• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೈಕೊಟ್ಟ ಬಳ್ಳಾರಿ ಟ್ಯಾಂಕರ್!! ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಇಡೀ ರಾತ್ರಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರೀ ಅನಾಹುತ, 200 ಕೋವಿಡ್‌ ಸೋಂಕಿತರ ಅಮೂಲ್ಯ ಜೀವಗಳು ಸೇಫ್

cknewsnow desk by cknewsnow desk
May 6, 2021
in COVID-19, STATE
Reading Time: 2 mins read
0
ಕೈಕೊಟ್ಟ ಬಳ್ಳಾರಿ ಟ್ಯಾಂಕರ್!! ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಇಡೀ ರಾತ್ರಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರೀ ಅನಾಹುತ, 200 ಕೋವಿಡ್‌  ಸೋಂಕಿತರ ಅಮೂಲ್ಯ ಜೀವಗಳು ಸೇಫ್
917
VIEWS
FacebookTwitterWhatsuplinkedinEmail

Photo by Matt Chesin on Unsplash

ಕೋಲಾರ, ಚಾಮರಾಜನಗರ ಹಾಗೂ ಆಫಜಲ್‌ಪುರದಲ್ಲಿ ಸಂಭವಿಸಿದ್ದ ಆಕ್ಸಿಜನ್‌ ದುರಂತಗಳು ಇಡೀ ರಾಜ್ಯವನ್ನು ಕಾಡುತ್ತಿರುವ ಹೊತ್ತಿನಲ್ಲಿ ಡಿಸಿಎಂ ಡಾ.ಸಿಎನ್.ಅಶ್ವತ್ಥನಾರಾಯಣ ಅವರ ಸಕಾಲಿಕ ಮಧ್ಯಪ್ರವೇಶದೊಂದಿಗೆ ಅಂತಹ ಸಂಭವನೀಯ ಮಹಾ ದುರಂತವೊಂದು ತಪ್ಪಿ ಹೋಗಿದೆ.

ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ಆಸ್ಪತ್ರೆ ತಂಡ & ಪೊಲೀಸರು ಸೇರಿ ಇಡೀ ರಾತ್ರಿ ಕಾರ್ಯಾಚರಣೆ


ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪರಿಣಾಮ ಸಂಭವೀಯ ಬಹುದೊಡ್ಡ ಆಕ್ಸಿಜನ್‌ ದುರಂತವೊಂದು ಬೆಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದೆ.

ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಈ ದುರಂತ ತಪ್ಪಿದ್ದು, ಇಡೀ ರಾತ್ರಿ ಡಿಸಿಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ವೆಂಟಿಲೇಟರ್‌ & ಆಕ್ಸಿಜನ್‌ ಬೆಡ್‌ಗಳ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಒಟ್ಟು 200 (100 ಬೆಡ್ ಐಸಿಯು ವೆಂಟಿಲೇಟರ್, 100 ಆಮ್ಲಜನಕ ಸಹಿತ ಬೆಡ್) ಕೋವಿಡ್‌ ಸೋಂಕಿತರ ಅಮೂಲ್ಯ ಜೀವ ಉಳಿದಿದೆ.

ಆಸ್ಪತ್ರೆಯಲ್ಲಿ ಏನಾಗಿತ್ತು?

ಪ್ರಾಕಸಿ ಏರ್‌ ಕಂಪನಿ ಬುಧವಾರ ಸಂಜೆ ೫ ಗಂಟೆ ಆಕ್ಸಿಜನ್‌ ಪೂರೈಕೆ ಮಾಡಬೇಕಾಗಿತ್ತು. ಆಮೇಲೆ ೯ ಗಂಟೆಗೆ ಬರುತ್ತೆ ಆಮತ ನಮಗೆ ತಿಳಿಸಲಾಯಿತು. ಅಷ್ಟೊತ್ತಿಗೂ ಬರಲಿಲ್ಲ. ತಡ ಕಾರಣ ಸಂಗ್ರದಲ್ಲಿದ್ದ ಆಮ್ಲಜನಕ ಕಮ್ಮಿಯಾಗ್ತಿತ್ತು. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ 200 ಸೋಂಕಿತರು ಆಕ್ಸಿಜನ್ ಬೆಡ್ʼಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಒದಗಿಸಲಾಗುತ್ತಿದ್ದ ಆಮ್ಲಜನಕವು ರಾತ್ರಿಯ ವೇಳೆಗೆ ಖಾಲಿಯಾಗುತ್ತಾ ಬಂದಿತ್ತು. ಪ್ರಾಕ್ಸಿ ಏರ್‌ ಎನ್ನುವ ಕಂಪನಿ ಬುಧವಾರ ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡಬೇಕಾಗಿತ್ತು. ಆದರೆ, ಬಳ್ಳಾರಿಯಿಂದ ಬರಬೇಕಾಗಿದ್ದ ಆ ಕಂಪನಿಯ ಟ್ಯಾಂಕರ್‌ ರಾತ್ರಿ 11.30 ಆದರೂ ಬರಲೇ ಇಲ್ಲ. ಬದಲಿಗೆ ಆ ಟ್ಯಾಂಕರ್‌ ಕೆ.ಸಿ.ಜನರಲ್‌ಗೆ ಬರುವ ಬದಲು ಖಾಸಗಿ ಆಸ್ಪತ್ರೆಗೆ ಹೋಗಿದೆ ಎಂಬ ವಿಷಯ ತಿಳಿದುಬಂದಿದೆ.

ಒಂದೆಡೆ ಆಕ್ಸಿಜನ್‌ ಕಡಿಮೆಯಾಗುತ್ತಿರುವ ವಿಷಯ ಗೊತ್ತಾದ ಕೂಡಲೇ ಸಿಬ್ಬಂದಿ, ಆಕ್ಸಿಜನ್ ನಿರ್ವಹಣೆ ಹೊಣೆ ಹೊತ್ತಿದ್ದ ವೈದ್ಯಾಧಿಕಾರಿ ಡಾ.ಮೋಹನ್‌ ಅವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಅವರು ಪ್ರಾಕ್ಸಿ ಏರ್‌ ಸಂಸ್ಥೆಯನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಅವರ ಪ್ರಯತ್ನಗಳು ಸಫಲವಾಗಿಲ್ಲ. ತತ್‌ಕ್ಷಣವೇ ಅವರು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರಿಗೆ ಮಧ್ಯರಾತ್ರಿ 12.30ರ ಹೊತ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಕಾರ್ಯ ಪ್ರವೃತ್ತರಾದ ಡಿಸಿಎಂ, ಎಲ್ಲೆಲ್ಲಿ ಆಮ್ಲಜನಕ ಲಭ್ಯವಿದೆ ಎಂದು ಕ್ಷಿಪ್ರಗತಿಯಲ್ಲಿ ಪತ್ತೆ ಹಚ್ಚಿದ್ದಾರೆ. ಆಕ್ಸಜನ್‌ ಉಸ್ತುವಾರಿ ಹೊಂದಿರುವ ಹಿರಿಯ ಸಚಿವ ಜಗದೀಶ್‌ ಶೆಟ್ಟರ್‌, ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಆಕ್ಸಿಜನ್‌ ಉಸ್ತುವಾರಿ ಅಧಿಕಾರಿಗಳಾದ ಮೌನಿಷ್‌ ಮುದ್ಗಲ್‌, ನಿಶ್ಚಿತ್‌ ಮತ್ತೂ ಯುನಿವರ್ಸಲ್‌ ಆಕ್ಸಿಜನ್ ಕಂಪನಿ ಜತೆ ಮಾತನಾಡಿದರಲ್ಲದೆ ತುರ್ತಾಗಿ ಆಕ್ಸಿಜನ್‌ ವ್ಯವಸ್ಥೆ ಮಾಡಿದ್ದಾರೆ.

ಆಪರೇಷನ್‌ ಆಕ್ಸಿಜನ್!!‌

ಯುನಿವರ್ಸಲ್‌ ಕಂಪನಿಯಿಂದ ಆಕ್ಸಿಜನ್‌ ವ್ಯವಸ್ಥೆ ಮಾಡಿದ ಡಿಸಿಎಂ ಅವರು ಮಲ್ಲೇಶ್ವರ ಪೊಲೀಸರ ಜತೆಯೂ ಮಾತನಾಡಿ ಆಮ್ಲಜನಕದ ನಿರಾತಂಕ ಸಾಗಣೆಗೆ ನೆರವಾಗುವಂತೆ ಸೂಚಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರೂ ಯುನಿವರ್ಸಲ್‌ ಕಂಪನಿ-ಕೆ.ಸಿ.ಜನರಲ್‌ ನಡುವಿನ ಮಾರ್ಗ ಮಧ್ಯೆ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಲಾಯಿತು. ಅಷ್ಟರಲ್ಲಿ ಫ್ರಾಕ್ಸಿ ಏರ್‌ ಕಡೆಯಿಂದ 20 ಜಂಬೋ ಸಿಲಿಂಡರ್‌ಗಳನ್ನು ತರಿಸಲಾಯಿತು. ಯುನಿವರ್ಸಲ್‌ ಕಡೆಯಿದಂದ ಪೊಲೀಸ್‌ ಆಯುಕ್ತರು ಹತ್ತು ಸಿಲಿಂಡರ್‌ ಕಳಿಸಿಕೊಟ್ಟರು. ಅರೆಕ್ಷಣ ಸಮಯವನ್ನು ಪೋಲು ಮಾಡದೇ ಇಡೀ ಆಸ್ಪತ್ರೆಯ ಸಿಬ್ಬಂದಿಯೆಲ್ಲ ಒಟ್ಟಾಗಿ ಬೆಳಗಿನ ಜಾವ 4.45ರವರೆಗೆ ರೋಗಿಗಳಿಗೆ ಆ ಸಿಲಿಂಡರ್‌ಗಳ ಮೂಲಕ ಆಮ್ಲಜನಕ ಸಂಪರ್ಕ ಕಲ್ಪಿಸಿದ್ದಾರೆ.

ಇದಾದ ಸ್ವಲ್ಪ ಹೊತ್ತಿನಲ್ಲಿಯೇ ಲಿಕ್ವಿಡ್‌ ಆಕ್ಸಿಜನ್‌ ಇರುವ ಟ್ಯಾಂಕರ್‌ ಕೂಡ ಯುನಿವರ್ಸಲ್‌ ಕಂಪನಿಯಿಂದ ಕೆ.ಸಿ.ಜನರಲ್‌ ಆಸ್ಪತ್ರೆಗೆ ಬಂದಿತಲ್ಲದೆ, ಆಸ್ಪತ್ರೆಯ ಆಕ್ಸಿಜನ್‌ ಟ್ಯಾಂಕ್‌ಗೆ ಭರ್ತಿ ಮಾಡಲಾಯಿತು. ಅಲ್ಲಿಗೆ ಇಡೀ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಇಡೀ ಸಿಬ್ಬಂದಿ ಹೈ ಆಲರ್ಟ್‌

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಸಮಯ ಪ್ರಜ್ಞೆ, ಸಕಾಲಿಕ ಕ್ರಮಗಳಿಂದ ಸೋಂಕಿತರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಬುಧವಾರ ರಾತ್ರಿ 11.30ಯಿಂದ ಗುರುವಾರ ಬೆಳಗಿನ ಜಾವ 4.45ರ ವರೆಗೆಗೂ ಎಲ್ಲಾ 200 ಸೋಂಕಿತರ ಮೇಲೆ ತೀವ್ರ ನಿಗಾ ಇಟ್ಟ ಸಿಬ್ಬಂದಿ ಸಂಕಷ್ಟದ ಸಮಯದಲ್ಲಿ ಆಮ್ಲಜನಕದ ಉಳಿತಾಯಕ್ಕೂ ಶ್ರಮಿಸಿದರು.

ಪರಿಸ್ಥತಿಯ ತೀವ್ರತೆಯನ್ನು ಅರಿತ ಅವರೆಲ್ಲರೂ ಎಲ್ಲ ಸೋಂಕಿತರ ಪರಿಸ್ಥಿತಿಯನ್ನು, ಆಕ್ಸಿಜನ್‌ ಸ್ಯಾಚುರೇಷನ್‌ ಸ್ಥಿತಿಯನ್ನು ಕ್ಷಿಪ್ರಗತಿಯಲ್ಲಿ ಪರಿಶೀಲನೆ ಮಾಡಿದರು. ಯಾರಿಗೆ ಹೆಚ್ಚು, ಯಾರಿಗೆ ಕಡಿಮೆ ಆಮ್ಲಜನಕದ ಅಗತ್ಯ ಇದೆ ಎಂಬುದನ್ನು ನೋಡಿಕೊಂಡು ಗಂಭೀರ ಸ್ಥಿತಿಯಲ್ಲಿದ್ದ ಸೋಂಕಿತರಿಗೆ ಆಕ್ಸಿಜನ್‌ ಕಡಿಮೆಯಾಗದಂತೆ ನೋಡಿಕೊಂಡಿದ್ದಾರೆ. ಹೀಗಾಗಿ ಆಮ್ಲಜಕದ ಕೊರತೆ ಉಂಟಾಗಲಿಲ್ಲ.

ಇಡೀ ರಾತ್ರಿ ನಿದ್ದೆಗೆಟ್ಟ ಡಿಸಿಎಂ

ಮಧ್ಯರಾತ್ರಿ 12.45ರಿಂದ ಬೆಳಗಿನ ಜಾವ 4 ಗಂಟೆ ವರೆಗೂ ಆಕ್ಸಿಜನ್‌ ಕಾರ್ಯಾಚರಣೆಯಲ್ಲಿ ಭಾಗಿಯಾದ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಕೊನೆಗೂ ದೊಡ್ಡ ದುರಂತವನ್ನು ತಪ್ಪಿಸುಲ್ಲಿ ಯಶಸ್ವಿಯಾದರು. ಎಲ್ಲ ಸೋಂಕಿತರಿಗೂ ಆಕ್ಸಿಜನ್‌ ಪೂರೈಕೆಯಾಗಿ ಪರಿಸ್ಥಿತಿ ಸರಿಹೋದ ನಂತರ ವೈದ್ಯರ ಜತೆಗೆ ಮಾತನಾಡಿದ ಅವರು ಸಮಾಧಾನದ ನಿಟ್ಟುಸಿರು ಬಿಟ್ಟರು. ಈ ಸಂದರ್ಭದಲ್ಲಿ ವೈದ್ಯ ಸಿಬ್ಬಂದಿಯ ಸಮಯ ಪ್ರಜ್ಞೆಯನ್ನು ಡಿಸಿಎಂ ಮನಸಾರೆ ಶ್ಲಾಘಿಸಿದರು. ಸಂಕಷ್ಟದ ಸಮಯದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಸೋಂಕಿತರ ಜೀವ ಉಳಿಸಿದ್ದಾಗಿ ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ಪೊಲೀಸರಿಗೂ ಕೃತಜ್ಞತೆ ಸಲ್ಲಿಸಿದರು. ಬಳಿಕೆ ಬೆಳಗಿನ ಜಾವ 4.30 ಗಂಟೆಯ ಹೊತ್ತಿಗೆ ಇಡೀ ಆಸ್ಪತ್ರೆಯ ಪರಿಸ್ಥಿತಿಯನ್ನು ಮತ್ತೊಮ್ಮೆ ಅವಲೋಕನ ಮಾಡಿ  ನಿದ್ದೆಗೆ ಜಾರಿದರು ಡಿಸಿಎಂ.

ಡಿಸಿಎಂ ಏನೆಂದರು?

ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆ ಆಕ್ಸಿಜನ್‌ ವೈಫಲ್ಯದಿಂದ ಉಂಟಾಗಿದ್ದ ದುರಂತಗಳು ನಮ್ಮ ಕಣ್ಮುಂದೆ ಇವೆ. ಹೀಗಾಗಿ ವಿಷಯ ಗೊತ್ತಾದ ಕೂಡಲೇ ನಾನು ಕಾರ್ಯಪ್ರವೃತ್ತನಾದೆ. ಒಂದು ಆಕ್ಸಿಜನ್‌ ತರಿಸುವುದು, ಇನ್ನೊಂದೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಜೀವ ರಕ್ಷಣೆ ಮಾಡುವುದು.. ಈ ಎರಡೂ ಸವಾಲುಗಳನ್ನು ಏಕಕಾಲಕ್ಕೆ ಎದುರಿಸಬೇಕಾಯಿತು. ನಾನು ಆಕ್ಸಿಜನ್‌ ವ್ಯವಸ್ಥೆ ಮಾಡುವ ಕೆಲಸ ಮಾಡಿದೆ. ವೈದ್ಯರು & ಸಿಬ್ಬಂದಿ ಸೋಂಕಿತರನ್ನು ನೋಡಿಕೊಂಡರು. ಪೊಲೀಸರು ಸಕಾಲಕ್ಕೆ ನೆರವಾದರು. ಇಡೀ ರಾತ್ರಿ ನಡೆದ ಕಾರ್ಯಾಚರಣೆಯಿಂದ ಅಮೂಲ್ಯ ಜೀವಗಳು ಉಳಿದಿವೆ. ಎಲ್ಲ ಅಧಿಕಾರಿಗಳು ಇಡೀ ರಾತ್ರಿ ನಿದ್ದೆ ಮಾಡದೇ ಕೆಲಸ ಮಾಡಿದ್ದಾರೆ.

-ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

Tags: Bengalurudr cn ashwathnarayankarnatakakc general hospitalmedical oxygenoperation oxygen
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ  ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

ಪದ್ಮಭೂಷಣ ಎಚ್‌ಎನ್‌ ಸ್ಮಾರಕ ಉದ್ಯಾನವನವೂ ಸೇರಿ ಬಾಗೇಪಲ್ಲಿ ಪಟ್ಟಣದ ನಾಲ್ಕೂ ಪಾರ್ಕ್‌ಗಳಿಗೆ ಕಾಯಕಲ್ಪ; ವಿರೂಪವಾಗಿರುವ ಪುತ್ಥಳಿಯೂ ಬದಲು

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ