• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು! 1,763 ವೈದ್ಯರನ್ನು ನೇಮಿಸಲಾಗಿದೆ ಎಂದ ಹೆಲ್ತ್‌ ಮಿನಿಸ್ಟರ್

cknewsnow desk by cknewsnow desk
May 24, 2021
in COVID-19, STATE
Reading Time: 1 min read
0
ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು!  1,763 ವೈದ್ಯರನ್ನು   ನೇಮಿಸಲಾಗಿದೆ ಎಂದ  ಹೆಲ್ತ್‌ ಮಿನಿಸ್ಟರ್
913
VIEWS
FacebookTwitterWhatsuplinkedinEmail

ವೈದ್ಯರ ಮೇಲಿನ ಹಲ್ಲೆಯನ್ನು ಸರ್ಕಾರ ಸಹಿಸುವುದಿಲ್ಲ ಎಂದ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಮುಗಿದು ಅಧಿಸೂಚನೆ ಹೊರಡಿಸಲಾಗಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾಲಜಿಸ್ಟ್ ಗಳನ್ನು ನೇಮಿಸಲಾಗುತ್ತಿದೆ. ಜೊತೆಗೆ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಬಲವಾಗಲಿದೆ. ಉತ್ತರ ಕರ್ನಾಟಕ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಿದ್ದು, ಈಗ ಸಮಸ್ಯೆ ನೀಗಲಿದೆ. ಗದಗ, ಹುಬ್ಬಳ್ಳಿ, ಬೆಳಗಾವಿ, ರಾಯಚೂರು ಮೊದಲಾದ ಜಿಲ್ಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ ಅಲ್ಲಿಗೆ ನೇಮಿಸಬೇಕೆಂದು ಸೂಚಿಸಲಾಗಿದೆ. ಶೀಘ್ರದಲ್ಲಿ ಸ್ಥಳ ನಿಯೋಜನೆ ಮಾಡಲಾಗುವುದು” ಎಂದರು.

ರಾಜ್ಯಕ್ಕೆ 230 ಟನ್ʼನಿಂದ ಆರಂಭಿಸಿ 1,015 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರಕಾರ ಹಂಚಿಕೆ ಮಾಡಿದೆ. ಈಗ ಮತ್ತಷ್ಟು ಏರಿಕೆ ಮಾಡಿ 1,200 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ.

ಎಲ್ಲ ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇದರಿಂದ ಸಂಬಂಧಿಕರು ಆರೈಕೆ ಹೇಗಾಗುತ್ತಿದೆ ಎಂದು ನೋಡಬಹುದು, ಹೊರಗಿನಿಂದ ಬರುವುದನ್ನು ತಪ್ಪಿಸುವುದರಿಂದ ಬ್ಲ್ಯಾಕ್ ಫಂಗಸ್ ನಿಯಂತ್ರಿಸಬಹುದು, ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬಹುದು. ಪ್ರತಿ ಜಿಲ್ಲೆಯ ಆಸ್ಪತ್ರೆಗಳ ಕಾರ್ಯನಿರ್ವಹಣೆಯನ್ನು ಒಂದೇ ಕಡೆ ವೀಕ್ಷಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಆರೋಗ್ಯ ಸಹಾಯಕರಿಗೆ ಅಧಿಕಾರಿಗಳು ಎಂದು ಪದನಾಮ ಬದಲಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ 10 ಸಾವಿರ ರೂ., ನರ್ಸಿಂಗ್ ಸಿಬ್ಬಂದಿಗೆ 8 ಸಾವಿರ ರೂ., ಗ್ರೂಪ್ ಡಿ ಸಿಬ್ಬಂದಿಗೆ 10 ಸಾವಿರ ರೂ. ರಿಸ್ಕ್ ಭತ್ಯೆಯನ್ನು ಏಪ್ರಿಲ್ 1 ರಿಂದ ನೀಡಲು ಆದೇಶಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವ ವ್ಯವಸ್ಥೆ ತರಲಾಗಿದೆ. 17 ಜಿಲ್ಲೆಗಳಲ್ಲಿ ವೇತನ ಸಂಪೂರ್ಣ ಸಿಕ್ಕಿದೆ. ಎರಡು ದಿನಗಳಲ್ಲಿ ಉಳಿದೆಡೆ ವೇತನ ಕೈ ಸೇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿತರು

ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು ಮೃತಪಟ್ಟಿದ್ದಾರೆ. ಈ ಸೋಂಕು ನಿವಾರಣೆಗೆ 1 ಸಾವಿರ ಔಷಧಿ ವೈಲ್ ಗಳು ಕೇಂದ್ರದಿಂದ ಸಿಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ 555 ಬೇಸಿಕ್ ಆಂಬ್ಯುಲೆನ್ಸ್, 157 ಅಡ್ವಾನ್ಸ್ಡ್ ಆಂಬ್ಯುಲೆನ್ಸ್ ಇದೆ. 530 ವೆಂಟಿಲೇಟರ್ ಕೇಂದ್ರದಿಂದ ಬಂದಿದ್ದು, ಇದನ್ನು ಆಂಬ್ಯುಲೆನ್ಸ್ ಗೆ ಅಳವಡಿಸಲಾಗುವುದು. ಇದರಿಂದ ಎಲ್ಲಾ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೋವಿಡ್ ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿ ಜಿಲ್ಲೆಯಲ್ಲಿ ಟೆಲಿ ಐಸಿಯುನಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಚರ್ಚಿಸಲಾಗಿದೆ ಎಂದರು ಅವರು.

ಕೇಂದ್ರದಿಂದ ರಾಜ್ಯಕ್ಕೆ 1.05 ಕೋಟಿ ಡೋಸ್ ಕೋವಿಶೀಲ್ಡ್ ಬಂದಿದ್ದು, 13.54 ಲಕ್ಷ ನೇರ ಖರೀದಿ ಮಾಡಲಾಗಿದೆ. 13.10 ಲಕ್ಷ ಡೋಸ್ ಕೋವ್ಯಾಕ್ಸಿನ್ ನೇರ ಖರೀದಿ ಮಾಡಲಾಗಿದೆ. ಈವರೆಗೆ 1.22 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸದ್ಯ 11.46 ಲಕ್ಷ ಡೋಸ್ ದಾಸ್ತಾನು ಇದೆ. ಪ್ರಾಶಸ್ತ್ಯದಲ್ಲಿ ಗುಂಪುಗಳನ್ನು ಮಾಡಿಕೊಂಡು ಲಸಿಕೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಸೇವೆಯಲ್ಲಿದ್ದ ಹೆಣ್ಣುಮಗಳ ಮೇಲೆ ಹಲ್ಲೆ ಖಂಡನೀಯ. ಆರೋಗ್ಯ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದರೆ 5 ವರ್ಷಗಳ ಸೆರೆವಾಸ ಅನುಭವಿಸಬೇಕಾಗುತ್ತದೆ. ಇದನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಗಂಭೀರ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

Tags: covid19doctors appointmentkarnatakakarnataka fights coronamedical staffuttara karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಡಿಮಾಂಡ್‌ ಮಾಡಿದ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಮೇಲೆ ಸಿಟಿಜನ್ ಮುಖರ್ಜಿ, Get well soon Sir..

ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಮೇಲೆ ಸಿಟಿಜನ್ ಮುಖರ್ಜಿ, Get well soon Sir..

6 years ago
ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ