• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಹಳ್ಳಿ ಜನರಿಗೆ ಒಳ್ಳೆಯ ಸುದ್ದಿ; ನಗರ & ಪಟ್ಟಣ ಕೊಳೆಗೇರಿಗಳಲ್ಲಿನ ಸೋಂಕಿತರಿಗೆ ಇನ್ಮೇಲೆ ಹೋಮ್‌ ಐಸೋಲೇಷನ್‌ ಇರಲ್ಲ; ಎಲ್ಲರಿಗೂ ಕೋವಿಡ್‌ ಕೇರ್‌ನಲ್ಲೇ ಟ್ರೀಟ್‌ಮೆಂಟ್

cknewsnow desk by cknewsnow desk
May 15, 2021
in COVID-19, STATE
Reading Time: 2 mins read
0
ಹಳ್ಳಿ ಜನರಿಗೆ ಒಳ್ಳೆಯ ಸುದ್ದಿ; ನಗರ & ಪಟ್ಟಣ ಕೊಳೆಗೇರಿಗಳಲ್ಲಿನ ಸೋಂಕಿತರಿಗೆ ಇನ್ಮೇಲೆ  ಹೋಮ್‌ ಐಸೋಲೇಷನ್‌ ಇರಲ್ಲ; ಎಲ್ಲರಿಗೂ ಕೋವಿಡ್‌ ಕೇರ್‌ನಲ್ಲೇ ಟ್ರೀಟ್‌ಮೆಂಟ್
920
VIEWS
FacebookTwitterWhatsuplinkedinEmail

ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವದ ಕಾರ್ಯಪಡೆ ಸಭೆಯಲ್ಲಿ ಮಹತ್ವದ ನಿರ್ಧಾರ I 3 ದಿನಗಳಲ್ಲಿ ನೂತನ ಆಮ್ಲಜನಕ ನೀತಿ I ಲಸಿಕೆಯ ಅಂತರ ನಿಗಧಿ, 30 ಲಕ್ಷ ಸೋಂಕಿತರಿಗೆ ಮೆಡಿಕಲ್‌ ಕಿಟ್‌ I ಲಸಿಕೆ ಖರೀದಿಗೆ ‌₹843 ಕೋಟಿ ರೂ. ಅನುದಾನ I ರೆಮಿಡಿಸಿವಿರ್‌ ಖರೀದಿಗೆ ₹75 ಕೋಟಿ I ಜಾಗತಿಕ ಟೆಂಡರ್‌ ಅಂತಿಮ

ರಾಜ್ಯ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಸಚಿವರು,ಅಧಿಕಾರಿಗಳೊಂದಿಗೆ #COVID19 ನಿರ್ವಹಣೆ ಬಗ್ಗೆ ಚರ್ಚಿಸಲಾಯಿತು.

ಸಭೆಯ ಪ್ರಮುಖ ನಿರ್ಣಯಗಳು ಹಾಗೂ ಚರ್ಚಿತ ಅಂಶಗಳು-

*️⃣ತಾಲೂಕು ಆಸ್ಪತ್ರೆಗಳನ್ನು ಶೇ.100ರಷ್ಟು Oxygenated Beds ಆಸ್ಪತ್ರೆಗಳಾಗಿ ಪರಿವರ್ತನೆ.

*️⃣ ಜಿಲ್ಲಾಕೇಂದ್ರ ಆಸ್ಪತ್ರೆಗಳಲ್ಲಿ ಕನಿಷ್ಟ 100 ICU Beds ಅಳವಡಿಕೆ.

1/10 pic.twitter.com/3FqWUm6vB9

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 15, 2021

ಬೆಂಗಳೂರು: ರಾಜ್ಯದ ಗ್ರಾಮೀಣ ಹಾಗೂ ನಗರ & ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್‌ ಸೋಂಕಿತರನ್ನು ಹೋಮ್ ಐಸೋಲೇಷನ್‌ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್‌ ಕೇರ್‌ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ 4 ಗಂಟೆ ಕಾಲ ನಡೆದ ಕಾರ್ಯಪಡೆಯ ಸುದೀರ್ಘ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಅವರು ಈ ಕುರಿತು ಮಾಹಿತಿ ನೀಡಿದರು. ಹಳ್ಳಿಗಳಲ್ಲಿ ವಾಸ ಮಾಡುವ ಸೋಂಕಿರನ್ನು ಯಾವುದೇ ಕಾರಣಕ್ಕೂ ಅವರ ಮನೆಗಳಲ್ಲೇ ಕ್ವಾರಂಟೈನ್‌ ಮಾಡುವುದಿಲ್ಲ. ಪಾಸಿಟೀವ್‌ ಆಗಿದೆ ಎಂದು ವರದಿ ಬಂದ ತಕ್ಷಣವೇ ಹತ್ತಿರದ ಕೋವಿಡ್ ಕೇರ್ ‌ಕೇಂದ್ರಕ್ಕೆ ಶಿಫ್ಟ್‌ ಮಾಡಿ ಚಿಕಿತ್ಸೆ ಕೊಡಲಾಗುವುದು. ಅದೇ ರೀತಿ ನಗರ- ಪಟ್ಟಣ ಪ್ರದೇಶಗಳ ಕೊಳೆಗೇರಿಗಳಲ್ಲಿ ವಾಸ ಮಾಡುವ ಸೋಂಕಿತರಿಗೂ ಇದೇ ರೀತಿಯಲ್ಲಿ ಸ್ಥಳಾಂತರ ಮಾಡಿ ಉಚಿತ ಚಿಕಿತ್ಸೆ ಕೊಡಲಾಗುವುದು. ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಅವರಿಗೆ ಗುಣಮಟ್ಟದ ಚಿಕಿತ್ಸೆ, ಆಹಾರ, ಔಷಧಿ ನೀಡಲು ಸುಲಭವಾಗುತ್ತದೆ ಎಂದರು.

ಜಿಲ್ಲಾಧಿಕಾರಿಗಳಿಗೆ ಹೊಣೆ

ಗ್ರಾಮೀಣ ಭಾಗ ಹಾಗೂ ನಗರದ ಕೊಳೆಗೇರಿಗಳಿಗೆ ಆರೋಗ್ಯ ಸಿಬ್ಬಂದಿ ತೆರಳಿ ಮನೆ ಮನೆಯಲ್ಲೂ ರಾಟ್ ಟೆಸ್ಟ್ ಮಾಡಬೇಕು. ಪಾಸಿಟಿವ್ ಆದವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ʼನಲ್ಲಿಯೇ ಇರಬೇಕು. ಪ್ರತಿ ಪಿಎಚ್‌ಸಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿನ ಹಾಸ್ಟೆಲ್ ಇತ್ಯಾದಿ ಕಟ್ಟಡಗಳನ್ನು ಬಳಸಿಕೊಂಡು ಕೋವಿಡ್‌ ಕೇರ್‌ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಎಲ್ಲ ಜವಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲು ಕಾರ್ಯಪಡೆ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಲಸಿಕೆ ಅಂತರ ನಿರ್ಧಾರ

ವ್ಯಾಕ್ಸಿನ್‌ ಬಗ್ಗೆ ಉಂಟಾಗಿರುವ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕಾರ್ಯಪಡೆ ಕೆಲ ಪರಿಹಾರಗಳನ್ನು ಕಂಡುಕೊಂಡಿದೆ. ಕೋವ್ಯಾಕ್ಸಿನ್ ಮಟ್ಟಿಗೆ ಹೇಳುವುದಾದರೆ ಇನ್ನು 2ನೇ ಡೊಸ್ ಅನ್ನು ಮಾತ್ರ ನೀಡಲಾಗುವುದು. ಮೊದಲ ಡೋಸ್ ಪಡೆದು 6 ವಾರ ಆಗಿರುವವರಷ್ಟೇ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರು.

ಇನ್ನು ಕೋವಿಶೀಲ್ಡ್ ವಿಚಾರಕ್ಕೆ ಬಂದರೆ, 45+ ವಯೋಮಿತಿಯವರಿಗೆ ಮೊದಲನೇ ಡೋಸ್‌ ನೀಡಲು ಆದ್ಯತೆ ಕೊಡಲಾಗುತ್ತದೆ. ಮೊದಲ ಡೋಸ್ ಪಡೆದು 12 ವಾರ ಆದವರಿಗೆ ಮಾತ್ರ 2ನೇ ಡೋಸ್ ಪಡೆಯಲು ಅವಕಾಶ ಇರುತ್ತದೆ. ಅದಕ್ಕೂ ಮೊದಲು ಯಾರಿಗೂ ಎರಡನೇ ಡೋಸ್ ಕೊಡುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ ಡಿಸಿಎಂ ತಿಳಿಸಿದರು.

ಯಾರಿಗೆ ಆದ್ಯತೆ ಮೇಲೆ ಲಸಿಕೆ ಕೊಡಬೇಕು ಎಂಬುದನ್ನು ನಿರ್ಧರಿಸಲು ಮೊದಲು ಪಟ್ಟಿ ಸಿದ್ಧ ಮಾಡಲಾಗುವುದು. ಅಂಚೆ ಇಲಾಖೆ, ಕೃಷಿ ಇಲಾಖೆ, ಡೆಲಿವರಿ ಬಾಯ್ಸ್, ಬ್ಯಾಂಕ್ ಸಿಬ್ಬಂದಿ, ಇಂಟರ್ʼನೆಟ್ ಪ್ರೊವೈಡರ್ಸ್ ಸೇರಿ ಅತ್ಯಗತ್ಯ ವಲಯಗಳಲ್ಲಿ ಕೆಲಸ ಮಾಡುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಲಸಿಕೆಯ ದಾಸ್ತಾನು ನೋಡಿಕೊಂಡು 18-44 ವಯೋಮಿತಿಯವರಿಗೆ ಯಾವ ದಿನಾಂಕದಿಂದ ಲಸಿಕೆ ಕೊಡಬೇಕು ಎಂಬುದನ್ನು ಕಾರ್ಯಪಡೆ ನಿರ್ಧರಿಸುತ್ತದೆ.‌ ಇದಕ್ಕಾಗಿ ಪ್ರತ್ಯೇಕ ಆಪ್‌ ಅಭಿವೃದ್ಧಿಪಡಿಸಲಾಗುತ್ತಿದ್ದು, ಆ ಆಪ್‌ಅನ್ನು ಕೋವಿನ್‌ ಪೋರ್ಟಲ್‌ಗೆ ಅನುಸಂಧಾನವಾದ ಮೇಲೆ ಈ ವಯೋಮಿತಿಯವರಿಗೆ ಲಸಿಕೆ ಕೊಡುವುದನ್ನು ಆರಂಭಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇನ್ನು ಲಸಿಕೆ ಕೊಡುವುದನ್ನು ಆಸ್ಪತ್ರೆಯ ಬದಲಾಗಿ ಆಸ್ಪತ್ರೆಗಳಿಂದ ಹೊರಗೆ ನೀಡಲು ನಿರ್ಧರಿಸಲಾಗಿದೆ. ವಿಶಾಲವಾದ ಶಾಲಾ ಕಟ್ಟಡ, ಶಾಲಾ ಮೈದಾನ, ಕ್ರೀಡಾಂಗಣ ಇತ್ಯಾದಿ ಕಡೆಗಳಲ್ಲಿ ಲಸಿಕೆ ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಲಸಿಕೆ: ಜಾಗತಿಕ ಟೆಂಡರ್‌ ಅಂತಿಮ

2 ಕೋಟಿ ಡೋಸ್‌ ಲಸಿಕೆ ಖರೀದಿ ಮಾಡುವ ಜಾಗತಿಕ ಟೆಂಡರ್‌ ಅನ್ನು ಇವತ್ತೇ ಫೈನಲ್‌ ಮಾಡಲಾಗಿದೆ. ತಲಾ 50 ಲಕ್ಷ ಡೋಸ್‌ನಂತೆ ನಾಲ್ಕು ಕಂಪನಿಗಳಿಂದ ಖರೀದಿ ಮಾಡಲಾಗುವುದು. ಒಂದೇ ಕಂಪನಿಗೆ 2 ಕೋಟಿ ಡೋಸ್‌ ಪೂರೈಕೆ ಮಾಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ‌₹843 ಕೋಟಿ ರೂ. ಅನುದಾನದ ಅವಶ್ಯಕತೆ ಇದ್ದು, ಇದಕ್ಕೆ ಕಾರ್ಯಪಡೆ ಒಪ್ಪಿಗೆ ನೀಡಿದೆ ಎಂದರು ಡಿಸಿಎಂ.

ಮುಖ್ಯವಾಗಿ ರೆಮಿಡಿಸ್ವೀರ್ʼನ 5 ಲಕ್ಷ ಡೋಸ್‌ ಇಂಜೆಕ್ಷನ್ ಖರೀದಿಗೂ‌ ಜಾಗತಿಕ ಟೆಂಡರ್ ಕರೆಯಲು ಪ್ರಕ್ರಿಯೆಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಇದಕ್ಕೆ ₹75 ಕೋಟಿ ರೂ. ಮೀಸಲು ಇಡಲು ಕಾರ್ಯಪಡೆ ಒಪ್ಪಿಗೆ ನೀಡಿದೆ.

ಇದಲ್ಲದೆ, ಮುಂದಿನ ಮೂರು ತಿಂಗಳಿಗೆ ಅಗತ್ಯವಾದ ಎಲ್ಲ ಔಷಧಿ, 30 ಲಕ್ಷ ಸೋಂಕಿತರಿಗೆ  ಮೆಡಿಕಲ್‌ ಕಿಟ್‌ ಒದಗಿಸುವುದು, ಮುಂದಿನ 90 ದಿನಗಳಿಗೆ ಬೇಕಾಗಿರುವ 1 ಕೋಟಿ rtpcr ಕಿಟ್‌ಗಳ ಖರೀದಿ, ಹಾಗೆಯೇ 1 ಕೋಟಿ rat ಟೆಸ್ಟ್‌ ಕಿಟ್‌ ಹಾಗೂ 1 ಲಕ್ಷ ಪಲ್ಸ್‌ ಆಕ್ಸಿ ಮೀಟರ್‌ ಖರೀದಿಗೂ ಕಾರ್ಯಪಡೆ ಒಪ್ಪಿಗೆ ಕೊಟ್ಟಿದೆ ಎಂದರು ಡಿಸಿಎಂ.

ಹೊಸ ಆಮ್ಲಜನಕ ನೀತಿ

ರಾಜ್ಯದಲ್ಲಿ ಆಮ್ಲಜನಕ ಬಳಕೆ, ತಯಾರಿಕೆ, ಘಟಕಗಳ ಸ್ಥಾಪನೆ, ಮೂಲಸೌಕರ್ಯ ಸ್ಥಾಪನೆ, ನಿರ್ವಹಣೆ ಇತ್ಯಾದಿ ಅಂಶಗಳ ಬಗ್ಗೆ ಇನ್ನು 3-4 ದಿನಗಳಲ್ಲಿ ʼನೂತನ ಆಮ್ಲಜನಕ ನೀತಿʼಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದ ಡಿಸಿಎಂ ಅವರು, ರಾಜ್ಯದಲ್ಲಿ ಈಗಾಗಲೇ ಆಮ್ಲಜನಕ ಕೊರತೆ ಬಹುತೇಕ ನೀಗುತ್ತಿದೆ ಎಂದರು.

ಆಮ್ಲಜನಕ ಬಳಕೆಯನ್ನು ನಿಯಂತ್ರಣ ಮಾಡುವ ಉದ್ದೇಶದಿಂದ DRDO ಅಭಿವೃದ್ಧಿಪಡಿಸಿರುವ 1,000 ಯಂತ್ರಗಳನ್ನು ಪ್ರಾಯೋಗಿಕವಾಗಿ ಬಳಸಲು ಕಾರ್ಯಪಡೆ ತೀರ್ಮಾನಿಸಿದೆ. ಪ್ರತಿ ಒಂದು ಯಂತ್ರಕ್ಕೆ 6ರಿಂದ 10 ಸಾವಿರ ರೂ. ಆಗುತ್ತದೆ ಎಂದ ಅವರು, 6 ಜಿಲ್ಲೆಗಳಲ್ಲಿ ಆಮ್ಲಜನಕ ಬಾಟ್ಲಿಂಗ್ ಯೂನಿಟ್ ಸ್ಥಾಪಿಸಲಾಗುವುದು ಎಂದು  ಡಾ.ಅಶ್ವತ್ಥನಾರಾಯಣ ಹೇಳಿದರು.

ಬ್ಲ್ಯಾಕ್‌ ಫಂಗಸ್‌ ಔಷಧಿಗೆ ಬೇಡಿಕೆ

ಕೋವಿಡ್‌ನಿಂದ ಗುಣಮುಖರಾದವರಲ್ಲಿ ಅದರಲ್ಲೂ ಮುಖ್ಯವಾಗಿ ಮಧುಮೇಹಿಗಳಲ್ಲಿ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಳ್ಳುತ್ತಿದೆ. ಇದನ್ನು ನಿಯಂತ್ರಿಸಲು ಕ್ರಮ ವಹಿಸಲಾಗಿದೆ. ಪ್ರತಿ ವಾರ 400 ರೋಗಿಗಳಿಗೆ ಈ ರೀತಿ ಬ್ಲಾಕ್ ಫಂಗಸ್ ಬರುವ ನಿರೀಕ್ಷೆ ಇದೆ ಎಂದು ತಾಂತ್ರಿಕ ಸಮಿತಿ ಅಂದಾಜು ಮಾಡಿದೆ. ಹೀಗಾಗಿ ವಾರಕ್ಕೆ ʼಆಂಪ್ಕೋಟೆರಿಸಿನ್‌ʼ ಔಷಧಿಯ 20,000 ವೈಲ್ಸ್‌ ಪೂರೈಕೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಬೇಡಿಕೆ ಹೆಚ್ಚಾದ ಕಾರಣಕ್ಕೆ ಈ ಔಷಧಿಯ ಕೊರತೆ ಉಂಟಾಗಿದೆ ಎನ್ನುವ ಮಾಹಿತಿಯನ್ನೂ ಡಿಸಿಎಂ ಹಂಚಿಕೊಂಡರು.

ರಾಜ್ಯದ 207 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 30 ಬೆಡ್ʼಗಳಿವೆ. ಇದರಲ್ಲಿ 10 ಬೆಡ್ʼಗಳನ್ನು ಐಸಿಯು ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಇನ್ನು, ತಾಲೂಕು ಆಸ್ಪತ್ರೆಗಳಲ್ಲಿ 50 ಬೆಡ್ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಅದರಲ್ಲಿ 15 ಬೆಡ್‌ಗಳಿಗೆ ವಂಟಿಲೇಟರ್‌ ಸೌಲಭ್ಯ ಇರುತ್ತದೆ. ಇನ್ನು 6 ಬೆಡ್‌ಗಳನ್ನು ತಾಯಿ-ಮಕ್ಕಳಿಗೆ ಮೀಸಲಿಡಲಾಗುವುದು. ಮೆಡಿಕಲ್ ಕಾಲೇಜು‌ ಇಲ್ಲದ ಜಿಲ್ಲಾ ಕೇಂದ್ರಗಳಲ್ಲಿ ತಲಾ 100 ಬೆಡ್ ‌ಐಸಿಯು‌ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಡಿಸಿಎಂ ತಿಳಿಸಿದರು.

ಕೊವಿಡ್ ಮೆಡಿಕಲ್ ತ್ಯಾಜ್ಯ ವಿಲೇವಾರಿ- ಪ್ರತಿ ಬೆಡ್ ಗೆ ಗರಿಷ್ಠ ₹10 ನೀಡಲು ತೀರ್ಮಾನ ಮಾಡಲಾಗಿದೆ. ಸರಕಾರಿ  ಆಸ್ಪತ್ರೆ ಗಳಲ್ಲಿನ ತ್ಯಾಜ್ಯ ವಿಲೇವಾರಿಗೆ ಈ ಕ್ರಮ ಕೈಗೊಳ್ಳಲಾಗಿದೆ. ಇಷ್ಟು ದಿನ ಇದಕ್ಕೆ ದರ ನಿಗದಿ ಮಾಡಿರಲಿಲ್ಲ ಎಂದು ಡಿಸಿಎಂ ಹೇಳಿದರು. 

ವೈದ್ಯಕೀಯ ಬಳಕೆ ಸಾಮಗ್ರಿ ಕೊರತೆ ಆಗದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಮುಂದಿನ 90 ದಿನಗಳಿಗೆ ಅಗತ್ಯ ಇರುವ ಔಷಧ ಮತ್ತು ಪರಿಕರಗಳನ್ನು ಹಂತ ಹಂತವಾಗಿ ₹260 ಕೋಟಿ ವೆಚ್ಚದಲ್ಲಿ ಖರೀದಿಸಲು ಕಾರ್ಯಪಡೆ ಸಭೆ ಒಪ್ಪಿಗೆ ನೀಡಿದೆ. ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಟೆಂಡರ್ ಮೂಲಕ ಇವುಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಖಾಸಗಿ ವೈದ್ಯರು ಸಲಹೆ‌ ನೀಡಿದ ಸೋಂಕಿತರಿಗೂ ಸರ್ಕಾರಿ ಮೆಡಿಕಲ್ ಕಿಟ್ ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ವೈರಸ್ʼನ ಜೆನೆಟಿಕ್ಸ್ ಬದಲಾವಣೆ ಬಗ್ಗೆ ಅಧ್ಯಯನ ನಡೆಸುವ Genome Lab ಗಳನ್ನು ರಾಜ್ಯದ ಆರು ಕಡೆ ಸ್ಥಾಪಿಸಲು ತೀರ್ಮಾನ‌ ಕೈಗೊಳ್ಳಲಾಗಿದೆ. ನಾಲ್ಕು ಮೆಡಿಕಲ್ ಕಾಲೇಜುಗಳಲ್ಲಿ ಹಾಗೂ ಎರಡು, ಆರೋಗ್ಯ ಇಲಾಖೆ ವತಿಯಿಂದ ಈ ಲ್ಯಾಬ್‌ಗಳನ್ನು ತೆರೆಯಲಾಗುವುದು ಎಂದ ಅವರು, ವೈರಸ್‌ ವರ್ತನೆಯ ಮೇಲೆ ನಿರಂತರ ನಿಗಾ ಇಡಲಾಗಿದೆ ಎಂದರು.

ಕೋವಿಡ್‌ ಕಾರ್ಯಪಡೆ ಸದಸ್ಯರೂ ಆದ ಸಚಿವರಾದ ಡಾ.ಕೆ.ಸುಧಾಕರ್‌, ಎಸ್.ಸುರೇಶ್‌ ಕುಮಾರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Bengalurucovaxincovishielddr cn ashwath narayandr k sudhakarkarnatakakarnataka covid19 task force meetingno home isolation for rural peopleremidisivirS Sureshkumarslum residents
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಗಳೂರು ಆರೋಗ್ಯಕ್ಕೆ ಟ್ರೀಟ್‌ಮೆಂಟ್:‌  ಎಲ್ಲ ಆಸ್ಪತ್ರೆಗಳು ಬಿಬಿಎಂಪಿ ಕೈತಪ್ಪಿ ಆರೋಗ್ಯ ಇಲಾಖೆ ವ್ಯಾಪ್ತಿಗೆ; ತಜ್ಞರ ವರದಿ ಪಡೆದ ನಂತರ ಕ್ರಮಕ್ಕೆ ಸರಕಾರ ನಿರ್ಧಾರ

ಬೆಂಗಳೂರು ಆರೋಗ್ಯಕ್ಕೆ ಟ್ರೀಟ್‌ಮೆಂಟ್:‌ ಎಲ್ಲ ಆಸ್ಪತ್ರೆಗಳು ಬಿಬಿಎಂಪಿ ಕೈತಪ್ಪಿ ಆರೋಗ್ಯ ಇಲಾಖೆ ವ್ಯಾಪ್ತಿಗೆ; ತಜ್ಞರ ವರದಿ ಪಡೆದ ನಂತರ ಕ್ರಮಕ್ಕೆ ಸರಕಾರ ನಿರ್ಧಾರ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ