• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
May 12, 2021
in CHIKKABALLAPUR, COVID-19, STATE
Reading Time: 1 min read
0
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಸಚಿವ ಡಾ.ಕೆ.ಸುಧಾಕರ್
918
VIEWS
FacebookTwitterWhatsuplinkedinEmail

ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ. ಸಿಎಸ್ ಆರ್ ಅನುದಾನದಡಿ, ಜಿಲ್ಲಾ ಕೇಂದ್ರಕ್ಕೆ ಒಂದು ಆಕ್ಸಿಜನ್ ಜನರೇಟರ್ ಬರಲಿದೆ. ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ತಲಾ ಒಂದು ಘಟಕ ಬರಲಿದೆ.

ಚಿಂತಾಮಣಿಯ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಲಾಯಿತು. ಆಂಬ್ಯುಲೆನ್ಸ್ ನಿಯೋಜನೆ, ಹಾಸಿಗೆಗಳ ವ್ಯವಸ್ಥೆ, ಆಕ್ಸಿಜನ್ ಹಾಗೂ ಔಷಧದ ಪೂರೈಕೆ, ಪಾಸಿಟಿವಿಟಿ ದರ ಹಾಗೂ ಮರಣ ಪ್ರಮಾಣ ತಗ್ಗಿಸುವ ಕುರಿತಂತೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. pic.twitter.com/mgbwbr7N7y

— Dr Sudhakar K (Modi ka Parivar) (@DrSudhakar_) May 12, 2021

ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿದರು. ಆದರೆ, ಅವರು ಪೂರ್ವ ನಿಗಧಿಯಂತೆ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಗೌರಿಬಿದನೂರು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡದೇ ಮುಖ್ಯಮಂತ್ರಿ ಜತೆ ಮೀಟಿಂಗ್ ಎಂದು ಹೇಳಿಕೊಂಡು ವಾಪಸ್ ಬೆಂಗಳೂರಿಗೆ ಮರಳಿದರು.

ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ. ಕೆಲವೆಡೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಅದಕ್ಕಾಗಿ ಸೂಚನೆ ನೀಡಲಾಗಿದೆ. ಅರವಳಿಕೆ ತಜ್ಞರು, ಫಿಸಿಶಿಯನ್ ಇಲ್ಲದ ಕಡೆ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 720 ತಜ್ಞರನ್ನು ನೇರ ನೇಮಕ ಸೇರಿ ಒಟ್ಟು 2,480 ವೈದ್ಯರನ್ನು ನೇರ ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎಂದರು ಸಚಿವರು.

ಬೆಂಗಳೂರು ನಗರದಲ್ಲಿ ಕೋವಿಡ್ ಹತೋಟಿಗೆ ಬರಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಏರಿಕೆ ಹಾಗೂ ನಿಯಂತ್ರಣ ಕುರಿತು ಚರ್ಚಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಲಭ್ಯವಿರುವ ಮೂಲಸೌಕರ್ಯ ಬಳಸಿಕೊಂಡು ಸೇವೆ ನೀಡಬೇಕಿದ್ದು, ಈಗಿನಿಂದಲೇ ಸಿದ್ಧತೆಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ 10 ವೆಂಟಿಲೇಟರ್ ನೀಡಲಾಗಿದೆ. ಇನ್ನೂ 10 ವೆಂಟಿಲೇಟರ್ ಕೇಳಿದ್ದು, ಅದನ್ನೂ ಕಳುಹಿಸಿಕೊಡಲಾಗುವುದು. ಹೊಸದಾಗಿ 115 ಹಾಸಿಗೆಯ ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಿಸಿ ಕೋವಿಡ್ ರೋಗಿಗಳಿಗೆ ಆರೈಕೆ ನೀಡಲು ನಿರ್ಧರಿಸಲಾಗಿದೆ. ರೋಗಿಗಳು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗಿದೆ. ವರದಿ ಬಂದ ಕೂಡಲೇ ತಕ್ಷಣ ಚಿಕಿತ್ಸೆ ನೀಡಬೇಕು. ಟಾಸ್ಕ್ ಫೋರ್ಸ್ ಪ್ರತಿ ದಿನ ಮನೆಗೆ ಭೇಟಿ ನೀಡಿ ರೋಗಿಗಳ ಪರಿಸ್ಥಿತಿ ಪರೀಕ್ಷಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು ಸಚಿವರು.

ಹೊಸಕೋಟೆಯ ತಾಲೂಕು ಆಸ್ಪತ್ರೆಯಲ್ಲಿ 60 ಹಾಸಿಗೆ ಇದ್ದು, 40 ಅನ್ನು ಆಕ್ಸಿಜನ್ ಹಾಸಿಗೆ ಮಾಡಲಾಗಿದೆ. ಔಷಧಿ ಕೊರತೆ ಕಂಡುಬಂದರೆ, ಸ್ಥಳೀಯವಾಗಿಯೇ ಖರೀದಿಸಿ ತಕ್ಷಣ ಪೂರೈಸಲಾಗುತ್ತದೆ. ಚಿಕ್ಕಬಳ್ಳಾಪುರದಲ್ಲಿ 16 ಆಂಬ್ಯುಲೆನ್ಸ್ ಇದ್ದು, ಇನ್ನೂ 15 ಪಡೆಯಲು ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 5-6 ಆಂಬ್ಯುಲೆನ್ಸ್ ಇರಬೇಕು. ಖಾಸಗಿ ಆಸ್ಪತ್ರೆಯ 112 ಆಕ್ಸಿಜನ್ ಹಾಸಿಗೆಗಳನ್ನು ಜಿಲ್ಲೆಯ ಜನರಿಗೆ ಮೀಸಲಿಡಲಾಗುತ್ತಿದೆ. ಚಿಂತಾಮಣಿಯಲ್ಲಿ 25% ಪಾಸಿಟಿವಿಟಿ ದರ ಇದೆ. ಇಲ್ಲಿ ಸಾವಿನ ಪ್ರಮಾಣ ಇಳಿಸುವುದು ಮುಖ್ಯ. ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಮನೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಸ್ಥಿತಿ ಪರೀಕ್ಷಿಸುತ್ತಿದ್ದಾರೆ ಎಂದರು ಅವರು.

ಚಿಕ್ಕಬಳ್ಳಾಪುರದಲ್ಲಿ 10 ಸಾವಿರ ಜನರಿಗೆ ಆಗುವಷ್ಟು ಕೋವಿಡ್ ಕೇರ್ ಸೆಂಟರ್ ಗುರುತಿಸಿದ್ದರೂ ರೋಗಿಗಳು ಹೆಚ್ಚು ಬರುತ್ತಿಲ್ಲ. ಮನೆಯಲ್ಲೇ ಆರೈಕೆ ಮಾಡಿಕೊಳ್ಳುತ್ತಿದ್ದಾರೆ. ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ. ಸಿಎಸ್ ಆರ್ ಅನುದಾನದಡಿ, ಜಿಲ್ಲಾ ಕೇಂದ್ರಕ್ಕೆ ಒಂದು ಆಕ್ಸಿಜನ್ ಜನರೇಟರ್ ಬರಲಿದೆ. ಗೌರಿಬಿದನೂರಿನಲ್ಲಿ ಒಂದು ಘಟಕ, ಬಾಗೇಪಲ್ಲಿಯಲ್ಲಿ ಒಂದು ಘಟಕ ಬರಲಿದೆ ಎಂದು ಅವರು ಮಾಹಿತಿ ನೀಡಿದರು.

ಕೆ.ಆರ್.ಪುರ ಆಸ್ಪತ್ರೆಯಲ್ಲಿ 10 ವೆಂಟಿಲೇಟರ್ ಗೆ ಬೇಡಿಕೆ ಇಟ್ಟಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುವುದು. ಕೆಲ ತಾಂತ್ರಿಕ ಸಮಸ್ಯೆ ಸರಿಪಡಿಸಲು ಸೂಚಿಸಲಾಗಿದೆ. ಕೋವಿಡ್ ಲಸಿಕೆಯ ಕೊರತೆ ಇಲ್ಲ. ಲಸಿಕೆ ಪೂರೈಕೆಯಾದ ಕೂಡಲೇ ಎಲ್ಲರಿಗೂ ಲಸಿಕೆ ನೀಡಲಾಗುವುದು. ಎಲ್ಲರೂ ಆನ್ ಲೈನ್ ನಲ್ಲಿ ನೋಂದಣಿ ಮಾಡುವಾಗ ತಮ್ಮ ಜಿಲ್ಲೆಯಲ್ಲೇ ನಿಗದಿ ಮಾಡಿ ಅಲ್ಲೇ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ವೈದ್ಯರಂತೆ ದಾದಿಯರು ಕೂಡ ಮುಖ್ಯ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಅವರಿಗೆ ರಿಸ್ಕ್ ಭತ್ಯೆ ನೀಡಲಾಗುವುದು ಎಂದು ಅವರು ತಿಳಿಸಿದರು.ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Tags: chikkaballapuraChintamanicovid19health minister dr k sudhakarvacination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

Leave a Reply Cancel reply

Your email address will not be published. Required fields are marked *

Recommended

ಯಡಿಯೂರಪ್ಪ ಬದಲಾಗಲೇಬೇಕು ಅನ್ನುತ್ತಿದ್ದ ಬಿಜೆಪಿ ಹೈಕಮಾಂಡ್‌ ಯು ಟರ್ನ್‌ ಹೊಡೆದಿದ್ದೇಕೆ?

ಮುಖ್ಯಮಂತ್ರಿ ಬದಲಾವಣೆ ಖಚಿತ; ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಅವರಿಗೂ ಕೊಕ್

5 years ago
ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ; ಬಿಜೆಪಿ ನಾಯಕಿ ಬಂಧನ, ಬಿಡುಗಡೆ

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ; ಬಿಜೆಪಿ ನಾಯಕಿ ಬಂಧನ, ಬಿಡುಗಡೆ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ