• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

At least, ಇವತ್ತಾದರೂ ಪಣ ತೊಡೋಣ

cknewsnow desk by cknewsnow desk
June 6, 2021
in GUEST COLUMN, STATE, WORLD
Reading Time: 2 mins read
0
At least, ಇವತ್ತಾದರೂ ಪಣ ತೊಡೋಣ
921
VIEWS
FacebookTwitterWhatsuplinkedinEmail

ಇಂದು ವಿಶ್ವ ಪರಿಸರ ದಿನಾಚರಣೆ. ವರ್ಷಕ್ಕೊಮ್ಮೆ ತಪ್ಪದೇ ಬರುವ ಒಂದು ದಿನ. ಹಾಗೆಂದು ಸುಮ್ಮನಿರುವುದೇ? ಪರಿಸರವನ್ನು ರಕ್ಷಿಸಿಕೊಳ್ಳಬೇಕಾದ ಅಗತ್ಯ ಹಿಂದೆಂದಿಗಿಂತ ಈಗ ಹೆಚ್ಚಾಗಿ. ಕೋವಿಡ್‌ ಮಾರಿಯ ಹಿನ್ನೆಲೆಯೊಳಗೆ ನೋಡಿದರೆ ಇದು ಸತ್ಯ. ಈ ದಿಸೆಯಲ್ಲಿ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್ ರಾವ್ ಹವಾಲ್ದಾರ್ ಅವರ ಅರ್ಥಪೂರ್ಣ ಬರಹವಿದು.

Photos by CkPhotography ಸಿಕೆಪಿ @ckphotographi

ಪರಿಸರ ಸಂರಕ್ಷಣೆಗೆ ಪಣ ತೊಡುವ ಉದ್ದೇಶದಿಂದ 1973 ಜೂನ್ 05 ರಿ೦ದ 16 ರವರೆಗೆ ಸ್ವೀಡನ್ʼನ ಸ್ಟಾಕ್‌ ಹೋಂನಲ್ಲಿ ನಡೆದ ವಿಶ್ವಸಂಸ್ಥೆಯ (UN) ಮಾನವ ಪರಿಸರದ (Human Environment) ಸಭೆಯ ಪರಿಣಾಮವಾಗಿ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (ಯುನೆಪ್-ಯು.ಎನ್.ಈ.ಪಿ.) (United Nations Environment Programmes-UNEP) – ಸಹ ಅಂಗಸಂಸ್ಥೆಯನ್ನು ಹುಟ್ಟು ಹಾಕಿ, ವಿಶ್ವದಾದ್ಯಂತದ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲು ನಿರ್ಧಾರ ಮಾಡಲಾಯಿತು. ಮುಂದೆ ವಿಶ್ವ ಸಂಸ್ಥೆಯ ಅಂಗಸಂಸ್ಥೆ ಯುನೆಪ್-ಯು.ಎನ್.ಈ.ಪಿ. (United Nations Environment Programmes) ಪ್ರತಿವರ್ಷ ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆಯನ್ನಾಗಿ ವಿಶ್ವದಾದ್ಯಂತದ ಪರಿಸರ ಆಚರಣೆಯನ್ನು ಜಾರಿಗೆ ತಂದಿತು.

ಈ ದಿನದ ವಿಶೇಷವೇನೆಂದರೆ, ಎಲ್ಲರಿಗೂ ಪರಿಸರ ಸಂಬಂಧಿತ ವಿಷಯಗಳು ಪ್ರತಿಯೊಬ್ಬರಿಗೂ ತಿಳಿಯಬೇಕೆಂಬುದೇ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಸರದ ಸ್ಥಿತಿ ಗತಿ ತಿಳಿಯುವುದು, ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಜಾಗತಿಕ ಮಟ್ಟದಲ್ಲಿ ಮೂಡಿಸುವಂತಹದ್ದುಆಗಿದೆ.

ಈ ದಿನಾಚರಣೆ ವೃಕ್ಷಗಳನ್ನು ನೆಡುವ ಮೂಲಕ, ಜಲ ಮತ್ತು ವಾಯು ಮಾಲಿನ್ಯ ತಡೆವ ಕಾರ್ಯಕ್ರಮಗಳಿಂದ, ಇನ್ನು ಹಲವು ಪರಿಸರ ಆಂದೋಲನ ಗಳಿಂದ ಆಚರಿಸುತ್ತಾ, ಆ ವರುಷದ ಆಚರಣೆಯ ಮುಖ್ಯ ವಿಷಯದ ಸುತ್ತಾ ಜನರಲ್ಲಿ ಜಾಗೃತಿಯುಂಟು ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಪ್ರತಿವರ್ಷ ಒಂದೊಂದೂ ದೇಶದಲ್ಲಿ, ಒಂದು ಪರಿಸರದ ವಿಷಯವನ್ನು ಮೂಲವಾಗಿಸಿ ಆಚರಣೆಯನ್ನು ಹಮ್ಮಿಕೊಳ್ಳುತ್ತದೆ. ಮತ್ತು ಈ ವಿಷಯವನ್ನು ಪ್ರಪಂಚದಾದ್ಯಂತದ ಪ್ರಚಾರಪಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಜಾಗತಿಕ ಮಟ್ಟದಲ್ಲಿ ಸುಮಾರು ನೂರಕ್ಕಿಂತ ಹೆಚ್ಚಿನ ರಾಷ್ಟ್ರಗಳು ಜೂನ್ ಐದನ್ನು ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ಬಾರಿಯ ವಿಶ್ವ ಪರಿಸರ ದಿನಕ್ಕೆ ವಿಶ್ವಸಂಸ್ಥೆಯು ‘Ecosystem Restoration’ (ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ) ಎಂಬ ವಿಷಯ ಇಟ್ಟುಕೊಂಡಿದೆ. ಈ ಬಾರಿಯ ಜಾಗತಿಕ ಆತಿಥ್ಯವನ್ನು ಪಾಕಿಸ್ತಾನವು (Pakistan will be the global host for the day) ವಹಿಸಿಕೊಂಡಿದೆ.

ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನದ‌ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಇಂದು ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗಿದ್ದು, ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದು, ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ಮಹತ್ವದ ಉದ್ದೇಶ ಕೂಡ ಈ ಪರಿಸರ ದಿನಾಚರಣೆಯಲ್ಲಿ ಅಡಗಿದೆ.

ಪರಿಸರವೆಂದರೆ ಭೂಮಿ, ನೀರು, ಹವಾಮಾನಗಳನ್ನು ಒಳಗೊಂಡ ಭೌತಿಕ ಅಥವಾ ಬಾಹ್ಯ ಪರಿಸರವಷ್ಟೇ ಅಲ್ಲ; ದೇಹದೊಳಗಿನ ಆಂತರಿಕ ಪರಿಸರವನ್ನು- ಮಾನವನನ್ನು ಒಳಗೊಂಡಿರುವ ಸಾಮಾಜಿಕ ಪರಿಸರ ಸಹಿತ ಸೇರಿಸಿಕೊಳ್ಳಬಹುದು.

ಜೈವಿಕವಾಗಿ ಸಸ್ಯ, ಪ್ರಾಣಿಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಬಾಹ್ಯ ಕಾರಣಗಳ ಒಟ್ಟು ರೂಪ ಪರಿಸರ. ಜೀವಿಗಳೊಂದಿಗೆ ಪರಿಸರ, ಚೈತನ್ಯ, ವಸ್ತುಗಳ ವಿನಿಮಯ ನಡೆಯುತ್ತಲೇ ಇರುತ್ತದೆ. ಈ ದೃಷ್ಟಿಯಿಂದ, ಒಂದು ಪ್ರದೇಶದ ಜೀವನ ಸಮುದಾಯ, ನೀರು, ನೆಲ, ಉಷ್ಣತೆ, ಆದ್ರìತೆ, ಬೆಳಕು, ಸಮುದ್ರ ಮಟ್ಟ, ಆಹಾರ ಇತ್ಯಾದಿ ಎಲ್ಲವೂ ಪರಿಸರದ ವ್ಯಾಪ್ತಿಗೆ ಬರುತ್ತದೆ. ಪರಿಸರಕ್ಕೆ ಅನುಗುಣವಾಗಿ ಜೀವಿಗಳ ವರ್ತನೆ, ಹೊಂದಾಣಿಕೆಗಳಲ್ಲಿ ವೈವಿಧ್ಯವಿದೆ. ಪರಿಸರಕ್ಕೆ ತಕ್ಕಂತೆ ಜೀವಿಗಳ ದೇಹ ರಚನೆ, ಸಂತಾನೋತ್ಪತ್ತಿ, ಬೆಳವಣಿಗೆ, ಆತ್ಮರಕ್ಷಣೆ, ವರ್ತನೆಗಳಲ್ಲಿ ಹೊಂದಾಣಿಕೆಗಳು ನಡೆಯುತ್ತವೆ. ಆದ್ದರಿಂದ, ಈ ಭೂಮಿ ಒಂದೇ ಮತ್ತು ಪರಿಸರವು ಒಂದೇ. ಈ ಪರಿಸರವನ್ನು ರಕ್ಷಿಸುತ್ತಾ ಈ ಭೂಮಿಯನ್ನು ರಕ್ಷಿಸುವುದು ಪವಿತ್ರವಾದ ಕರ್ತವ್ಯ.

ಪರಿಸರದ ಶಿಶುಗಳೆನಿಸಿದ ನಮ್ಮ ಮೇಲೆ ಪರಿಸರ ಸಂರಕ್ಷಣೆಯ ಜವಾಬ್ದಾರಿ ತುಸು ಹೆಚ್ಚಾಗಿಯೇ ಇದೆ. ಇಂದಿನ ಪರಿಸರ ಮಾಲಿನ್ಯದ ಗೂಡಾಗಿದ್ದು , ನಮ್ಮ ಇರುವಿಕೆಗೆ ಅರ್ಥ ನೀಡಿದ ಪರಿಸರ ಮಾತೆಯನ್ನು ನಾವು , ನಮ್ಮ ಕಾರ್ಯಗಳಿಂದ ಕಲುಷಿತಗೊಳಿಸಿ, ಅದರ ದುಷ್ಪರಿಣಾಮಗಳನ್ನು ಈಗಾಗಲೇ ಎದುರಿಸುತ್ತಿದ್ದೇವೆ. ವಾಯು ಮಾಲಿನ್ಯ, ಜಲ‌ ಮಾಲಿನ್ಯ, ಅಧಿಕ ಉಷ್ಣಾಂಶ, ಮಣ್ಣಿನ ಮಾಲಿನ್ಯ, ಅರಣ್ಯ ನಾಶ ಹೀಗೆ ಒಂದೇ, ಎರಡೇ ಪರಿಸರದಲ್ಲಿ ಇಂದು ಉಂಟಾಗಿರುವ ಏರುಪೇರುಗಳು. ಈ ಏರುಪೇರುಗಳಿಗೆ ಕಾರಣ, ಅಭಿವೃದ್ಧಿ ಹೆಸರಿನಲ್ಲಿ ನಾವು ಪರಿಸರದ ಮೇಲೆ ಮಾಡಿರುವ ದೌರ್ಜನ್ಯದ ಫಲವಾಗಿದ್ದು, ಅದರ ಪರಿಣಾಮವಾಗಿ ಹೃದಯ ಸಂಬಂಧಿ, ಉಸಿರಾಟ ಸಂಬಂಧಿ, ಅಪೌಷ್ಟಿಕತೆಯಂತಹ ಅನೇಕ ದುಷ್ಪರಿಣಾಮ ನಾವು ಎದುರಿಸುತ್ತಿದ್ದೇವೆ.
ಈ ಎಲ್ಲದಕ್ಕೂ ಕಾರಣ ಪರಿಸರದ ಬಗ್ಗೆ ಪ್ರಾಮುಖ್ಯತೆ ನೀಡದೆ ಇರುವುದು, ಅರಿವು ಇಲ್ಲದಿರುವುದೇ ಆಗಿದೆ. ಆದ್ದರಿಂದಲೇ ನಮ್ಮೆಲ್ಲರಲ್ಲೂ ಜಾಗೃತಿ ಮೂಡಿಸಲು, ಪರಿಸರದ ಪರ ನಮ್ಮ ಕರ್ತವ್ಮ ಉತ್ತಮ ಭವಿಷ್ಯಕ್ಕಾಗಿ, ನಮ್ಮ‌ ಮುಂದಿನ ಪೀಳಿಗೆಯ ಉಜ್ಜವವಾದ ನಾಳೆಗಳಿಗಾಗಿ ನಾವು ಇಂದು ಇಂದಿನ ಮಕ್ಕಳಿಗೆ, ಯುವ ಜನರಿಗೆ ಪರಿಸರದ ಕಾಳಜಿ ಮೂಡಿಸಬೇಕಾಗಿದೆ,

ಕೋವಿಡ್‌ನಿಂದ ಕಲಿತ ಪಾಠ

ಮನುಕುಲವನ್ನು ಕೋವಿಡ್‌-19 ಇನ್ನಿಲ್ಲದಂತೆ ಕಾಡು ತ್ತಿದ್ದರೂ ಈ ಸೋಂಕು ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಭೂಮಿಯ ಮೇಲೆ ಆಧಿಪತ್ಯವನ್ನು ಸ್ಥಾಪಿಸ ಹೊರಟ ನಮಗೆ ಈ ಭೂಮಿಯಲ್ಲಿ ನಾವೇನು ಎಂಬುದನ್ನು ತೋರಿಸಿ ಕೊಟ್ಟಿದೆ. ಈ ಬಾರಿಯ ವಿಶ್ವ ಪರಿಸರ ದಿನಕ್ಕೆ ಹೆಚ್ಚೇನೂ ಪ್ರಚಾರದ ಅಗತ್ಯವಿಲ್ಲ. ವರ್ಷಗಳ ಹಿಂದೆ ಈ ನೆಲದ ಮೇಲೆ ನಾವು ಹೇಗೆ ಬದುಕುತ್ತಿದ್ದೆವು, ಈಗ ನಮ್ಮ ಜೀವನಶೈಲಿ ಹೇಗಿದೆ ಎಂಬ ಬಗ್ಗೆ ಕೆಲವು ನಿಮಿಷಗಳ ಕಾಲ ಯೋಚಿಸಿದರೆ ಪರಿಸರ ಸಂರಕ್ಷಣೆಯ ಅನಿವಾರ್ಯತೆ ಏನು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗುತ್ತದೆ. ಮುಂದಿನ ದಿನಗಳಲ್ಲಿ ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ನಾವು ಗೆಲ್ಲಬಹುದು. ಆದರೆ ಕಾಲಚಕ್ರ ಮಾತ್ರ ಉರುಳುತ್ತಿರುತ್ತದೆ. ವೈರಸ್‌ಗಳು ಹೊಸರೂಪದಲ್ಲಿ ಮನುಕುಲವನ್ನು ಕಾಡಬಹುದು. ಈ ಕಾರಣಕ್ಕಾಗಿ ನಮ್ಮ ಮುಂದಿನ ಜನಾಂಗಕ್ಕಾದರೂ ಪರಿಸರವನ್ನು ರಕ್ಷಿಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ನಮ್ಮ ಕೈಲಾದಷ್ಟು ಪ್ರಯತ್ನವನ್ನು ನಾವು ನಡೆಸಬೇಕಿದೆ.

ಮರಗಿಡಗಳು ನಮ್ಮ ಜೀವನದ ಒಂದು ಭಾಗವಾಗಿರಬೇಕು. ಸ್ವಚ್ಛತೆಯ ನೆಪದಲ್ಲಿ ಮನೆಯ ಸುತ್ತಮುತ್ತಲಿನ ಮರಗಿಡಗಳನ್ನು ಕಡಿದು ಮೈದಾನವಾಗಿಸುವುದು ಬೇಡ. ಮನೆಯ ಅಂಗಳದಲ್ಲಿ ರುವ ಮರವನ್ನು ಉಳಿಸಿಕೊಂಡು ಹೂದೋಟ ಅಥವಾ ಕೈತೋಟ ನಿರ್ಮಿಸಿದಲ್ಲಿ ಸಹಜತೆ ಇನ್ನಷ್ಟು ಹೆಚ್ಚುತ್ತದೆ.

ಮನೆಯಿಂದ ಹೊರಗೆ ಕಾಲಿಟ್ಟ ತತ್‌ಕ್ಷಣ ವಾಹನಗಳನ್ನು ಅವಲಂಬಿಸುವ ಬದಲು ಕಾಲ್ನಡಿಗೆ ಅಥವಾ ಸೈಕಲ್‌ ತುಳಿಯುವುದು ನಮ್ಮ ಆರೋಗ್ಯ ಮಾತ್ರವಲ್ಲದೆ ಪರಿಸರದ ಹಿತದೃಷ್ಟಿಯಿಂದಲೂ ಒಳ್ಳೆಯದು.
ಮಕ್ಕಳನ್ನು ಶಾಲೆಗೆ ಬಿಡಲು ಅಥವಾ ವಾಪಸ್‌ ಕರೆತರಲು ಪ್ರತಿನಿತ್ಯ ಸ್ವಂತ ವಾಹನವನ್ನು ಬಳಸುವ ಬದಲು ಸಾಧ್ಯವಾದಷ್ಟು ನಡಿಗೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಥವಾ ವಿದ್ಯುತ್‌ ಚಾಲಿತ ಪರಿಸರಸ್ನೇಹಿ ವಾಹನಗಳ ಮೊರೆ ಹೋಗೋಣ.

ನಮ್ಮ ಮನೆಗಳಲ್ಲಿ ಸಾಧ್ಯವಾದಷ್ಟು ಸೌರ ಅಥವಾ ಪವನ ಶಕ್ತಿ ಆಧಾರಿತ ವಿದ್ಯುತ್‌ಬಳಸಲು ಆದ್ಯತೆ ನೀಡೋಣ. ಅಸಾಧ್ಯವಾದಲ್ಲಿ ಸುತ್ತಮುತ್ತಲಿನ ನಿವಾಸಿಗಳು ಅಥವಾ ಆ ಪ್ರದೇಶದ ಸ್ಥಳೀಯರ ಜತೆಗೂಡಿ ಇಂಥ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರ ರಕ್ಷಣೆಗೆ ಪ್ರಯತ್ನಿಸೋಣ.

ಸಾಧ್ಯವಾದಷ್ಟು ಮರುಬಳಕೆಯ ವಸ್ತುಗಳ ಖರೀದಿ ನಮ್ಮದಾಗಲಿ. ಗಾಜಿನ ಬಾಟಲ್‌ಗ‌ಳು, ಮರು ಬಳಕೆಯ ಬ್ಯಾಗ್‌, ಕಪ್‌ಗ್ಳ ಬಳಕೆ ನಮ್ಮ ಹವ್ಯಾಸವಾಗಲಿ. ಪ್ಲಾಸ್ಟಿಕ್‌ ವಸ್ತುಗಳಿಗೆ ಶಾಶ್ವತ ವಿದಾಯ ಹೇಳ್ಳೋಣ.

ಮನೆಯಲ್ಲಿನ ಜೈವಿಕ ತ್ಯಾಜ್ಯಗಳನ್ನು ಗೊಬ್ಬರವಾಗಿ ಸಂಸ್ಕರಿಸಿ ನಮ್ಮ ಹೂದೋಟ ಅಥವಾ ಕೈತೋಟಗಳಿಗೆ ಬಳಕೆ ಮಾಡೋಣ.

ಸಾವಯವ ತರಕಾರಿ, ಬೇಳೆಕಾಳು, ಧಾನ್ಯಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡೋಣ. ಇದರಿಂದ ನಮ್ಮ ಆರೋಗ್ಯದ ರಕ್ಷಣೆ ಸಾಧ್ಯ ಮಾತ್ರವಲ್ಲದೆ ಸ್ಥಳೀಯ ಕೃಷಿಕರಿಗೆ ನಾವು ಒಂದಿಷ್ಟು ಸಹಾಯ ಮಾಡಿದಂತಾಗುತ್ತದೆ. ಅಲ್ಲದೆ ಕನಿಷ್ಠ ಸ್ಥಳೀಯ ಮಟ್ಟದಲ್ಲಾದರೂ ಸ್ವಾವಲಂಬಿ ಬದುಕು ನಮ್ಮದಾಗಲಿ.

ಪರಿಸರ ವಿಷಯವನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಮೂಲಕ ಮುಂದಿನ ತಲೆಮಾರಿನಲ್ಲಿ ಎಳವೆಯಿಂದಲೇ ಪರಿಸರದ ಬಗೆಗೆ ಕಾಳಜಿ ಮೂಡಿಸುವಂತೆ ಸರಕಾರ, ಶಾಲೆಗಳು ಹಾಗೂ ಆಡಳಿತ ವ್ಯವಸ್ಥೆಯನ್ನು ಆಗ್ರಹಿಸೋಣ.
ಕಡಿಮೆ ಬಳಕೆ, ಮರು ಬಳಕೆ, ಪುನರುತ್ಪಾದನೆ,ಪರಿಸರ ಸಂರಕ್ಷಣೆ ಕೇವಲ ಬಾಯಿಮಾತಿಗೆ ಸೀಮಿತವಾಗಿದ್ದರೆ ಶೋಭೆ ತಾರದು. ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಿರಲಿ.

ಪ್ರತಿ ಪ್ರಾಣಿಗೂ ಮನುಷ್ಯನ ಹಾಗೆಯೇ ಈ ಭೂಮಿಯ ಮೇಲೆ ಬದುಕುವ ಹಕ್ಕಿದೆ ಎಂಬುದನ್ನು ಮರೆಯದಿರೋಣ. ಪ್ರಾಣಿಗಳ ವಾಸಸ್ಥಾನಗಳನ್ನು ನಾವು ಅತಿಕ್ರಮಿಸದಿದ್ದಲ್ಲಿ ಅವು ನಮ್ಮ ತಂಟೆಗೆ ಎಂದೂ ಬರಲಾರವು ಎಂಬುದನ್ನು ಅರಿಯೋಣ.

ಈ ಪರಿಸರ ನಮ್ಮ ಜನಾಂಗಕಷ್ಟೇ ಸೀಮಿತವಲ್ಲ, ಮುಂದಿನ ಜನಾಂಗಕ್ಕೂ ಇದನ್ನು ಉಳಿಸುವ ಮಹತ್ತರ
ಗುರಿ ಹಾಗೂ ಹೊಣೆಗಾರಿಕೆ ನಮ್ಮದೇ. ಪರಿಸರ ಹಾನಿ ಎಂದಾಕ್ಷಣ ನೆನಪಿಗೆ ಬರುವುದು ಪ್ಲಾಸ್ಟಿಕ್‌. ಹಲವು ದಶಕಗಳಿಂದ ಈ ಬಗ್ಗೆ ತಜ್ಞರು, ಸರಕಾರ ಆದಿಯಾಗಿ ಎಲ್ಲರೂ ಮಾತನಾಡುತ್ತಲೇ ಬಂದಿದ್ದರೂ ಪ್ಲಾಸ್ಟಿಕ್‌ಗೆ ಸಮರ್ಪಕವಾದ ಪರ್ಯಾಯವಿನ್ನೂ ಸಿಕ್ಕಿಲ್ಲ. ಇಷ್ಟು ಮಾತ್ರವಲ್ಲದೆ ಪ್ಲಾಸ್ಟಿಕ್‌ ತ್ಯಾಜ್ಯಗಳ ಸಮರ್ಪಕ ವಿಲೇವಾರಿಯೂ ಇನ್ನೂ ಬಾಯಿಮಾತಿನಲ್ಲೇ ಉಳಿದಿದೆ. ಇದು ಇಡೀ ವಿಶ್ವ ಎದುರಿಸುತ್ತಿರುವ ಸಮಸ್ಯೆಯಾಗಿದ್ದು, ಇಡೀ ವಿಶ್ವವೇ ಒಟ್ಟಾಗಿ ಯೋಚಿಸಬೇಕಿದೆ.

ಅಲ್‌ಲೀಸ್ಟ್‌.. ಬನ್ನಿ, ಇವತ್ತಾದರೂ ಪರಿಸರ ರಕ್ಷಣೆಗೆ ಪಣ ತೊಡೋಣ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: environmentgreenindiakarnatakaWorldworld environment day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ಆರೋಪ; ಮತ್ತೊಬ್ಬ ಐಎಎಸ್ ಅಧಿಕಾರಿ ಶಿಲ್ಪಾ ನಾಗ್‌ ರಾಜೀನಾಮೆ

ತಿಕ್ಕಾಟಕ್ಕೆ ತೆರೆ: ರೋಹಿಣಿ & ಶಿಲ್ಪಾನಾಗ್ ವರ್ಗಾವಣೆ ಮಾಡಿದ ಸರಕಾರ

Leave a Reply Cancel reply

Your email address will not be published. Required fields are marked *

Recommended

ಗೌರವಾನ್ವಿತ ರಾಷ್ಟ್ರಪತಿಗಳಿಗೇ ಏಕವಚನ! ದೇವರೆ…

ಗೌರವಾನ್ವಿತ ರಾಷ್ಟ್ರಪತಿಗಳಿಗೇ ಏಕವಚನ! ದೇವರೆ…

1 year ago
ಬಾಗೇಪಲ್ಲಿ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಗಳಿಬ್ಬರ ದುರ್ಮರಣ

ಬಾಗೇಪಲ್ಲಿ ಬಳಿ ಕೃಷಿ ಹೊಂಡದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಗಳಿಬ್ಬರ ದುರ್ಮರಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ