• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಹೆಚ್ಚುತ್ತಿದೆ ಬ್ಲ್ಯಾಕ್ ಫಂಗಸ್ ಆತಂಕ:‌ 7 ವಾರಗಳ ಚಿಕಿತ್ಸೆಗೆ 2-3 ಲಕ್ಷ ಖರ್ಚು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ: ಡಾ.ಕೆ.ಸುಧಾಕರ್‌

cknewsnow desk by cknewsnow desk
May 17, 2021
in COVID-19, NEWS IN USE, STATE
Reading Time: 1 min read
0
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ
914
VIEWS
FacebookTwitterWhatsuplinkedinEmail

ಯಾರೂ ವೈದ್ಯರ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು.

ಬೆಂಗಳೂರು: ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ. ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು. ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ಇಲ್ಲಿನ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿದೆ. ನಾಳೆಯಿಂದಲೇ ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದರು.

ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಯಾರಿಗೇ ಈ ಸಮಸ್ಯೆ ಇದ್ದರೂ ತಕ್ಷಣ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಬೇಕು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್ ಗೆ ಮನವಿ ಮಾಡಲಾಗಿದೆ ಎಂದರು.

ಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು ಎಂದರು.

ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ನಾಯಕರಿಗೆ ಮನವರಿಕೆ ಮಾಡಲಾಗುವುದು ಎಂದು ಡಾ.ಸುಧಾಕರ್‌ ಹೇಳಿದರು

ಡೆಂಘೀ ತಡೆಗಟ್ಟಿ

ಸೊಳ್ಳೆಯಿಂದ ಹರಡುವ ಡೆಂಘೀ ರೋಗ ರಾಜ್ಯದಲ್ಲಿ ಪ್ರತಿ ವರ್ಷ 15 ರಿಂದ 20 ಸಾವಿರ ಜನರಿಗೆ ಬರುತ್ತಿದೆ. ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆ ಹುಟ್ಟದಂತೆ ಜನರು ಕ್ರಮ ವಹಿಸಬೇಕು. ನೀರು ಸಂಗ್ರಹವಾಗುವ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಒಂದು ವಾರ ಬಿಟ್ಟರೆ ಸೊಳ್ಳೆಗಳು ಹುಟ್ಟಿ ರೋಗ ಹರಡುತ್ತದೆ. ಈ ಸೊಳ್ಳೆ ಹಗಲಿನಲ್ಲಿ ಹೆಚ್ಚಾಗಿ ಕಚ್ಚಿ ವೈರಾಣು ಹರಡುತ್ತದೆ. ಮಹಿಳೆಯರು ಮತ್ತು ಮಕ್ಕಳ ವಿಚಾರದಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಯಾವುದೇ ರೀತಿ ಜ್ವರ, ಮೈ ಕೈ ನೋವು, ವಾಂತಿ, ಸ್ನಾಯುಸೆಳೆತ ಕಂಡುಬರುವುದು ಡೆಂಘೀ ಲಕ್ಷಣಗಳು. ಯಾವುದೇ ರೋಗ ಲಕ್ಷಣ ಕಂಡುಬಂದರೆ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು ಎಂದರು ಸಚಿವರು.


  • ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌
Tags: black funguscovid19dr k sudhakarkarnataka Bowring and Lady Curzon Hospital
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್‌ ರೆಮಿಡಿಸಿವರ್‌ ಹಂಚಿಕೆ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಡಿಸಿ ಗ್ರಾಮ ವಾಸ್ತವ್ಯ; ಸಂಕಷ್ಟಗಳಿಗೆ ಸ್ಪಂದಿಸಿದರು,  ವಿಶೇಷಚೇತನರಿಗೆ ನೆರವಾದರು, ಹಳ್ಳಿಗರಲ್ಲಿ ಹಳ್ಳಿಗರಾದರು! ನೋವಿಗೆ ಮಿಡಿದು ಜನರ ಮನದಲ್ಲೇ ಉಳಿದರು!!

ಚಿಕ್ಕಬಳ್ಳಾಪುರ ಡಿಸಿ ಗ್ರಾಮ ವಾಸ್ತವ್ಯ; ಸಂಕಷ್ಟಗಳಿಗೆ ಸ್ಪಂದಿಸಿದರು, ವಿಶೇಷಚೇತನರಿಗೆ ನೆರವಾದರು, ಹಳ್ಳಿಗರಲ್ಲಿ ಹಳ್ಳಿಗರಾದರು! ನೋವಿಗೆ ಮಿಡಿದು ಜನರ ಮನದಲ್ಲೇ ಉಳಿದರು!!

5 years ago
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಬಿಜೆಪಿ ಹೈಕಮಾಂಡ್‌ ಕಿವಿಗೆ ಬಾಂಬ್‌ನಂತೆ ಬಿದ್ದ 20,000 ಕೋಟಿ ರೂ. ನೀರಾವರಿ ಟೆಂಡರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ