• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ನಿಗ್ರಹಕ್ಕೆ ನಿರ್ಣಾಯಕ ಕ್ರಮ: ಶನಿವಾರ ಬೆಳಗ್ಗೆಯಿಂದಲೇ 18-44 ವಯೋಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ; ಕೊವ್ಯಾಕ್ಸಿನ್‌ ಸೆಕೆಂಡ್‌ ಡೋಸ್‌ ಕೂಡ ಆರಂಭ

cknewsnow desk by cknewsnow desk
May 21, 2021
in COVID-19, NEWS IN USE, STATE
Reading Time: 2 mins read
0
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್
917
VIEWS
FacebookTwitterWhatsuplinkedinEmail

Lead Photo courtesy: Wikipedia

ಒಂದೆರಡು ತಿಂಗಳಲ್ಲೇ ರಾಜ್ಯದ 500 ಕಡೆ ಆಕ್ಸಿಜನ್‌ ಜನರೇಟರ್‌ ಅಳವಡಿಕೆ / ಬ್ಲ್ಯಾಕ್‌ ಫಂಗಸ್‌ಗೆ ಔಷಧಿ ವ್ಯವಸ್ಥೆ

ಬೆಂಗಳೂರು: 18ರಿಂದ 44 ವರ್ಷ ವಯೋಮಿತಿಯೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ನಾಳೆಯಿಂದ (ಮೇ 22) ಕೋವಿಡ್ ಲಸಿಕೆ ಕೊಡಲಾಗುವುದು ಹಾಗೂ ಒಂದೆರಡು ತಿಂಗಳಲ್ಲಿ ರಾಜ್ಯದ 500 ಕಡೆ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಬಿಜೆಪಿ ಶುಕ್ರವಾರ ಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಜತೆ  ಮಾತನಾಡಿದರು.

ರಾಜ್ಯವೇ ಲಸಿಕೆ ನೀಡಲು ಅದರ ಮೇಲೆ ವ್ಯವಸ್ಥಿತ ನಿಗಾ ಇರಿಸಲು ಪ್ರತ್ಯೇಕ ಸಾಫ್ಟ್‌ವೇರ್‌ವೊಂದನ್ನು ಅಭಿವೃದ್ಧಿ ಮಾಡಲಾಗಿದ್ದು, ಅದನ್ನು ಕೋವಿನ್‌ ಪೋರ್ಟಲ್‌ ಜತೆ ಲಿಂಕ್ ಮಾಡಲಾಗುತ್ತಿದೆ. ಜೂನ್ 1ರಿಂದ ಈ ಪೋರ್ಟಲ್ ಕೆಲಸ‌ ಮಾಡಲಿದೆ ಎಂದು ಡಿಸಿಎಂ ತಿಳಿಸಿದರು.

ರಾಜ್ಯದಲ್ಲಿ 1,90,000 ಜನರಿಗೆ ಈಗ ಕೊವ್ಯಾಕ್ಸಿನ್‌ ಸೆಕೆಂಡ್‌ ಡೋಸ್‌ ಕೊಡಬೇಕಿದೆ. ಇದರಲ್ಲಿ 1,70,000 ಕೊವ್ಯಾಕ್ಸಿನ್‌ ಲಸಿಕೆ ಸಿದ್ಧವಿದ್ದು, ಈಗಾಗಲೇ ಕೊಡಲು ಪ್ರಾರಂಭಿಸಲಾಗಿದೆ.   ಕೋವಿಶೀಲ್ಡ್‌ ಕೂಡ ಸ್ಟಾಕ್‌ ಇದೆ. ಲಸಿಕೆ ಅಭಿಯಾನ ತೀವ್ರಗೊಳಿಸಲು ಮುಂಚೂಣಿಯ ಕಾರ್ಯಕರ್ತರ ಪಡೆ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಆದ್ಯತೆಯ ಮೇಲೆ ಅವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ನಾಳೆಯಿಂದ ಮಾಧ್ಯಮ ಸಿಬ್ಬಂದಿ, ಚಿತಾಗಾರ ಸಿಬ್ಬಂದಿ, ವಿಕಲಚೇತನರು, ಆರೋಗ್ಯ ಕಾರ್ಯಕರ್ತರು ಮತ್ತವರ ಕುಟುಂಬ ಸದಸ್ಯರು, ಕೋವಿಡ್‌ ಕೆಲಸಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಸರಕಾರಿ ಸಾರಿಗೆ ಸಿಬ್ಬಂದಿ, ವಿದ್ಯುತ್‌ ಮತ್ತು ನೀರು ಪೂರೈಕೆ ಸಿಬ್ಬಂದಿಗೆ ವ್ಕಾಕ್ಸಿನ್‌ ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ಇನ್ನೂ ಸೋಂಕಿತರಾಗಿ ಗುಣಮುಖರಾದವರಿಗೆ ತಕ್ಷಣವೇ ಲಸಿಕೆ ಕೊಡಬೇಕಿಲ್ಲ. ಮೂರು ತಿಂಗಳ ನಂತರ ಲಸಿಕೆ ಕೊಟ್ಟರೂ ಸಾಕು. ಕೋವಿಶೀಲ್ಡ್ ಪಡೆದವರಿಗೆ 4-6 ವಾರದಲ್ಲಿ ಸೆಕೆಂಡ್‌ ಡೋಸ್‌ ಕೊಡಬೇಕಿತ್ತು. ಆ ಅಂತರವನ್ನು 16 ವಾರಗಳ‌ ವರೆಗೆ ವಿಸ್ತರಿಸಲಾಗಿದೆ. ಡಿಸೆಂಬರ್‌ ಹೊತ್ತಿಗೆ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಕೊಡಲಾಗುವುದು. ಕೋವಿಡ್‌ ನಿಯಂತ್ರಣಕ್ಕೆ ಲಸಿಕೆಯೊಂದೇ ಅಂತಿಮ ಪರಿಹಾರ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕೇಂದ್ರ ಸಚಿವರಾದ @DVSadanandGowda
ಅವರು, ಸಚಿವರಾದ @GopalaiahK, @SRVishwanathBJP ಅವರ ಉಪಸ್ಥಿತಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ನಡೆದ ಸುದ್ದಿಗೋಷ್ಠಿ –#Remdesivir, #LiposomalAmphotericinB ಸೇರಿದಂತೆ ಔಷಧಿಗಳ ಪೂರೈಕೆ ಹಾಗೂ ಲಭ್ಯತೆ ವಿಚಾರದಲ್ಲಿ ಕೇಂದ್ರ-ರಾಜ್ಯ ಸರ್ಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿವೆ.

1/3 pic.twitter.com/lCyPrE1RYL

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) May 21, 2021

500 ಆಕ್ಷಿಜನ್‌ ಜನರೇಟರ್‌

ಇನ್ನು ಒಂದೆರಡು ತಿಂಗಳಲ್ಲಿಯೇ ರಾಜ್ಯದ ಎಲ್ಲೆಡೆ 400ರಿಂದ 500 ಆಕ್ಸಿಜನ್‌ ಜನರೇಟರ್‌ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಅಲ್ಲಿಯೂ ಐಸಿಯುಗಳನ್ನು ಹಾಕುತ್ತಿದ್ದೇವೆ ಎಂದು ಅವರು ಹೇಳಿದರು.

ಒಂದು ಆಕ್ಸಿಜನ್‌ ಬೆಡ್‌ಗೆ 20,000 ಲೀಟರ್‌ ಆಮ್ಲಜನಕ ಬೇಕು. ಈ ಲೆಕ್ಕದಲ್ಲಿ ನೋಡಿದರೆ, ರಾಜ್ಯದಲ್ಲಿರುವ ಎಲ್ಲ ಆಕ್ಸಿಜನ್‌ ಬೆಡ್‌ಗಳಿಗೆ ಆಗಿ ಮಿಕ್ಕುವಷ್ಟು ಆಮ್ಲಜನಕದ ತುರ್ತು ಸಂಗ್ರಹ ನಮ್ಮಲ್ಲಿದೆ. ಮೂರನೇ ಅಲೆಯ ದೃಷ್ಟಿ ಇಟ್ಟುಕೊಂಡು ಇನ್ನು ಹೆಚ್ಚೆಚ್ಚು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 3,000 ವೆಂಟಿಲೇಟರ್‌, 25,000 ಆಕ್ಸಿಜನ್‌ ಬೆಡ್‌ಗಳನ್ನು ಹೆಚ್ಚುವರಿಯಾಗಿ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದೇವೆ. ಇದರ ಪ್ರಮಾಣವನ್ನು ಮತ್ತೂ  ಹೆಚ್ಚಿಸುತ್ತೇವೆ. ಇನ್ನು ಪಿಎಂ ಕೇರ್‌ನಿಂದ 315 ಕೋಟಿ ಹಣದ ಜತೆಗೆ ವೆಂಟಿಲೇಟರ್‌ಗಳನ್ನೂ ನಮಗೆ ಕೊಡಲಾಗಿದೆ ಎಂದು ಡಿಸಿಎಂ ಅಂಕಿ-ಅಂಶ ಕೊಟ್ಟರು.

ಈಗಾಗಲೇ ನೋಂದಣಿಯಾಗಿರುವ, ನೋಂದಣಿಯಾಗದ ಎಷ್ಟೋ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್‌ ಸಿಲಿಂಡರ್‌ಗಳನ್ನು ನೀಡಿದ್ದೇವೆ. ಎಲ್ಲೋ ಕುಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಆಕ್ಸಿಜನ್‌ ದೊರೆಯುತ್ತಿದೆ. ಹಾಗೆಯೇ ಸಣ್ಣ ಪ್ರಮಾಣದಲ್ಲಿದ್ದ ಆಕ್ಸಿಜನ್‌ ಸಾಗಾಣಿಕೆ ವ್ಯವಸ್ಥೆ ಈಗ ದೊಡ್ಡ ಪ್ರಮಾಣದಲ್ಲಿ ಆಗಿದ್ದು, ಪ್ರತ್ಯೇಕ ರೈಲುಗಳಲ್ಲಿ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಬ್ಲ್ಯಾಕ್‌ ಫಂಗಸ್‌ಗೆ ಔಷಧಿ

ಬ್ಲ್ಯಾಕ್‌ ಫಂಗಸ್‌ ಬೇರೆ ರಾಜ್ಯಗಳಲ್ಲಿ ಮೊದಲು ಕಂಡು ಬಂದಿತ್ತು. ನಮ್ಮಲ್ಲಿ ಈಗ ಕಂಡುಬಂದಿದೆ. ಈಗ ಒಂದು ನಿರ್ದಿಷ್ಟ ಔಷಧಿಗೆ ಬೇಡಿಕೆ ಬಂದಿದೆ. ಆದರೆ, ಇದಕ್ಕೆ ಹಲವಾರು ಔಷಧಿಗಳಿದ್ದರೂ ಜನರು ಮಾತ್ರ ʼಲೈಸೋಸೋಮಲ್ ಅಮಪೋಟೆರಿಸನ್ʼ (liposomal amphotericin) ಔಷಧಿಯನ್ನೇ ಕೇಳುತ್ತಿದ್ದಾರೆ. ʼಲೈಸೋಸೋಮಲ್ ಅಮಪೋಟೆರಿಸನ್-ಬಿʼ ಸೇರಿ ಇನ್ನೂ ಪರ್ಯಾಯ ಔಷಧ ಇದ್ದರೂ ಜನರು ಅದಕ್ಕೇ ಮುಗಿಬೀಳುತ್ತಿದ್ದಾರೆ. ಮೆಡಿಕಲ್‌ ಸ್ಟೋರ್‌ಗಳಲ್ಲಿಯೂ ಪರ್ಯಾಯ ಔಷಧಿಗಳು ಸಿಗುತ್ತಿವೆ. ಈ ತಿಂಗಳ 14ರಂದು  ʼಲೈಸೋಸೋಮಲ್ ಅಮಪೋಟೆರಿಸನ್ʼ ಔಷಧಿಗೆ ಬೇಡಿಕೆ ಸಲ್ಲಿಸಿದ್ದೇವೆ. ಇನ್ನು ಕೆಲ ದಿನಗಳಲ್ಲಿಯೇ ನಮ್ಮ ಕೈ ಸೇರಲಿದೆ ಎಂದರು ಡಿಸಿಎಂ.

ಅಂದಹಾಗೆ, ಬ್ಲ್ಯಾಕ್‌ ಫಂಗಸ್‌ ಅನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡಲಾಗಿದೆ.  ಖಾಸಗಿ ಆಸ್ಪತ್ರೆಗಳು ರಹಸ್ಯವಾಗಿ ಚಿಕಿತ್ಸೆ ನೀಡುವಂತಿಲ್ಲ, ಯಾರೂ ಪಡೆಯುವಂತೆಯೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಔಷಧ ಹಂಚಿಕೆಯಲ್ಲಿ ತಾರತಮ್ಮ ಇಲ್ಲ

ರಾಜ್ಯಕ್ಕೆ ಔಷಧಿ ಹಂಚಿಕೆಯಲ್ಲಿ ಕೇಂದ್ರ ಸರಕಾರ ತಾರತಮ್ಮ ಎಸಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಡಾ.ಅಶ್ವತ್ಥನಾರಾಯಣ; “ಮಹಾರಾಷ್ಟ್ರ, ಗುಜರಾಜ್‌ ಮುಂತಾದ ರಾಜ್ಯಗಳಲ್ಲಿ ಜನವರಿಯಿಂದಲೇ ಎರಡನೇ ಅಲೆ ಆರಂಭವಾಯಿತು. ರಾಜ್ಯದಲ್ಲಿ ಏಪ್ರಿಲ್‌ನಿಂದ ಶುರುವಾಯಿತು. ಅಲ್ಲೆಲ್ಲ ಸೋಂಕಿತರು ಹೆಚ್ಚಾದ ಕಾರಣ ಮೊದಲು ಆದ್ಯತೆಯ ಮೇರೆಗೆ ಔಷಧಿ, ಆಕ್ಸಿಜನ್‌, ರೆಮಿಡಿಸಿವಿರ್‌ಗಳನ್ನು ಕೇಂದ್ರವು ಆ ರಾಜ್ಯಗಳಿಗೆ ಪೂರೈಕೆ ಮಾಡಿತು” ಎಂದರು.

ರಾಜ್ಯದಲ್ಲಿ ಏಪ್ರಿಲ್‌ನಿಂದ ಸೋಂಕು ವಿಪರೀತ ಹೆಚ್ಚಲು ಶುರುವಾಯಿತು. ತಕ್ಷಣವೇ ರಾಜ್ಯ ಸರಕಾರ ಕೇಂದ್ರಕ್ಕೆ ಎಲ್ಲ ಮಾಹಿತಿ ನೀಡಿತು. ಕೂಡಲೇ ಕೇಂದ್ರವೂ ರಾಜ್ಯಕ್ಕೆ ಅಗತ್ಯವಾದ ಎಲ್ಲ ಔಷಧಿ ಒದಗಿಸಲು ತುರ್ತಾಗಿ ಲೈನಪ್‌ ಮಾಡಿ ಕ್ರಮ ವಹಿಸಿತು. ತಕ್ಷಣವೇ ಎಲ್ಲ ಔಷಧಿಗಳ ಉತ್ಪಾದನೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಲಾಯಿತು. ಅದಾದ ಕೆಲ ದಿನಗಳಲ್ಲಿಯೇ ರಾಜ್ಯಕ್ಕೆ ಪೂರೈಕೆ ಆರಂಭವಾಯಿತು. ರೆಮಿಡಿಸಿವರ್‌ ಹಂಚಿಕೆಯಲ್ಲೂ ರಾಜ್ಯಕ್ಕೆ ಅನ್ಯಾಯವಾಗಿಲ್ಲ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಹಂಚಿಕೆ ಆಗಿರುವುದು ರಾಜ್ಯಕ್ಕೆ ಮಾತ್ರ. ಈ ತಿಂಗಳ 23ರ ಹಂಚಿಕೆಯ ರೆಮಿಡಿಸಿವರ್ ಬಂದರೆ ಮಹಾರಾಷ್ಟ್ರಕ್ಕಿಂತ ನಮಗೇ ಹೆಚ್ಚು ಸಿಕ್ಕಂತಾಗುತ್ತದೆ ಎಂದರು ಅವರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.‌ಆರ್.‌ವಿಶ್ವನಾಥ್‌ ಉಪಸ್ಥಿತರಿದ್ದರು.

Tags: black funguscovid19dr cn ashwathnarayankarnatakaoxygenvaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು? ಪ್ರಧಾನಿ ಮೊದಲು ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ ಎಂದು ಪ್ರಶ್ನಿಸಿದ ಡಿಕೆಶಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ