• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಹೃದಯದಲ್ಲಿ ಭಗಭಗ ಎನ್ನುತ್ತಿದ್ದ ಬೆಂಕಿಯನ್ನು ಕಾವ್ಯದಲ್ಲಿ ಕಟ್ಟಿದ ನೆಲದ ಕವಿ ಡಾ.ಸಿದ್ದಲಿಂಗಯ್ಯ

cknewsnow desk by cknewsnow desk
June 27, 2021
in GUEST COLUMN, STATE
Reading Time: 2 mins read
1
ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ
1.9k
VIEWS
FacebookTwitterWhatsuplinkedinEmail

ಅಗಾಧ ಅಕ್ಷರ ಸಂಪತ್ತನ್ನು ಕನ್ನಡಿಗರಿಗೆ ಬಿಟ್ಟುಹೊರಟ ಕವಿ ಸಿದ್ದಲಿಂಗಯ್ಯ ಅವರಿಗೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್‌ ಅವರಿಂದ ಅಕ್ಷರ ನಮನ


ಇಕ್ರಲಾ ವದೀರ್ಲಾ, ಈ ನನ್ನ ಮಕ್ಕಳ ಚರ್ಮ ಎಬ್ರಲಾ, ದೇವ್ರು ಒಬ್ರೇ ಅಂತಾರೆ, ಓಣೆಗೊಂದ್ ತರ ಗುಡಿ ಕಟ್ಸವ್ರೆ ಎಂದೆನ್ನುತ್ತಾ… ಒಂದಿಡೀ ಸಮುದಾಯದ ತಲೆಮಾರುಗಳ ನೋವು-ಅಸಹನೆಗಳಿಗೆ ದನಿಯಾಗಿ ನಿಂತವರು ಸಿದ್ದಲಿಂಗಯ್ಯ.

ತಮ್ಮೆಲ್ಲ ಆಕ್ರೋಶವನ್ನು “ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ” ಕವನದ ಮೂಲಕ ಸಮಾಜದ ಮನದಾಳದಲ್ಲಿ ಮಡುಗಟ್ಟಿದ್ದ ಆಕ್ರೋಶಗಳಿಗೆ, ದಲಿತರ ನೋವನ್ನು ಸಮರ್ಥವಾಗಿ ದನಿಯಾಗಿ, ಅಕ್ಷರ ರೂಪಕ್ಕಿಳಿಸಿದ, ಸತ್ವಪೂರ್ಣ ಕಾವ್ಯಾಭಿವ್ಯಕ್ತಿಯಿಂದ ತನ್ನ ಒಡಲಾಳದ ಸಿಟ್ಟನ್ನು ಹೊರಹಾಕಿ ಒಂದು ತಲೆಮಾರನ್ನು ಜಾಗೃತಗೊಳಿಸಿದ ಹಿರಿಯ ಕವಿ ಡಾ.ಸಿದ್ದಲಿಂಗಯ್ಯನರು ಕೊರೊನಾದಿಂದಾಗಿ ನಮ್ಮನೆಲ್ಲ ಶುಕ್ರವಾರ ಅಗಲಿದ್ದಾರೆ, ಅವರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರ ಇದ್ದಾರೆ.  

ಸಿದ್ದಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954ರ ಫೆಬ್ರವರಿ 3ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.

ಮಾಗಡಿಯ ಹೊಸಹಳ್ಳಿಯ ಬಿಸಿಲಮ್ಮನ ಗುಡಿಯಲ್ಲಿ ಅಕ್ಷರಾಭ್ಯಾಸ ಪ್ರಾರಂಭಿಸಿದ ಸಿದ್ದಲಿಂಗಯ್ಯ ನವರು 1974ರ ವರ್ಷದಲ್ಲಿ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಿಂದ ಬಿ.ಎ. ಆನರ್ಸ್ (ಐಚ್ಛಿಕ ಕನ್ನಡ) ಪದವಿ ಪಡೆದರಲ್ಲದೆ. 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರೊ.ಡಿ.ಎಲ್‌.ನರಸಿಂಹಾಚಾರ್ಯರ ಮಾರ್ಗದರ್ಶದಿಂದ ಸ್ವರ್ಣ ಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂ.ಎ. ಪದವಿಯನ್ನೂ, ಪ್ರೊ.ಜಿ.ಎಸ್‌. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ. ಪದವಿ ಪಡೆದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ದಲಿಂಗಯ್ಯನವರು, ಪ್ರಾಧ್ಯಾಪಕರಾಗಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 

ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನೂ ವ್ಯಕ್ತಿಪಡಿಸಲು ಸಿದ್ದಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮವನ್ನು. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ ‘ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ ‘ಸಾವಿರಾರು ನದಿಗಳು’, ‘ಕಪ್ಪುಕಾಡಿನ ಹಾಡು’, ‘ಮೆರವಣಿಗೆ’, ‘ನನ್ನ ಜನಗಳು ಮತ್ತು ಇತರ ಕವಿತೆಗಳು’, ‘ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ. 

ಸಿದ್ದಲಿಂಗಯ್ಯನವರ ‘ಪಂಚಮ ಮತ್ತು ನೆಲಸಮ’, ‘ಏಕಲವ್ಯ’ ಪ್ರಮುಖ ನಾಟಕಗಳಾದರೆ ‘ಅವತಾರಗಳು’ ಪ್ರಬಂಧ ಕೃತಿ. ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನ ಸಂಗ್ರಹಗಳು, ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1-2 ಮತ್ತು ಆತ್ಮಕಥನ ʼಊರು-ಕೇರಿʼ ಭಾಗ 1-2 ಪ್ರಕಟಗೊಂಡಿವೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗಕ್ಕಾಗಿ ‘ಸಮಕಾಲೀನ ಕನ್ನಡ ಕವಿತೆಗಳು’ ಭಾಗ-3 ಮತ್ತು ಭಾಗ-4 ಅನ್ನು ಸಂಪಾದಿಸಿ ಕೊಟ್ಟಿದ್ದಾರೆ.  

ಸಿದ್ದಲಿಂಗಯ್ಯನವರ ‘ಊರು ಕೇರಿ’ ಆತ್ಮಕಥೆ ಇಂಗ್ಲಿಷ್‌ ಹಾಗೂ ತಮಿಳಿಗೂ ಅನುವಾದಗೊಂಡಿದ್ದು ಇಂಗ್ಲಿಷ್‌ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಕಟಿಸಿದೆ. ಸಿದ್ದಲಿಂಗಯ್ಯನವರ ಹಲವಾರು ಕವಿತೆಗಳು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ, ಮಲೆಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ.

ಕನ್ನಡ ನಾಡು ನುಡಿಯ ಬಗ್ಗೆ, ಕನ್ನಡಿಗರ ಉದ್ಯೋಗ ಮೀಸಲಾತಿ, ಇಂದಿನ ದಲಿತ ಸಮುದಾಯದ ಬಗ್ಗೆ ಅಪಾರವಾದ ಕಳಕಳಿಯನ್ನು ಅವರ ಚಿಂತನೆಗಳಲ್ಲಿ ಕಾಣಬಹುದು.

  • ಸಿದ್ದಲಿಂಗಯ್ಯ ಅವರ ಜೀವನಚಿತ್ರಗಳನ್ನು ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
https://cknewsnow.com/2021/06/11/dr-siddalingaiah-kannada-poet-no-more-kannada-literate-covid19-corona-bengaluru-dr-siddalingaiah-rare-photos/

ಕನ್ನಡ ಶಾಲೆ ಉಳಿಸಿಕೊಳ್ಳಲು ಇಂಗ್ಲಿಷ್ ಮಾಧ್ಯಮ ಆರಂಭಿಸುವುದು ಸರಿಯಲ್ಲ. ಕನ್ನಡ ಶಾಲೆ ಗುಣಮಟ್ಟದ ಸುಧಾರಿಸಬೇಕು. ಒಂದು ಭಾಷೆಯಾಗಿ ಇಂಗ್ಲಿಷ್‌ ಅನ್ನು ಸರಿಯಾಗಿ ಕಲಿಸುವಂತಾಗಬೇಕು. ಕನ್ನಡದ ಸಾಹಿತ್ಯ ಬೇರೆ ಭಾಷೆಗಳಿಗೆ ಅನುವಾದವಾಗುವ ಮೂಲಕ ಕನ್ನಡ ಸಾಹಿತ್ಯ ಭಾಷೆಯ ಮಹತ್ವ ಹೆಚ್ಚಾಗುತ್ತಿದೆ. ಹಳಗನ್ನಡ ಸಾಹಿತ್ಯದ ಬಗ್ಗೆ ಅಧ್ಯಾಪಕರಲ್ಲೇ ಆಸಕ್ತಿ ಕಡಿಮೆಯಾಗುತ್ತಿರುವುದು ದುರದೃಷ್ಟಕರ. ಹಳಗನ್ನಡ ಪಠ್ಯವು ಪಠ್ಯಕ್ರಮದಿಂದ ಹೊರಹೋಗುತ್ತಿದೆ. ಸಾಹಿತ್ಯದ ಸ್ವಾರಸ್ಯ, ಆ ಸಂತೋಷ ಅನುಭವಿಸಲು ಹಳಗನ್ನಡ ಸಾಹಿತ್ಯಕ್ಕೆ ಹಿಂದಿರುಗಬೇಕಾಗಿದೆ. ಪ್ರಾಚೀನ ಸಾಹಿತ್ಯದ ಬಗ್ಗೆ ಮಾತನಾಡುವ ವಿದ್ವಾಂಸರನ್ನು ಗುರುತಿಸಬೇಕು. ಗಮಕಿಗಳ ನೆರವು ಪಡೆಯಬೇಕು ಎಂದು ಸಿದ್ದಲಿಂಗಯ್ಯ ಪ್ರತಿಪಾದನೆ ಮಾಡುತ್ತಿದ್ದರು.

ಚಳವಳಿಗಳು ಸಂವಿಧಾನದ ಚೌಕಟ್ಟಿನಲ್ಲಿ, ಪ್ರಜಾಸತ್ತಾತ್ಮಕವಾಗಿ ನಡೆದರೆ ಅದಕ್ಕೆ ಅಡ್ಡಿ ಬರಲಾರದು. ನಿರ್ದಿಷ್ಟ  ಗುಂಪು, ಪಕ್ಷ, ಜನಾಂಗ ಇಟ್ಟುಕೊಂಡು ಚಳವಳಿ ವಿರೋಧಿಸುವುದು ಸರಿಯಲ್ಲ. ಕಾಲ ಬದಲಾದಂತೆ ಚಳವಳಿಗಳು ತೀವ್ರವಾಗುತ್ತವೆ. ಚಳವಳಿಗಳ ತೀವ್ರತೆಯನ್ನು ಕಾಲವೇ ನಿರ್ಧರಿಸುತ್ತದೆ. ಮೀಸಲಾತಿ, ಉದ್ಯೋಗ, ಶಿಕ್ಷಣದ ಕಾರಣದಿಂದ ದಲಿತರಲ್ಲಿ ಹೊಸ ಮಧ್ಯಮ ವರ್ಗ ಸೃಷ್ಟಿಯಾಗುತ್ತಿದೆ. ಆ ಮಧ್ಯಮ ವರ್ಗಕ್ಕೆ ಚಳವಳಿಯ ಅಗತ್ಯ ಇಲ್ಲದಿರಬಹುದು. ಇನ್ನುಳಿದ ಶೇ 90ರಷ್ಟು ಜನರು ಅದೇ ಸ್ಥಿತಿಯಲ್ಲಿದ್ದಾರೆ. ರೈತರು, ಕಾರ್ಮಿಕರು, ಮಹಿಳೆಯರು ಈ ಎಲ್ಲ ಹೋರಾಟಗಳ ಭಾಗವಾಗಿ ದಲಿತ ಹೋರಾಟ ನಡೆಯಬೇಕು. ಎಲ್ಲರ ವಿಮೋಚನೆಯಲ್ಲಿ ದಲಿತ ವಿಮೋಚನೆ ಅಡಗಿದೆ ಎಂದು ದಲಿತ ಚಳವಳಿಯ ಮಾರ್ಗಕ್ಕೆ ಸ್ಪಷ್ಟರೂಪ ನೀಡಬೇಕು ಎನ್ನುತ್ತಿದ್ದರು ಸಿದ್ದಲಿಂಗಯ್ಯ ಅವರು.

ಹೀಗೆ ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮ ಸಾಹಿತ್ಯದ ಮೂಲಕ ಹೊಸ ಹೊಳಹುವನ್ನು ನೀಡಿದ ಕವಿ ಸಿದ್ದಲಿಂಗಯ್ಯನವರಿಗೆ ಈ ಮೂಲಕ ಅಕ್ಷರ ನಮನ.

****

  • ಈ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ

ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್‌

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: Bengalurucoronacovid19dr siddalingaiahkannada literatekannada poetno more
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ

ಕಲಾಗ್ರಾಮದಲ್ಲಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ: ʼಶ್ರೀಸಾಮಾನ್ಯನ ಕವಿʼಗೆ ವಿದಾಯ

Comments 1

  1. Pingback: ಗುಡಿಬಂಡೆಯಲ್ಲಿ ಗಿಡ ನೆಡುವ ಮೂಲಕ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರಿಗೆ ಅರ್ಥಪೂರ್ಣ ವಿದಾಯ - cknewsnow

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

ಎತ್ತಿನಹೊಳೆ: ಬೊಮ್ಮಾಯಿಗೆ ಎಚ್‌ಡಿಕೆ ಪತ್ರ ಬರೆದರೆ ಸಾಕೆ?

4 years ago
ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ