• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್‌ ಸಿಬ್ಬಂದಿ; ಬ್ರಿಟೀಷ್‌ ಆರೋಗ್ಯ ಇಲಾಖೆ ಜತೆ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ: ಡಿಸಿಎಂ

cknewsnow desk by cknewsnow desk
May 30, 2021
in NEWS IN USE, STATE
Reading Time: 1 min read
0
ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್‌ ಸಿಬ್ಬಂದಿ; ಬ್ರಿಟೀಷ್‌ ಆರೋಗ್ಯ ಇಲಾಖೆ ಜತೆ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ: ಡಿಸಿಎಂ
919
VIEWS
FacebookTwitterWhatsuplinkedinEmail

ವಿಶ್ವ ಕನ್ನಡ ಶುಶ್ರೂಷಕರ ಸಂಘ ಉದ್ಘಾಟಿಸಿದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ

ಬೆಂಗಳೂರು: ಬ್ರಿಟನ್‌ ದೇಶದ ರಾಷ್ಟ್ರೀಯ ಆರೋಗ್ಯ ಇಲಾಖೆ (NHS) ಯಿಂದ 1,000 ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್‌ ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಸಿಂಗ್‌ ಸಿಬ್ಬಂದಿಯನ್ನು ಲಂಡನ್‌ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ವರ್ಚುಯಲ್‌ ವೇದಿಕೆ ಮೂಲಕ ಭಾನುವಾರ ʼವಿಶ್ವ ಕನ್ನಡ ಶುಶ್ರೂಷಕರ ಸಂಘʼದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಈಗಾಗಲೇ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಎನ್‌ಎಚ್‌ಎಸ್‌ ಜತೆ ಒಪ್ಪಂದಕ್ಕೆ ಸಹಿ ಬಿದ್ದಿದೆ. 1,000 ಶುಶ್ರೂಷಕರನ್ನು ಕಳಿಸುವಂತೆ ಅವರು ಕೋರಿದ್ದಾರೆ. ಅದಕ್ಕೆ ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿ ಕೆಲಸ ಮಾಡುವುದಕ್ಕೆ ಅಗತ್ಯವಾದ ಭಾಷೆ, ಸಂವಹನ ಕಲೆ, ಸೇವಾ ಮನೋಭಾವ ಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿ ನೀಡಲಾಗುವುದು” ಎಂದರು.

ಇನ್ನೂ ಹೆಚ್ಚಿನ ನರ್ಸಿಂಗ್‌ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್‌ ಜತೆಗೆ ಇತರೆ ದೇಶಗಳಿಗೂ ನರ್ಸಂಗ್ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ನರ್ಸಿಂಗ್‌ ಸಿಬ್ಬಂದಿಗೆ ಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ, ಅವರ ಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ. ಜತೆಗೆ, ಇದು ದೇಶಾದ್ಯಂತ ಸುಮಾರು 2 ಲಕ್ಷ ನರ್ಸಿಂಗ್‌ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ʼವಿಶ್ವ ಕನ್ನಡ ಶುಶ್ರೂಷಕರ ಸಂಘʼವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಎಂ.ಬಿ.ಪಾಟೀಲ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.‌ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲಕರ್ಣಿ, ಸಂಘದ ಅಧ್ಯಕ್ಷ ತಮ್ಮಣ್ಣ, ಕಾರ್ಯದರ್ಶಿ ನಾಗರಾಜ್‌, ಖಜಾಂಚಿ ಹೇಮೇಗೌಡ ಮುಂತಾದವರು ವಿಶ್ವದ ವಿವಿಧ ದೇಶಗಳಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Tags: dr cn ashashwathnarayankarnatakakarnataka skill developmentnursing staff for united kingdomsri nirmalanandanatha mahaswamiji
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್ ಕಾಲದ ಕಣ್ಣೀರು ಮತ್ತೂ ಮತ್ತೊಮ್ಮೆ ಕಣ್ಮುಂದೆ ಕಾಣಿಸಿಕೊಂಡ ಕಮ್ಯೂನಿಸ್ಟ್‌ ಮ್ಯಾನಿಫೆಸ್ಟೋ ಎಂಬ ದುಡಿಯುವ ಜನರ ದಿವ್ಯಕೃತಿ

ಕೋವಿಡ್ ಕಾಲದ ಕಣ್ಣೀರು ಮತ್ತೂ ಮತ್ತೊಮ್ಮೆ ಕಣ್ಮುಂದೆ ಕಾಣಿಸಿಕೊಂಡ ಕಮ್ಯೂನಿಸ್ಟ್‌ ಮ್ಯಾನಿಫೆಸ್ಟೋ ಎಂಬ ದುಡಿಯುವ ಜನರ ದಿವ್ಯಕೃತಿ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಆದೇಶ: 20,000 ಆಕ್ಸಿಜನ್‌ ಬೆಡ್‌ ವ್ಯವಸ್ಥೆಗೆ ಮುಂದಾದ ರಾಜ್ಯ; ನಿತ್ಯ 37,000 ರೆಮಿಡಿಸಿವಿರ್‌ ಲಭ್ಯ, ಕೋವಿಡ್‌ ರಿಸಲ್ಟ್‌ ತಡವಾದರೆ ಲ್ಯಾಬ್‌ಗಳಿಗೆ ದಂಡ

5 years ago
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!

ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ