• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಬಿಜೆಪಿ ಸರಕಾರದ ಡಬಲ್ ಎಂಜಿನ್ ನಿಂತುಹೋಗಿದೆ: ಡಿ.ಕೆ.ಶಿವಕುಮಾರ್

cknewsnow desk by cknewsnow desk
May 13, 2021
in NEWS & VIEWS, POLITICS
Reading Time: 1 min read
0
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ
912
VIEWS
FacebookTwitterWhatsuplinkedinEmail

“ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ?


ಬೆಂಗಳೂರು: ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳು ಡಬಲ್ ಎಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಎಂಜಿನ್ʼಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:

“ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ ವರದಿ ಕೊಟ್ಟಿದೆ. ಇದಕ್ಕೆ ಸರಕಾರದ ಯಾರು ಹೊಣೆಗಾರರು ಎಂದು ನೀವೇ ನಿರ್ಧರಿಸಿ. ಈ ಸಾವುಗಳಿಗೆ ಸರಕಾರ ನೈತಿಕ ಹೊಣೆ ಹೊರಬೇಕು.”

“ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ? ಲಸಿಕೆ ವಿತರಣೆ ಜವಾಬ್ದಾರಿಯನ್ನು ಕೇಂದ್ರ ಸರಕಾರ ಹೊತ್ತುಕೊಳ್ಳಬೇಕು. ರಾಜ್ಯ ಸರಕಾರ ಯಾಕೆ ಸುಮ್ಮನಿದೆಯೋ ಗೊತ್ತಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರನ್ನು ದೇವರೇ ಕಾಪಾಡಬೇಕು. ಇವರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? ಜನರಿಗೆ ನೆರವಾಗಿದ್ದಾರಾ?”

“ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು. 18-44ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಅಂತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರ್ಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಎಂಜಿನ್ʼಗಳು ನಿಂತು ಹೋಗಿವೆ.”

“ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು.”

“45 ವರ್ಷ ಮೇಲ್ಪಟ್ಟವರಲ್ಲಿ ಅನೇಕರಿಗೆ ಇನ್ನು ಮೊದಲ ಲಸಿಕೆ ಕೊಟ್ಟಿಲ್ಲ. ಎರಡನೇ ಡೋಸ್ ಕೂಡ ಕೊಡಬೇಕು. ಈ ವಿಚಾರದಲ್ಲಿ ಸರಕಾರದ ಬಳಿ ಪರಿಣಾಮಕಾರಿ ಯೋಜನೆ, ಸಿದ್ಧತೆ ಇಲ್ಲ. ಇದನ್ನು ನಿಭಾಯಿಸಲು ಇವರಿಗೆ ಆಗುತ್ತಿಲ್ಲ. ಇನ್ನು ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ.”

“ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ.”

“ಸರಕಾರ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಬಡ್ಡಿ ಮನ್ನಾ ಮಾಡಬೇಕು, ಸಾಲದ ಕಂತು ಕಟ್ಟಲು ಕಾಲಾವಕಾಶ ನೀಡಬೇಕು. ಕೇಂದ್ರ ಸರಕಾರವೇ ಲಸಿಕೆ ನೀಡಬೇಕು ಎಂದು ಕೇಳಬೇಕು. ರಾಜ್ಯದ ಹಣವನ್ನೇಕೆ ಇದಕ್ಕೆ ಬಳಸಬೇಕು? ಕೇಂದ್ರ ಸರಕಾರವೇ ಜವಾಬ್ದಾರಿ ಹೊರುವುದು ಜಗತ್ತಿನಾದ್ಯಂತ ಇರುವ ನೀತಿ. ಆದರೆ ಇಲ್ಲಿ ಅದು ಉಲ್ಟಾ ಆಗಿದೆ. ಸೋಂಕು ಹೆಚ್ಚಲು ಕೇಂದ್ರ ಹಾಗೂ ರಾಜ್ಯ ಸರಕಾರಗಳೇ ಕಾರಣ.”

Tags: covid19DK Shivakumarkarnatakakarnataka fights corona
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

Leave a Reply Cancel reply

Your email address will not be published. Required fields are marked *

Recommended

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಎರಡು ದಿನಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಕೋವಿಡ್ ಲಸಿಕೆ ರವಾನೆ; ಪ್ರಥಮ ಹಂತದಲ್ಲಿ 6.30 ಲಕ್ಷ ವೈದ್ಯ ಸಿಬ್ಬಂದಿಗೆ ಲಸಿಕೆ: ಡಾ.ಕೆ.ಸುಧಾಕರ್‌

6 years ago
ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ; ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ; ಸಾಯಿಬಾಬಾ ದೇಗುಲದಲ್ಲಿ ವಿಶೇಷ ಪೂಜೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ