DG Pawan Kalyan Devikunte
ಬಾಗೇಪಲ್ಲಿ: ಕೋವಿಡ್ ಎರಡನೇ ಅಲೆಯ ಕ್ಲಿಷ್ಟಕರವಾದ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಶಬ್ಬೀರ್ ಬಾಷಾ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆ ಹಾಗೂ ಗೃಹರಕ್ಷಕ ದಳ ಸಿಬ್ಬಂದಿಗೆ ಕಳೆದ ಒಂದು ವಾರದಿಂದ ಆಹಾರ ಪೊಟ್ಟಣ ಹಾಗೂ ನೀರಿನ ಬಾಟಲ್ʼಗಳನ್ನು ಪಟ್ಟಣದ ವ್ಯಾಪ್ತಿಯಲ್ಲಿ ಹಂಚುತ್ತಿದ್ದಾರೆ.
ಸೋಂಕಿನ ಸಂದರ್ಭದಲ್ಲಿ ತಮ್ಮ ಜೀವವನ್ನು ಪಣವಾಗಿಟ್ಟು ಕಾರ್ಯ ನಿರ್ವಹಣೆ ಮಾಡುತ್ತಿರುವ ಇವರಿಗೆ ಅತ್ಯಗತ್ಯವಾದ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡುವ ಮೂಲಕ ಅವರು ಕೋವಿಡ್ ವಾರಿಯರ್‌ಗಳಿಗೆ ಅಳಿಲು ಸೇವೆ ಮಾಡುತ್ತಿದ್ದಾರೆ.
ಈ ಕುರಿತು ಸಿಕೆನ್ಯೂಸ್ ನೌ ಜತೆ ಮಾತನಾಡಿದ ಶಬ್ಬೀರ್ ಬಾಷಾ, ಕೊರೋನಾ ಸಂಕಷ್ಟ ಕಾಲದಲ್ಲಿ ಇವರೆಲ್ಲರೂ ಜೀವ ಲೆಕ್ಕಿಸದೆ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಜೀವಕ್ಕೆ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಕಾರಣಕ್ಕಾಗಿ ಮಾಸ್ಕ್, ಸ್ಯಾನಿಟೈಸರ್ ವಿರಣೆ ಮಾಡುತ್ತಿರುವೆ ಎಂದರು.
ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹಬ್ಬುವ ಸಾಧ್ಯತೆಯ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮಕ್ಕಳಲ್ಲಿ ಕೋವಿಡ್ ಬಗ್ಗೆ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ. ಈ ಕಾಯಿಲೆ ಬಗ್ಗೆ ಎಲ್ಲರಿಗೂ ತಿಳಿಸುವ ಮೂಲಕ ಮಕ್ಕಳನ್ನು ಕೊರೋನಾದಿಂದ ಪಾರು ಮಾಡುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು
ಈ ಸಂದರ್ಭದಲ್ಲಿ ಬಾಬಾ ಫಕ್ರುದ್ದೀನ್, ಶಮೀರ್ ಬಾಷಾ, ಡಿ.ಜಿ.ಕಲ್ಯಾಣ್ ಬಾಬು ಮತ್ತೀತರು ಹಾಜರಿದ್ದರು.
ಸಮಾಜ ಮುಖಿ ಶಬ್ಬೀರ್ ಅವರದು ಉತ್ತಮ ಕೆಲಸ.