ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಕಾರಣ ಭೂ ಹಗರಣ: ಸಿದ್ದರಾಮಯ್ಯ ನೇರ ಆರೋಪ
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಾ.ರಾ. ಮಹೇಶ್
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ನಡುವಣ ಜಗಳಕ್ಕೆ ಅದಕ್ಕೆ ಬಿಜೆಪಿಯ ಸಂಸದ, ಶಾಸಕರು ಹಾಗೂ ಜೆಡಿಎಸ್ನ ಮಾಜಿ ಸಚಿವ ಸಾ.ರಾ. ಮಹೇಶ್ ನೇರ ಕಾರಣ ಎಂದು ಆರೋಪ ಮಾಡಿದರು.
ಸಿಂಧೂರಿಗೆ ಸಂಸದರು ಉಲ್ಟಾ ಹೊಡೆದದ್ದು ಯಾಕೆ?
ಪ್ರತಾಪ್ ಸಿಂಹ
ಮೊದಲಿಗೆ ಒಬ್ಬ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದಲರಲೂ ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರ ಪರ ಇದ್ದರು. ಬಳಿಕ ವಿರೋಧ ವ್ಯಕ್ತ ಮಾಡಿದರು. ಇಬ್ಬರು ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಶಾಸಕರು. ಇಂಥ ಸಂದರ್ಭದಲ್ಲಿ ಜಿಲ್ಲಾ ಮಂತ್ರಿ ಏನು ಮಾಡುತ್ತಿದ್ದರು? ಇದು ಅವರ ವೈಫಲ್ಯ ಅಲ್ಲವೇ ? ಎಂದು ಸಿದ್ದು ಕೇಳಿದರು.
ಪ್ರೆಸ್ಮೀಟ್ ಮಾಡಲು ಆಧಿಕಾರ ಕೊಟ್ಟವರು ಯಾರು?
ಶಿಲ್ಪಾ ನಾಗ್
ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಶಿಕ್ಷೆ ಅಲ್ಲ. ಸರ್ಕಾರ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಶಕ್ತಿ ಕಳೆದುಕೊಂಡಿದೆ. ಆಡಳಿತವೇ ಇಲ್ಲದಂತೆ ಆಗಿರುವುದರಿಂದ ಅಧಿಕಾರಿಗಳು ಬೀದಿಗೆ ಬರಲು ಕಾರಣವಾಗಿದೆ ಎಂದರು ಅವರು. ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು ಎಂಬ ಬಗ್ಗೆ ತನಿಖೆ ಆಗಬೇಕು. ಯಾವ ಯಾವ ರಾಜಕಾರಣಿಗಳ ಭೂಮಿ ಹಗರಣಗಳಿವೆ. ಈ ವಿಷಯದಲ್ಲಿ ಯಾರ್ಯಾರು ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದರು ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಮಾಜಿ ಸಿಎಂ ಒತ್ತಾಯ