• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು? ಪ್ರಧಾನಿ ಮೊದಲು ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ ಎಂದು ಪ್ರಶ್ನಿಸಿದ ಡಿಕೆಶಿ

cknewsnow desk by cknewsnow desk
May 21, 2021
in COVID-19, STATE
Reading Time: 1 min read
0
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ
914
VIEWS
FacebookTwitterWhatsuplinkedinEmail

ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿ ಕೊರೊನಾ ವಾರಿಯರ್ಸ್ʼಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ಜನರ ರಕ್ಷಣೆ ನಮ್ಮ ಕರ್ತವ್ಯ. ಹೀಗಾಗಿ ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೂ, ಸಹಾಯವಾಣಿ, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಪೂರೈಕೆ, ಮೆಡಿಕಲ್ ಕಿಟ್, ಆಹಾರ ಕಿಟ್ ವಿತರಣೆಯಿಂದ ಉಚಿತ ಲಸಿಕೆ ನೀಡಲು 100 ಕೋಟಿ ರೂ. ಯೋಜನೆವರೆಗೂ ಕಾಂಗ್ರೆಸ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು:

  • ‘ಯವ ಕಾಂಗ್ರೆಸ್ ಸದಸ್ಯರು ರಾಜ್ಯದ ಉದ್ದಗಲಕ್ಕೂ ಜನರ ಪ್ರಾಣ ಉಳಿಸಲು ಅಗತ್ಯ ಸೇವೆ ಒದಗಿಸುತ್ತಿದ್ದಾರೆ. ವಿದೇಶಗಳಿಗೆ ಲಸಿಕೆ ರಫ್ತು ಸ್ಥಗಿತಗೊಳಿಸಿ, ನಮ್ಮ ದೇಶದ ಜನರಿಗೆ ಮೊದಲು ನೀಡಬೇಕು.
  • ಲಸಿಕೆ ಪಡೆಯಲು ಆನ್ಲೈನ್ ನೋಂದಣಿ ಮಾಡಿಸಬೇಕೆಂದು ಹೇಳಿದ್ದಾರೆ. ಹಳ್ಳಿ ಜನರಿಗೆ ಆನ್ಲೈನ್ ಬಗ್ಗೆ ಏನು ಗೊತ್ತಿರುತ್ತದೆ? ಹೀಗಾಗಿ ನಮ್ಮ ಯೂತ್ ಕಾಂಗ್ರೆಸ್ ಸದಸ್ಯರು ಪಕ್ಷ, ಜಾತಿ, ಧರ್ಮ ಬೇಧವಿಲ್ಲದೆ, ಹಳ್ಳಿಯಿಂದ ನಗರದವರೆಗೆ ಆನ್ಲೈನ್ ನೋಂದಣಿ ಅಭಿಯಾನ ಆರಂಭಿಸುತ್ತಿದ್ದಾರೆ.
  • ನಮ್ಮ ವಿದ್ಯಾರ್ಥಿ ಘಟಕದವರು ಕಳೆದ ವರ್ಷ ರಕ್ತದಾನ ಮಾಡಿದ್ದರು. ಈ ವರ್ಷವೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ. ಮಹಿಳಾ ಕಾಂಗ್ರೆಸ್ ಸದಸ್ಯೆಯರು ವಿಶೇಷ ಆರೋಗ್ಯ ಕಿಟ್ʼಗಳನ್ನು ಅಗತ್ಯವಿರುವವರಿಗೆ ನೀಡುತ್ತಿದ್ದಾರೆ.
  • 160 ಕ್ಷೇತ್ರಗಳಲ್ಲಿ ಕೇರ್ ಸೆಂಟರ್, ಸಹಾಯವಾಣಿ ಆರಂಭಿಸಲಾಗಿದ್ದು ಉಳಿದ ಕಡೆಗಳಲ್ಲೂ ಮಾಡಲಾಗುವುದು. ರಾಜ್ಯದಲ್ಲಿ 150 ಆಂಬ್ಯುಲೆನ್ಸ್ʼಗಳು ಸೇವೆ ಸಲ್ಲಿಸುತ್ತಿವೆ.
  • ಸರಕಾರ ಘೋಷಿಸಿರುವ ಪ್ಯಾಕೇಜ್ ಬಡವರಿಗೆ ಸಾಲುವುದಿಲ್ಲ. ಹೀಗಾಗಿ ನಮ್ಮ ನಾಯಕರು ಸ್ಥಳೀಯವಾಗಿ ಆಹಾರ ಕಿಟ್ ಹಂಚುತ್ತಿದ್ದಾರೆ. ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ.
  • ಹೀಗೆ ಕಾಂಗ್ರೆಸ್ ಪಕ್ಷ ಈ ಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಲು ಹತ್ತಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಸರ್ಕಾರದ ವೈಫಲ್ಯ ಪ್ರಶ್ನಿಸುವುದು ನಮ್ಮ ಕರ್ತವ್ಯ.
  • ಇನ್ನು ಪ್ರದೇಶಾಭಿವೃದ್ಧಿ ನಿಧಿಯಿಂದ 100 ಕೋಟಿ ರೂ. ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಲವರು ಸ್ವಂತ ಹಣವೇ ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಾದ್ರೆ ಅವರು ತಮ್ಮ ಸ್ವಂತ ಹಣದಲ್ಲಿ ಕೆಲಸ ಮಾಡುತ್ತಿದ್ದಾರೆಯೇ?
  • ನಮಗೆ ಅಭಿವೃದ್ಧಿಗಿಂತ ಜನರ ಪ್ರಾಣ ಉಳಿಸೋದು ಮುಖ್ಯ. ನಾವು ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಲು ವಿರೋಧ ಪಕ್ಷದ ನಾಯಕರಿಗೆ ಸರಕಾರ ಅವಕಾಶ ನಿರಾಕರಿಸಿದೆ. ಆದರೂ ನಾವು ನಮ್ಮ ಹೋರಾಟ ನಿಲ್ಲಿಸುವುದಿಲ್ಲ.
  • ಸಿದ್ದರಾಮಯ್ಯನವರ ಸರಕಾರದಲ್ಲಿ ಜಾರಿಗೆ ತರಲಾಗಿದ್ದ ಇಂದಿರಾ ಕ್ಯಾಂಟೀನ್ ಕುರಿತು ಬಿಜೆಪಿಯವರು ಮಾತನಾಡಿದ್ದರು. ಈಗ ಅಲ್ಲಿ ಉಚಿತವಾಗಿ ಊಟ ಕೊಡಲು ನಿರ್ಧರಿಸಿದ್ದಾರೆ. ಆದರೆ ಊಟ ಪಡೆಯುವವರು, ಫೋಟೋ, ಗುರುತಿನ ಚೀಟಿ ತನ್ನಿ ಎಂದು ಆದೇಶಿಸಿರುವುದು ನೀಚ ಕೆಲಸ. ನಾನು ಇದನ್ನು ಪ್ರಶ್ನಿಸಿದಾಗ ಈ ನಿರ್ಧಾರ ಹಿಂಪಡೆದರು. ಆದರೆ ಈ ಊಟ ನೀಡಲು ಆಪ್ ನಲ್ಲಿ ಫೋಟೋ ಹಾಕಲು ನಿನ್ನೆ ಆದೇಶ ಹೊರಡಿಸಿದೆ. ಕಾಂಗ್ರೆಸ್ ಇದನ್ನು ಖಂಡಿಸುತ್ತದೆ. ಇದರ ವಿರುದ್ಧ ನಾವು ಹೋರಾಡುತ್ತೇವೆ.
  • ನಾವು ಸರಕಾರಕ್ಕೆ ಸಹಕಾರ ನೀಡಿದ್ದೇವೆ. ಆದರೆ ಸರ್ಕಾರ ಅದನ್ನು ಉಳಿಸಿಕೊಂಡಿಲ್ಲ.
  • ಇಂದು ನಮ್ಮ ನಾಯಕರಾದ ರಾಜೀವ್ ಗಾಂಧಿ ಅವರನ್ನು ಕಳೆದುಕೊಂಡ ದಿನ. ನಮ್ಮ ದೇಶದ ಐಕ್ಯತೆ ಕಾಪಾಡುವ ದಿನ. ರಾಜೀವ್ ಗಾಂಧಿ ಅವರು ಹಾಕಿಕೊಟ್ಟ ಮಾರ್ಗದರ್ಶನ, ವಿಚಾರ ಧಾರೆ, ಚಿಂತನೆಗಳನ್ನು ಪ್ರತಿ ಸಂದರ್ಭದಲ್ಲೂ ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮ ಕರ್ತವ್ಯ.

ಲಸಿಕೆಯನ್ನು ಕಾಂಗ್ರೆಸ್ ವಿರೋಧಿಸಿಲ್ಲ

  • ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೊರೊನಾ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ.
  • ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ ಮಂತ್ರಿಗಳು ತೆಗೆದುಕೊಳ್ಳದೇ, ಅದನ್ನು ಬಡವರ ಮೇಲೆ ಪ್ರಯೋಗಿಸಿದ್ದರು. ನಾವು ಲಸಿಕೆ ವಿರೋಧಿಸಿದ್ದರೆ ಸಿದ್ದರಾಮಯ್ಯನವರು, ನಾನು, ನಮ್ಮ ನಾಯಕರು ಲಸಿಕೆ ತೆಗೆದುಕೊಳ್ಳುತ್ತಿದ್ದೆವಾ?
  • ನಾವು ಕೊಟ್ಟ ಸಹಕಾರವನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ಡಿಕೆಶಿ ಹೇಳಿದರು.
Tags: Congresscovid19DK Shivakumarrajiv gandhi death anniversaryvaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬ್ಲ್ಯಾಕ್‌ ಫಂಗಸ್‌ ಪೀಡಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

ಬ್ಲ್ಯಾಕ್‌ ಫಂಗಸ್‌ ಪೀಡಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

Leave a Reply Cancel reply

Your email address will not be published. Required fields are marked *

Recommended

ಶಿಶುವಿಹಾರದಲ್ಲಿ ಶೂಟೌಟ್: ಮಕ್ಕಳು ಸೇರಿ 36 ಜನ ಸಾವು

ಶಿಶುವಿಹಾರದಲ್ಲಿ ಶೂಟೌಟ್: ಮಕ್ಕಳು ಸೇರಿ 36 ಜನ ಸಾವು

4 years ago
ಪುಲ್ವಾಮಾ ದಾಳಿ: ಭಾರತೀಯ ಸೈನ್ಯದ ಪ್ರತೀಕಾರದ ಕಥೆ

ಪುಲ್ವಾಮಾ ದಾಳಿ: ಭಾರತೀಯ ಸೈನ್ಯದ ಪ್ರತೀಕಾರದ ಕಥೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ