• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಲಾಕ್‌ಡೌನ್‌ ಮುಗಿದ ಮೇಲೆ ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ: ಸಚಿವ ಸುರೇಶ್ ಕುಮಾರ್

cknewsnow desk by cknewsnow desk
May 12, 2021
in COVID-19, NEWS IN USE, STATE
Reading Time: 1 min read
0
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ
923
VIEWS
FacebookTwitterWhatsuplinkedinEmail

ಲಾಕ್‌ಡೌನ್ ಘೋಷಣೆ‌ಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‌ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು ಸರಕಾರ ಸೂಚನೆ ನೀಡಿದೆ.

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಹಾರದ ಬದಲಿಗೆ ನೀಡಲಾಗುತ್ತಿದ್ದ ಬಾಕಿ ಉಳಿದಿರುವ ಅಡುಗೆ ಎಣ್ಣೆ ಸೇರಿ ಆಹಾರ ಧಾನ್ಯಗಳನ್ನು ಲಾಕ್ಡೌನ್ ಅವಧಿ ಮುಗಿದ ತಕ್ಷಣವೇ ವಿತರಿಸಬೇಕೆಂದು ನಿರ್ದೇಶನ ನೀಡಲಾಗಿದೆ” ಎಂದು ತಿಳಿಸಿದರು.

ಈ ಆಹಾರ ಧಾನ್ಯಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಪೂರ್ಣ ದಿನಗಳಿಗೆ ವಿತರಣೆ ಮಾಡಲು ಅಗತ್ಯವಿರುವ ಆಹಾರ ಧಾನ್ಯ ಕೆಎಸ್ಎಫ್ʼಸಿ ಗೋದಾಮುಗಳಲ್ಲಿ ಏಕಕಾಲದಲ್ಲಿ ಸಂಗ್ರಹಣೆ ಮಾಡಿ ಎತ್ತುವಳಿ ಮಾಡಲು ಕಷ್ಟಸಾಧ್ಯ ಆಗಿರುವುದರಿಂದ ಎರಡು ಹಂತಗಳಲ್ಲಿ ವಿತರಿಸಲು ತೀರ್ಮಾನಿಸಿ ಈಗಾಗಲೇ ಒಂದು ಹಂತದ ವಿತರಣೆ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಮೊದಲ ಹಂತದ 108 ದಿನಗಳ ಆಹಾರ ಧಾನ್ಯಗಳನ್ನು ಎಲ್ಲ ಶಾಲೆಗಳಿಗೆ ವಿತರಿಸಲಾಗಿದೆ. ಉಳಿದ ಅವಧಿಯಾದ 2021ರ ನವೆಂಬರ್ ನಿಂದ 2021ಮಾರ್ಚ್ ವರೆಗಿನ 132 ದಿನಗಳಿಗೆ ಸಂಬಂಧಿಸಿದ ಆಹಾರ ಧಾನ್ಯಗಳನ್ನು ಕೆಲ ಶಾಲೆಗಳಿಗೆ ವಿತರಿಸಲಾಗಿದೆ. ಲಾಕ್ಡೌನ್ ಘೋಷಣೆಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ತೊಗರಿ ಬೇಳೆ ಸರಬರಾಜುದಾರರಿಗೆ ಏ. 27ರಂದು ಮತ್ತು ಅಡುಗೆ ಎಣ್ಣೆ ಸರಬರಾಜುದಾರರಿಗೆ ಮೇ 7ರಂದು ಸರಬರಾಜು ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದ ಸಚಿವರು, ದಾಸ್ತಾನಿನಲ್ಲಿರುವ ಆಹಾರ ಧಾನ್ಯಗಳನ್ನು ಡಿಡಿಪಿಐ ಮತ್ತು ಜಿಪಂ ಸಿಇಒಗಳೊಂದಿಗೆ ಚರ್ಚಿಸಿ ತಕ್ಷಣವೇ ಕೂಡಲೇ ವಿತರಿಸಲು ಸೂಚನೆ ನೀಡಲಾಗಿದೆ. ಎಲ್ಲ ಶಾಲೆಗಳ ಮುಖ್ಯಸ್ಥರು ಶಾಲೆಗಳಲ್ಲಿ ಹಾಜರಿರುವಂತೆ ಸೂಚಿಸಿ ಸೂಚಿತ ಅವಧಿಗೆ ಆಹಾರ ಧಾನ್ಯಗಳ ವಿತರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಅವರು ಹೇಳಿದರು.

ಶಾಲೆಗಳು ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಪ್ರಸ್ತುತ ಆರು ತಿಂಗಳ ಅವಧಿಗೆ ಒಂದು ಬಾರಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಇದನ್ನು ಸರಿಪಡಿಸಲಾಗುತ್ತದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳು ವಿದ್ಯಾರ್ಥಿಗಳ ಮನೆಗೆ ಆಹಾರ ಧಾನ್ಯ ವಿತರಣೆಗೆ ನೀಲನಕ್ಷೆ ತಯಾರಿಸಲು ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.

ಆರ್‌ಟಿಇ ಹಣ ಮರುಪಾವತಿಗೆ ಸೂಚನೆ

ಈಗಾಗಲೇ ಬಹುತೇಕ ಶಾಲೆಗಳಿಗೆ  ಆರ್‌ಟಿಇ ಅನುದಾನ ಮರು ಪಾವತಿಸಲಾಗಿದೆ. ಉಳಿದ ಶಾಲೆಗಳಿಗೆ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಗಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.

ಕೋವಿಡ್ ಸಂಕಷ್ಟದ ಸಮಯದಲ್ಲೂ ಮಕ್ಕಳಿಗೆ ಶಿಕ್ಷಣ ನೀಡಲು ಶಾಲೆಗಳು ಕ್ರಮ ವಹಿಸಿದ್ದು, ಬಾಕಿ ಆರ್‌ಟಿಇ ಹಣವನ್ನು ಮೇ ಅಂತ್ಯದೊಳಗೆ ಬಿಡುಗಡೆ ಮಾಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಬಾಕಿ ಹಣ ನೀಡದೇ ಬಾಕಿ ಉಳಿಸಿಕೊಂಡಿರುವ ಬಿಇಒ ಮತ್ತು ಡಿಡಿಪಿಐಗಳಿಗೆ ಎಚ್ಚರಿಕೆ ನೀಡಿ ತಕ್ಷಣವೇ ಹಣ ಬಿಡುಗಡೆಗೆ ಕ್ರಮ ವಹಿಸಬೇಕೇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದರು.

ಶಿಸ್ತು ಕ್ರಮ

ಅನಗತ್ಯವಾಗಿ ಶಾಲೆಗಳಿಗೆ ನೀಡಬೇಕಾದ ಹಣವನ್ನು ತಮ್ಮ ಖಾತೆಯಲ್ಲೇ ಉಳಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕೆ ಕೂಡಲೇ ಪ್ರಸ್ತಾವನೆ ಮಂಡಿಸಲೂ ಸಹ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಮಧ್ಯಾಹ್ನ ಉಪಹಾರ ಯೋಜನೆ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಖಾಸಗಿ ಪಿಯು ಆಡಳಿತ ಮಂಡಳಿಗಳ ಜತೆ ಚರ್ಚೆ

ಇದೇ ಸಂದರ್ಭದಲ್ಲಿ ಬೆಂಗಳೂರು ವಿಭಾಗದ ದಾವಣಗೆರೆ, ಶಿವಮೊಗ್ಗ ಮತು ಚಿತ್ರದುರ್ಗ ಜಿಲ್ಲೆಗಳಿಗೆ ಸೇರಿದ ಖಾಸಗಿ ಅನುದಾನರಹಿತ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಕೋವಿಡ್ ಸಂಕಷ್ಟದ ಸಮಯದಲ್ಲಿ ಎದುರಿಸುತ್ತಿರುವ ಸವಾಲುಗಳು, ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಅನುಸರಿಸಬೇಕಾದ ಕ್ರಮಗಳು, ಪರೀಕ್ಷಾ ಪ್ರಕ್ರಿಯೆ ಕುರಿತಂತೆ ಸಚಿವರ ಗಮನ ಸೆಳೆದರು.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ ಸೇರಿ ಆ ಭಾಗದ 45ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್‌ ಹಾಜರಿದ್ದರು.

Tags: Bengalurucovid19karnatakaprimary educations suresh kumar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಸಚಿವ ಡಾ.ಕೆ.ಸುಧಾಕರ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ; ಶೀಘ್ರದಲ್ಲೇ 2,480 ವೈದ್ಯರ ನೇಮಕ ಎಂದ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

ಅಳಿದುಳಿದ ಚಿನ್ನಕ್ಕಾಗಿ ಡ್ರಿಲ್ಲಿಂಗ್; ಕೆಜಿಎಫ್ ನಿರೀಕ್ಷೆಗೆ ಮತ್ತೆ ನೀರು, ಮಾಜಿ ಮಿನಿ ಇಂಗ್ಲೆಂಡ್‌ ಮುಖದಲ್ಲಿ ಮಂದಹಾಸ

6 years ago
ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್

ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ