• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಆರೋಪ; ಮತ್ತೊಬ್ಬ ಐಎಎಸ್ ಅಧಿಕಾರಿ ಶಿಲ್ಪಾ ನಾಗ್‌ ರಾಜೀನಾಮೆ

cknewsnow desk by cknewsnow desk
June 3, 2021
in NEWS & VIEWS, STATE
Reading Time: 1 min read
0
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಆರೋಪ; ಮತ್ತೊಬ್ಬ ಐಎಎಸ್ ಅಧಿಕಾರಿ ಶಿಲ್ಪಾ ನಾಗ್‌ ರಾಜೀನಾಮೆ
922
VIEWS
FacebookTwitterWhatsuplinkedinEmail
  • ಮೇಲಿನ ಚಿತ್ರಗಳು: ಶಿಲ್ಪಾ ನಾಗ್‌ & ರೋಹಿಣಿ ಸಿಂಧೂರಿ

ಮೈಸೂರು ನಗರ ಪಾಲಿಕೆ ಆಯುಕ್ತೆ ಹುದ್ದೆ ಮತ್ತು ಭಾರತೀಯ ಆಡಳಿತಾತ್ಮಕ ಸೇವೆ ಎರಡನ್ನೂ ತ್ಯಜಿಸಿ ಸರಕಾರಕ್ಕೆ ಪತ್ರ ಬರೆದ ಶಿಲ್ಪಾ ನಾಗ್‌

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಾನಗರ ಪಾಲಿಕೆ ಆಯುಕ್ಕೆ ತಮ್ಮ ಹುದ್ದೆ ಹಾಗೂ ಸರಕಾರಿ ಸೇವೆಗೆ ಶಿಲ್ಪಾ ನಾಗ್ ಅವರು ರಾಜೀನಾಮೆ ನೀಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿರುವ ಶಿಲ್ಪಾ ನಾಗ್, ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು ಎಂದಿದ್ದಾರಲ್ಲದೆ, ರಾಜ್ಯದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಶಿಲ್ಪಾ ನಾಗ್‌ ಅವರ ರಾಜೀನಾಮೆ ನಿರ್ಧಾರ ಹೊರಬೀಳುತ್ತಿದ್ದಂತೆ ಮೈಸೂರು ಜಿಲ್ಲೆಯ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಲಯದಲ್ಲಿ ತೀವ್ರ ಕಂಪನ ಉಂಟಾಗಿದೆ.

ಇನ್ನೊಂದೆಡೆ, ಜಿಲ್ಲಾಧಿಕಾರಿ ವಿರುದ್ಧ ಮೈಸೂರು ಸಂಸದರು, ಕೆಲ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ರಚ್ಚೆಗೆ ಬಿದ್ದವರಂತೆ ಟೀಕಾ ಪ್ರಹಾರ ನಡೆಸುತ್ತಿರುವ ಬೆನ್ನಲ್ಲಿಯೇ ಇದೀಗ ಪಾಲಿಕೆ ಆಯುಕ್ತರ ರಾಜೀನಾಮೆ ಬಾಂಬ್‌ ಜಿಲ್ಲೆ ಮಾತ್ರವಲ್ಲ, ಇಡೀ ಜಿಲ್ಲೆಯಲ್ಲಿ ಡೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ.

ಮತ್ತೊಂದೆಡೆ, ಜಿಲ್ಲೆಯಲ್ಲಿ ವಿಪರೀತವಾಗಿರುವ ಭೂ ಮಾಫಿಯಾ ಬುಡಕ್ಕೆ ಕೈಹಾಕಿದ್ದೇ ರೋಹಿಣಿ ಸಿಂಧೂರಿ ಅವರಿಗೆ ಕಂಟಕವಾಯಿತಾ? ಶಿಲ್ಪಾ ನಾಗ್‌ ರಾಜೀನಾಮೆ ಇದೊಂದು ಭಾಗವಾ? ಎಂಬ ಪ್ರಶ್ನೆಯೂ ಜನರನ್ನು ಕಾಡುತ್ತಿದೆ. ಅಲ್ಲದೆ, ಕೆಲವರ ಹಿತಾಸಕ್ತಿಗೆ ಪೂರಕವಾಗಿದ್ದ ಹದಿನಾರು ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಜಿಲ್ಲಾಧಿಕಾರಿ ಮುಚ್ಚಿಸಿದ್ದರು. ಈ ಬಗ್ಗೆ ಆಡಳಿತ ಪಕ್ಷದ ಶಾಸಕ ರಾಮದಾಸ್‌ ಅವರಿಂದ ತನಿಖೆ ಮಾಡಿಸಿ ವರದಿ ಪಡೆದಿದ್ದರು.

ಜತೆಗೆ, 2016ರಲ್ಲಿ ನಡೆದ ಭೂ ಹಗರಣವೊಂದು ಜಿಲ್ಲಾಧಿಕಾರಿ ವಿರುದ್ಧ ಕೆಲವರು ಗರಂ ಆಗಲು ಕಾರಣ ಎನ್ನಲಾಗುತ್ತಿದೆ. ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದಿದೆ ಎನ್ನಲಾದ ಭೂ ಅಕ್ರಮಗಳ ವಿರುದ್ಧ ಅವರು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಕಾರಣಕ್ಕೆ ರೋಹಿಣಿ ಸಿಂಧೂರಿ ಟಾರ್ಗೆಟ್‌ ಆಗುತ್ತಿದ್ದಾರೆ ಎಂದು ಹೇಳಲಾಗಿದೆ.

ಶಿಲ್ಪಾ ನಾಗ್‌ ಹೇಳಿದ್ದೇನು?

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಲ್ಪಾ ನಾಗ್ ಅವರು, “ಓರ್ವ ಐಎಎಸ್ ಅಧಿಕಾರಿಗೆ ಮತ್ತೊಬ್ಬ ಐಎಎಸ್ ಅಧಿಕಾರಿಯಿಂದ ಕಿರುಕುಳ ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸಿಎಸ್ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಮಾಹಿತಿ ನೀಡಿದರು.

ಕೋವಿಡ್ ಸಮಯದಲ್ಲಿ ಎಷ್ಟೇ ಕಷ್ಟಪಟ್ಟು ಕೆಲಸ ನಿವರ್ವಹಿಸುತ್ತಿದ್ದರೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಿರುಕುಳದಿಂದ ಕೆಲಸ ಮಾಡಲು ಆಸಕ್ತಿಯೇ ಇಲ್ಲದಂತಾಗಿದೆ. ಇಂತಹ ಡಿಸಿ ಯಾರಿಗೂ ಸಿಗುವುದು ಬೇಡ ಎಂದು ಸುದ್ದಿಗೋಷ್ಠಿಯಲ್ಲಿ ಅಳಲು ತೋಡಿಕೊಂಡರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಂದ ಭಾವೋದ್ವೇಗಕ್ಕೆ ಒಳಗಾದ ಶಿಲ್ಪಾ ನಾಗ್ ಅವರು, ನನಗೆ ಕೆಲಸ ಮಾಡಲಾಗುತ್ತಿಲ್ಲ. ಅದಕ್ಕಾಗಿಯೇ ರಾಜಿನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡರು.

ಯಾವುದೇ ಜಿಲ್ಲೆಗೆ ಇಂತಹ ಜಿಲ್ಲಾಧಿಕಾರಿ ಬರಬಾರದು. ಉಸಿರುಗಟ್ಟುವ ವಾತಾವರಣದಲ್ಲಿ ಕೆಲಸ ಮಾಡುವುದಕ್ಕೆ ಆಗ್ತಿಲ್ಲ. ಜಿಲ್ಲಾಧಿಕಾರಿಗಳಿಗೆ ನನ್ನ ಬಗ್ಗೆ ವೈಯಕ್ತಿಕ ದ್ವೇಷ ಇದ್ದರೇ ದ್ವೇಷ ಮಾಡಲಿ. ಅದನ್ನು ಬಿಟ್ಟು ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಮೇಲೆ ಅಧಿಕಾರ ಚಲಾಯಿಸುತ್ತಿದ್ದಾರೆ. ಕೋವಿಡ್-19 ಮಿತ್ರ ನನ್ನದು ಅಂತ ಪ್ರಧಾನಿ ಅವರ ಬಳಿ ಹೆಸರು ತೆಗೆದುಕೊಂಡಿದ್ದಾರೆ. ಆ ಜಾತಿ ಈ ಜಾತಿ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನನ್ನ ಮನಸ್ಸಿಗೆ ತುಂಬ ನೋವಾಗಿದೆ. ನಾನು ನನ್ನ ಕೆಲಸಕ್ಕೆ ರಿಸೈನ್ ಮಾಡ್ತೀದ್ದೀನಿ ಎಂದು ಪಾಲಿಕೆ ಆಯುಕ್ತೆ ಕಣ್ಣೀರು ಹಾಕಿದರು.

ರಾಜೀನಾಮೆ ಅಂಗೀಕರಿಸಲ್ಲ ಎಂದ ಉಸ್ತುವಾರಿ ಸಚಿವ

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ದಕ್ಷತೆಯಿಂದ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ. ಶಿಲ್ಪಾ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

ಇದೇ ವೇಳೆ ಇಡೀ ಬೆಳವಣಿಗೆ ಬಗ್ಗೆ ತೀವ್ತ ಆಘಾತ ವ್ಯಕ್ತಪಡಿಸಿರು ಹಿರಿಯ ಶಾಸಕ ರಾಮದಾಸ್‌ ತೀವ್ರ ಆಘಾತ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಮೈಸೂರು ನಗರಪಾಲಿಕಾ ಆಯುಕ್ತರಾದ ಶಿಲ್ಪಾ ನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು. ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೆ, ಟೆಲಿ ಮೆಡಿಸಿನ್ ನಂತಹ ಎಲ್ಲಾ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು.

ಮೈಸೂರು ನಗರಪಾಲಿಕಾ ಆಯುಕ್ತರಾದ ಶಿಲ್ಪಾ ನಾಗ್ ಅವರು ರಾಜೀನಾಮೆ ಕೊಟ್ಟಿದ್ದಾರೆ ಎನ್ನುವ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ಹಾಗೂ ಬೇಸರವಾಯಿತು.

ಮೈಸೂರಿನಲ್ಲಿ ಕೋವಿಡ್ ಮಿತ್ರ, ಮನೆ ಮನೆ ಸರ್ವೆ, ಟೆಲಿ ಮೆಡಿಸಿನ್ ನಂತಹ ಎಲ್ಲಾ ಮಹತ್ತರವಾದ ಕೋವಿಡ್ ಗೆ ಸಂಬಂಧಿಸಿದ ಯೋಜನೆಗಳನ್ನು ತಂದವರು ಇವರು.@PMOIndia @narendramodi
1/3

— S A Ramadass ( Modi ka Parivar ) (@ramadassmysuru) June 3, 2021
Tags: covid19 crisissfight between two ias officersias officer shilpa nag resignkarnatakamysorerohini sindhuri iasshilpa nag
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಕೋವಿಡ್ 2ನೇ ಅಲೆ ಲಾಕ್ಡೌನ್: ಪುನಾ 500 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ, ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ