• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಇನ್ನು ಮುಂದೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ

cknewsnow desk by cknewsnow desk
May 26, 2021
in COVID-19, STATE
Reading Time: 1 min read
0
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!
915
VIEWS
FacebookTwitterWhatsuplinkedinEmail

ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ 50,000 ರೂ. ಬಿಡುಗಡೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಅವರು ಬುಧವಾರ ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು.

ಕೋವಿಡ್ 19 ಸೋಂಕಿನ 2ನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓ ಗಳೊಂದಿಗೆ ಸಂವಾದ ನಡೆಸಿ, ಸ್ಥೈರ್ಯ ಮೂಡಿಸಿದರು.

ಕೊರೋನ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೋನ ಸೊಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಳೆದ ವಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ 50,000 ರೂ.ಗಳನ್ನು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಸದ್ಯದಲ್ಲಿಯೇ ಹಣ ಎಲ್ಲರ ಕೈ ಸೇರಲಿದೆ. ಜತೆಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂದಿತ ಅನುದಾನ ಹಾಗೂ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳು ಹಾಗೂ ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಿಎಂ ಸೂಚಿಸಿದರು.

ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್‍ಗಳಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಹೆಲ್ಪ್ ಲೈನ್ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆಗಳ ಜೊತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಯಲ್ಲಿದ್ದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರು ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ‘ಮಕ್ಕಳ ರಕ್ಷಣಾ ಸಮಿತಿ’ಗಳಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಗ್ರಾಮೀಣಾಭಿವೃಧ್ಧಿ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags: chief minister yediyurappacovid19karnatakaks eshwarapparural development
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ