• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ವೃತ್ತಿಪರ ಉನ್ನತ ಶಿಕ್ಷಣ ಪ್ರವೇಶಕ್ಕೆ CET ಅಂಕ ಮಾತ್ರ ಪರಿಗಣನೆ; ಅಗಸ್ಟ್ 28-29 & 30ಕ್ಕೆ ಪರೀಕ್ಷೆ

P K Channakrishna by P K Channakrishna
June 8, 2021
in NEWS IN USE, STATE
Reading Time: 1 min read
0
#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ
923
VIEWS
FacebookTwitterWhatsuplinkedinEmail

ಜಸ್ಟ್‌ ಪಾಸಾದರೆಲ್ಲರೂ ಬರೆಯಬಹದು ಪರೀಕ್ಷೆ!

CET ಅಂಕಗಳಿಂದ ಮಾತ್ರ ರಾಂಕ್ ನಿರ್ಧಾರ: ಜೂನ್ 15ರಿಂದ ನೋಂದಣಿ: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಹತ್ವದ ಪ್ರಕಟಣೆ

ಬೆಂಗಳೂರು: 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಿರುವುದರಿಂದ ಎಂಜಿನಿರಿಂಗ್‌ ಸೇರಿದಂತೆ ಎಲ್ಲ ವೃತ್ತಿಪರ ಉನ್ನತ ಶಿಕ್ಷಣ ಕೊರ್ಸುಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ಸರಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ಸಂಬಂಧ ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಸಿಇಟಿ, ನೀಟ್ ಸೇರಿ ರಾಜ್ಯದಲ್ಲಿ ನಡೆಯುವ ಎಲ್ಲ ವೃತ್ತಿಪರ ಕೋರ್ಸುಗಳಿಗೆ ಪಿಯುಸಿ ಅಂಕವನ್ನು ಪರಿಗಣನೆ ಮಾಡದಿರಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ ಕುಮಾರ್‌ ಅವರು ಈ ನಿಟ್ಟಿನಲ್ಲಿ ನೀಡಿದ್ದ ಸಲಹೆಯನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಘೋಷಣೆ ಮಾಡಿರುವಂತೆ ಅಗಸ್ಟ್‌ 28, 29 ಹಾಗೂ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ದ್ವಿತೀಯ ಪಿಯುಸಿ (ವಿಜ್ಞಾನ) ಪಾಸಾದ ಪ್ರತೀ ವಿದ್ಯಾರ್ಥಿಯೂ ಸಿಇಟಿ ಬರೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.

“ಎಲ್ಲ ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29ರಂದು ನಡೆಯುತ್ತದೆ. ಉಳಿದಂತೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಅಗಸ್ಟ್ 30ರಂದು ಪರೀಕ್ಷೆ ನಡೆಯಲಿದೆ. ಮೊದಲು ಯಾವ ಪದ್ಧತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತೋ ಅದೇ ರೀತಿ ಪರೀಕ್ಷೆ ನಡೆಯುತ್ತದೆ. ಪ್ರತಿ ವಿಷಯಕ್ಕೆ 60 ಅಂಕ ಇರುತ್ತದೆ. ಮೊದಲ ದಿನ ಗಣಿತ & ಜೀವಶಾಸ್ತ್ರ ಹಾಗೂ ಎರಡನೇ ದಿನ ಭೌತವಿಜ್ಞಾನ & ರಾಯನಿಕ ವಿಜ್ಞಾನ ಇರುತ್ತದೆ ಎಂದರು ಅವರು.

#KCET2021 test will be held on August 28, 29 and 30 at more than 500 centres across the state.

August 28 – Biology, Mathematics
August 29 – Physics, Chemistry
August 30 – Kannada exam for Gadinadu and Horanadu Kannadigas.

1/2 pic.twitter.com/xO4n1m41tl

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) June 8, 2021

ಅಂಕಗಳ ಮಿತಿ ಇಲ್ಲ, ವಿನಾಯಿತಿಯ ವಿವರ

ಸಿಇಟಿಯಲ್ಲಿ ಎಂಜಿನೀಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್, ಫಾರ್ಮಸಿ ಪ್ರವೇಶ ಪರೀಕ್ಷೆಗೆ ಇದ್ದ ʼಅರ್ಹ ಅಂಕʼಗಳ ಷರತ್ತನ್ನು ತೆಗೆದು ಹಾಕಲಾಗಿದೆ. ಕೇವಲ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರಾಂಕ್ ಕೊಡಲಾಗುವುದು. ವೃತ್ತಿಪರ ಎಂಜಿನಿಯರಿಂಗ್ ಕೋರ್ಸ್ʼಗೆ ಭೌತಶಾಸ್ತ್ರ, ರಸಾಯನಶಾಸ್ತ್ರ & ಗಣಿತ ವಿಷಯಗಳಲ್ಲಿ ಸಿಇಟಿ ಬರೆಯಲು ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.45 ಹಾಗೂ ಪರಿಶಿಷ್ಟ ಜಾತಿ-ವರ್ಗದ ಅಭ್ಯರ್ಥಿಗಳು ಶೇ.40ರಷ್ಟು ಅಂಕಗಳನ್ನು ಗಳಿಸಬೇಕೆಂಬ ಷರತ್ತು ಇತ್ತು. ಆದ್ದರಿಂದ ಪಿಸಿಎಂ ಹಾಗೂ ನಿಗದಿತ ಐಚ್ಛಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಎಲ್ಲ, ಅಂದರೆ ಜಸ್ಟ್ ಪಾಸ್ ಆಗಿರುವ ವಿದ್ಯಾರ್ಥಿಗಳು ಕೂಡ ಸಿಇಟಿ ಬರೆಯಲು ಅರ್ಹತೆ ಹೊಂದಿರುತ್ತಾರೆ. ಅಂಕಗಳ ಮಿತಿ ಸಡಿಲಿಕೆ ಮಾಡಿರುವ ಬಗ್ಗೆ ಎಲ್ಲ ಸಂಬಂಧಿತ ಪರೀಕ್ಷಾ ಮಂಡಳಿಗಳು, ಇನ್ನಿತರೆ ಸಂಬಂಧಿತ ಎಲ್ಲ ಸಂಸ್ಥೆಗಳಿಗೆ ಸರಕಾರ ಪತ್ರ ಬರೆಯಲಿದೆ ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು.

2021-22ನೇ ವರ್ಷಕ್ಕೆ ಮಾತ್ರ

ಎಂಜಿನಿಯರಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ರಾಂಕ್ ನಿರ್ಧರಿಸಲು ಪ್ರಸ್ತುತ ನಿಯಮದಲ್ಲಿ ಇರುವಂತೆ ಅರ್ಹತಾ ಪರೀಕ್ಷೆ ಮತ್ತು ಸಿಇಟಿ ಪರೀಕ್ಷೆಯಲ್ಲಿ ಪಡೆದ ಪಿಸಿಎಂ ವಿಷಯಗಳ ಅಂಕಗಳನ್ನು ಸಮನಾಗಿ ಪರಿಗಣಿಸಿ ಸಿಇಟಿ ರಾಂಕ್ ನೀಡಲಾಗುತ್ತಿತ್ತು. ಅದರ ಬದಲಿಗೆ ಈಗ ಕೇವಲ ಸಿಇಟಿ ಪರೀಕ್ಷೆಯಲ್ಲಿನ ಪಿಸಿಎಂ ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಿ ಎಂಜಿನಿಯರಿಂಗ್ ರಾಂಕ್ ಕೊಡಲಾಗುವುದು. ಈ ಬದಲಾವಣೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಜೂನ್ 15ರಿಂದ ನೋಂದಣಿ

ಸಿಇಟಿ ಬರೆಯಲಿಚ್ಛಿಸುವ ವಿದ್ಯಾರ್ಥಿಗಳು ಜೂನ್ 15ರಿಂದಲೇ ಆನ್ ಲೈನ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.

ಸಿಇಟಿಗೂ ನೀಟ್ ನಂತೆ ಅಂಕ ಮಿತಿ?

ಇದೇ ವೇಳೆ ನೀಟ್ ನಲ್ಲಿ ಇಂತಿಷ್ಟು ಅಂಕ ಗಳಿಸಿದರೆ ಮಾತ್ರ ವೈದ್ಯ ಕೋರ್ಸುಗಳಿಗೆ ಪ್ರವೇಶ ಇದೆ. ಅದೇ ಪದ್ಧತಿಯನ್ನು ಸಿಇಟಿಯಲ್ಲೂ ತರುವ ಉದ್ದೇಶವಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಗುಣಮಟ್ಟದ ದೃಷ್ಟಿಯಲ್ಲಿ ಸರಕಾರ ಈ ನಿಟ್ಟಿನಲ್ಲಿ ಚಿಂತಿಸುತ್ತಿದೆ. ಪಾಸಾದವರೆಲ್ಲ ಎಂಜಿನಿಯರಿಂಗ್ ಸೇರುತ್ತಿದ್ದಾರೆ. ಆದ್ದರಿಂದ ಗುಣಮಟ್ಟಕ್ಕೆ ಧಕ್ಕೆಯಾಗುತ್ತಿದೆ ಎಂದರು ಅವರು.

ವಿಜ್ಞಾನ ಪದವಿ ಕೋರ್ಸುಗಳಿಗೂ ಸಿಇಟಿ

2021ನೇ ಸಾಲಿನಲ್ಲಿ ಪಿಯುಸಿಯ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ. 6ರಿಂದ 7ಲಕ್ಷ ವಿದ್ಯಾರ್ಥಿಗಳು ಪಿಯುಸಿಯಿಂದ ಹೊರಬರುತ್ತಿದ್ದಾರೆ. ಮೊದಲು ಕೊನೆ ಪಕ್ಷ 4 ಲಕ್ಷ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ವಿದ್ಯಾರ್ಥಿಗಳು ಮಾತ್ರ ಪಾಸಾಗುತ್ತಿದ್ದರು. ಈ ಬಾರಿ 30% ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಇವರಲ್ಲಿ ಅನೇಕರು ಪದವಿ ಕಾಲೇಜುಗಳಿಗೆ ಸೇರಲಿದ್ದು, ಅಲ್ಲಿನ ವ್ಯವಸ್ಥೆ ಹೆಚ್ಚಿಸುವ ಹಾಗೂ ಕೋರ್ಸ್ ಗಳನ್ನು ನೀಡಲಿಕ್ಕೆ ಸಿದ್ಧತೆ ನಡೆದಿದೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ವಿಜ್ಞಾನ ವಿಭಾಗದಲ್ಲಿ ಗುಣಮಟ್ಟಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಅದಕ್ಕೆ ಸಂಬಂಧಿಸಿದ ಎಲ್ಲ ಪದವಿ ಕೋರ್ಸುಗಳಿಗೆ ಸಿಇಟಿ ಮೂಲಕವೇ ಪ್ರವೇಶಾತಿ ನೀಡುವ ಯೋಚನೆ ಮಾಡಲಾಗುತ್ತಿದೆ. ಈ ಬಗ್ಗೆ ವಿಸ್ತೃತವಾಗಿ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದರು.

Tags: cetcommon entrance testcovid19dr cn ashwath narayankarnatakapuc-examination
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೆಕ್ಕ ಕೇಳಿದ್ದೇ ತಪ್ಪಾ ಎಂದ ರೋಹಿಣಿ

ರೋಹಿಣಿ ಸಿಂಧೂರಿ ವರ್ಗಕ್ಕೆ ಕಾರಣ ಯಾರು? ಸಂಸದ ಪ್ರತಾಪ ಸಿಂಹ, ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾಡಿದ್ದೇನು?

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ