• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಬೆಂಗಳೂರಿನ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ಹೆಲಿಪೋರ್ಟ್; ಏಕಕಾಲದಲ್ಲಿ 6 ಹೆಲಿಕಾಪ್ಟರ್‌ ಟೇಕಾಫ್‌ & ಲ್ಯಾಂಡಿಂಗ್

cknewsnow desk by cknewsnow desk
June 21, 2021
in NEWS IN USE, STATE
Reading Time: 1 min read
0
ಬೆಂಗಳೂರಿನ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ಹೆಲಿಪೋರ್ಟ್; ಏಕಕಾಲದಲ್ಲಿ 6 ಹೆಲಿಕಾಪ್ಟರ್‌ ಟೇಕಾಫ್‌ & ಲ್ಯಾಂಡಿಂಗ್
930
VIEWS
FacebookTwitterWhatsuplinkedinEmail

ಪ್ರವಾಸೋದ್ಯಮ & ಯುವಜನ ಸಬಲೀಕರಣ ಇಲಾಖೆ ನಡುವೆ ಒಪ್ಪಂದದ ಬಗ್ಗೆ ಚರ್ಚೆ

ಬೆಂಗಳೂರು: ಹೆಲಿ ಟೂರಿಸಂಗೆ ಬೆಂಗಳೂರಿನ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರ ಬಳಸಿಕೊಳ್ಳುವ ಸಂಬಂಧ ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡುವೆ ಒಪ್ಪಂದ ಮಾಡಿಕೊಳ್ಳಲು ಮಹತ್ತ್ವದದ ಮಾತುಕತೆ ನಡೆಯಿತು.

ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ‌ ನಾರಾಯಣಗೌಡರು ಈ ಬಗ್ಗೆ ಮಾತುಕತೆ ನಡೆಸಿದರು. ಯೋಜನೆ, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ 6 ಹೆಲಿಕಾಪ್ಟರ್‌ಗಳು ಒಟ್ಟಿಗೆ ಲ್ಯಾಂಡ್ ಹಾಗೂ ಟೇಕಾಫ್ ಆಗಲು ಅಗತ್ಯ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿಪಡಿಸಲು ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ದೇಶ-ವಿದೇಶ ಹಾಗೂ ಹೊರ ರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವ ಪ್ರವಾಸಿಗರು ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಿಂದ ರಾಜ್ಯದ ಇತರೆ ಜಿಲ್ಲೆಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ತೆರಳಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.‌

ಗೋವಾ, ಕೇರಳ, ತಮಿಳುನಾಡು, ಪುದುಚೇರಿ ಸೇರಿ ನೆರೆಯ ರಾಜ್ಯಗಳನ್ನು ಸೇರಿಸಿ ಪ್ರವಾಸೋದ್ಯಮ ಸರ್ಕ್ಯೂಟ್ ರೂಪಿಸಲಾಗುವುದು. ರಾಜ್ಯದಲ್ಲಿ ಹೆಲಿಪೋರ್ಟ್, ಹೆಲಿಪ್ಯಾಡ್ ನಿರ್ಮಾಣ ಸೇರಿದಂತೆ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ಯೋಜನೆಗಳಿಗೆ ಬಂಡವಾಳ ಹೂಡಲು ಮೂವರು ಖಾಸಗಿ ಉದ್ಯಮಿಗಳು ಮುಂದೆ ಬಂದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಹಂತ ಹಂತವಾಗಿ ಹೆಲಿಟೂರಿಸಂ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಮೈಸೂರು, ಕಲಬುರಗಿ, ಮಂಗಳೂರು, ಬಳ್ಳಾರಿ ಹಾಗೂ ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಹೆಲಿಪೋರ್ಟ್ ನಿರ್ಮಾಣ ಮಾಡಿ ಬೆಂಗಳೂರಿನ ಜಕ್ಕೂರು ವೈಮಾನಿಕ ಕೇಂದ್ರದ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೆಲಿಕಾಪ್ಟರ್ ಪ್ರಯಾಣ ಸಂಪರ್ಕ ಕಲ್ಪಿಸುವುದಾಗಿ ಸಚಿವರು ತಿಳಿಸಿದರು.

ಪ್ರವಾಸಿಗರಿಗೆ, ಗಣ್ಯ ವ್ಯಕ್ತಿಗಳಿಗೆ, ಹಾಗೂ ತುರ್ತು ಸಂದರ್ಭದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ತಲುಪಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹೆಲಿಪೋರ್ಟ್ʼಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ರಸ್ತೆಯ ಮೂಲಕ ಪ್ರಯಾಣ ಮಾಡಿದರೆ ಸಾಕಷ್ಟು ಸಮಯ ಬೇಕಾಗುತ್ತದೆ. ಸಮಯ ಉಳಿಸಲು ಹಾಗೂ ರಸ್ತೆ ಮಾರ್ಗ ಬಳಕೆಯಿಂದ ತಪ್ಪಿಸಲು ರಾಜ್ಯದಲ್ಲಿ ಅಗತ್ಯವಿರುವ ಕಡೆಯಲ್ಲಾ ಹೆಲಿ ಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವ ಯೋಗೇಶ್ವರ್‌ ತಿಳಿಸಿದರು.

ಇದೇ ವೇಳೆ ಮಾತನಾಡಿದ ಸಚಿವ ನಾರಾಯಣಗೌಡ ಆರೋಗ್ಯ ಇಲಾಖೆಯನ್ನು ಜೊತೆಗೆ ಸೇರಿಸಿಕೊಂಡು ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಕರ್ಯಗಳನ್ನು ಅಭಿವೃದ್ಧಿಪಡಿಸೋಣ ಎಂದರು.

ಕೇವಲ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸೀಮಿತವಾಗದೇ ಆರೋಗ್ಯ ಕ್ಷೇತ್ರ, ನೈಸರ್ಗಿಕ ವಿಪತ್ತು ಸಂಭವಿಸಿದಾಗ ಹೆಲಿಕಾಪ್ಟರ್ ಸೇವೆಯನ್ನು ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ನಾರಾಯಣಗೌಡರು ತಿಳಿಸಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯಲ್ಲಿರುವ ಹಣದಿಂದ ಮೊದಲ ಹಂತದಲ್ಲಿ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ತ್ವರಿತವಾಗಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಯಿತು.

ಅತೀ ಶೀಘ್ರದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರಕ್ಕೆ ತೆರಳಿ ಹೆಲಿಟೂರಿಸಂ ಯೋಜನೆಯ ಸಂಬಂಧ ಸ್ಥಳ ಪರಿಶೀಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

Tags: cp yogeshwarHeli tourismjakkur aerodromeKarnataka tourismkc narayanagowda
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ವ್ಯಕ್ತಿಪೂಜೆಗಲ್ಲ, ಪಕ್ಷಪೂಜೆಗೆ ಮಾತ್ರ ಅವಕಾಶ: ಶಾಸಕ ಜಮೀರ್‌ ಅಹಮದ್‌ಗೆ ನೇರವಾಗಿ ಟಾಂಗ್‌ ಕೊಟ್ಟ ಡಿ.ಕೆ.ಶಿವಕುಮಾರ್

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ