• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..

cknewsnow desk by cknewsnow desk
May 26, 2021
in GUEST COLUMN, STATE
Reading Time: 2 mins read
0
‌ಆಸೆಯೇ ದುಃಖಕ್ಕೆ ಮೂಲ ಎನ್ನುವದನ್ನು ಮರೆಯುವುದು ಬೇಡ, ಈಗಲಾದರೂ  ನಮ್ಮೊಳಗಿನ ಬುದ್ದನನ್ನು ಎಚ್ಚರಿಸಬೇಕಿದೆ..
1.5k
VIEWS
FacebookTwitterWhatsuplinkedinEmail

ಗೌತಮ ‘ಬುದ್ಧ’ನಾಗಿದ್ದು ಕೇವಲ ಸರ್ವಸಂಗ ಪರಿತ್ಯಾಗದಿಂದ ಅಲ್ಲ. ತಾನು ಕಂಡ ಬದುಕಿನ ಸತ್ಯ ದರ್ಶನದಿಂದ. ಅಂದಹಾಗೆ ಇಂದು ಬೌದ್ಧ ಮತೀಯರಿಗೆ ಬಹಳ ಪವಿತ್ರವಾದ ದಿನ. ವೈಶಾಖ ಶುದ್ಧ ಪೌರ್ಣಿಮೆ ಬುದ್ಧನ ಜನ್ಮ ದಿನ. ನಮ್ಮ ಓದುರಿಗೆ ಬುದ್ಧದರ್ಶನ ಮಾಡಿಸಿದ್ದಾರೆ ಅಂಕಣಕಾರ ಡಾ.ಗುರುಪ್ರಸಾದ್‌ ಹವಲ್ದಾರ್

Lead Photo by Jan Kopřiva from Pexels

  • Photo by Jorge Zapata from Pexels

ಬುದ್ಧಂ ಶರಣಂ ಗಚ್ಛಾಮಿ
ಧರ್ಮಂ ಶರಣಂ ಗಚ್ಛಾಮಿ
ಸಂಘಂ ಶರಣಂ ಗಚ್ಛಾಮಿ

“ಬುದ್ಧ” ಎಂದರೆ ‘ಜ್ಞಾನ ಪಡೆದವನು’ ಎಂದರ್ಥ.
ಶುದ್ಧೋಧನ ಮತ್ತು ಮಾಯಾದೇವಿಯರ ಪುತ್ರನಾಗಿ ಹುಟ್ಟಿದ ರಾಜಕುಮಾರನೇ ಸಿದ್ದಾರ್ಥ. 16ನೇ ವಯಸ್ಸಿನಲ್ಲೇ ಯಶೋಧರೆ ಎಂಬ ಕನ್ಯೆಯೊಂದಿಗೆ ವಿವಾಹವಾಗಿ, ತಮಗೆ ಹುಟ್ಟಿದ ಮುದ್ದಿನ ಮಗನಿಗೆ ರಾಹುಲ ಎಂದು ಹೆಸರನಿಟ್ಟು ರಾಜ್ಯ, ಸಂಪತ್ತು, ಅಧಿಕಾರ, ಪತ್ನಿ, ಮಗು ಎನ್ನುತ್ತ ನೆಮ್ಮದಿಯಿಂದ ಕಾಲಕಳೆಯುತ್ತಿದ್ದ. ಒಮ್ಮೆ ನಗರ ಸಂಚಾರ ಮಾಡುತ್ತಿದ್ದ ರಾಜ ಸಿದ್ಧಾರ್ಥನಿಗೆ ಶವ, ರೋಗಿ ಮತ್ತು ವೃದ್ಧನನ್ನು ಕಂಡು ಬದುಕಿನಲ್ಲಿ ಕಾಯಿಲೆ, ವೃದ್ಧಾಪ್ಯ, ಸಾವು ಎಲ್ಲರಿಗೂ ಅನಿವಾರ್ಯವೇ ಎಂಬ ಪ್ರಶ್ನೆ ಹುಟ್ಟಿ, ಈ ಕುರಿತು ಸನ್ಯಾಸಿ ಒಬ್ಬರನ್ನು ಪ್ರಶ್ನಿಸಿದಾಗ ನಿನಗೆ ಈ ಬಗ್ಗೆ ತಿಳಿಯಬೇಕೆಂದರೆ ಮೊದಲು ಎಲ್ಲವನ್ನೂ ತೊರೆದು ವಿರಾಗಿಯಾಗು, ಜ್ಞಾನ ಗಳಿಸಿದ ಮೇಲೆ ನಿನಗೆ ಈ ಪ್ರಶ್ನೆಯ ಉತ್ತರ ದೊರಕುತ್ತದೆ ಎಂದು ಸಾಧು ಉತ್ತರಿಸಿದನು.

ವೈಶಾಖ ಶುದ್ಧ ಪೌರ್ಣಿಮಿಯ ರಾತ್ರಿ ಸಿದ್ಧಾರ್ಥ ಬಿಟ್ಟು ಹೊರಟಿದ್ದು ಅರಮನೆಯನ್ನಲ್ಲ. ಸಹಜೀವಿಗಳೊಂದಿಗೆ ಬೆರೆಯಲಾಗದಂತೆ ಮೇಲು-ಕೀಳು ಎಂಬುದನ್ನು ಸೃಷ್ಟಿಸುವ ಅಧಿಕಾರದ ಗದ್ದುಗೆಯನ್ನು; ಪದವಿ, ಐಶ್ವರ್ಯಗಳಿಂದ ಸುಖ ಸಿಗುತ್ತದೆ ಎಂಬ ಭ್ರಾಂತಿಯನ್ನು ಮನುಷ್ಯನ ಮೂಲಭೂತ ಕೊರತೆಗಳನ್ನು ಅರಸೊತ್ತಿಗೆಯಿಂದ ನೀಗಿಸಲು ಸಾಧ್ಯವಿಲ್ಲ ಎಂಬುದನ್ನು ಸಿದ್ಧಾರ್ಥ ಗಮನಿಸುತ್ತಾನೆ.

ರಾಜಕುಮಾರನೆಂಬ ಭ್ರಮಾಕೋಶ ಕಳಚಿ ಜನರಲ್ಲಿಗೆ ಹೋದಾಗ ಮಾತ್ರ ಅವರ ದುಃಖವನ್ನು ತಾನು ಅರ್ಥಮಾಡಿಕೊಳ್ಳಬಲ್ಲೆ. ಮನುಕುಲಕ್ಕೆ ಸುಖ-ಸಂತೃಪ್ತಿ ದೊರಕುವ ಮಾರ್ಗ ಯಾವುದು ಎಂಬುದಕ್ಕೆ ಉತ್ತರವನ್ನು ಕಂಡುಕೊಳ್ಳಬಲ್ಲೆ ಎಂದು ಬೆಳದಿಂಗಳ ಆ ಇರುಳಿನಲ್ಲಿ ರಾಜ ಪದವಿ ತೊರೆದು ಜನರ ನಡುವೆಯೇ ಹುಡುಕ ಹೊರಟ ಈ ಸಿದ್ಧಾರ್ಥ.

ಮಾನವರ ದುಃಖವನ್ನು ದೂರಮಾಡುವ ಮುನ್ನ ಅದರ ಮೂಲವನ್ನು ಆತ ಅರಿಯ ಬೇಕಿತ್ತು. ಆ ಅರಿವಿನ ಹಾದಿ ಹುಡುಕುತ್ತ ಆತ ಮೊದಲು ದೇಹ ದಂಡಿಸಿಕೊಳ್ಳುತ್ತಾನೆ. ಎಷ್ಟೋ ದಿನ ಅನ್ನ, ನೀರು ತೊರೆದು ಪ್ರಕೃತಿಯ ಸರ್ವ ಕಾಠಿಣ್ಯವನ್ನು ತನ್ನನ್ನು ತೆರೆದುಕೊಂಡು ಸತ್ಯ ಅರಿಯಲು ಯತ್ನಿಸುತ್ತಾನೆ.

ಇಷ್ಟರಲ್ಲಿ ಬುದ್ಧನಿಗೆ ತಾನು ನಡೆಯಬೇಕಾದ ಹಾದಿ ಧ್ಯಾನ ಮಾರ್ಗವೆಂದು ಮನವರಿಕೆಯಾಗುತ್ತದೆ. ಜಗತ್ತಿನ ಆಗುಹೋಗುಗಳಿಗೆ, ಮನುಷ್ಯನ ತುಮುಲಗಳಿಗೆ ಕಾರ್ಯಕಾರಣ ಸಂಬಂಧದ ಎಳೆ ಹಿಡಿದು ಧ್ಯಾನಿಸಿ ಆತ ಕಂಡುಕೊಂಡದ್ದು ಅತ್ಯಂತ ಸರಳವೆಂದು ಕಾಣುವ ಆಸೆಯೇ ದುಃಖಕ್ಕೆ ಮೂಲ-ಎಂಬ ಸತ್ಯವನ್ನು.

ತನ್ನ ಹುಟ್ಟಿದ ದಿನವೂ ಆದ ಒಂದು ಪೌರ್ಣಮಿಯ ದಿನ ಬೋಧಿವೃಕ್ಷದ ಕೆಳಗೆ, ಜಗತ್ತು ಜ್ಞಾನೋದಯ ಎಂತ ಕರೆಯುವ ಅರಿವಿನ ಬೆಳದಿಂಗಳಿನಲ್ಲಿ ಮಿಂದು ಸಿದ್ದಾರ್ಥ ನಿರ್ಮೋಹಿ ಬುದ್ಧನಾದ.

ಬುದ್ಧ ಹೇಳುವಂತೆ ಬದುಕೆಂಬುದು ಶುದ್ಧ ಬೆಳಕು. ಇಲ್ಲಿ ಯಾವುದೂ ಯಾರ ಸ್ವತ್ತೂ ಅಲ್ಲ. ಸುಖವನ್ನು ವಸ್ತುಗಳಲ್ಲಿ ಅರಸಲು ಹೋಗುವುದರಿಂದಲೇ ಮನುಷ್ಯ ದುಃಖಕ್ಕೀಡಾಗುತ್ತಾನೆ ಎಂದು ಗೌತಮಬುದ್ಧ ಹೇಳಿದ್ದರು. ಯಾವುದನ್ನೂ ಸ್ವಂತವೆಂದು ಪರಿಗಣಿಸದವನಿಗೆ ನೋವೂ ಇಲ್ಲ, ನಲಿವೂ ಇಲ್ಲ.

ಅಂತಹ ನಿರ್ಲಿಪ್ತ ಸಮಚಿತ್ತ ಮಾತ್ರ ಬುದ್ಧನ ನಗೆಯಂತಹ ಕಿರು ನಗೆಯನ್ನು ಹೊಳೆಯಬಹುದು. ಆ ನಿರ್ಮಲ ಧ್ಯಾನಸ್ಥ ಮಂದಹಾಸದಲ್ಲಿ ಆತ ಪೂರ್ಣಚಂದ್ರನಷ್ಟು ಶಾಂತ, ದೇದೀಪ್ಯಮಾನ. ತನ್ನ ಮಾತುಗಳು ಮನುಷ್ಯನ ಆಂತರಿಕ ಗುಣವನ್ನು ಕುರಿತು ಹೇಳುವುದರಿಂದ ಅವನ್ನು ಗ್ರಹಿಸುವುದು ಲೌಕಿಕದ ಲಾಲಸೆಗಳಲ್ಲಿ ಮುಳುಗಿರುವವರಿಗೆ ಸುಲಭವಲ್ಲ ಎಂದು ಗೌತಮನಿಗೆ ತಿಳಿದಿತ್ತು.

ಬಯಕೆಗಳ ಗಾಢಾಂಧಕಾರದಲ್ಲಿ ದಾರಿತಪ್ಪಿದವರಿಗೆ ತನ್ನ ಮಾತು ಪಥ್ಯವಾಗುವುದೆ? ಅಂಥವರಿಗೆ ಉಪದೇಶ ನೀಡಲು ಹೋಗಿ ತಾನು ದಣಿಯಲಾರೆನೆ? ಪ್ರಶ್ನೆಗಳು ಎದುರಾಗಿದ್ದವು. ಅದು ತರ್ಕದ ನಿಲುಕಿಗೆ ಮೀರಿದ್ದು. ಒಳಗಣ್ಣಿಗೆ ಮಾತ್ರ ಸ್ವಷ್ಟವಾಗುವಂಥದ್ದು ಅಂತ ತಿಳಿದಿದ್ದರೂ ಸಹಜೀವಿಗಳ ಬಗ್ಗೆ ಅಮಿತ ಕರುಣೆಯ ಬುದ್ಧ ಯಾರ ಆತ್ಮಗಳು ಸತ್ಯವನ್ನು ಕಾಣಲು ತೆರೆದಿರುತ್ತವೋ ಅಂಥವರಿಗೆ ನಾನು ಹೇಳುವುದು ಅರ್ಥವಾದೀತು ಎಂಬ ನಂಬಿಕೆಯಿಂದ ಜನರಲ್ಲಿ ಆತ್ಮಜ್ಞಾನದ ಬಗ್ಗೆ ಒಲವು ಮೂಡಿಸಿದ.

ಗೌತಮ ‘ಬುದ್ಧ’ನಾಗಿದ್ದು ಕೇವಲ ಸರ್ವಸಂಗ ಪರಿತ್ಯಾಗದಿಂದ ಅಲ್ಲ. ತಾನು ಕಂಡ ಬದುಕಿನ ಸತ್ಯ ದರ್ಶನದಿಂದ. ಯಾವ ಕಷ್ಟಗಳೂ ಅರಿಯದಂತೆ ಬೆಳೆದ ಗೌತಮನಿಗೆ ಅದೊಂದು ಬಾರಿ ಜಗತ್ತಿನ ಪರಿತಾಪಗಳು, ಸಂಕೋಲೆಗಳು ಕಣ್ಣೆದುರು ಬಂದಿದ್ದರಿಂದಲೇ ಅದರ ಮೂಲ ಅರಿಯಲು ಹೊರಟದ್ದು. ಅಂತಿಮವಾಗಿ ‘ಆಸೆಯೇ ದುಃಖಕ್ಕೆ ಮೂಲ’ ಎಂಬುದನ್ನು ಅರಿತದ್ದು. ಹಾಗಂತ, ಬುದ್ಧನಿಗೆ ಹೊರ ಜಗತ್ತಿನ ಸಮಸ್ಯೆಗಳ ಮೂಲ ತಿಳಿದದ್ದು ಹೊರಗಿನಿಂದಲ್ಲ, ಒಳಗಿನಿಂದಲೇ.

ಬುದ್ಧನ ಜ್ಞಾನೋದಯ ಜಗತ್ತಿನ ಒಳಿತಿನ ಚಿಂತನೆಯಲ್ಲಿ ಹುಟ್ಟಿದ್ದು. ಆದರೆ, ಪಾಮರರಾದ ನಮಗೆ ಕೇವಲ ನಮ್ಮ ಒಳಿತಿನ ಬಗೆ ತಿಳಿದರೂ ಸಾಕು. ಅದು ಮಹಾಜ್ಞಾನವಾಗುತ್ತದೆ. ನಮ್ಮ ಮನಸು ಅಪಾರ ಶಕ್ತಿಯ ಆಗರ. ಸಂಕಲ್ಪಿಸಿದ್ದನ್ನು ಸಾಧಿಸಬಲ್ಲ ತಾಕತ್ತನ್ನು ಹೊಂದಿರುವ ಸ್ಫೂರ್ತಿ ಸೆಲೆ. ಅದಕ್ಕೇ ಬುದ್ಧ ಹೇಳಿದ್ದು, ನೋವು ಎಲ್ಲರಿಗೂ ಇರುತ್ತದೆ, ಅದನ್ನು ಅನುಭವವಾಗಿಸಿಕೊಳ್ಳುವುದು, ಯಾತನೆಯಾಗಿಸಿಕೊಳ್ಳುವುದು ಅವರವರಿಗೆ ಬಿಟ್ಟದ್ದು ಅಂತ. ಇನ್ನೊಬ್ಬರಲ್ಲಿತಪ್ಪು ಹುಡುಕುವುದು ತುಂಬ ಸುಲಭ, ನಮ್ಮ ತಪ್ಪು ಸರಿ ಮಾಡಿಕೊಳ್ಳುವುದು ಕಷ್ಟ ಎನ್ನುವ ಬುದ್ಧನ ಮಾತಿನಲ್ಲಿಇನ್ನೊಬ್ಬರಲ್ಲೂನಮ್ಮನ್ನು ಕಾಣುವ ಗುಣವಿದೆ. ‘ನನ್ನನ್ನು ದ್ವೇಷಿಸುವವರನ್ನು ದ್ವೇಷಿಸಲು ನನಗೆ ಸಮಯವಿಲ್ಲ. ಯಾಕೆಂದರೆ, ಹಾಗೆ ಮಾಡುತ್ತಾ ಹೋದರೆ ನನ್ನನ್ನು ಪ್ರೀತಿಸುವವರನ್ನು ಪ್ರೀತಿಸಲು ನನಗೆ ಸಮಯವೇ ಸಿಗುವುದಿಲ್ಲ’ ಎನ್ನುತ್ತಾನೆ ಬುದ್ಧ. ಬುದ್ಧನಾಗಬೇಕೆಂದರೆ ಮನೆ ಬಿಡಬೇಕಿಲ್ಲ, ಅರಳಿ ಮರವೂ ಬೇಕಿಲ್ಲ. ನಮ್ಮನ್ನು ನಾವು, ಇನ್ನೊಬ್ಬರ ನೋವು ಅರ್ಥ ಮಾಡಿಕೊಂಡರಷ್ಟೇ ಸಾಕು.

  • Courtesy: Wikipedia

ಬುದ್ಧನಿಗೆ ಜ್ಞಾನೋದಯವಾದ ದಿನ, ಹುಟ್ಟಿದ ದಿನ ಹಾಗೂ ನಿರ್ವಾಣ ಹೊಂದಿದ ಈ ದಿನವನ್ನೂ ಭಾರತಾದ್ಯಂತ ಬುದ್ಧ ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದನ್ನು ಕೆಲವು ದೇಶಗಳ ಬುದ್ಧನ ಅನುಯಾಯಿಗಳು ಈ ದಿನವನ್ನು ‘ವೆಸಕ’ ಎಂದು ಕರೆಯುತ್ತಾರೆ. ವೆಸೆಕ ಎಂದರೆ ಎಪ್ರಿಲ್‌- ಮೇ ತಿಂಗಳ ಪವಿತ್ರ ದಿನ ಎಂದರ್ಥ.

ಪ್ರಪಂಚದೆಲ್ಲೆಡೆಯೂ ಗೌತಮ ಬುದ್ಧನ ಮಂದಿರಗಳಿವೆ. ಅನೇಕ ದೊಡ್ಡ ದೊಡ್ಡ ಧ್ಯಾನಾಸಕ್ತ ಬುದ್ಧನ ಅನೇಕ ಬಗೆಯ ಮೂರ್ತಿಗಳಿವೆ. ಹಾಂಕಾಂಗ್, ಥಾಯ್ಲೆಂಡ್, ಚೀನಾ, ಬರ್ಮಾ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ಇವತ್ತಿಗೂ ಬುದ್ಧನ ಅನುಯಾಯಿಗಳೇ ಹೆಚ್ಚಾಗಿದ್ದಾರೆ.
ಪ್ರಸ್ತುತ ಕಾಲಘಟ್ಟದಲ್ಲಿ ನಾವುಗಳು ಬುದ್ಧನ ತತ್ವಗಳನ್ನು ಅಚರಿಸಿ ಎಂದು ಹೇಳುವುದಕ್ಕಿಂತ ಮೊದಲು ನಮ್ಮವೊಳಗಿನ ಬುದ್ಧನನ್ನು ಎಚ್ಚರಿಸಬೇಕಿದೆ. ಹಾಗಾದಾಗ ಮಾತ್ರ ಸಮುದಾಯ, ಸಮಾಜ, ಮತ್ತು ದೇಶ ಸಮಾನತೆಯಡೆಗೆ ಸಾಗಲು ಸಾಧ್ಯವಾಗುತ್ತದೆ.


ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: Buddha JayanthiBuddha PoornimaGautama BuddhaindiaWorld
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104  ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104 ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

1 week ago
ಕೆಜಿಎಫ್‌ ಗಣಿಗಳ ಬಳಕೆಯಾಗದ 3,212 ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್

ಕೆಜಿಎಫ್‌ ಗಣಿಗಳ ಬಳಕೆಯಾಗದ 3,212 ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ