• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಯೋಗ ಸಂತಸದ ಜೀವನ ಮಾರ್ಗ ತೋರುತ್ತದೆ, ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ ಎಂದ ನರೇಂದ್ರ ಮೋದಿ

cknewsnow desk by cknewsnow desk
June 30, 2021
in NATION
Reading Time: 1 min read
0
ಯೋಗ ಸಂತಸದ ಜೀವನ ಮಾರ್ಗ ತೋರುತ್ತದೆ, ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ ಎಂದ ನರೇಂದ್ರ ಮೋದಿ
934
VIEWS
FacebookTwitterWhatsuplinkedinEmail

‘ವಸುಧೈವ ಕುಟುಂಬಕಂ’ ಮಂತ್ರ ಜಾಗತಿಕ ಮನ್ನಣೆ ಪಡೆಯುತ್ತಿದೆ

ನವದೆಹಲಿ: ಸಾಂಕ್ರಾಮಿಕದ ನಡುವೆಯೂ ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ –ʼಯೋಗಕ್ಷೇಮಕ್ಕೆ ಯೋಗ’ ಎಂಬುದಾಗಿದ್ದು, ಅದು ಜನರ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರತಿಯೊಂದು ದೇಶದ, ಸಮಾಜದ ಮತ್ತು ವ್ಯಕ್ತಿಗಳ ಆರೋಗ್ಯಕ್ಕಾಗಿ ಪ್ರಾರ್ಥಿಸಿರುವ ಅವರು, ನಾವೆಲ್ಲರೂ ಒಗ್ಗೂಡಿ, ಪರಸ್ಪರರನ್ನು ಬಲಪಡಿಸೋಣ ಎಂದು ಅವರು ತಿಳಿಸಿದ್ದಾರೆ. ಅವರು ಇಂದು ಏಳನೇ ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಮಾತನಾಡುತ್ತಿದ್ದರು.

ಸಾಂಕ್ರಾಮಿಕದ ಸಂದರ್ಭದಲ್ಲಿ ಯೋಗದ ಪಾತ್ರದ ಬಗ್ಗೆ ಅವರು ಮಾತನಾಡಿದರು. ಸಂಕಷ್ಟದ ಸಮಯದಲ್ಲಿ ಜನರಿಗೆ ಎದುರಾಗಿದ್ದ ಸಂಕಷ್ಟಕ್ಕೆ ಯೋಗ ಬಲದ ಮೂಲವೆಂದು ಸಾಬೀತಾಗಿದೆ ಎಂದು ಹೇಳಿದರು. ಸಾಂಕ್ರಾಮಿಕದ ಸಮಯದಲ್ಲಿ ಯೋಗ ದಿನವನ್ನುಕೆಲವು ದೇಶಗಳು ಮರೆಯುವುದು ಸುಲಭ, ಏಕೆಂದರೆ ಇದು ಅವರ ಸಂಸ್ಕೃತಿಗೆ ಅಂತರ್ಗತವಾಗಿಲ್ಲ ಆದರೂ, ಜಾಗತಿಕವಾಗಿ ಯೋಗದ ಉತ್ಸಾಹ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದರು.

ವಿಶ್ವಾದ್ಯಂತ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಜನರಲ್ಲಿ ಆತ್ಮವಿಶ್ವಾಸ ಮತ್ತು ಬಲ ತುಂಬುವಲ್ಲಿ ಯೋಗ ನೆರವಾಗಿದೆ ಎಂದರು. ಮುಂಚೂಣಿಯ ಕೊರೊನಾ ಯೋಧರು ಯೋಗವನ್ನು ತಮ್ಮ ರಕ್ಷಾ ಕವಚ ಮಾಡಿಕೊಂಡಿದ್ದರು ಮತ್ತು ಯೋಗದ ಮೂಲಕ ತಮ್ಮನ್ನು ಸ್ವಯಂ ಬಲಪಡಿಸಿಕೊಂಡಿರು ಮತ್ತು ಜನರು, ವೈದ್ಯರು, ದಾದಿಯರು ವೈರಾಣುವಿನ ಪ್ರಭಾವ ನಿಭಾಯಿಸಲು ಯೋಗವನ್ನು ಹೇಗೆ ತೆಗೆದುಕೊಂಡರು ಎಂಬುದನ್ನು ಪ್ರಧಾನಮಂತ್ರಿ ತಿಳಿಸಿದರು. ನಮ್ಮ ಶ್ವಾಸಕೋಶದ ವ್ಯವಸ್ಥೆ ಬಲಪಡಿಸುವ, ಉಸಿರಾಟದ ವ್ಯಾಯಾಮಗಳಾದ ಪ್ರಾಣಾಯಾಮ ಮತ್ತು ಅನುಲೋಮ –ವಿಲೋಮದ ಮಹತ್ವವನ್ನು ತಜ್ಞರು ಪ್ರತಿಪಾದಿಸುತ್ತಿದ್ದಾರೆ ಎಂದರು.

ತಮಿಳು ಸಂತ ತಿರುವಳ್ಳವರ್ ಅವರ ಶ್ರೇಷ್ಠ ನುಡಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು ಯೋಗ ರೋಗದ ಮೂಲಕ್ಕೆ ಹೋಗಿ ಅದನ್ನು ಗುಣಪಡಿಸುವ ಸಾಧನವಾಗಿದೆ ಎಂದರು. ಜಾಗತಿಕವಾಗಿ, ಯೋಗದಿಂದ ರೋಗ ಗುಣಪಡಿಸುವ ಗುಣಲಕ್ಷಣಗಳ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಅವರು ತೃಪ್ತಿ ವ್ಯಕ್ತಪಡಿಸಿದರು. ಯೋಗದ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಧ್ಯಯನ ಮಾಡಲಾಗುತ್ತಿದೆ ಮತ್ತು ಮಕ್ಕಳು ತಮ್ಮ ಆನ್‌ ಲೈನ್ ತರಗತಿಗಳಲ್ಲಿ ಯೋಗ ಮಾಡುತ್ತಿದ್ದಾರೆ. ಇದು ಕೊರೊನಾ ವಿರುದ್ಧ ಹೋರಾಡಲು ಮಕ್ಕಳನ್ನು ಸಜ್ಜುಗೊಳಿಸುತ್ತಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು ಯೋಗದ ಸಮಗ್ರ ಸ್ವರೂಪವನ್ನು ಒತ್ತಿ ಹೇಳಿ, ಇದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುತ್ತದೆ ಎಂದು ಹೇಳಿದರು. ಯೋಗವು ನಮ್ಮ ಆಂತರಿಕ ಶಕ್ತಿಯೊಂದಿಗೆ ಸಂಪರ್ಕವನ್ನು ಸಾಧಿಸುತ್ತದೆ ಮತ್ತು ಎಲ್ಲಾ ರೀತಿಯ ನಕಾರಾತ್ಮಕತೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ಯೋಗದ ಸಕಾರಾತ್ಮಕತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಯೋಗ “ ನಿಂದ ಒಕ್ಕೂಟಕ್ಕೆ ಬದಲಾಯಿಸುತ್ತದೆ. ಅನುಭವಕ್ಕೆ ಸಾಬೀತಾದ ಮಾರ್ಗ, ಏಕತೆಯ ಸಾಕಾರವೆಂದರೆ ಯೋಗ.” ಎಂದ ಅವರು, ಈ ನಿಟ್ಟಿನಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರನ್ನು ಉಲ್ಲೇಖಿಸಿ, “ನಮ್ಮ ಆತ್ಮದ ಅರ್ಥವು ದೇವರು ಮತ್ತು ಇತರರಿಂದ ಪ್ರತ್ಯೇಕವಾಗಿರುವುದರಲ್ಲಿ ಕಂಡುಬರುವುದಿಲ್ಲ, ಆದರೆ ಯೋಗ, ಒಗ್ಗೂಡುವಿಕೆಯ ನಿರಂತರ ಸಾಕಾರವಾಗಿದೆ.” ಎಂದರು.

ಭಾರತ ಯುಗ ಯುಗಗಳಿಂದ ಪಾಲಿಸುತ್ತಿರುವ “ವಸುದೈವ ಕುಟುಂಬಕಂ’’ ಮಂತ್ರ ಈಗ ಜಾಗತಿಕ ಮನ್ನಣೆ ಪಡೆಯುತ್ತದೆ. ಮಾನವ ಕುಲಕ್ಕೆ ಭೀತಿ ಇದ್ದಾಗ, ನಾವೆಲ್ಲರೂ ಪರಸ್ಪರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ಯೋಗ ನಮಗೆ ಸಹಜವಾಗೇ ಸಮಗ್ರ ಆರೋಗ್ಯದ ಮಾರ್ಗ ತೋರಿಸುತ್ತದೆ. “ಯೋಗ ನಮಗೆ ಸಂತಸದ ಜೀವನ ಮಾರ್ಗ ತೋರುತ್ತದೆ. ಯೋಗ ಸಾಮೂಹಿಕ ಆರೋಗ್ಯದಲ್ಲಿ ಧನಾತ್ಮಕ ಪಾತ್ರ ವಹಿಸುತ್ತದೆ, ರೋಗತಡೆಯ ಪಾತ್ರ ನಿರ್ವಹಿಸುತ್ತದೆ ಎಂದು ನಾನು ನಂಬಿದ್ದೇನೆ. ” ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.

ಭಾರತ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಇಂದು ಮಹತ್ವದ ಕ್ರಮ ಕೈಗೊಂಡಿವೆ ಎಂದು ಪ್ರಧಾನಮಂತ್ರಿ ಪ್ರಕಟಿಸಿದರು. ಎಂ-ಯೋಗ ಆಪ್ ಅನ್ನು ವಿಶ್ವ ಪಡೆಯಲಿದ್ದು, ಇದು ಹಲವು ಭಾಷೆಗಳಲ್ಲಿ ಸಾಮಾನ್ಯ ಯೋಗ ಶಿಷ್ಟಾಚಾರದ ಆಧಾರದಲ್ಲಿ ಯೋಗ ತರಬೇತಿಯ ವಿಡಿಯೋಗಳನ್ನು ಒದಗಿಸುತ್ತದೆ ಎಂದರು. ಆಧುನಿಕ ತಂತ್ರಜ್ಞಾನ ಮತ್ತು ಸನಾತನ ವಿಜ್ಞಾನದ ಸಮ್ಮಿಲನಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ಹೇಳಿದ ಪ್ರಧಾನಮಂತ್ರಿ, ಎಂ-ಯೋಗ ಆಪ್ ಪ್ರಪಂಚದಾದ್ಯಂತ ಯೋಗ ಪಸರಿಸಲು ಸಹಾಯ ಮಾಡುತ್ತದೆ ಮತ್ತು ‘ಒಂದು ವಿಶ್ವ ಒಂದು ಆರೋಗ್ಯ’ ಪ್ರಯತ್ನಕ್ಕೆ ಕೊಡುಗೆ ನೀಡುತ್ತದೆ ಎಂದು ಆಶಿಸಿದರು.

ಭಗವದ್ಗೀತೆಯ ಉಲ್ಲೇಖ ಮಾಡಿದ ಪ್ರಧಾನಮಂತ್ರಿಯವರು, ಯೋಗವು ಎಲ್ಲರಿಗೂ ಪರಿಹಾರವನ್ನು ನೀಡುವುದರಿಂದ ನಾವು ಸಾಮೂಹಿಕ ಯೋಗದತ್ತ ಸಾಗುವುದನ್ನು ಮುಂದುವರಿಸಬೇಕಾಗಿದೆ ಎಂದರು. ಯೋಗವನ್ನು ಅದರ ಅಡಿಪಾಯ ಮತ್ತು ಸಾರವನ್ನು ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವುದು ಮುಖ್ಯ. ಯೋಗವನ್ನು ಎಲ್ಲರ ಬಳಿಗೆ ತೆಗೆದುಕೊಂಡು ಹೋಗಲು ಯೋಗಾಚಾರ್ಯರು ಮತ್ತು ನಾವೆಲ್ಲರೂ ಕೊಡುಗೆ ನೀಡಬೇಕು ಎಂದು ಪ್ರಧಾನಮಂತ್ರಿ ಹೇಳಿದರು.
(PIB)

Tags: covid 19indiaNagendra modiworld yoga day 2021yoga day
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಶಾಲೆ ಆರಂಭ ಯಾವಾಗ?: ಡಾ.ದೇವಿಶೆಟ್ಟಿ ವರದಿ ಪರಿಶೀಲನೆ ಬಳಿಕ ನಿರ್ಧಾರ ಎಂದ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್

Leave a Reply Cancel reply

Your email address will not be published. Required fields are marked *

Recommended

ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

4 years ago
ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ