• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104 ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

cknewsnow desk by cknewsnow desk
May 26, 2021
in STATE
Reading Time: 1 min read
0
ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ 104  ವರ್ಷದ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ
912
VIEWS
FacebookTwitterWhatsuplinkedinEmail

Lead photo courtesy: Wikipedia

ಪತ್ರಕರ್ತ, ಹೋರಾಟಗಾರ, ಒಳ್ಳೆಯ ವ್ಯಕ್ತಿಯಾಗಿದ್ದ ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು. ಆದರೆ ಸ್ವಾತಂತ್ರ್ಯ ಬಂದ ನಂತರವೂ ಹೋರಾಟದಲ್ಲೇ ಬದುಕು ಸವೆಸಿದ ಧೀಮಂತ ವ್ಯಕ್ತಿ.

ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಕೋವಿಡ್‌ ಹೆಮ್ಮಾರಿಯನ್ನು ಗೆದ್ದು ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿ ಇಡೀ ನಾಡಿನಲ್ಲಿ ವಿದ್ಯುತ್‌ ಸಂಚಾರ ಉಂಟು ಮಾಡಿದ್ದ ಸ್ವಾತಂತ್ರ್ಯ ಹೋರಾಟಗಾರ, ನೂರ ನಾಲ್ಕು ವರ್ಷ ಬಾಳಿ ಬದುಕಿದ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ.

ಕೋವಿಡ್‌ ಚಿಕಿತ್ಸೆ ನಂತರ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದ ದೊರೆಸ್ವಾಮಿ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಕಳೆದ ತಿಂಗಳಷ್ಟೇ ತಮ್ಮ 104ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದ ಅವರು ಇದ್ದಕ್ಕಿದ್ದಂತೆ ಅಗಲಿರುವುದು ಇಡೀ ನಾಡಿಗೆ ದಿಗ್ಭ್ರಮೆ ಉಂಟು ಮಾಡಿದೆ.

ದೊರೆಸ್ವಾಮಿ ಅವರು ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿಯಿಂದ ಆರೋಗ್ಯ ಸ್ವಲ್ಪ ಏರುಪೇರಾಗಿತ್ತು. ಬುಧವಾರ ಬೆಳಗ್ಗೆ ಹೊತ್ತಿಗೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಕರೆದುಕೊಂಡು ಬಂದ ಕೆಲ ಹೊತ್ತಿನಲ್ಲಿಯೇ ದೊರೆಸ್ವಾಮಿ ಅವರಿಗೆ ಹೃದಯಾಘಾತ ಆಗಿದೆ ಎಂದು ಗೊತ್ತಾಗಿದೆ.

ದೊರೆಸ್ವಾಮಿ ನಿಧನದ ಸುದ್ದಿಯನ್ನು ಅವರ ಒಡನಾಡಿಯಾಗಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ತಮ್ಮ ಫೇಸ್​ಬುಕ್ ಪೋಸ್ಟ್​ ಮೂಲಕ ಖಚಿತಪಡಿಸಿದ್ದಾರೆ.

ಪತ್ರಕರ್ತ, ಹೋರಾಟಗಾರ, ಒಳ್ಳೆಯ ವ್ಯಕ್ತಿಯಾಗಿದ್ದ ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು. ಆದರೆ ಸ್ವಾತಂತ್ರ್ಯ ಬಂದ ನಂತರವೂ ಹೋರಾಟದಲ್ಲೇ ಬದುಕು ಸವೆಸಿದ ಧೀಮಂತ ವ್ಯಕ್ತಿ.

ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಎಂದಬುದು ದೊರೆಸ್ವಾಮಿ ಅವರ ಪೂರ್ತಿ ಹೆಸರು. 1918 ಏಪ್ರಿಲ್ 10ರಂದು ಜನಿಸಿದ್ದರು. ಊರು, ಕನಕಪುರ ತಾಲೂಕಿನ ಹಾರೋಹಳ್ಳಿ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರಲ್ಲದೆ, ಬ್ರಿಟಿಷರ ಕಾಲದಲ್ಲಿಯೇ ‘ಪೌರವಾಣಿ’ ವರದಿಗಾರರಾಗಿ ಕೆಲಸ ಮಾಡಿ ಆಂಗ್ಲರ ವಿರುದ್ಧ ವರದಿಗಾರಿಕೆ ಮಾಡಿ ತಮ್ಮ ಎದೆಗಾರಿಕೆ ತೋರಿದ್ದರು. ಸ್ವಾತಂತ್ರ್ಯಪೂರ್ವ ಹಾಗೂ ನಂತರದ ಇಡೀ ದೇಶದ ಇತಿಹಾಸವನ್ನೂ ಆಮೂಲಾಗ್ರವಾಗಿ ಬಲ್ಲವರಾಗಿದ್ದ ಅವರು, ರಾಮಚಂದ್ರ ಗುಹಾ ಅವರಂಥ ಇತಿಹಾಸಕಾರರನ್ನೂ ಪ್ರಭಾವಿಸಿದ್ದರು. ಈ ಕಾರಣಕ್ಕಾಗಿಯೇ ದೊರೆಸ್ವಾಮಿ ಅವರನ್ನು ಕರ್ನಾಟಕದ ಸಾಕ್ಷಿಪ್ರಜ್ಞೆ ಎಂದು ಗುಹಾ ಬಣ್ಣಿಸುತ್ತಿದ್ದರು.

ಎಚ್.ಎಸ್.ದೊರೆಸ್ವಾಮಿ ಕೇವಲ 5 ವರ್ಷದವರಿದ್ದಾಗ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡರು. ಬಳಿಕ ಅವರು ತಮ್ಮ ಅಜ್ಜನ ಆಶ್ರಯದಲ್ಲಿ ಬೆಳದರು. ಪ್ರಾಥಮಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಅವರು ಬೆಂಗಳೂರಿಗೆ ಬಂದರು. ಮಹಾತ್ಮ ಗಾಂಧಿ “ಮೈ ಅರ್ಲಿ ಲೈಫ್” ಪುಸ್ತಕವು ಭಾರತೀಯ ಭಾರತದ ಸ್ವಾತಂತ್ರ್ಯ ದಿನಾಚರಣೆ ಚಳವಳಿಯಲ್ಲಿ ಸೇರಲು ಅವರ ಮೇಲೆ ಗಾಢ ಪ್ರಭಾವ ಬೀರಿತು.

ಕಾಲೇಜು ಶಿಕ್ಷಣದ ಸಮಯದಲ್ಲಿಯೇ ಅವರು ಬೆಂಗಳೂರಿನ ಕಬ್ಬನ್‌ಪೇಟೆ ಬಳಿಯ ಬನಪ್ಪ ಬೃಂದಾವನ ಸ್ವಾತಂತ್ರ್ಯ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು, ಅಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ಸಂದರ್ಭದಲ್ಲಿ ದೊರೆಸ್ವಾಮಿ ಅವರೂ ಪೆಟ್ಟು ತಿಂದಿದ್ದರು.

ತಮ್ಮ ವಿದ್ಯಾಭ್ಯಾಸದ ನಂತರ 1942 ಜೂನ್ ತಿಂಗಳಲ್ಲಿ ಬೆಂಗಳೂರಿನ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ವೃತ್ತಿ ಆರಂಭಿಸಿದರು. ಆದರೆ ಅದೇ ವರ್ಷ ಆಗಸ್ಟ್​ ತಿಂಗಳಲ್ಲಿ ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ಆರಂಭವಾದ ಕ್ವಿಟ್ ಇಂಡಿಯಾ ಚಳವಳಿಗೆ ಧುಮುಕಿದರು.

ತಮ್ಮ ಸಹೋದರ ಎಚ್.ಎಸ್.ಸೀತಾರಾಮ್ ಜತೆಯಲ್ಲಿ ಸರ್ದಾರ್ ವೆಂಕಟರಾಮಯ್ಯ ಮತ್ತು ಎ.ಜಿ.ರಾಮಚಂದ್ರ ರಾವ್ ಅವರು ಬ್ರಿಟೀಷರ ವಿರುದ್ಧ ಒಟ್ಟಿಗೆ ಹೋರಾಟ ನಡೆಸಬೇಕೆಂದು ಯೋಜಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ದಾಖಲೆಗಳನ್ನು ನಾಶ ಮಾಡಲು ಬಳಸಲಾದ ಟೈಮ್ ಬಾಂಬ್‌ ತಯಾರಿಸಲು ಅವರು ತೊಡಗಿದ್ದರು. ಬಳಿಕ ಅವರನ್ನು ಜೈಲಿಗಟ್ಟಲಾಯಿತು. 14 ತಿಂಗಳು ಜೈಲಿನಲ್ಲಿದ್ದಾಗ ಅಹಿಂಸೆ ಮತ್ತು ಸತ್ಯಾಗ್ರಹದ ಗಾಂಧಿಯವರ ಆದರ್ಶಗಳನ್ನು ಅನುಸರಿಸಲು ನಿರ್ಧರಿಸಿದರು.

ಸ್ವಾತಂತ್ರ್ಯಾ ನಂತರವೂ ತಮ್ಮ ಹೋರಾಟಗಳನ್ನು ಮುಂದುವರಿಸಿದ್ದ ದೊರೆಸ್ವಾಮಿ ಅವರು ಸರಕಾರಿ ಭೂ ಒತ್ತುವರಿ ಸೇರಿದಂತೆ ಅನೇಕ ವಿಷಯಗಳ ಕುರಿತು ಹೋರಾಟ ನಡೆಸಿದ್ದರು.

Tags: freedom fighterhs doreswamyhs doreswamy no moreindiaIndian independence movementkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಇನ್ನು ಮುಂದೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ