಬ್‌ ಆಯಿತಾ ಕರ್ನಾಟಕ? ಕೋಲಾರದ ನಂತರ ಚಾಮರಾಜನಗರ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಘೋರ ವೈಫಲ್ಯ; ನರಳಿ ನರಳಿ ಜೀವಬಿಟ್ಟ 24 ಕೋವಿಡ್‌ ಸೋಂಕಿತರು
Tags: bjpchamarajanagaroxygen tragedyCongressresin dr k sudhakarresinyediyurappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ

ಗುಡಿಬಂಡೆ ಪ.ಪಂ.ಚುನಾವಣೆಯಲ್ಲಿ ಮಟ್ಕ, ಬೆಟ್ಟಿಂಗ್‌ ನಡೆಸುವ ವ್ಯಕ್ತಿಗೆ ಮತ ಹಾಕಿ ಗೆಲ್ಲಿಸಿದರಾ ಮತದಾರರು? 3ನೇ ವಾರ್ಡ್‌ ಎಲೆಕ್ಷನ್‌ ಕಥೆ ಬಿಚ್ಚಿಟ್ಟ ಆಶಾ ಜಯಪ್ಪ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ