• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

cknewsnow desk by cknewsnow desk
May 4, 2021
in COVID-19, GUEST COLUMN, STATE
Reading Time: 1 min read
0
#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

ರಮೇಶ್‌ ಕುಮಾರ್‌

913
VIEWS
FacebookTwitterWhatsuplinkedinEmail

ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ, ತಾಲೂಕು ಆಸ್ಪತ್ರೆಯಲ್ಲಿ ನಾಲ್ವರು ಕೊರೋನಾ ಸೋಂಕಿತರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ್ದಾರೆ. 32ಕ್ಕೂ ಹೆಚ್ಚು ಜನರು ನರಳಾಡುತ್ತಿದ್ದಾರೆ. ರಾಜ್ಯದಲ್ಲಿನ ಆಕ್ಸಿಜನ್ ಕೊರತೆಯಿಂದಾಗಿ ಕೊರೋನಾ ಸೋಂಕಿತರು ಸಾವನ್ನಪ್ಪುತ್ತಿರುವ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುದೀರ್ಘ- ಮನಕಲಕುವ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನಿದೆ? ಮುಂದೆ ಓದಿ..

ಮಾನ್ಯರೇ..

ಇಂದು ಚಾಮರಾಜನಗರ ಸರಕಾರಿ ಆಸ್ಪತ್ರೆಯಲ್ಲಿ ಸಂಭವಿಸಿರುವ ಸಾವುಗಳು ನಿಮ್ಮ ಮನಸ್ಸಿನ ಮೇಲೆ ಏನೂ ಪರಿಣಾಮವನ್ನು ಬರಲಿಲ್ಲವೇ?

ಒಂದು ಕ್ಷಣ ಕಾಲ ನಿಮ್ಮ ಸ್ಥಾನವನ್ನು ಮರೆತು ಒಬ್ಬ ಸಾಮಾನ್ಯ ಮನುಷ್ಯನಂತೆ ಇದನ್ನು ನೋಡಿದಾಗ ಸಹಜವಾಗಿಯೇ ನಿಮ್ಮಲ್ಲಿ ಕೆಲವು ಪ್ರತಿಕ್ರಿಯೆಗಳನ್ನು ಪ್ರಕೃತಿ ನಿರೀಕ್ಷಿಸುತ್ತೆ. ನಾವು ಅಲಂಕರಿಸಿರುವ ಸ್ಥಾನಗಳು ನಮ್ಮ ಮನುಷ್ಯತ್ವಕ್ಕೆ ಹೊದಿಸಿದ ಕವಚಗಳೇ ಹೊರತು ನಮ್ಮ ಸೂಕ್ಷ್ಮತೆಯನ್ನು ನುಂಗಿಹಾಕುವ ಸಾಧನಗಳಾಗಬಾರದು. ಶಾಸಕನಾಗಿಯೇ ಆಗಲಿ, ವಿಶೇಷವಾಗಿ ಪ್ರತಿಪಕ್ಷದವರೇ ಆಗಲಿ ಈ ಮಾತುಗಳನ್ನಾಡುತ್ತಿಲ್ಲ. ರಾಜಕಾರಣ ತನ್ನ ಗಾಂಭೀರ್ಯವನ್ನು ಘನತೆಯನ್ನು ಸಂಪೂರ್ಣ ಕಳೆದುಕೊಂಡಿದೆ.

ಕೆಲವೇ ದಿನಗಳ ಹಿಂದೆ ಮದ್ರಾಸ್ ಶ್ರೇಷ್ಠ ನ್ಯಾಯಾಲಯವು ಕೇಂದ್ರ ಚುನಾವಣಾ ಆಯೋಗದ ಕರ್ತವ್ಯ ಭ್ರಷ್ಟತೆಯ ಬಗ್ಗೆ ಆಡಿರುವ ನಿಷ್ಠುರದ ಮಾತುಗಳನ್ನು ನೀವು ಗಮನಿಸಿರಬಹುದು ಎಂದು ನಂಬಿದ್ದೇನೆ. ಇದರ ಹಿನ್ನೆಲೆಯಲ್ಲಿ ಇಂದು ನಡೆದಿರುವ ದುರಂತ ಏನೆಂದು ನಮಗೆ ಸೂಚನೆ ಕೊಡುತ್ತೆ.

ಪ್ರಾಣ ಕಳೆದುಕೊಂಡಂಥವರು, ಸಮರದಲ್ಲಿ ಸಾವನ್ನಪ್ಪಿದ ವೀರಯೋಧರಲ್ಲ ಅಥವಾ ಯಾವುದಾದರೂ ಸತ್ಯಾಗ್ರಹ ಅಥವಾ ಹೋರಾಟಕ್ಕಾಗಿ ಮಡಿದ ಹುತಾತ್ಮರೂ ಅಲ್ಲ., ಮಹಾತ್ಮರೂ ಅಲ್ಲ. ಆರೋಗ್ಯ ಬಿಗಡಾಯಿಸಿ ಅಸಹಾಯಕರಾಗಿ ಜೀವ ಅಂಗೈನಲ್ಲಿ ಇಟ್ಟುಕೊಂಡು ಪ್ರಾಣ ಉಳಿಸಿ ಕೊಳ್ಳಬೇಕೆಂಬ ಒಂದೇ ಅಪೇಕ್ಷೆಯಿಂದ ಸರಕಾರಿ ಆಸ್ಪತ್ರೆಗೆ ಬಂದ ಸಾಮಾನ್ಯ ಜನ ಎನ್ನುವುದು ಕಟುಸತ್ಯ. ಇದುವರೆಗೆ ಬಂದ ವರ್ತಮಾನದ ಪ್ರಕಾರ ಆಸ್ಪತ್ರೆಯಲ್ಲಿ ಇದ್ದ ವೈಫಲ್ಯಗಳ ಕಾರಣದಿಂದ ಇವರು ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರು ಸಾಮಾನ್ಯಜನ, ಸತ್ತಿದ್ದು ಸರಕಾರಿ ಆಸ್ಪತ್ರೆಯಲ್ಲಿ ಆದಕ್ಕೆ ಕಾರಣ ನಮ್ಮ ದಿವ್ಯ ನಿರ್ಲಕ್ಷ್ಯ.

ಈ ಹಾರಿಹೋದ ಪ್ರಾಣ ಪಕ್ಷಿಗಳ ಕುಟುಂಬಗಳ ಅವಲಂಬಿತರು ಅಥವಾ ಬಂಧುಬಳಗದವರು ದುಃಖದ ಮಡುವಿನಲ್ಲಿ ಬಿದ್ದಿದ್ದಾರೆ ಎಂದು ಆಲೋಚನೆ ಮಾಡುವ ಪ್ರಯತ್ನವನ್ನಾದರೂ ನೀವು ಮಾಡಿದ್ದೀರಾ?

ಯಾರ ತಪ್ಪಿಗಾಗಿ ಯಾರಿಗೆ ಶಿಕ್ಷೆ? ಯಾರ ದರ್ಪ ಮತ್ತು ಅಹಂಕಾರ ಗಳಿಗೆ ಯಾರು ಬಲಿಯಾಗಿದ್ದಾರೆ? ಆಲೋಚನೆ ಮಾಡಿದ್ದೀರಾ? ಸತ್ತ ಕುಟುಂಬಗಳಿಗೆ ಒಂದು ವೇಳೆ ನೀವು ಘೋಷಿಸಬಹುದಾದ ಪರಿಹಾರ ಮೌಲಿಕವಾಗಿ ಯಾವ ಯೋಗ್ಯತೆ ಉಳ್ಳದ್ದಾಗಿರುತ್ತದೆ?

ಅಸಹಾಯಕ ಜನರ ಜೀವಕ್ಕೆ ಬೆಲೆ ಕಟ್ಟುವ ಒಂದು ದುರಹಂಕಾರದ ಪರಮಾವಧಿಯ ಪ್ರಕ್ರಿಯೆಯಾಗುತ್ತದೆಯೇ ಹೊರತು ಪಶ್ಚಾತ್ತಾಪಪಟ್ಟ ಮನಸ್ಸಿನಿಂದ, ಪ್ರಾಮಾಣಿಕವಾದ ಪ್ರಯತ್ನ ವಾಗುವುದಿಲ್ಲ..

80ರ ಪ್ರಾಯದಲ್ಲಿರುವ ತಮಗೆ,71,72 ರ ಪ್ರಾಯ ದಲ್ಲಿರುವ ನನಗೆ ಬದುಕಿರಲೇಬೇಕೆಂಬ ದೃಢನಿಶ್ಚಯ ವಿದೆ ಮತ್ತು ನಮ್ಮನ್ನು ಉಳಿಸಿಕೊಳ್ಳಲು ವ್ಯವಸ್ಥೆಯೂ ಇದೆ. ಆದರೆ ನಮ್ಮನ್ನು ಈ ಸ್ಥಾನಗಳಿಗೆ ತಂದ ಜನರ ಜೀವ ಉಳಿಸಲು ವ್ಯವಸ್ಥೆ ಪೂರಕವಾಗಿಲ್ಲ.

ಔಪಚಾರಿಕವಾಗಿ ಎಲ್ಲಾ ಬೆಲೆಯನ್ನು ಕಳೆದುಕೊಂಡಿರುವ ರಾಜಕೀಯ ಭಾಷೆಯಲ್ಲಿ ನೀವು ರಾಜೀನಾಮೆಯನ್ನು ಕೊಡಿ ಎಂದು ಕೇಳುವ ಮೂರ್ಖ ನಾನಲ್ಲ. ಒಂದು ವೇಳೆ ನೀವು ಅಂತಹ ನಿರ್ಧಾರ ಮಾಡಿದರೂ ಸತ್ತವರೇನೂ ಬದುಕಿ ಬರುವುದಿಲ್ಲ ಅಥವಾ ಪರಿಸ್ಥಿತಿಯೂ ಸುಧಾರಿಸುವುದಿಲ್ಲ. ಅದೊಂದು ರಾಜಕೀಯ ಮೇಲಾಟ ಮಾತ್ರ ಆಗುತ್ತದೆ. ನಾವು ಪ್ರಾಣಿ ಪ್ರಪಂಚದಿಂದ ವಿಭಿನ್ನವಾಗಿ ಮನುಷ್ಯ ಲೋಕದಲ್ಲಿ ಇದ್ದೇವೆ. ನಾಗರಿಕ ಸಮಾಜವೆಂದು ಜಂಭ ಕೊಚ್ಚಿಕೊಳ್ಳುತ್ತೇವೆ.

ಅಳಲು, ದುಃಖ ದುಮ್ಮಾನಗಳನ್ನು ತೋಡಿಕೊಳ್ಳಲು ಪ್ರಾಣಿಗಳಿಗೆ ಅವಕಾಶವಿಲ್ಲ. ಆ ಪ್ರಾಣಿ ಅನುಭವಿಸುವ ನೋವೇ ಮೂಕವೇದನೆ. ಇಂದು ನಮ್ಮೆಲ್ಲರ ಬೇಜವಾಬ್ದಾರಿಯಿಂದ ನಾಗರಿಕ ಸಮಾಜ ಪ್ರಾಣಿಗಳ ರೀತಿಯಲ್ಲೇ ಮೂಕ ವೇದನೆಯನ್ನು ಅನುಭವಿಸುತ್ತಿದೆ. ಮನುಷ್ಯನಿಗೆ ಪಂಚೇಂದ್ರಿಯಗಳು ನಿಷ್ಕ್ರಿಯವಾದ ಮೇಲೆ ಅಂತಹ ಮನುಷ್ಯ ಸಮಾಜಕ್ಕೆ ಹೆಚ್ಚು ಉಪಯುಕ್ತ ನಾಗುವುದಿಲ್ಲ.

ಪಂಚೇಂದ್ರಿಯಗಳು ಸಕ್ರಿಯವಾಗಿರುವ ಮನುಷ್ಯನಿಗೆ ಇಂತಹ ಸನ್ನಿವೇಶದಲ್ಲಿ ನಿರ್ಜೀವ ಹೆಣದಂತೆ ಬಿದ್ದಿರಲೂ ಸಾಧ್ಯವಿಲ್ಲ. ನನ್ನನ್ನು ಒಳಗೊಂಡು ನಾವೆಲ್ಲರೂ ಈ ದುರಂತಕ್ಕೆ ಕಾರಣ ರಾಗಿದ್ದೇವೆ. ಸತ್ತ ಸಂಬಂಧಿಕರ ಶವವನ್ನು ಆಸ್ಪತ್ರೆಯಿಂದ ತೆಗೆದುಕೊಂಡು ಬರಲು ಹಣ ಇಲ್ಲದೆ ಸಂಬಂಧಿಕರು ಆ ಶವವನ್ನು ಅಲ್ಲಿಯೇ ಬಿಟ್ಟು ಬರುತ್ತಾರೆ ಇದು ಮಾಧ್ಯಮಗಳಲ್ಲಿ ಪ್ರಕಟವಾಗುತ್ತೆ. ಆದರೆ ತಮಗೆ ಮತ್ತು ನನಗೆ ಇದರ ಯಾವುದೇ ರೀತಿಯ ಸಂಬಂಧವಿಲ್ಲದಂತೆ ನಾವು ವರ್ತಿಸಿದ್ಧೇವೆ.ಹೆಮ್ಮಾರಿಗೆ ಬಲಿಯಾಗಿ ಗತಿಸಿಹೋದವರ ದಹನಕ್ರಿಯೆಗೆ ಜನ ಪರದಾಡುತ್ತಿದ್ದಾರೆ,ಆದರೂ ನಮ್ಮದೊಂದು ಸಂವಿಧಾನಬದ್ಧವಾಗಿ ಸ್ಥಾಪಿತವಾದ ಜವಾಬ್ದಾರಿಯುತ ನಾಗರಿಕ ಸರ್ಕಾರ. ಎಂತಹ ವಿಪರ್ಯಾಸ!!

ಆಸ್ಪತ್ರೆ ಸಿಗುವುದು ದುರ್ಲಭ, ಹೋದ ಆಸ್ಪತ್ರೆಯಲ್ಲಿ ಆಮ್ಲಜನಕದ ಲಭ್ಯತೆ ಆಸ್ಪತ್ರೆಯ ಜವಾಬ್ದಾರಿಯಲ್ಲ ಕೃತಕ ಉಸಿರಾಟದ ಯಂತ್ರಗಳು (ventilators) ನಮಗೆ ಸಂಬಂಧವೇ ಇಲ್ಲ.

ಭಾರತ ದೇಶದ ಸರ್ವೋಚ್ಚ ನ್ಯಾಯಾಲಯ ದೆಹಲಿ ನಗರವಾಸಿಗಳಿಗೆ ಆಮ್ಲಜನಕ ಪೂರೈಕೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಸೂಚನೆ ಗಮನಿಸಿದ್ದೀರೋ ಇಲ್ಲವೋ ಗೊತ್ತಿಲ್ಲ. ಜೀವನದಲ್ಲಿ ಒಂದು ಆಸೆ ,ತಾನೇನಾದರೂ ಸಾಧಿಸಬೇಕೆಂಬುದು. ತಮಗೆ ಇನ್ನೇನು ಜೀವನದಲ್ಲಿ ಆಗಬೇಕೆಂಬ ಆಸೆ ಉಳಿದಿದೆ? ಒಂದು ವೇಳೆ ಇದೇ ಸ್ಥಿತಿಯಲ್ಲಿ ಮುಂದುವರೆಯಬೇಕೆಂದು ಇದ್ದರೆ ಯಾವ ಪುರುಷಾರ್ಥಕ್ಕಾಗಿ ಎಂದು ತಿಳಿದುಕೊಳ್ಳುವ ಕುತೂಹಲ ನನಗಿದೆ.

ಈ ಮಾತು ನಿಮಗಷ್ಟೇ ಅಲ್ಲ ಸಾರ್ವಜನಿಕ ಜೀವನದಲ್ಲಿ ಇರುವ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರಿಗೆ ಅನ್ವಯಿಸುತ್ತದೆ. ನಮಗೆ (ರಾಜಕೀಯ ಮುಖಂಡರುಗಳಿಗೆ) ನಾವು ಗಳಿಸಿರುವ ಭ್ರಷ್ಟ ಹಣ ನಮ್ಮ ಖಾಸಗಿ ಬದುಕಿನಲ್ಲಿ ಅಭದ್ರತೆಯನ್ನು ದೂರಮಾಡುತ್ತದೆ ಹಾಗಾಗಿ ನಮ್ಮ ಹೊಸಲಿಂದಾಚೆಗಿರುವ ನೋವು ನಮ್ಮದಾಗಿರುವುದಿಲ್ಲ.

ನಮಗೆ ಅರ್ಥವೂ ಆಗುವುದಿಲ್ಲ. ಆದ್ದರಿಂದ ಇಂದು ನಡೆದಿರುವಂತಹ ಭೀಕರ ದುರಂತ ಸನ್ನಿವೇಶಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳಮುಖಂಡರಾದ ನಮ್ಮ ಪ್ರತಿಕ್ರಿಯೆಗಳು ಅಸಹಜ ವಾಗಿರುತ್ತೆ, ನಾಟಕೀಯ ವಾಗಿರುತ್ತೆ. ಈ ನಾಟಕಕ್ಕೆ ಕೊನೆ ಎಂದು?

ನಮ್ಮ ಪಂಚೇಂದ್ರಿಯಗಳು ಸಕ್ರಿಯವಾಗುತ್ತೋ ಅಂದು ನಾಟಕ ಅಂತ್ಯವಾಗುತ್ತದೆ. ಇಂತಹ ಅಗ್ನಿ ಪರೀಕ್ಷೆಯ ಸಮಯದಲ್ಲಿ ನಾಟಕ ಮುಂದುವರೆಯುತ್ತೋ ಅಥವಾ ಅಂತ್ಯವಾಗಿ ಪಂಚೇಂದ್ರಿಯಗಳು ಸಕ್ರಿಯವಾಗಿತ್ತೋ ಸಾಮಾನ್ಯ ಜನರಿಗೆ ಸಾಬೀತು ಮಾಡುವ ಹೊಣೆ ನಿಮ್ಮ ಮೇಲಿದೆ.

ನನಗೆ ರಾಜಕೀಯ ಪೂರ್ವಗ್ರಹಪೀಡಿತ ಆಲೋಚನೆ ಯಾಗಲಿ ಅಥವಾ ಮತ್ತಾವುದೇ ದುರಾಲೋಚನೆ ಗಳು ಇರುವುದಿಲ್ಲ. ಇದು ಕೇವಲ ನೊಂದ ಮನಸ್ಸಿನ ಹೃದಯಾಂತರಾಳದ ಮಾತುಗಳು. ನಾನು ಯಾವುದೇ ರೀತಿಯ ಆಶ್ಚರ್ಯಕರ ಪ್ರತಿಕ್ರಿಯೆಗಳು ಈ ಪತ್ರಕ್ಕೆ ಸಿಗುತ್ತದೆ ಎಂದು ವಿಶ್ವಾಸಿಸಿಲ್ಲ. ಅದಕ್ಕೆ ಕಾರಣ ಸ್ಥಗಿತಗೊಂಡ ಪಂಚೇಂದ್ರಿಯಗಳು.

ಇಂತಿ
-ಕೆ.ಆರ್. ರಮೇಶ್ ಕುಮಾರ್
ಶಾಸಕರು ಹಾಗೂ ಮಾಜಿ ವಿಧಾನಸಭಾ ಸ್ಪೀಕರ್‌

K.R. Ramesh Kumar Photo courtesy: DD News

Tags: chief minister bs yediyurappacovid19karnatakakr ramesh kumarletter to cm
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
#COVID19KARNATAKA‌ : 5 ಲಕ್ಷ ಡೋಸ್‌ ರೆಮಿಡಿಸಿವಿರ್, ಅಗತ್ಯ ಇರುವಷ್ಟು RAT ಕಿಟ್‌, ವ್ಯಾಕ್ಸಿನ್ ಖರೀದಿಗೆ ನಿರ್ಧಾರ, ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ ಶುಲ್ಕ ಪರಿಷ್ಕರಣೆ; ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ

#COVID19KARNATAKA‌ : 5 ಲಕ್ಷ ಡೋಸ್‌ ರೆಮಿಡಿಸಿವಿರ್, ಅಗತ್ಯ ಇರುವಷ್ಟು RAT ಕಿಟ್‌, ವ್ಯಾಕ್ಸಿನ್ ಖರೀದಿಗೆ ನಿರ್ಧಾರ, ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ ಶುಲ್ಕ ಪರಿಷ್ಕರಣೆ; ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ