• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಹೊಸ ಆರ್ಥಿಕ ಪ್ಯಾಕೇಜ್‌ ಇಲ್ಲI ಆಕ್ಸಿಜನ್‌ ನಿರ್ವಹಣೆಗೆ 3 ಸೂತ್ರ I ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ I ವ್ಯಾಕ್ಸಿನ್ ಕಾರ್ಯತಂತ್ರಕ್ಕೆ ಪ್ರೊ.ಗಗನ್‍ದೀಪ್ ಕಾಂಗ್ ಸಲಹೆ

cknewsnow desk by cknewsnow desk
May 13, 2021
in COVID-19, NATION, STATE
Reading Time: 3 mins read
0
ಹೊಸ ಆರ್ಥಿಕ ಪ್ಯಾಕೇಜ್‌ ಇಲ್ಲI  ಆಕ್ಸಿಜನ್‌ ನಿರ್ವಹಣೆಗೆ 3 ಸೂತ್ರ I ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ I ವ್ಯಾಕ್ಸಿನ್ ಕಾರ್ಯತಂತ್ರಕ್ಕೆ  ಪ್ರೊ.ಗಗನ್‍ದೀಪ್ ಕಾಂಗ್ ಸಲಹೆ
918
VIEWS
FacebookTwitterWhatsuplinkedinEmail

ಎರಡನೇ ಅಲೆಯಲ್ಲಿ ತೇಲುತ್ತಿರುವ ರಾಜ್ಯದ ಜನರಿಗೆ ಯಾವುದೇ ಹೊಸ ಆರ್ಥಿಕ ಪ್ಯಾಕೇಜ್‌ನ್ನು ಸರಕಾರ ಘೋಷಣೆ ಮಾಡಿಲ್ಲ. ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೊಸ ಕಾರ್ಯಪಡೆ ರಚನೆಯ ಜತೆಗೆ, ಖ್ಯಾತ ವೈದ್ಯತಜ್ಞ ಪ್ರೊ. ಗಗನ್ ದೀಪ್ ಅವರನ್ನು ವ್ಯಾಕ್ಸಿನ್ ಕಾರ್ಯತಂತ್ರ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇವು ಸಿಎಂ ಪತ್ರಿಕಾಗೋಷ್ಠಿಯ ಮಹತ್ತ್ವದ ಅಂಶಗಳು.

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ತಡೆಯಲು ರಾಜ್ಯ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಸಚಿವರಾದ ಆರ್.‌ಅಶೋಕ್‌, ಅರವಿಂದ ಲಿಂಬಾವಳಿ ಹಾಗೂ ಡಾ.ಕೆ.ಸುಧಾಕರ್‌ ಅವರು ಈ ಸಂದರ್ಭದಲ್ಲಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪ್ರಕಟಿಸಿದ ಮುಖ್ಯ ಅಂಶಗಳು ಹೀಗಿವೆ;

  • 1.ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 24ರಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿತ್ತು. ಅಲ್ಲದೆ, ಮೇ 10ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಯಿತು.
  • 2.ರಾಜ್ಯದಲ್ಲಿ ಮೇ 5ರಂದು ಗರಿಷ್ಠ 50,112 ಪ್ರಕರಣಗಳು ವರದಿಯಾಗಿದ್ದು, ಈ ಕಠಿಣ ಕ್ರಮಗಳಿಂದಾಗಿ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ನಿನ್ನೆ 39,900ಕ್ಕೆ ಇಳಿದಿದೆ. ಇದು ನಿರ್ಬಂಧಗಳ ಜಾರಿ ನಂತರ ಪರಿಸ್ಥಿತಿ ಸುಧಾರಿಸುತ್ತಿರುವುದಕ್ಕೆ ನಿದರ್ಶನ.
  • 3.ಬೆಂಗಳೂರಿನಲ್ಲಿ ಮೇ 5ರಂದು 23,106 ಪ್ರಕರಣಗಳಿದ್ದಿದ್ದು, ನಿನ್ನೆಗೆ 16,286 ಸಂಖ್ಯೆಗೆ ಇಳಿಕೆಯಾಗಿದೆ.
  • 4.ಪ್ರಾರಂಭದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಏರುಗತಿಯಲ್ಲಿದ್ದ ಬೆಂಗಳೂರು, ಬೀದರ್ ಮತ್ತು ಕಲಬುರಗಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ.

ಆಕ್ಸಿಜನ್‌ ಹಾಸಿಗೆಗಳ ಹೆಚ್ಚಳ

  • 5.ಕಳೆದ ವರ್ಷ ಮಾರ್ಚ್‍ನಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 1,970 ಆಕ್ಸಿಜನೇಟೆಡ್ ಬೆಡ್‍ಗಳು, 444 ಐಸಿಯುಗಳು ಹಾಗೂ 610 ವೆಂಟಿಲೇಟರ್ ಸಹಿತ ಐಸಿಯುಗಳ ಸೌಲಭ್ಯವಿತ್ತು. ಈ ಎಲ್ಲ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್ ಬೆಡ್‍ಗಳು, 1,145 ಐಸಿಯು ಬೆಡ್‍ಗಳು, 2,059 ವೆಂಟಿಲೇಟರ್ ಬೆಡ್‍ಗಳು ಹಾಗೂ 1,248 ಹೆಚ್‍ಎಫ್‍ಎನ್‍ಸಿ ಸೌಲಭ್ಯಗಳು ಲಭ್ಯವಿದೆ.
  • 6.ಅಂತೆಯೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್ ಬೆಡ್‍ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4,700 ರಿಂದ 9,405ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್ ಬೆಡ್‍ಗಳ ಸಂಖ್ಯೆಯನ್ನು 341ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‍ಎಫ್‍ಎನ್‍ಸಿಗಳ ಸಂಖ್ಯೆಯನ್ನು 15 ರಿಂದ 570ಕ್ಕೆ ಹೆಚ್ಚಿಸಲಾಗಿದೆ.
  • 7.ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರಿದಿದೆ. ಹೆಚ್ಚುವರಿ ವೆಂಟೆಲೇಟರುಗಳು ಮತ್ತಿತರೆ ಸೌಲಭ್ಯಗಳು ನಿರಂತರವಾಗಿ ಸೇರ್ಪಡೆಯಾಗುತ್ತಿವೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರುಗಳನ್ನು ನೀಡಿದ್ದೇವೆ.
  • 8.ಖಾಸಗಿ ವೈದ್ಯಕೀಯ ಕಾಲೇಜುಗಳು ಆಕ್ಸಿಜನ್ ಬೆಡ್‍ಗಳನ್ನು ಹೆಚ್ಚಿಸಲು ಹಾಗೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡುತ್ತಿದ್ದೇವೆ. ಇಂತಹ ಆಸ್ಪತ್ರೆಗಳಿಗೆ ಸರಕಾರ ಶೇ.70ರಷ್ಟು ಸಹಾಯ ಧನ ನೀಡಲಿದ್ದು, ಉಳಿದ ಶೇ.30ರಷ್ಟು ಮೊತ್ತವನ್ನು ಆಯಾ ಆಸ್ಪತ್ರೆಗಳು ಭರಿಸಬೇಕು.

ಮುಖ್ಯಮಂತ್ರಿ @BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಉಪಮುಖ್ಯಮಂತ್ರಿ @drashwathcn, ಸಚಿವರುಗಳಾದ @RAshokaBJP, @mla_sudhakar, @ArvindLBJP ಉಪಸ್ಥಿತರಿದ್ದರು. pic.twitter.com/4UBUvxy16w

— CM of Karnataka (@CMofKarnataka) May 13, 2021

ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ

  • 9.ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರವನ್ನು ರೂಪಿಸಿದೆ. ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರುಗಳು ಹಾಗೂ ಸಿಲಿಂಡರುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ.
  • 10.ಕೇಂದ್ರ ಸರಕಾರವು ರಾಜ್ಯಕ್ಕೆ ಆಮ್ಲಜನಕ ಹಂಚಿಕೆಯನ್ನು 965 ಮೆಟ್ರಿಕ್ ಟನ್ʼನಿಂದ 1,015 ಮೆಟ್ರಿಕ್ ಟನ್ʼಗೆ ಹೆಚ್ಚಿಸಿದೆ. ಇದರಲ್ಲಿ 765 ಮೆಟ್ರಿಕ್ ಟನ್ ಆಮ್ಲಜನಕವು ರಾಜ್ಯದಲ್ಲಿಯೇ ದೊರೆಯುತ್ತಿದೆ. 60 ಟನ್ ಪಿಎಸ್‍ಎ ಪ್ಲಾಂಟ್‍ಗಳಿಂದ ಹಾಗೂ 160 ಟನ್ ಒಡಿಶಾ ಹಾಗೂ 30 ಟನ್ ವಿಶಾಖಪಟ್ಟಣದಿಂದ ದೊರೆಯುತ್ತಿದೆ.
  • 11.ರಾಜ್ಯಕ್ಕೆ ಹಂಚಿಕೆ ಆಗಿರುವ, ರಾಜ್ಯದೊಳಗೇ ಲಭ್ಯವಿರುವ ಆಮ್ಲಜನಕವನ್ನು ಸಂಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜತೆಗೆ ಇತರೆ ರಾಜ್ಯಗಳಿಂದ ಆಮ್ಲಜನಕ ಪಡೆಯಲು ಸಹ ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.
  • 12.ಮೇ 11ರಂದು ನಾವು 1,050 ಮೆಟ್ರಿಕ್ ಟನ್ ಹಾಗೂ ಮೇ 12ರಂದು 800 ಮೆಟ್ರಿಕ್ ಟನ್ ಆಮ್ಲಜನಕ ಪಡೆದಿದ್ದೇವೆ.
  • 13.ಬಹರೇನ್ʼನಿಂದ 40 ಟನ್ ಹಾಗೂ ಕುವೈಟ್ʼನಿಂದ 100 ಟನ್ ಆಮ್ಲಜನಕ ಪಡೆಯಲಾಗಿದೆ. ಜಮ್‍ಷೆಡ್‍ಪುರದಿಂದ ರೈಲಿನ ಮೂಲಕ ಮೂಲಕ 120 ಟನ್ ಆಮ್ಲಜನಕ ತರಲಾಗಿದೆ.
  • 14.ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 127 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.
  • ಅದರಲ್ಲಿ 62 ಆಮ್ಲಜನಕ ಉತ್ಪಾದನಾ ಘಟಕಗಳನ್ನು ರಾಜ್ಯ ಸರಕಾರದ ಅನುದಾನದಲ್ಲಿ ಸ್ಥಾಪಿಸಲಾಗುತ್ತಿದೆ. ಈವರೆಗೆ ಕೇಂದ್ರದಿಂದ ರಾಜ್ಯಕ್ಕೆ 28 ಘಟಕಗಳು ಹಂಚಿಕೆಯಾಗಿವೆ. 24 ಘಟಕಗಳನ್ನು ಎನ್‍ಎಚ್‍ಎಐ ಸ್ಥಾಪಿಸುತ್ತಿದೆ. 11 ಘಟಕಗಳನ್ನು ವಿವಿಧ ಕಂಪನಿಗಳ ಸಿಎಸ್‍ಆರ್ ನೆರವಿನಡಿ ಸ್ಥಾಪಿಸಲಾಗುತ್ತಿದೆ. 2 ಘಟಕಗಳನ್ನು ವಿದೇಶಗಳ ನೆರವಿನಿಂದ ಸ್ಥಾಪನೆ ಮಾಡಲಾಗುತ್ತಿದೆ.
  • 15.ಹೋಂ ಐಸೋಲೇಷನ್ʼನಲ್ಲಿರುವ ಸೋಂಕಿತರ ಅನುಕೂಲಕ್ಕಾಗಿ ಓಲಾ ಮತ್ತು ಗಿವ್‍ಇಂಡಿಯಾ ಸಂಸ್ಥೆಯವರು ಒಂದು ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರು (ಆಮ್ಲಜನಕ ಸಾಂದ್ರಕ) ಗಳನ್ನು ಉಚಿತವಾಗಿ ಎರವಲು ನೀಡಲು ಮುಂದಾಗಿವೆ. ಇದೇ ರೀತಿ ಸಂಚಾರಿ ಆಕ್ಸಿಜನ್ ಸೇವೆ ಒದಗಿಸುವ ಆಕ್ಸಿ ಬಸ್‍ಗಳಿಗೆ ಚಾಲನೆ ನೀಡಲಾಗಿದ್ದು, ಸರಕಾರಿ ಆಸ್ಪತ್ರೆಗಳು ಮತ್ತು ಟ್ರಯಾಜ್ ಸೆಂಟರುಗಳ ಬಳಿ ತುರ್ತು ಅಗತ್ಯವಿರುವವರಿಗೆ ನೆರವಾಗುತ್ತಿವೆ.
  • 16.ಜಿಲ್ಲೆಗಳಲ್ಲಿರುವ ಆಮ್ಲಜನಕ ಬೇಡಿಕೆಯ ಒತ್ತಡವನ್ನು ನಿವಾರಿಸಲು 10 ಸಾವಿರದವರೆಗೆ ಆಕ್ಸಿಜನ್ ಸಿಲಿಂಡರುಗಳನ್ನು ಪಡೆಯಲು ನಿರ್ಧರಿಸಲಾಗಿದೆ. ಕಳೆದ 15-20 ದಿನಗಳಲ್ಲಿ 730 ಆಮ್ಲಜನಕ ಸಿಲಿಂಡರುಗಳನ್ನು ತರಿಸಿದ್ದೇವೆ. 380 ಸಿಲಿಂಡರುಗಳನ್ನು ಕೇಂದ್ರ ಸರಕಾರ ಒದಗಿಸಿದ್ದು, 350 ಸಿಲಿಂಡರುಗಳನ್ನು ವಿದೇಶಗಳಿಂದ ಪಡೆಯಲಾಗಿದೆ. ಈ ಸಿಲಿಂಡರುಗಳನ್ನು ಅಗತ್ಯವಿರುವ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ.
  • 17.ಮೂರು ಸಾವಿರ ಆಕ್ಸಿಜನ್ ಕಾನ್ಸಂಟ್ರೇಟರ್ʼಗಳನ್ನು ಈಗಾಗಲೇ ರಾಜ್ಯದೆಲ್ಲೆಡೆ ಹಂಚಿಕೆ ಮಾಡಲಾಗಿದೆ. ಸರಕಾರ ಹಾಗೂ ವಿವಿಧ ಕಂಪನಿಗಳ ಸಿಎಸ್‍ಆರ್ ನೆರವಿನೊಂದಿಗೆ ಇನ್ನೂ ಏಳು ಸಾವಿರ ಕಾನ್ಸಂಟ್ರೇಟರ್‌ಗಳನ್ನು ಹಂಚಿಕೆ ಮಾಡಲಾಗುವುದು.

ಲಸಿಕೆ ಅಭಿಯಾನ

  • 18.ಕೇಂದ್ರ ಸರಕಾರವು 45 ವರ್ಷ ಮೇಲ್ಪಟ್ಟ ನಾಗರಿಕರಿಗೆ, ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಲಸಿಕೆ ಪೂರೈಕೆ ಮಾಡುತ್ತಿದೆ. ಈವರೆಗೆ 1.10 ಕೋಟಿ ಡೋಸ್‍ಗಳನ್ನು ಕೇಂದ್ರ ಒದಗಿಸಿದ್ದು, ಅದರಲ್ಲಿ 99.5 ಲಕ್ಷ ಕೋವಿಶೀಲ್ಡ್ ಹಾಗೂ 10.9 ಲಕ್ಷ ಕೋವ್ಯಾಕ್ಸಿನ್ ಡೋಸ್‌ಗಳು ಸಿಕ್ಕಿವೆ.
  • 19.ರಾಜ್ಯ ಸರಕಾರವು 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡಲು 3 ಕೋಟಿ ಡೋಸ್ ಲಸಿಕೆಗಳ ಖರೀದಿಗೆ ಆದೇಶ ನೀಡಿದೆ. ಅದರಲ್ಲಿ 2 ಕೋಟಿ ಡೋಸ್ ಕೋವಿಶೀಲ್ಡ್ ಹಾಗೂ 1 ಕೋಟಿ ಡೋಸ್ ಕೊವ್ಯಾಕ್ಸಿನ್ ಸೇರಿದೆ. ಅಲ್ಲದೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಇಂಜೆಕ್ಷನ್ ಸರಬರಾಜು ಮಾಡಲು ಜಾಗತಿಕ ಟೆಂಡರ್‌ ಕರೆಯಲಾಗಿದೆ.
  • 20.ಈವರೆಗೆ 7.5 ಲಕ್ಷ ಕೋವಿಶೀಲ್ಡ್ ಹಾಗೂ 1.44 ಲಕ್ಷ ಕೊವ್ಯಾಕ್ಸಿನ್ ಸೇರಿದಂತೆ 8.94 ಲಕ್ಷ ಡೋಸ್‍ಗಳು ಲಭ್ಯವಾಗಿದೆ.
  • 21.ಕೋವಿಶೀಲ್ಡ್ ಲಸಿಕೆ ಪಡೆದ 14.87 ಲಕ್ಷ ಫಲಾನುಭವಿಗಳು ಆರು ವಾರ ಪೂರೈಸಿದ್ದು, ಎರಡನೇ ಡೋಸ್‍ಗೆ ಅರ್ಹತೆ ಹೊಂದಿದ್ದಾರೆ. ಕೊವ್ಯಾಕ್ಸಿನ್ ಮೊದಲ ಡೋಸ್ ಪಡೆದ 5.10 ಲಕ್ಷ ಫಲಾನುಭವಿಗಳು 4 ವಾರ ಪೂರೈಸಿದ್ದು, ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿದ್ದಾರೆ. ಅಂದರೆ ಇಂದಿನ ಅಂಕಿ-ಅಂಶ ಪ್ರಕಾರ 19.97 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ.
  • 22.ಮೊದಲ ಡೋಸ್ ಪಡೆದವರು ಸಂಪೂರ್ಣ ಸುರಕ್ಷತೆ ಹೊಂದಲು ಎರಡನೇ ಡೋಸ್ ಲಸಿಕೆ ನೀಡುವುದು ಅತಿ ಅಗತ್ಯ. ಆದ್ದರಿಂದ ಲಭ್ಯವಿರುವ ಲಸಿಕೆಯ ದಾಸ್ತಾನನ್ನು ಎರಡನೇ ಡೋಸ್ ಪಡೆಯಲು ಅರ್ಹತೆ ಹೊಂದಿರುವವರಿಗೆ ನೀಡಲು ನಿರ್ಧರಿಸಿದ್ದೇವೆ. ಈ ಕಾರಣಕ್ಕಾಗಿ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ನಾವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ.
  • 23.ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಮೈಕ್ರೋ ಬಯಾಲಜಿ ಪ್ರಾಧ್ಯಾಪಕರಾಗಿರುವ ಪ್ರೊ.ಗಗನ್‍ದೀಪ್ ಕಾಂಗ್ ಅವರನ್ನು ರಾಜ್ಯದ ವ್ಯಾಕ್ಸಿನೇಷನ್ ಕಾರ್ಯತಂತ್ರದ ಸಲಹೆಗಾರರಾಗಿ ರಾಜ್ಯ ಸರಕಾರವು ನೇಮಕ ಮಾಡುತ್ತಿದೆ. ಇವರು ವ್ಯಾಕ್ಸಿನ್‍ಗಳ ಸಂಶೋಧನೆ ಮತ್ತು ಅವುಗಳ ಬಳಕೆ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯು ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿರುತ್ತಾರೆ.

ರೆಮಿಡಿಸಿವಿರ್ ಇಂಜೆಕ್ಷನ್

  • 24.ಕೇಂದ್ರ ಸರಕಾರವು ರಾಜ್ಯಕ್ಕೆ ಏಪ್ರಿಲ್ 21ರಿಂದ ಮೇ 9 ರ ಅವಧಿಗೆ 3.01 ಲಕ್ಷ ರೆಮಿಡಿಸಿವಿರ್ ಹಂಚಿಕೆ ಮಾಡಿದ್ದು, ಈ ಅವಧಿಯಲ್ಲಿ 2.72 ಲಕ್ಷ ಡೋಸ್ ರೆಮಿಡಿಸಿವಿರ್ ಪೂರೈಕೆಯಾಗಿದೆ. ಇಂಜೆಕ್ಷನ್ ಪೂರೈಕೆಯಲ್ಲಿ ವಿಳಂಬ ಮಾಡಿದ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೇ 10ರಿಂದ 16ರ ಅವಧಿಗೆ 2.74 ಲಕ್ಷ ಇಂಜೆಕ್ಷನ್‍ಗಳು ಹಂಚಿಕೆಯಾಗಿವೆ. ಇವು ಸಕಾಲದಲ್ಲಿ ಪೂರೈಕೆಯಾಗುವ ಕುರಿತು ನಿರಂತರ ಪರಿಶೀಲನೆ ಹಾಗೂ ಸಮನ್ವಯ ನಡೆಸಲಾಗುತ್ತಿದೆ.
  • 25.ರಾಜ್ಯದಲ್ಲಿ ರೆಮಿಡಿಸಿವಿರ್ʼಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳ ಕೋಟಾದಲ್ಲಿ ಬಳಕೆಯಾಗದೆ ಉಳಿದ ಇಂಜೆಕ್ಷನ್‍ಗಳನ್ನು ಪೂರೈಸುವಂತೆಯೂ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ.
  • 26.ಖಾಸಗಿ ಆಸ್ಪತ್ರೆಗಳ ಬೇಡಿಕೆ ಪರಿಶೀಲಿಸಿ, ಸಮಾನವಾಗಿ ಹಂಚಿಕೆ ಮಾಡಲು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಲಾಗಿದೆ.
  • 27.ರಾಜ್ಯದಲ್ಲಿ ಕೋವಿಡ್ 19ರ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಾಗಿ ನಾರಾಯಣ ಹೆಲ್ತ್‌ಕೇರ್‌ನ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೊಸ ಕಾರ್ಯಪಡೆ ರಚಿಸಲಾಗುವುದು.
  • 28.ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದ ನಂತರ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ. ಯಾರೂ ಆತಂಕಪಡಬೇಕಾದ ಅಗತ್ಯವಿಲ್ಲ.
  • 29.ಜನತೆ ಎಲ್ಲ ನಿರ್ಬಂಧಗಳನ್ನೂ ಮುಕ್ತವಾಗಿ ಸ್ವೀಕರಿಸಿ ಅನುಸರಿಸಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯ. ಆದ್ದರಿಂದ ರಾಜ್ಯದ ಜನತೆ ಸಹಕರಿಸಲು ಕೋರಿದೆ.

Tags: chief minister bs yediyurappacouncil of ministerscovid19dr deviprasd shettykarnataka fights coronapress conferencepro gagandeep Kangvidhana soudha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

Leave a Reply Cancel reply

Your email address will not be published. Required fields are marked *

Recommended

ಇರಾನಿನ ನರ್ಗೆಸ್ ಮೊಹಮ್ಮದಿ ಅವರಿಗೆ ಶಾಂತಿ ನೊಬೆಲ್

ಇರಾನಿನ ನರ್ಗೆಸ್ ಮೊಹಮ್ಮದಿ ಅವರಿಗೆ ಶಾಂತಿ ನೊಬೆಲ್

2 years ago
ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ