• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ 2ನೇ ಅಲೆ ಲಾಕ್ಡೌನ್: ಪುನಾ 500 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ, ಯಾರಿಗೆ ಎಷ್ಟೆಷ್ಟು ಪರಿಹಾರ? ಇಲ್ಲಿದೆ ವಿವರ

cknewsnow desk by cknewsnow desk
June 3, 2021
in COVID-19, STATE
Reading Time: 2 mins read
0
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!
916
VIEWS
FacebookTwitterWhatsuplinkedinEmail

ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್‌ ಮುಂದುವರಿಕೆ / ಯಾವುದಕ್ಕೂ ಸಡಿಲಿಕೆ ಇಲ್ಲ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ ಇನ್ನೂ ಒಂದು ವಾರ ಕಾಲ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ಈ ನಿಯಮಗಳು ಜಾರಿಯಲ್ಲಿರುತ್ತವೆ ಎಂದಿರುವ ಅವರು, ಈ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಅಥವಾ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಅವರು. ಹೊಟೆಲ್ʼಗಳಿಂದ ಪಾರ್ಸೆಲ್‌ ಪಡೆಯಬಹುದು ಹಾಗೂ ರಫ್ತು ಆಧಾರಿತ ಕೈಗಾರಿಕಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದರು.

ಕೋವಿಡ್-19 ಸಾಂಕ್ರಾಮಿಕದ 2ನೇ ಅಲೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಸಮಾಜದ ಹಲವು ವರ್ಗಗಳ ಜನರಿಗೆ ನೆರವಾಗಲು, ಮುಖ್ಯಮಂತ್ರಿ ಶ್ರೀ @BSYBJP ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಘೋಷಿಸಿದ ಪರಿಹಾರದ 2ನೇ ಪ್ಯಾಕೇಜ್ ನ ಪ್ರಮುಖಾಂಶಗಳು;#KarnatakaFightsCorona #Unite2FightCorona pic.twitter.com/vv0rMaCkbh

— CM of Karnataka (@CMofKarnataka) June 3, 2021

500 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ವಿವರ

ವಿವಿಧ ವಲಯಗಳಿಗೆ ಹೊಸದಾಗಿ 500 ಕೋಟಿ ರೂ. ಮೊತ್ತದ ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ.

  • ಅನುದಾನರಹಿತ ಶಿಕ್ಷಕರು: 5,000 ರೂ.
  • ಖಾಸಗಿ ಶಿಕ್ಷಕರು: 5,000 ರೂ.
  • ಮೀನುಗಾರರು: 3,000 ರೂ. 
  • ಪವರ್ ಲೂಮ್ ನೇಕಾರರು: 3,000 ರೂ.
  • ಅಂಗನವಾಡಿ ಸಹಾಯಕರು: 2,000 ರೂ.
  • ಆಶಾ ಕಾರ್ಯಕರ್ತೆಯರು: 3,000 ರೂ.
  • ಮುಜರಾಯಿ ಇಲಾಖೆ ದೇಗುಲಗಳ ಅರ್ಚಕರು: 3,000 ರೂ. 
  • ’ಸಿ’ ವರ್ಗದ ಮುಜರಾಯಿ ಇಲಾಖೆ ಅಡುಗೆ ಭಟ್ಟರು: 3,000 ರೂ.
  • ಇಮಾಮ್ & ಮೌಲ್ವಿಗಳು: 3,000 ರೂ.
  • ಸಿನಿಮಾ ಕಾರ್ಮಿಕರು: 3,000 ರೂ.
  • ಕಿರುತೆರೆ ಕಲಾವಿದರು: 3,000 ರೂ.

1. ಪವರ್ ಲೂಮ್ ನೇಕಾರರು

ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ ರೂ 3,000ದಂತೆ ಪರಿಹಾರ. ಇದರಿಂದ ಸುಮಾರು 59 ಸಾವಿರ ಪವರ್ ಲೂಮ್‍ಗಳಿಗೆ 35 ಕೋಟಿ ರೂ. ವೆಚ್ಚ.

2. ಚಲನಚಿತ್ರ & ದೂರದರ್ಶನ ಮಾಧ್ಯಮದ ಅಸಂಘಟಿತ ಕಾರ್ಮಿಕರು

ಚಲನಚಿತ್ರೋದ್ಯಮ ಹಾಗೂ ದೂರದರ್ಶನ ಮಾಧ್ಯಮದಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ (ಕಲಾವಿದರು, ತಂತ್ರಜ್ಞರು) ತಲಾ ರೂ.3,000 ದಂತೆ ಪರಿಹಾರ. ಇದರಿಂದ ಸುಮಾರು 22 ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದ್ದು ರೂ 6.6 ಕೋಟಿ ವೆಚ್ಚ.

3. ಮೀನುಗಾರರಿಗೆ ಪರಿಹಾರ

ಭಾರತ ಸರಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿದ 18,746 ಮೀನುಗಾರರಿಗೆ ತಲಾ ರೂ 3000 ಗಳ ಪರಿಹಾರ. ಇದರಿಂದ ರೂ 5.6 ಕೋಟಿ ವೆಚ್ಚ.

ಇದಲ್ಲದೆ ಒಟ್ಟು 7,668 ಇನ್‍ಲ್ಯಾಂಡ್ ದೋಣಿ ಮಾಲಿಕರಿಗೆ ತಲಾ ರೂ 3,000 ರಂತೆ ಪರಿಹಾರ ನೀಡಲು ನಿರ್ಧಾರ. ಇದರಿಂದ ರೂ. 2.3 ಕೋಟಿ ವೆಚ್ಚ. ಇದಲ್ಲದೆ ಮೀನುಗಾರರ ಸಂಘಗಳಿಂದ ಒಳನಾಡು ಮೀನುಗಾರಿಗೆಕೆ ಸರಕಾರಕ್ಕೆ ನೀಡಬೇಕಾಗಿರುವ ಕಾಂಟ್ರಾಕ್ಟ್ ಫೀಸ್‍ನಲ್ಲಿ ಶೇ.25 ರೀಯಾಯಿತಿ.

4. ಮುಜರಾಯಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ

ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಅರ್ಚಕರು, ಅಡಿಗೆ ಕೆಲಸಗಾರರು ಮತ್ತು ಸಿಬ್ಬಂದಿಗಳಿಗೆ ತಲಾ ರೂ. 3,000 ಗಳನ್ನು ನೀಡಲು ನಿರ್ಧಾರ. ಈ ವರ್ಗದಲ್ಲಿ ಸುಮಾರು 36,047 ಜನರಿದ್ದು ಇದರಿಂದ ರೂ 10.8 ಕೋಟಿ ವೆಚ್ಚ.

5. ಮಸೀದಿಗಳಲ್ಲಿ ಕಾರ್ಯ ನಿರ್ವಹಿಸುವ ಪೇಶ್ ಇಮಾಮ್ ಮತ್ತು ಫೌಜಿಂ ಗಳಿಗೆ ತಲಾ 3,000 ರೂ. ನೆರವು.

6. ಆಶಾ ಕಾರ್ಯಕರ್ತೆಯರು

ಆಶಾ ಕಾರ್ಯಕರ್ತೆಯರು ಕೋವಿಡ್-19ನ ಸೋಂಕನ್ನು ತಡೆಯಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ವರ್ಗದವರಿಗೆ ಸಹಾಯ ಮಾಡುವುದು ಸರಕಾರದ ಕರ್ತವ್ಯ. ಸರಕಾರವು ಕೋವಿಡ್-19 ತಡೆಗಟ್ಟುವಲ್ಲಿ ಫ್ರಂಟ್ʼಲೈನ್ ವಾರಿಯರ್ಸ್ ಆದ ಆಶಾ ಕಾರ್ಯಕರ್ತರಿಗೆ ತಲಾ ರೂ. 3,000 ಪರಿಹಾರ ನೀಡಲು ನಿರ್ಧರಿಸಿದೆ. ಇದರಿಂದ ಒಟ್ಟು 42,574 ಆಶಾ ಕಾರ್ಯಕರ್ತರಿಗೆ ಸಹಾಯವಾಗಲಿದ್ದು ಅಂದಾಜು ರೂ. 12.75 ಕೋಟಿ ವೆಚ್ಚವಾಗಲಿದೆ.

7. ಅಂಗನವಾಡಿ ಕಾರ್ಯಕರ್ತೆಯರು

64,423 ಅಂಗನವಾಡಿಯ ಕಾರ್ಯಕರ್ತರು ಹಾಗೂ 59,169 ಅಂಗನವಾಡಿ ಸಹಾಯಕರಿಗೆ ತಲಾ ರೂ. 2,000 ಗಳಂತೆ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಅಂದಾಜು ರೂ 24.7 ಕೋಟಿ ವೆಚ್ಚವಾಗಲಿದೆ.

8. ಶಾಲಾ ಮಕ್ಕಳಿಗೆ ಹಾಲಿನ ಪುಡಿ

ಈ ಸಮಯದಲ್ಲಿ ಹಾಲಿನ ಬೇಡಿಕೆ ಕಡಿಮೆಯಾಗಿದ್ದು ಹೈನು ಉದ್ಯಮದಲ್ಲಿ ತೊಡಗಿಸಿಕೊಂಡ ರೈತರಿಗೆ ಸಮಸ್ಯೆಯಾಗದಂತೆ ಹೆಚ್ಚುವರಿ ಹಾಲಿನಿಂದ ಪುಡಿ ತಯಾರಿಸಲು ನಿರ್ಧರಿಸಲಾಗಿದೆ. ಎಲ್ಲಾ ಶಾಲೆಗಳು ಕಠಿಣ ನಿರ್ಬಂಧಗಳ ಹಿನ್ನೆಲೆಯಲ್ಲಿ ಮುಚ್ಚಿದ್ದರೂ ಆಹಾರ ಧಾನ್ಯಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಆಹಾರ ಧಾನ್ಯಗಳ ಜೊತೆಗೆ ಅರ್ಧ ಕೆ.ಜಿ ಹಾಲಿನ ಪುಡಿಯನ್ನು ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಅಂದಾಜು ರೂ 100 ಕೋಟಿ ವೆಚ್ಚವಾಗಲಿದೆ.

9. ಅನುದಾನ ರಹಿತ ಶಾಲೆಗಳ ಶಿಕ್ಷಕರು

ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5,000 ರೂ. ಪರಿಹಾರ ನೀಡಲಾಗುವುದು. ಇದಕ್ಕಾಗಿ ಸುಮಾರು 100 ಕೋಟಿ ರೂ. ವೆಚ್ಚವಾಗಲಿದೆ.

10. ನ್ಯಾಯವಾದಿಗಳಿಗೆ ಪರಿಹಾರ

ನ್ಯಾಯವಾದಿಗಳ ಕಲ್ಯಾಣ ನಿಧಿಗೆ ರೂ 5 ಕೋಟಿ ನೀಡಲು ತೀರ್ಮಾನಿಸಲಾಗಿದೆ. ಈ ನಿಧಿಯನ್ನು ಅಗತ್ಯವಿರುವ ನ್ಯಾಯವಾದಿಗಳು ಮತ್ತು ಬೆಂಚ್ ಗುಮಾಸ್ತರುಗಳಿಗೆ ಉಪಯೋಗಿಸಲಾಗುವುದು.

11. ಕೈಗಾರಿಕೆಗಳಿಗೆ ಪರಿಹಾರ

MSME ಕೈಗಾರಿಕೆಗಳಿಗೆ ಮೇ ಮತ್ತು ಜೂನ್ 2021ರ ಮಾಹೆಗಳ ಮಾಸಿಕ ವಿದ್ಯುತ್ ನಿಗಧಿತ ಶುಲ್ಕಗಳನ್ನು (Fixed charges) ಪಾವತಿಸುವುದರಿಂದ ವಿನಾಯಿತಿಯನ್ನು ನೀಡಲಾಗುವುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ರೂ .114.70 ಕೋಟಿ ಹೆರೆಯಾಗುತ್ತದೆಂದು ಅಂದಾಜಿಸಿದೆ. MSME ಕೈಗಾರಿಕೆಗಳನ್ನು ಹೊರತುಪಡಿಸಿ ಇತರೆ ಕೈಗಾರಿಕೆಗಳ ಗ್ರಾಹಕರು ಮೇ ಮತ್ತು ಜೂನ್ 2021ರ ಮಾಹೆಗಳ ಮಾಸಿಕ ವಿದ್ಯುತ್ ನಿಗಧಿತ ಶುಲ್ಕ ಪಾವತಿಸುವುದನ್ನು ದಿನಾಂಕ: 30-7-2021 ರವರೆಗೆ ಮುಂದೂಡಲಾಗುವುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ರೂ 5.56 ಕೋಟಿ ಹೊರೆಯಾಗುತ್ತದೆಂದು ಅಂದಾಜಿಸಿದೆ. ಈ ಎರಡು ಕ್ರಮಗಳಿಂದ ಸುಮಾರು 3 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ.

Tags: 500 crorebs yediyurappacovid19 second wavekarnatakakarnataka covid19 packagelockdown
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಡಿನಾಡಿನಲ್ಲಿ ಸುರಿದ ವರ್ಷಧಾರೆ:  ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

ಗಡಿನಾಡಿನಲ್ಲಿ ಸುರಿದ ವರ್ಷಧಾರೆ: ಬಾಗೇಪಲ್ಲಿ ತಾಲೂಕಿನ ಬರಡುಬೆಟ್ಟದಲ್ಲಿ ಸೃಷ್ಟಿಯಾದ ಕೊಡಗಿನ ʼಅಬ್ಬಿʼಯಂಥ ಭವ್ಯ ಜಲಪಾತ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ