• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ನಾಳೆ ಬೆಳಗ್ಗೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೆ ಲಾಕ್;‌ ಸರಕು ಸಾಗಣೆ ವಾಹನಕ್ಕೂ ನಿರ್ಬಂಧ

cknewsnow desk by cknewsnow desk
June 9, 2021
in CHIKKABALLAPUR
Reading Time: 1 min read
0
ನಿಯಂತ್ರಣಕ್ಕೆ ಬಾರದ ಕೋವಿಡ್‌ ಮಾರಿ; ಚಿಕ್ಕಬಳ್ಳಾಪುರಕ್ಕೆ ಲಾಕ್‌ಡೌನ್‌ ಒಂದೇ ದಾರಿ!  ಮೇ 27ರಿಂದ ಆರೋಗ್ಯ ಸಚಿವರ ಜಿಲ್ಲೆ ಮತ್ತೆ 4 ದಿನ ಬಂದ್ ಆಗುತ್ತಿರುವುದೇಕೆ?

ಜಿಲ್ಲಾಧಿಕಾರಿ ಆರ್.ಲತಾ

964
VIEWS
FacebookTwitterWhatsuplinkedinEmail

ಜೂನ್‌ ಬಂದರೂ ಆಗದ ಅನ್‌ಲಾಕ್‌ / ಗ್ರಾಮೀಣ ಪ್ರದೇಶಗಳಲ್ಲಿ ಬ್ರೇಕ್‌ ಆಗದ ವೈರಸ್‌ ಚೈನ್‌

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಜಾರಿಯಾಗಿದ್ದ ಲಾಕ್‌ಡೌನ್ ಅನುಕೂಲವಾಗಿದ್ದು, ಮತ್ತಷ್ಟು ನಿಯಂತ್ರಿಸುವ ದೃಷ್ಟಿಯಿಂದ ಜೂನ್ 10ರ ಬೆಳಗ್ಗೆ 6 ಗಂಟೆಯಿಂದ ಜೂನ್ 14ರ ಬೆಳಗ್ಗೆ 6 ಗಂಟೆಯವರೆಗೆ ಪುನಾ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲು ಜಿಲ್ಲಾಡಳಿತ ನಿರ್ಧಾರ ತೆಗೆದುಕೊಂಡಿದೆ.

ಈ ಮೂಲಕ ಸತತ ಮೂರನೇ ಅವಧಿಗೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗಿದೆ.

ಜಿಲ್ಲಾಧಿಕಾರಿ ಆರ್.ಲತಾ ಅವರು ಈ ವಿಷಯ ತಿಳಿಸಿದ್ದು, ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲಾಗಿದೆ. ಆದಾಗ್ಯೂ ಸಹ ಜಿಲ್ಲೆಗೆ ಅನ್ವಯವಾಗುವಂತೆ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ತಡೆಗಟ್ಟಲು ಈ ಹಿಂದೆ ಸರಕಾರವು ಹೊರಡಿಸಿರುವ ಆದೇಶಕ್ಕೆ ಪೂರಕವಾಗಿ ಇನ್ನೂ ಹೆಚ್ಚುವರಿ ಕ್ರಮ ಕೈಗೊಂಡು ಕೆಲ ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವರು ನೀಡಿರುವ ನಿರ್ದೇಶನವನ್ನು ಅನುಸರಿಸಿ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್‌ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಲಾಕ್‌ಡೌನ್‌ ಕ್ರಮಗಳು

  • ಲಾಕ್‌ಡೌನ್‌ ಅವಧಿಯಲ್ಲಿ ಮದುವೆಗಳಿಗೆ ಅವಕಾಶ ನೀಡಿದರೆ 20 ಜನರಿಗೆ ಮಾತ್ರ ಅವಕಾಶ ನೀಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲನೆ, ಸ್ಯಾನಿಟೈಸರ್ ಬಳಕೆ ಮಾಡುವುದು ಅಗತ್ಯ. ಆ ಬಗೆ ಸ್ಥಳಕ್ಕೆ ಭೇಟಿ ನೀಡಿ ವಿಡಿಯೋಗ್ರಾಫಿ ಮಾಡಲಾಗುವುದು.
  • ಅಂತಾರಾಜ್ಯ ಮತ್ತು ಅಂತರ್ ಜಿಲ್ಲೆಯಲ್ಲಿ ಸೂಚಿಸಿರುವ ವ್ಯಕ್ತಿಗತ ವಾಹನ ಮತ್ತು ಸರಕು ಸಾಗಾಣಿಕೆ ವಾಹನಗಳ (ತುಂಬಿದ ಮತ್ತು ಖಾಲಿ ವಾಹನಗಳು) ಸಂಚಾರಕ್ಕೆ ಅವಕಾಶವಿಲ್ಲ. ವೈದ್ಯಕೀಯ ಸೇವೆ ಹಾಗೂ ಅತೀ ತುರ್ತು ಸೇವೆಗಳನ್ನು ಹಾಗೂ ಸರಕಾರಿ ನೌಕರರನ್ನು ಕರೆದೊಯ್ಯುವ ವಾಹನಗಳು ಅಧಿಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಹೊರತುಪಡಿಸಿ ಇತರೆ ಎಲ್ಲಾ ರೀತಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  • ವಾಣಿಜ್ಯ ಚಟುವಟಿಕೆಗಳಾದ ಹಣ್ಣು, ದಿನಸಿ, ತರಕಾರಿ, ತಳ್ಳುವ ಗಾಡಿಗಳು, ಹೋಟೆಲ್ʼಗಳು, ವಾಣಿಜ್ಯ ಚಟುವಟಿಕೆ, ವ್ಯಾಪಾರ ನಡೆಸುವುದನ್ನು ನಿಷೇಧಿಸಲಾಗಿದೆ, ಕೇವಲ ಹಾಲು ಸರಬರಾಜು ಮಾಡುವ ನಂದಿನಿ ಕೇಂದ್ರಗಳನ್ನು ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಲಾಗಿದೆ.
  • ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯ ಹತ್ತಿರ ಇರುವ ಹೋಟೆಲ್ʼಗಳಲ್ಲಿ ಪಾರ್ಸೆಲ್ ಸೇವೆ ಒದಗಿಸಲು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಉಳಿದ ಎಲ್ಲಾ ಹೋಟೆಲ್ʼಗಳನ್ನು ಬಂದ್‌ ಮಾಡಲಾಗುವುದು. ಎಲ್ಲಾ ತರಹದ ವೈದ್ಯಕೀಯ ಸೇವೆಗಳಿಗೆ (ಔಷಧಿ ಅಂಗಡಿಗಳು, ಆ್ಯಂಬುಲೆನ್ಸ್ ಸೇವೆ ಮತ್ತು ಇತ್ಯಾದಿ ತುರ್ತು ವೈದ್ಯಕೀಯ ಸೇವೆ) ವಿನಾಯಿತಿ ನೀಡಲಾಗಿರುತ್ತದೆ.
  • ಕೃಷಿ ಚಟುವಟಿಕೆಗಳಿಗೆ ಸಂಬಂಧಿತ ಹಾಗೂ ವೈದ್ಯಕೀಯ ಚಟುವಟಿಕೆಗಳ ಸಂಬಂಧಿತ ಹಾಗೂ Supply chain ಹೊಂದಿರುವ ಕೈಗಾರಿಕೆಗಳ ಕಾರ್ಯ ನಿರ್ವಹಣೆಗೆ ಅನುಮತಿ, ಸಿಬ್ಬಂದಿಯು ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಕೆಲಸ ಮಾಡಬೇಕು.
  • ಜಿಲ್ಲೆಯ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳು ಸರಕಾರದ ಆದೇಶದಲ್ಲಿ ನೀಡಿರುವಂತೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರಿಗೂ ಕೋವಿಡ್ ಮಾರ್ಗಸೂಚಿ ಪ್ರಕಾರ ತೆರೆದಿರುತ್ತವೆ. ಇಲ್ಲಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲಿಸುವುದು. ಸ್ಯಾನಿಟೈಸರ್ ಬಳಕೆ ಕಡ್ಡಾಯ.
  • ಕೃಷಿ ಪರಿಕರ ಮಾರಾಟ ಮಳಿಗೆಗಳನ್ನು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತರೆಯಬಹುದು.
  • ಹೆದ್ದಾರಿಗಳಲ್ಲಿರುವ ಪೆಟ್ರೋಲ್‌ ಬಂಕ್‌ಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಬಂಕ್‌ಗಳನ್ನು ತೆರೆಯುವಂತಿಲ್ಲ.

ಒಂದು ವೇಳೆ ಯಾರಾದರೂ ಈ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ವಿಪತ್ತು ನಿರ್ವಹಣೆ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Tags: agricultureBusinesschikkaballapuracovid19lockdownmarketr latha ias
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ