• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

#COVID19KARNATAKA‌ : 5 ಲಕ್ಷ ಡೋಸ್‌ ರೆಮಿಡಿಸಿವಿರ್, ಅಗತ್ಯ ಇರುವಷ್ಟು RAT ಕಿಟ್‌, ವ್ಯಾಕ್ಸಿನ್ ಖರೀದಿಗೆ ನಿರ್ಧಾರ, ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ ಶುಲ್ಕ ಪರಿಷ್ಕರಣೆ; ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ

cknewsnow desk by cknewsnow desk
May 4, 2021
in COVID-19, NEWS IN USE, STATE
Reading Time: 2 mins read
0
#COVID19KARNATAKA‌ : 5 ಲಕ್ಷ ಡೋಸ್‌ ರೆಮಿಡಿಸಿವಿರ್, ಅಗತ್ಯ ಇರುವಷ್ಟು RAT ಕಿಟ್‌, ವ್ಯಾಕ್ಸಿನ್ ಖರೀದಿಗೆ ನಿರ್ಧಾರ, ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‌ ಶುಲ್ಕ ಪರಿಷ್ಕರಣೆ; ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ
912
VIEWS
FacebookTwitterWhatsuplinkedinEmail

ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಉನ್ನತ ಮಟ್ಟದ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರದ ವಶದಲ್ಲಿರುವ ಬೆಡ್‌ ದರ ಪರಿಷ್ಕರಣೆ, ಕೂಡಲೇ 5 ಲಕ್ಷ ರೆಮಿಡಿಸಿವಿರ್ ಡೋಸ್‌ ಖರೀದಿ ಹಾಗೂ ಅಗತ್ಯವಿದ್ದಷ್ಟು ರಾಟ್‌ ಕಿಟ್‌ಗಳನ್ನು ತಕ್ಷಣವೇ ಖರೀದಿ ಮಾಡುವ ಮಹತ್ವದ ನಿರ್ಧಾರಗಳನ್ನು ಕೋವಿಡ್‌ ಕಾರ್ಯಪಡೆಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮಂಗಳವಾರ ಬೆಂಗಳೂರಿನಲ್ಲಿ ಕಾರ್ಯಪಡೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ದೇಶಿಯ ಅಥವಾ ಜಾಗತಿಕವಾಗಿ ಯಾವುದೇ ಕಂಪನಿ ಆಗಿರಲಿ. ಇವತ್ತೇ ರೆಮಿಡಿಸ್ವೀರ್‌ ಖರೀದಿಗೆ ಜಾಗತಿಕ ಟೆಂಡರ್‌ ಕರೆಯಿರಿ ಎಂದು ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಡೀ ರಾಜ್ಯದ ಕೋವಿಡ್‌ ಪರಿಸ್ಥಿತಿಯ ಅವಲೋಕನ ಮಾಡಿದ ಡಿಸಿಎಂ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಸೇರಿದಂತೆ ಉನ್ನತ ಅಧಿಕಾರಿಗಳಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಿದರು.

ರೆಮಿಡಿಸಿವಿರ್ ಕೊರತೆ ಆಗಬಾರದು

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ರೆಮಿಡಿಸಿವಿರ್ ಕೊರತೆ ಉಂಟಾಗಬಾರದು. ಕೂಡಲೇ 5 ಲಕ್ಷ ಡೋಸ್‌ ಖರೀದಿ ಮಾಡಲು ಜಾಗತಿಕ ಟೆಂಡರ್‌ ಕರೆಯಿರಿ. ಯಾವುದೇ ಕಂಪನಿಯಾದರೂ ಪರವಾಗಿಲ್ಲ. ವಿದೇಶದಿಂದ ಆಮದು ಮಾಡಿಕೊಂಡರೂ ಸರಿ. ರೆಮಿಡಿಸಿವಿರ್ ಕೊರತೆಯಿಂದ ಜೀವ ಹೋಯಿತು ಎನ್ನುವ ಮಾತು ಇನ್ನು ಕೇಳಿಬರಬಾರದು. ಇವತ್ತೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಎಂದು ಡಿಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಖಾಸಗಿ ಆಸ್ಪತ್ರೆಗಳ ಸರಕಾರದ ಬೆಡ್‌ ದರ ಪರಿಷ್ಕರಣೆ

ಇದೇ ಸಭೆಯಲ್ಲಿ ಸರಕಾರ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಿರುವ ಹಾಸಿಗೆಗಳ ಪ್ರತಿದಿನದ ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರವನ್ನೂ ಕೈಗೊಳ್ಳಲಾಯಿತು. ಗಂಭೀರವಲ್ಲದ ಕೋವಿಡ್‌ ಸೋಂಕಿತರ ಬೆಡ್‌ ದರ ಪ್ರತಿದಿನಕ್ಕೆ ಈಗ 5,200 ರೂ. ಇದ್ದು, ಇದರಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ಆಕ್ಸಿಜನ್‌ಯುಕ್ತ ಬೆಡ್‌ ದರವನ್ನು ದಿನಕ್ಕೆ 7,000ದಿಂದ 8,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಐಸಿಯುನಲ್ಲಿ ವೆಂಟಿಲೇಟರ್‌ ಹೊರತಾದ ಬೆಡ್‌ ದರವನ್ನು 8,500ರಿಂದ 9,750 ರೂ.ಗಳಿಗೆ ಹಾಗೂ ಐಸಿಯುನಲ್ಲಿ ವೆಂಟಿಲೇಟರ್‌ ಸಹಿತ ಬೆಡ್‌ ದರವನ್ನು 10,000ರಿಂದ 11,500 ರೂ.ಗಳಿಗೆ ಏರಿಸಲಾಗಿದೆ.
ಹೊಸ ದರಗಳು ಯಾವಾಗಿನಿಂದ ಜಾರಿಗೆ ಬರುತ್ತವೆ ಎಂಬುದಕ್ಕೆ ಸರಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಡಿಸಿಎಂ ಸಭೆಯಲ್ಲಿ ಪ್ರಕಟಿಸಿದರು.

ಹೆಚ್ಚು ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ

ಯಾವುದೇ ಖಾಸಗಿ ಆಸ್ಪತ್ರೆ ಬೆಡ್‌, ಔಷಧಿ, ಆಕ್ಸಿಜನ್‌, ರೆಮಿಡಿಸ್ವೀರ್ ಸೇರಿದಂತೆ ಸರಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಗೂಂಡಾ ಕಾಯ್ದೆ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್‌ ಪ್ರಕರಣ ದಾಖಲ ಮಾಡಲಾಗುವುದು ಎಂದು ಡಿಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.

ಯಾರಾದರೂ ಹೆಚ್ಚು ಶುಲ್ಕ ವಸೂಲಿ ಮಾಡಿದರೆ 112 ಹೆಲ್ಪ್‌ಲೈನ್‌ಗೆ ಕರೆ ಮಾಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ತಮ್ಮ ಹಾಗೂ ಸರಕಾರದ ಬೆಡ್‌ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಟ್ರಸ್ಟ್‌ ಪೋರ್ಟಲ್‌ನಲ್ಲಿ ಅಪ್‌ಡೇಟ್‌ ಮಾಡಬೇಕು. ಹಾಸಿಗೆಗಳ ಲೈವ್‌ ಸ್ಟೇಟಸ್‌ ಇರಬೇಕು. ಅಧಿಕಾರಿಗಳು ಇದರ ಮೇಲೆ ನಿಗಾ ಇಡಬೇಕು ಎಂದು ಡಿಸಿಎಂ ತಾಕೀತು ಮಾಡಿದರು.

ಇದೇ ವೇಳೆ, ಖಾಸಗಿ ಆಸ್ಪತ್ರೆಗಳ ಬಿಲ್‌ ಬಾಕಿ ಇದ್ದರೆ ತಕ್ಷಣವೇ ಚುಕ್ತಾ ಮಾಡಿ. ಹಾಗೆಯೇ ಕೋವಿಡ್‌ ಯೋಧರಾಗಿ ಕೆಲಸ ಮಾಡುತ್ತಿರುವ ಯಾರ ವೇತನವೂ ತಡವಾಗಬಾರದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಡಾ.ಅಶ್ವತ್ಥನಾರಾಯಣ ಸೂಚನೆ ಕೊಟ್ಟರು.

#COVID19 ಕಾರ್ಯಪಡೆ ಸಭೆ ನಡೆಸಿ ಅನೇಕ ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚಿಸಲಾಯಿತು.

ಮುಖ್ಯಾಂಶಗಳು –

*️⃣ ಜಿಲ್ಲೆಗಳ Positivity Rate, Vaccine ಲಭ್ಯತೆ, ಆದ್ಯತೆ ಮುಂತಾದ ಅಂಶಗಳ ಆಧಾರದಲ್ಲಿ 18 ವರ್ಷದಿಂದ 44 ವರ್ಷದವರೆಗಿನ ನಾಗರಿಕರಿಗೆ ವ್ಯಾಕ್ಸಿನೇಷನ್‌ ಗೆ ಸಮರ್ಪಕವಾದ ರೂಪುರೇಷೆ ಸಿದ್ಧಪಡಿಸುವುದು.

1/5 pic.twitter.com/PsgT1UaP6A

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 4, 2021

ಲಸಿಕೆ ಖರೀದಿಗೆ ಸೂಚನೆ

18ರಿಂದ 44 ವರ್ಷ ವಯಸ್ಸಿನ ಎಲ್ಲರಿಗೂ ವ್ಯಾಕ್ಸಿನೇಷನ್‌ ಮಾಡುವ ಕೆಲಸ ಮಂದಗತಿಯಲ್ಲಿ ಸಾಗುತ್ತಿದೆ. ಲಸಿಕೆ ಅಭಾವದಿಂದ ಹೀಗಾಗಿದೆ. ಎಲ್ಲರಿಗೂ ಸರಕಾರವೇ ಲಸಿಕೆ ಕೊಡಬೇಕಾಗಿದೆ. ರಾಜ್ಯದಲ್ಲಿ 3,26,000 ಜನರಿಗೆ ಲಸಿಕೆ ನೀಡಬೇಕಾಗಿದ್ದು, ಇವರಿಗೆ ಎರಡು ಡೋಸ್‌ ನೀಡಲು 6.52 ಕೋಟಿ ರೂ. ಅಗತ್ಯವಿದೆ. ಕೇಂದ್ರ ಸರಕಾರದಿಂದ 3 ಲಕ್ಷ ಡೋಸ್‌ ಕೋವಿಶೀಲ್ಡ್‌ ಬಂದಿದ್ದು, ಮೇ ಎರಡನೇ ವಾರಕ್ಕೆ 15 ಲಕ್ಷ ಡೋಸ್‌ ಬರುತ್ತದೆ ಎಂದು ಸಭೆಗೆ ಡಿಸಿಎಂ ಮಾಹಿತಿ ನೀಡಿದರು.

ತಕ್ಷಣವೇ ಲಸಿಕೆ ಅಭಿಯಾನದ ಕಾರ್ಯತಂತ್ರವನ್ನು ಬದಲಿಸಬೇಕು. ಲಸಿಕೆಯನ್ನು ಯಾರಿಗೆ ನೀಡಬೇಕು ಎಂಬ ಹೊಸ ಮಾರ್ಗಸೂಚಿ ರೂಪಿಸಬೇಕಿದೆ ಎಂದು ಅವರು ಹೇಳಿದರು.

RAT ಕಿಟ್‌ ಖರೀದಿಸಿ

ವ್ಯಕ್ತಿಯ ಸ್ಯಾಂಪಲ್‌ ಸ್ವೀಕರಿಸಿದ ಐದು ನಿಮಿಷಗಳಲ್ಲಿ ಫಲಿತಾಂಶ ಕೊಡುವ RAT ಕಿಟ್‌ಗಳನ್ನು ಎಷ್ಟು ಅಗತ್ಯವೋ ಅಷ್ಟೂ ಖರೀದಿ ಮಾಡಲು ಡಿಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಕಿಟ್‌ಗೆ ಐಸಿಎಂಅರ್‌ ಕೂಡ ಮಾನ್ಯತೆ ನೀಡಿದ್ದು, ರೋಗ ಲಕ್ಷಣಗಳಿದ್ದರೆ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಉಳಿದಂತೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಕೋವಿಡ್‌ ವಾರಿಯರ್‌ಗಳು, ವೈದ್ಯರು, ನರ್ಸುಗಳಿಗೆ ಸೋಂಕು ತಗುಲುತ್ತಿದ್ದು, ಆಯಾ ಜಿಲ್ಲೆಗಳ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೋವಿಡ್‌ ಕರ್ತವ್ಯಕ್ಕೆ ತಕ್ಷಣವೇ ನಿಯೋಜಿಸುವಂತೆ ಉಪ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಜತೆಗೆ, ವೈದ್ಯಕೀಯ ಸಿಬ್ಬಂದಿ ಬಳಕೆ ಮಾಡುವ ವಸ್ತುಗಳ ಕೊರತೆಯಾಗಬಾರದು. ಮಾಸ್ಕ್‌, ಪಿಪಿಎ ಕಿಟ್‌, ಸ್ಯಾನಿಟೈಸರ್‌ ಇತ್ಯಾದಿಗಳು ಅಗತ್ಯ ಪ್ರಮಾಣದಲ್ಲಿ ಸದಾ ಲಭ್ಯ ಇರಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಕಾರ್ಯಪಡೆ ಸದಸ್ಯರೂ ಸಚಿವರೂ ಆದ ಡಾ.ಕೆ.ಸುಧಾಕರ್‌, ಎಸ್.‌ಸುರೇಶ್‌ ಕುಮಾರ್‌, ಸಿ.ಸಿ.ಪಾಟೀಲ್‌ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಯೂ ಸೇರಿದಂತೆ ಹಲವಾರು ಉನ್ನತ ಅಧಿಕಾರಿಗಳು ಇದ್ದರು

Tags: covid19 task forcedr cn ashwathnarayanrat kit for covid 19remdesivir
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

#COVID19KARNATAKA‌ : ಕೊರೋನಾ ನಿರ್ವಹಣೆಯ ಎಲ್ಲ ಜವಾಬ್ದಾರಿಗಳಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ಗೆ ಕೊಕ್ ಕೊಟ್ಟ ಮುಖ್ಯಮಂತ್ರಿ!‌ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಭಾರೀ ಹಿನ್ನಡೆ

Leave a Reply Cancel reply

Your email address will not be published. Required fields are marked *

Recommended

ಜೈಲಿಗೆ ಹೋಗಲು ರೆಡಿ ಎಂದ ರಮೇಶ್‌ ಕುಮಾರ್;‌ ನಾನು ಹಾಗೆ ಅಂದೇ ಇಲ್ಲ ಎಂದ ಡಾ.ಸುಧಾಕರ್‌

ಜೈಲಿಗೆ ಹೋಗಲು ರೆಡಿ ಎಂದ ರಮೇಶ್‌ ಕುಮಾರ್;‌ ನಾನು ಹಾಗೆ ಅಂದೇ ಇಲ್ಲ ಎಂದ ಡಾ.ಸುಧಾಕರ್‌

5 years ago
ನಮ್ಮವೊಳಗಿನ ಬುದ್ದನನ್ನು ಎಚ್ಚರಿಸೋಣ

ನಮ್ಮವೊಳಗಿನ ಬುದ್ದನನ್ನು ಎಚ್ಚರಿಸೋಣ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ