• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಕೋವಿಡ್ ಸಂಕಷ್ಟದಿಂದ ಪಾರಾಗಲು ಸರಕಾರದ ಮುಂದೆ ಡಿಮಾಂಡ್‌ಗಳ ಪಟ್ಟಿ ಇಟ್ಟ ಉದ್ಯಮ ಜಗತ್ತು; ಶೀಘ್ರದಲ್ಲಿಯೇ ಪರಿಹಾರ ಎಂದ ಸರಕಾರ

cknewsnow desk by cknewsnow desk
June 2, 2021
in BUSINESS, STATE
Reading Time: 1 min read
0
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

Photo from @ckphotographi

911
VIEWS
FacebookTwitterWhatsuplinkedinEmail

Lead photo from CkPhotography ಸಿಕೆಪಿ@ckphotographi

ತೆರಿಗೆ, ಪರವಾನಗಿ ಮತ್ತು ವಿದ್ಯುತ್‌ ಶುಲ್ಕ ವಿನಾಯಿತಿ & ಲಸಿಕೆಗೆ ಬೇಡಿಕೆ ಇಟ್ಟ ಉದ್ಯಮ: ಉದ್ಯಮದ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ: ಮುಖ್ಯ ಕಾರ್ಯದರ್ಶಿ

ಬೆಂಗಳೂರು: ಕೊವಿಡ್‌ ಎರಡನೇ ಅಲೆ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಉದ್ಯಮ ವಲಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಸರಕಾರ ಶೀಘ್ರ ನಿರ್ಧಾರ ಕೈಗೊಳ್ಳಲಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದ್ದಾರೆ.

ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಲಾಕ್‌ಡೌನ್‌ ನಂತರದ ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಬಗ್ಗೆ ಉದ್ಯಮ ವಲಯದೊಂದಿಗೆ ಬುಧವಾರ ನಡೆಸಿದ ವರ್ಚುವಲ್ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಉದ್ಯಮಗಳು ಎದುರಿಸುತ್ತಿರುವ ಸಂಕಷ್ಟ ಹಾಗೂ ಕೈಗೊಳ್ಳಬಹುದಾದ ಪರಿಹಾರಗಳ ಕುರಿತು ಕೈಗಾರಿಕೋದ್ಯಮಿಗಳು ಹಾಗೂ ನಾನಾ ವಾಣಿಜ್ಯ ಸಂಘಗಳ ಪದಾಧಿಕಾರಿಗಳು ನೀಡಿದ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಉದ್ಯಮಿಗಳು ಮುಂದಿಟ್ಟ ಬೇಡಿಕೆಗಳು ಸಮಂಜಸವಾಗಿದ್ದು. ಎಲ್ಲವೂ ಆರ್ಥಿಕ ನೆರವನ್ನು ಬೇಡುತ್ತಿಲ್ಲ. ಉದ್ಯಮಿಗಳ ಮನವಿಯನ್ನು ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕೈಗಾರಿಕೆಗಳ ಪುನಾರಂಭ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು ಅವರು.

“ಮೇ ತಿಂಗಳಲ್ಲಿ ಸೋಂಕಿನ ತೀವ್ರತೆ ಹೆಚ್ಚಿತ್ತು. ಕೊವಿಡ್‌-19 ಎರಡನೇ ಅಲೆಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಅನುಷ್ಠಾನಗೊಳಿಸಲಾಗಿತ್ತು. ಇನ್ನು ಹಂತ ಹಂತವಾಗಿ ಲಾಕ್‌ಡೌನ್‌ ತೆರವುಗೊಳಿಸಿ, ಕೈಗಾರಿಕೆಗಳ ಕಾರ್ಯಚರಣೆಗೆ ಅನುವು ಮಾಡಿಕೊಡಬಹುದು. ಆರ್ಥಿಕತೆಯ ಪುನಾರಂಭಿಸಲು ಸಮಯ ಬಂದಿದೆ ಎಂದು ಅವರು ತಿಳಿಸಿದರು.

ಕೊವಿಡ್‌ ಎರಡನೇ ಅಲೆ ಎದುರಿಸಲು ಸರಕಾರದ ಜತೆಗೆ ಕೈ ಜೋಡಿಸಿರುವ ಕೈಗಾರಿಕೆಗಳು, ವಾಣಿಜ್ಯ ಸಂಘಟನೆಗಳಿಗೆ ಧನ್ಯವಾದ ಹೇಳಿದ ಮುಖ್ಯ ಕಾರ್ಯದರ್ಶಿ ಅವರು, “ಎಲ್ಲ ಕೈಗಾರಿಕೆಗಳು ಸಹಕಾರ ನೀಡಿವೆ. ಆಹಾರ, ಔಷಧ ವಿತರಣೆ, ಆಕ್ಸಿಜನ್‌ ಪೂರೈಕೆ, ಅಗತ್ಯ ವಸ್ತುಗಳ ಪೂರೈಕೆ, ಪೂರೈಕೆ ಸರಪಳಿಗೆ ಧಕ್ಕೆ ಆಗದಂತೆ ಉದ್ಯಮಗಳು ಕಾರ್ಯನಿರ್ವಹಿಸಿವೆ. ಮೂರನೇ ಅಲೆಯನ್ನ ಸಮರ್ಥವಾಗಿ ಎದುರಿಸಲು ಸರಕಾರ ಹಗಲಿರುಳು ಶ್ರಮಿಸುತ್ತಿದೆ. ಅದಕ್ಕೂ ಉದ್ಯಮಗಳ ಸಹಕಾರ ಬೇಕು” ಎಂದರು.

ಉದ್ಯಮಗಳು ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು

  • ಸಣ್ಣ, ಅತಿಸಣ್ಣ ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಫ್ರಂಟ್‌ಲೈನ್‌ ಕಾರ್ಯಕರ್ತರೆಂದು ಪರಿಗಣಿಸಿ ಲಸಿಕೆ ನೀಡಬೇಕು.
  • ಬಾರ್‌ ಮತ್ತು ರೆಸ್ಟೋರೆಂಟ್‌ಗಳು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲವಾದ ಕಾರಣ ಮಾಸಿಕ ಪರವಾನಗಿ ಶುಲ್ಕ (75,000 ರೂ.) ಪಾವತಿಗೆ ವಿನಾಯಿತಿ ನೀಡಬೇಕು.
  • ಬೆಸ್ಕಾಂ ಶುಲ್ಕ, ಕನಿಷ್ಠ ವಿದ್ಯುತ್‌ ಶುಲ್ಕ ಪಾವತಿಗೆ ವಿನಾಯಿತಿ.
  • ಗುಜರಾತ್‌, ಮಾಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿರುವ ಪ್ರಮುಖ ಉದ್ಯಮಗಳಿಗೆ ಅಗತ್ಯ ಉತ್ಪನ್ನಗಳ ಪೂರೈಕೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪೂರೈಕೆ ಸರಪಳಿಗೆ ತೊಂದರೆ ಆಗದಂತೆ ಉದ್ಯಮಗಳು ಪುನಾರಂಭಕ್ಕೆ ಸಹಕರಿಸಬೇಕು.
  • ನಗರ ಪ್ರದೇಶಗಳಲ್ಲಿರುವ ನರೇಗಾ ಯೋಜನೆ ಜಾರಿ.
  • ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ಕಲ್ಪಿಸಬೇಕು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ.ರಾಜ್‌ ಕುಮಾರ್‌ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಮುಖ್ಯಮಂತ್ರಿಗಳ ಕಾರ್ಯನೀತಿ ಸಲಹೆಗಾರ ಪ್ರಶಾಂತ್‌ ಪ್ರಕಾಶ್, ಉದ್ಯಮಿ ಟಿ.ಎ.ಮೋಹನ್ ‌ದಾಸ್‌ ಪೈ, ಫಿಕ್ಕಿ ಅಧ್ಯಕ್ಷ ಉಲ್ಲಾಸ್‌ ಕಾಮತ್‌, ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಲ್ ಸುಂದರ್‌, ಉಪಾಧ್ಯಕ್ಷ ಐ.ಎಸ್.ಪ್ರಸಾದ್, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ, ಆಟೋಮೊಬೈಲ್‌ ಅಸೋಸಿಯೇಷನ್‌ ಅಧ್ಯಕ್ಷ ಎಂ.ಪಿ.ಶ್ಯಾಮ್‌, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್‌, ಐಟಿ ವಲಯದ ಪ್ರತಿನಿಧಿ ಪ್ರಹ್ಲಾದ್‌, ಅಸೋಚಾಂನ ಬಿ.ವಿ.ನಾಯ್ಡು,  ಪ್ರವಾಸೋದ್ಯಮ ವಲಯದ ಪ್ರತಿನಿಧಿ ಶ್ಯಾಮರಾಜು, ಜವಳಿ ಉದ್ದಿಮೆ ವಲಯದ ಅಧ್ಯಕ್ಷ ಆನಂದ್‌, ರಿಯಲ್‌ಎಸ್ಟೇಟ್‌ ಉದ್ಯಮ ಸಂಘದ ಗೋವಿಂದರಾಜ್‌ ಮುಂತಾದವರು ಉಪಸ್ಥಿತಿರಿದ್ದರು.

Tags: Bengalurucovid19fkccikarnataka fights coronakarnataka industries demands reopen
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಂಬಿದರೆ ನಂಬಿ, ಬಿಟ್ಟರೆ ಬಿಡಿ: ನಮ್ಮ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಹೆಚ್ಚುವರಿ ಪವರ್ ಸೇಲ್ ಮಾಡಿ ಎಂದು ಸೂಚಿಸಿದ ಮುಖ್ಯಮಂತ್ರಿ

ನಂಬಿದರೆ ನಂಬಿ, ಬಿಟ್ಟರೆ ಬಿಡಿ: ನಮ್ಮ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಹೆಚ್ಚುವರಿ ಪವರ್ ಸೇಲ್ ಮಾಡಿ ಎಂದು ಸೂಚಿಸಿದ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ