• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೋಲಾರದ ಮಾವಿಗೆ ಬರಲಿದೆ ಒಳ್ಳೆಯ ಕಾಲ; ಶ್ರೀನಿವಾಸಪುರದ ರುಚಿಕರ ಮ್ಯಾಂಗೋಗೆ ಶಕ್ತಿ ತುಂಬಲಿದೆ ಇಸ್ರೇಲ್

cknewsnow desk by cknewsnow desk
June 17, 2021
in KOLAR, NEWS IN USE
Reading Time: 1 min read
0
ಕೋಲಾರದ ಮಾವಿಗೆ ಬರಲಿದೆ ಒಳ್ಳೆಯ ಕಾಲ; ಶ್ರೀನಿವಾಸಪುರದ ರುಚಿಕರ ಮ್ಯಾಂಗೋಗೆ ಶಕ್ತಿ ತುಂಬಲಿದೆ ಇಸ್ರೇಲ್
936
VIEWS
FacebookTwitterWhatsuplinkedinEmail

ಭಾರತ-ಇಸ್ರೇಲ್ ಕೃಷಿ ಯೋಜನೆಯಡಿ ಕೋಲಾರ ಸೇರಿ ರಾಜ್ಯದಲ್ಲಿ 3 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು, ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಕರ್ನಾಟಕದಲ್ಲಿ ಸ್ಥಾಪಿಸಲಾದ 3 ಉತ್ಕೃಷ್ಟತಾ ಕೇಂದ್ರ (ಸಿಒಇ)ಗಳಲ್ಲಿ ಒಂದು ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆಯಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಜಂಟಿಯಾಗಿ ಈ ಕೇಂದ್ರಗಳನ್ನು ಉದ್ಘಾಟಿಸಿದರು.

ಕೇಂದ್ರ ಕೃಷಿ ಸಚಿವ @nstomar ರವರು ಇಂದು ಇಂಡೋ-ಇಸ್ರೇಲ್ ಕೃಷಿ ಯೋಜನೆಯಡಿ ಕೋಲಾರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳ ಉತ್ಕೃಷ್ಟತಾ ಕೇಂದ್ರಗಳನ್ನು ವರ್ಚುಯಲ್ ವೇದಿಕೆ ಮೂಲಕ ಉದ್ಘಾಟಿಸಿದರು. ಮುಖ್ಯಮಂತ್ರಿ @BSYBJP ರವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. (1/2)@PMOIndia @IsraelinIndia @AgriGoI pic.twitter.com/M2InxGy6Y2

— CM of Karnataka (@CMofKarnataka) June 16, 2021

ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಎಂಐಡಿಎಚ್ ವಿಭಾಗ ಮತ್ತು ಇಸ್ರೇಲ್‌ನ ಅಂತಾರಾಷ್ಟ್ರೀಯ ಅಭಿವೃದ್ಧಿ ಸಹಕಾರ ಸಂಸ್ಥೆ– ಎಂಎಎಸ್ಎಚ್ಎವಿ ಭಾರತದಾದ್ಯಂತ 12 ರಾಜ್ಯಗಳಲ್ಲಿ 29 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳೊಂದಿಗೆ ಸುಧಾರಿತ ಇಸ್ರೇಲಿ ಕೃಷಿ- ತಂತ್ರಜ್ಞಾನವನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅಳವಡಿಸಿ ಅನುಷ್ಠಾನಗೊಳಿಸುತ್ತಿವೆ.

29 ಸಂಪೂರ್ಣ ಕಾರ್ಯಾಚರಣೆಯಲ್ಲಿರುವ ಸಿಒಇಗಳಲ್ಲಿ 3 ಕರ್ನಾಟಕದಲ್ಲಿವೆ. ಮಾವು ಬೆಳೆಗೆ ಸಂಬಂಧಿಸಿದಂತೆ ಕೋಲಾರದಲ್ಲಿ, ದಾಳಿಂಬೆಗಾಗಿ ಬಾಗಲಕೋಟೆಯಲ್ಲಿ ಮತ್ತು ತರಕಾರಿಗಳಿಗೆ ಧಾರವಾಡದಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕರ್ನಾಟಕದಲ್ಲಿ ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಈ ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳನ್ನು ಸ್ಥಾಪಿಸಲು ಆರ್ಥಿಕ ಮತ್ತು ತಾಂತ್ರಿಕ ನೆರವು ನೀಡಿದ ಭಾರತ ಸರ್ಕಾರ ಮತ್ತು ಇಸ್ರೇಲ್ ದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧನ್ಯವಾದ ತಿಳಿಸಿದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, “ಈ ಕೇಂದ್ರಗಳು ಕರ್ನಾಟಕದ ಕೃಷಿಕ ಸಮುದಾಯಕ್ಕೆ ಇತ್ತೀಚಿನ ಇಸ್ರೇಲಿ ತಂತ್ರಜ್ಞಾನಗಳು ಲಭ್ಯವಾಗಲು ಸಹಾಯ ಮಾಡುತ್ತವೆ ಮತ್ತು ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ” ಎಂದರು. ಈ ಸಿಒಇಗಳು ವಾರ್ಷಿಕವಾಗಿ 50,000 ಕಸಿ ಉತ್ಪಾದನೆ ಮತ್ತು 25 ಲಕ್ಷ ತರಕಾರಿ ಸಸಿಗಳ ಉತ್ಪಾದನೆಯ ಸಾಮರ್ಥ್ಯವನ್ನು ಹೊಂದಿವೆ. ತೋಟಗಾರಿಕೆಯಲ್ಲಿ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಜ್ಞಾನ ಪಡೆಯಲು ಸುಮಾರು 20,000 ರೈತರು ಈ ಸಿಒಇಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕದ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್.ಶಂಕರ್ ಮಾತನಾಡಿ, ಈ ಕೇಂದ್ರಗಳು ಉತ್ಪಾದನೆಯಲ್ಲಿ ಹೆಚ್ಚಳ, ಉತ್ಪಾದಕತೆಯ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ ರೈತರ ಆದಾಯವನ್ನು ಹೆಚ್ಚಿಸುತ್ತವೆ ಎಂದರು.

ಭಾರತದಲ್ಲಿನ ಇಸ್ರೇಲ್ ರಾಯಭಾರಿ ಡಾ.ರಾನ್ ಮಲ್ಕಾ ಅವರು ಮಾತನಾಡಿ, “ಇಂಡೋ-ಇಸ್ರೇಲಿ ಸಹಭಾಗಿತ್ವದ ಮಹತ್ವದ ಭಾಗವಾಗಿರುವ ಕೃಷಿಯಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಯೋಗ ಹೊಂದಲು ನಾವು ಹೆಮ್ಮೆ ಪಡುತ್ತೇವೆ ಮತ್ತು ಉತ್ಸುಕರಾಗಿದ್ದೇವೆ. ನಮ್ಮ ದೇಶಗಳ ನಡುವಿನ ಸಂಬಂಧಗಳು ಬಲಗೊಳ್ಳುತ್ತಿರುವ ಮತ್ತು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ನಾವು ಮೂರು ವಿಭಿನ್ನ ಕೇಂದ್ರಗಳನ್ನು ಉದ್ಘಾಟಿಸಿದ್ದೇವೆ. ಇದು ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲಾಗಿದ್ದು, ಸ್ಥಳೀಯ ರೈತರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧೆಯ ಅವಕಾಶವನ್ನು ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಇದು ಸಹಕಾರಿಯಾಗುತ್ತದೆ” ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಭಾರತ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್ವಾಲ್, ಇಸ್ರೇಲಿ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು. ವರ್ಚುವಲ್ ಸಮಾರಂಭಕ್ಕೆ ಎಲ್ಲಾ ರಾಜ್ಯ ತೋಟಗಾರಿಕೆ ಮಿಷನ್‌ಗಳ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು.

Highlights of the speech made by Chief Minister @BSYBJP during the virtual inauguration of Indo–Israel centres of Excellence for Horticulture crop in Karnataka.@PMOIndia @IsraelinIndia @AgriGoI @nstomar pic.twitter.com/ANLbObfPz1

— CM of Karnataka (@CMofKarnataka) June 16, 2021

ಕೋಲಾರದಲ್ಲಿ ಮಾವು ಉತ್ಕೃಷ್ಟತಾ ಕೇಂದ್ರ

ಇಡೀ ರಾಜ್ಯದಲ್ಲಿಯೇ ಅತ್ಯಂತ ಹೆಚ್ಚಿನ ಮತ್ತು ಉತ್ಕೃಷ್ಟ ಮಾವು ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಇಸ್ರೇಲ್‌ ಕೃಷಿ ಇಲಾಖೆ ನೆರವಿನೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ರೈತರು ಉತ್ತಮ ಗುಣಮಟ್ಟದ, ಅಧಿಕ ಇಳುವರಿಯ ಮಾವು ಬೆಳೆಯಲು ಅಗತ್ಯವಾದ ತಂತ್ರಜ್ಞಾನವನ್ನು ಇಸ್ತೇಲ್‌ ಒದಗಿಸಲಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪಪುರ, ಮುಳಬಾಗಿಲು ತಾಲೂಕುಗಳಲ್ಲಿ ವ್ಯಾಪಕವಾಗಿ ಮಾವು ಬೆಳೆಯಲಾಗುತ್ತದೆ. ಸುಮಾರು 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇಂಥ ಹಿರಿಮೆ ಇದ್ದರೂ ನಾನಾ ಕಾರಣಗಳಿಂದ ರೈತರು ಫಸಲು ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ. ಕೀಟಬಾಧೆ, ರೋಗಬಾಧೆಯಿಂದ ಕೈಸುಟ್ಟುಕೊಳ್ಳುತ್ತಿದ್ದಾರೆ.

ಇಡೀ ಕರ್ನಾಟಕದಲ್ಲಿ ಮಾವು ಬೆಳೆಗೆ ಶ್ರೀನಿವಾಸಪುರದ ಮಾವಿಗೆ ಪ್ರತ್ಯೇಕತೆ ಇದೆ. ಈ ತಾಲೂಕನ್ನು ಕರ್ನಾಟಕದ ಮಾವಿನ ತೊಟ್ಟಿಲು ಎಂದು ಕರೆಯಲಾಗುತ್ತಿದೆ. ಬಂಗಿನಪಲ್ಲಿ, ತೋತಾಪುರಿ, ರಸಪುರಿ, ಅಲ್ಫಾನ್ಸೋ, ಕೇಸರ್‌, ಸೆಂಧೂರ, ದಶಹರಿ, ಮಲ್ಲಿಕಾ, ತೋತಾಪುರಿ, ಮಲಗೋವಾ, ರಾಜಗಿರಾ, ನೀಲಂ ಸೇರಿ ಇನ್ನೂ ಹಲವಾರು ಉತ್ಕೃಷ್ಟ ತಳಿಗಳಿವೆ ಇಲ್ಲಿ.

ಈಗ ಮಾವು ಇಸ್ರೇಲ್‌ ನೆರವಿನಿಂದ ಸ್ಥಾಪನೆಯಾಗಿರುವ ಮಾವು ಉತ್ಕೃಷ್ಟ ಕೇಂದ್ರದಿಂದ ಕೋಲಾರದ ಮಾವಿಗೆ ಜಾಗತಿಕವಾಗಿ ಬೃಹತ್‌ ಮಾರುಕಟ್ಟೆ ಸೃಷ್ಟಿಯಾಗಲಿದೆ.

Tags: HorticultureIndo–Israel centres of Excellence for Horticulture crop in Karnatakaisraelkarnatakakolarmango
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಹೇಳಲು ನಾನು 'ಜ್ಯೋತಿಷಿ' ಅಲ್ಲ ಎಂದ ಡಿಸಿಎಂ; ಸೈನಿಕನಿಗೆ ಪರೋಕ್ಷ ಟಾಂಗ್

Recommended

ಅಂಗಾಂಗ ದಾನ, ನಾವೂ ಒಮ್ಮೆ ಯೋಚಿಸೋಣ..

ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ

3 years ago
ಬಾಗೇಪಲ್ಲಿ ಕ್ಷೇತ್ರ: ಪ್ರತಿ ಮನೆ ಬಾಗಿಲಿಗೇ ಶಾಸಕರ ಆಹಾರ ಕಿಟ್‌

ಬಾಗೇಪಲ್ಲಿ ಕ್ಷೇತ್ರ: ಪ್ರತಿ ಮನೆ ಬಾಗಿಲಿಗೇ ಶಾಸಕರ ಆಹಾರ ಕಿಟ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ