• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!

cknewsnow desk by cknewsnow desk
May 11, 2021
in CHIKKABALLAPUR, EDITORS'S PICKS
Reading Time: 1 min read
1
ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!
916
VIEWS
FacebookTwitterWhatsuplinkedinEmail

ಬಾಗೇಪಲ್ಲಿ: ಕೋವಿಡ್‌ ಲಾಕ್‌ಡೌನ್‌ ಕಾಲದಲ್ಲಿ ಜನರ ಮೇಲೆ ಲಾಠಿ ಬೀಸುತ್ತಿರುವ ಪೊಲೀಸರ ನಡುವೆ ಇಲ್ಲೊಬ್ಬ ʼಒಳ್ಳೆಯ ಪೊಲೀಸ್‌ʼ ಎಲ್ಲರ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.

ಕಠಿಣ ಲಾಕ್‌ಡೌನ್‌ ಜಾರಿಯಾದ ಸೋಮವಾರ ಬೆಳಗ್ಗೆ ಬಾಗೇಪಲ್ಲಿಗೆ ಬಿಳ್ಳೂರಿನಿಂದ ಬಂದ ಮಹಿಳೆಯೊಬ್ಬರು ತಲೆ ಸುತ್ತಿ ರಸ್ತೆಯಲ್ಲಿ ಬಿದ್ದಿದ್ದಾಗ ಅವರಿಗೆ ಆರೈಕೆ ಮಾಡಿದ ಬಾಗೇಪಲ್ಲಿ ಪೊಲೀಸ್‌ ಠಾಣೆಯ ಪೇದೆ ಧನುಂಜಯ, ಆ ಮಹಿಳೆಯನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿ ವೈದ್ಯರಿಂದ ಚಿಕಿತ್ಸೆ ಮಾಡಿಸಿದ್ದಾರೆ.

ಅಷ್ಟಕ್ಕೂ ನಡೆದಿದ್ದೇನು?

ಸೋಮವಾರ ಬೆಳಗ್ಗೆ ಆಟೋದಲ್ಲಿ ಬಂದ ಆ ಮಹಿಳೆ ಗೂಳೂರು ವೃತ್ತದಲ್ಲಿ ಇಳಿದುಕೊಂಡಿದ್ದಾರೆ. ಬೆಳಗಿನ ಉಪಾಹಾರ ಸೇವಿಸದೇ ಸುಸ್ತಾಗಿದ್ದ ಆಕೆ ಬಿಸಿಲಿನ ಝಳಕ್ಕೆ ತಾಳಲಾಗದೆ ರಸ್ತೆಯ ಕುಸಿದುಬಿದ್ದಿದ್ದಾರೆ.

ನೂರಾರು ಜನರು ಓಡಾಡುವ ಆ ರಸ್ತೆಯಲ್ಲಿ ಯಾರೊಬ್ಬರೂ ಆ ಮಹಿಳೆಯ ನೆರವಿಗೆ ಬರಲಿಲ್ಲ. ಹಾಗೆ ರಸ್ತೆಯಲ್ಲಿ ಹಾದುಹೋದವರೆಲ್ಲ ನೋಡಿಕೊಂಡು ಹೋದರೆ ಹೊರತು ಆಕೆಗೆ ಗುಟುಕು ನೀರು ಕೊಡಲೂ ಮುಂದೆ ಬರಲಿಲ್ಲ.

ಅಷ್ಟರಲ್ಲಿ ಅದೇ ಮಾರ್ಗದಲ್ಲಿ ಬಂದ ಧನಂಜಯ, ಕೂಡಲೇ ಆ ಮಹಿಳೆಯ ನೆರವಿಗೆ ಧಾವಿಸಿದರು. ಕುಡಿಯಲು ನೀರು ಕೊಟ್ಟು, ಆಕೆ ತುಸು ಸುಧಾರಿಸಿಕೊಂಡ ಮೇಲೆ ತಮ್ಮ ಬೈಕ್‌ ಮೇಲೆ ಡಾ.ರವೀಂದ್ರ ರೆಡ್ಡಿ ಅವರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

ವೈದ್ಯರ ಚಿಕಿತ್ಸೆ ನಂತರ ಚೇತರಿಸಿಕೊಂಡ ಮಹಿಳೆ ಪೇದೆ ಧನಂಜಯ ಅವರಿಗೆ ಕೃತಜ್ಞತೆ ಸಲ್ಲಿದ್ದಾರೆ. ಅಲ್ಲಿಗೆ ಒಳ್ಳೆಯ ಕೆಲಸದ ಸಾರ್ಥಕ ಭಾವದೊಂದಿಗೆ ಧನಂಜಯ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪಟ್ಟಣ ಅನೇಕರು ಅವರ ಸೇವಾ ಮನೋಭಾವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: bagepaallichikkaballapuracovid19helping
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌, ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

Comments 1

  1. Srinivas says:
    4 years ago

    Good job

    Reply

Leave a Reply Cancel reply

Your email address will not be published. Required fields are marked *

Recommended

ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನ ವಿಷಯಗಳ ಬಗ್ಗೆ ಬರೆದ ಸುಧೀಂದ್ರ ಹಾಲ್ದೊಡ್ಡೇರಿ

ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನ ವಿಷಯಗಳ ಬಗ್ಗೆ ಬರೆದ ಸುಧೀಂದ್ರ ಹಾಲ್ದೊಡ್ಡೇರಿ

5 years ago
ತಲೆಗೂದಲು ತೆರೆದಿಟ್ಟ ಸತ್ಯ

ತಲೆಗೂದಲು ತೆರೆದಿಟ್ಟ ಸತ್ಯ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ