• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ಗಲೀಜು ನೀರೇ ಗತಿ; ಹೆಚ್.ಎನ್.ವ್ಯಾಲಿ & ಕೆ.ಸಿ.ವ್ಯಾಲಿ ವಿಷಕಾರಿ ನೀರಿನ 3ನೇ ಹಂತದ ಶುದ್ಧೀಕರಣ ಇಲ್ಲ ಎಂದು ಕೈ ಎತ್ತಿಬಿಟ್ಟ ಸರಕಾರ!!

cknewsnow desk by cknewsnow desk
June 22, 2021
in CHIKKABALLAPUR, STATE
Reading Time: 2 mins read
0
ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ಗಲೀಜು ನೀರೇ ಗತಿ; ಹೆಚ್.ಎನ್.ವ್ಯಾಲಿ & ಕೆ.ಸಿ.ವ್ಯಾಲಿ ವಿಷಕಾರಿ ನೀರಿನ 3ನೇ ಹಂತದ ಶುದ್ಧೀಕರಣ ಇಲ್ಲ ಎಂದು ಕೈ ಎತ್ತಿಬಿಟ್ಟ ಸರಕಾರ!!
1.4k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರದಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಎರಡೂ ಜಿಲ್ಲೆಗಳ ಜನರಿಗೆ ಆಘಾತ; ಕೆರೆಗಳಿಗೆ ಇನ್ನೂ ನಿಲ್ಲುವುದಿಲ್ಲ ವಿಷಪ್ರಾಷನ

by M Krishnappa Chikkaballapura

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಹೆಚ್.ಎನ್.ವ್ಯಾಲಿ ಮತ್ತು ಕೆ.ಸಿ.ವ್ಯಾಲಿ ಯೋಜನೆಗಳ ಮೂಲಕ ಹರಿಸಲಾಗುತ್ತಿರುವ ಬೆಂಗಳೂರು ನಗರದ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡುವುದಿಲ್ಲ ಎಂದು ಹೇಳುವ ಮೂಲಕ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಎರಡೂ ಜಿಲ್ಲೆಗಳ ಜನರಿಗೆ ದೊಡ್ಡ ಆಘಾತ ನೀಡಿದ್ದಾರೆ.

ರಾಜಧಾನಿಯ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಣ ಮಾಡಬೇಕು ಎಂದು ಎರಡೂ ಜಿಲ್ಲೆಗಳ ಜನರು ನಡೆಸುತ್ತಿರುವ ಹೋರಾಟ ಮತ್ತು ಬಹುದಿನಗಳ ಬೇಡಿಕೆಗೆ ಸರಕಾರ ಕವಡೆ ಕಾಸಿನ ಕಿಮ್ಮತ್ತು ನೀಡುವುದಿಲ್ಲ ಎಂಬುದು ಈಗ ಅಧಿಕೃತವಾಗಿದೆ. ಸ್ವತಃ ಸಂಬಂಧಿತ ಸಚಿವರೇ ಆ ಹೇಳಿಕೆ ನೀಡುವ ಮೂಲಕ ಸರಕಾರವೇ ಈ ಅಂಶವನ್ನು ಒಪ್ಪಿಕೊಂಡಂತೆ ಆಗಿದೆ.

ಕೆಲ ದಿನಗಳ ಹಿಂದೆ ವಿಷಕಾರಿ ತ್ಯಾಜ್ಯ ನೀರಿನಿಂದ ಮೀನುಗಳ ಮಾರಣಹೋಮಕ್ಕೆ ಕಾರಣವಾಗಿದ್ದ ಕಂದವಾರ ಕೆರೆಗೆ ಕಾಟಾಚಾರಕ್ಕೆ ಭೇಟಿ ನೀಡಿದ ಮಾಧುಸ್ವಾಮಿ, ಜಸ್ಟ್‌ ಉದ್ದಗಲಕ್ಕೂ ತುಂಬಿದ್ದ ಅಸಂಸ್ಕರಿತ ನೀರನ್ನು ಕಣ್ತುಂಬಿಕೊಂಡರಲ್ಲದೆ, ಮೀನುಗಳ ಸಾವು ಹಾಗೂ ನೀರಿನ ಕೆಟ್ಟ ವಾಸನೆ, ಬಣ್ಣ ಬದಲಾಗುವಿಕೆ ಬಗ್ಗೆ ಚಕಾರ ಎತ್ತಲಿಲ್ಲ.

ಈ ಸಂದರ್ಭದಲ್ಲಿ ಮಾನಾಡಿದ ಸಚಿವರು ಹೇಳಿದ್ದಿಷ್ಟು;
  • ಸದ್ಯಕ್ಕೆ ಬೆಂಗಳೂರಿನಿಂದ ಹೆಚ್.ಎನ್.ವ್ಯಾಲಿ-ಕೆ.ಸಿ.ವ್ಯಾಲಿ ಮೂಲಕ ಹರಿಸಲಾಗುತ್ತಿರುವ ನೀರಿನ ಮೂರನೇ ಹಂತದ ಶುದ್ಧೀಕರಣ ಮಾಡುವುದಿಲ್ಲ. ಈಗ ಹರಿದು ಬರುತ್ತಿರುವ ನೀರೇ ಶುದ್ಧವಾಗಿದೆ, ಈ ಬಗ್ಗೆ ತಜ್ಞರು ಕೂಡ ವರದಿ ಮತ್ತು ಅಭಿಪ್ರಾಯ ನೀಡಿದ್ದಾರೆ. ಈ ನೀರಿನಿಂದ ಜನರು, ಜಾನುವಾರು ಹಾಗೂ ಪರಿಸರಕ್ಕೆ ಯಾವುದೇ ಅಪಾಯವಿಲ್ಲ.
  • ಒಂದು ವೇಳೆ ಮೂರನೇ ಹಂತದ ಶುದ್ಧೀಕರಣ ಮಾಡಿದರೂ ಪ್ರಯೋಜನ ಇಲ್ಲ. ಎರಡನೇ ಹಂತ ಮತ್ತು ಮೂರನೇ ಹಂತದಲ್ಲಿ ಶುದ್ಧೀಕರಣವಾಗುವ ನೀರಿಗೆ ಅಂಥ ದೊಡ್ಡ ವ್ಯತ್ಯಾಸ ಇರುವುದಿಲ್ಲ. ಮೂರನೇ ಹಂತದ ಶುದ್ಧೀಕರಣ ದಂಡ.

ಮಾಧುಸ್ವಾಮಿ ಅವರ ಮಾತುಗಳು ಜಿಲ್ಲೆಯ ಜನರಿಗೆ ತೀವ್ರ ಆಘಾತ ಉಂಟು ಮಾಡಿವೆ. ಸ್ವತಃ ಸಿಕೆನ್ಯೂಸ್‌ ನೌ ಚಿಕ್ಕಬಳ್ಳಾಪುರದ ಕಂದವಾರ ಮತ್ತು ರಂಗಧಾಮ ಕೆರೆಗಳಲ್ಲಿ ಅಸಂಸ್ಕರಿತ ವಿಷಕಾರಿ ನೀರಿನಿಂದ ಮೀನುಗಳ ಮಾರಣಹೋಮ ನಡೆದಿದ್ದನ್ನು ಸಾಕ್ಷಿ ಸಮೇತ ವರದಿ ಮಾಡಿತ್ತು. ಆದರೆ, ಸಚಿವ ಮಹಾಶಯರು ನೋಡಿದರೆ, ನೀರು ಶುದ್ಧವಾಗಿದೆ. ಕುಡಿಯಲೂ ಅಡ್ಡಿ ಇಲ್ಲ ಫರ್ಮಾನು ಹೊರಡಿಸಿ ಹೋಗಿದ್ದಾರೆ.

  • ರಂಗಧಾಮ ಕೆರೆಯಲ್ಲಿ ಕಲುಶಿತ ನೀರಿನಿಂದ ಮೀಸನುಗಳ ಮಾರಣಹೋಮ ಆಗಿದ್ದ ವರಿದಯನ್ನು 2021 ಮೇ 19ರಂದು ಸಿಕೆನ್ಯೂಸ್‌ ನೌ ವರದಿ ಮಾಡಿತ್ತು. ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌ ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

ಹೆಚ್.ಎನ್.ವ್ಯಾಲಿ ನೀರು ಅನಧಿಕೃತವಾಗಿ ತಿರುಗಿಸಿದವರ ವಿರುದ್ಧ ಕಠಿಣ ಕ್ರಮ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಸಲು ಸರಕಾರ ಜಾರಿ ಮಾಡಿರುವ ಹೆಬ್ಬಾಳ-ನಾಗವಾರ ಕೆರೆಗಳ ತ್ಯಾಜ್ಯ ಸಂಸ್ಕರಿತ ನೀರಿನಿಂದ ಯೋಜನೆಯ ವ್ಯಾಪ್ತಿಯ ಎಲ್ಲಾ ಕೆರೆಗಳು ತುಂಬುವ‌ ಅಗತ್ಯವಿದ್ದು, ಮಾರ್ಗಮಧ್ಯೆ ಎಲ್ಲಿಯೂ ನೀರು ಅನಧಿಕೃತವಾಗಿ ತಿರುವು ಪಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದದರು.

  • ಶಿಡ್ಲಘಟ್ಟ ತಾಲೂಕಿನ ಕೆರೆಗಳಿಗೆ ಹೆಚ್.ಎನ್.ವ್ಯಾಲಿ ನೀರು ತುಂಬಿಸಲ ಕೋರಿ ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಿದ ಮಾಜಿ ಸಚಿವ ವಿ.ಮುನಿಯಪ್ಪ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ಮತ್ತಿತರೆ ರೈತರು ಮನವಿ ಸಲ್ಲಿಸಿದರು.

ಹೆಚ್.ಎನ್.ವ್ಯಾಲಿ ನೀರು ಹರಿಯುತ್ತಿರುವ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯನ್ನು ಮಂಗಳವಾರ ವೀಕ್ಷಿಸಿದ ನಂತರ ನೀರನ್ನು ಕೆಲವೆಡೆ ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿರುವ ಬಗ್ಗೆ ರಾಜ್ಯ ರೈತಸಂಘದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ನೇತೃತ್ವದಲ್ಲಿ ರೈತರು ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸುವಲ್ಲಿ ಹೆಚ್.ಎನ್.ವ್ಯಾಲಿ ಯೋಜನೆ ಸಹಕಾರಿಯಾಗಿದೆ. ಈ ಯೋಜನೆಯಿಂದ ಹರಿಯುವ ನೀರು ಯೋಜನೆ ವ್ಯಾಪ್ತಿಯ ತುದಿಯಲ್ಲಿರುವ ಕೆರೆಗೂ ಹರಿಯಬೇಕು. ಆ ಮೂಲಕ ಯೋಜನೆಯ ನಿಜವಾದ ಉದ್ದೇಶ ಈಡೇರಬೇಕು ಎಂಬುದು ಸರಕಾರದ ಉದ್ದೇಶ. ಆದರೆ ಬೆಂಗಳೂರಿನ ಹೆಬ್ಬಾಳ-ನಾಗವಾರ ಕೆರೆ ಪ್ರದೇಶದಿಂದ ಹರಿಯುವಾಗ ಮಾರ್ಗ ಮಧ್ಯೆ ಕೆಲ ಜಮೀನುಗಳ ರೈತರು ನೀರನ್ನು ಅನಧಿಕೃತವಾಗಿ ಉಪಯೋಗಿಸಿಕೊಳುತ್ತಿದ್ದಾರೆ ಎಂಬ ದೂರುಗಳಿವೆ. ಇದರಿಂದ ಯೋಜನೆಯ ನಿಜವಾದ ಉದ್ದೇಶಕ್ಕೆ ಧಕ್ಕೆಯಾಗಬಾರದು, ಈ ಕುರಿತು ನೀರು ಅನಧಿಕೃತ ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುವುದು. ಶಿಡ್ಲಘಟ್ಟ ತಾಲೂಕಿನ ಕೆರೆಗಳಿಗೂ ಶೀಘ್ರದಲ್ಲೆ ನೀರು ಹರಿಸಲಾಗುವುದು ಎಂದರು.

ನಾವು ಕೋಲಾರದಲ್ಲಿ ಅಟಲ್ ಭೂಜಲ ಯೋಜನೆಯ ಕಾರ್ಯಕ್ರಮ ಪೂರ್ಣಗೊಳಿಸಿ ಇಲ್ಲಿಗೆ ಬಂದಿದ್ದೇನೆ. ಜಿಲ್ಲೆಯಲ್ಲಿ ಯಾವ ಕೆರೆಗೆ ಎಷ್ಟರಮಟ್ಟಿಗೆ ನೀರು ಹರಿದಿದೆ ಎನ್ನುವುದನ್ನು ನೋಡಲು ಬಂದಿದ್ದೇನೆ. 1,400 ಕೋಟಿ ರೂ. ವೆಚ್ಚದ ವೃಷಭಾವತಿ ವ್ಯಾಲಿ ಯೋಜನೆಯ ಮೂಲಕ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ತುಮಕೂರಿನ ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಯೋಜನೆಯ ಡಿಪಿಆರ್ ಆಗುತ್ತಿದೆ ಎಂದು ಮಾಹಿತಿ ಅವರು ನೀಡಿದರು.

210 ಎಂಎಲ್‌ಡಿ ನೀರು ಲಭ್ಯವಿಲ್ಲ

ಎಚ್‌.ಎನ್‌.ವ್ಯಾಲಿ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ 210 ಎಂಎಲ್‌ಡಿ ನೀರು ಕೊಡಬೇಕಾಗಿತ್ತು. ಅಷ್ಟು ಪ್ರಮಾಣದ ನೀರು ದೊರೆಯುತ್ತಿಲ್ಲ. ಆದ್ದರಿಂದ ಎಲ್ಲ ಕೆರೆಗಳನ್ನು ತುಂಬಿಸಲು ಸಾಧ್ಯವಾಗುತ್ತಿಲ್ಲ. ಈಗ 100ರಿಂದ 110 ಎಂಎಲ್‌ಡಿ ನೀರು ಹರಿಸಲಾಗುತ್ತಿದೆ. ಎರಡು ತಿಂಗಳ ಒಳಗೆ ಬಾಕಿ ನೀರನ್ನು ಹರಿಸಲಾಗುವುದು ಎಂದು ಅವರು ಹೇಳಿದರು.

ಕಂದವಾರ ಕೆರೆ ತುಂಬಿದ ನಂತರ ಗೋಪಾಲಕೃಷ್ಣ ಕೆರೆಗೆ ನೀರು ತುಂಬಿಸಬೇಕು. ಈ ಕೆರೆಯ ಸಾಮರ್ಥ್ಯ 140 ಎಂಸಿಎಫ್‌ಟಿ ಇದೆ. ದೊಡ್ಡ ಕೆರೆಗಳು ತುಂಬುವವರೆಗೆ ಕಾಯಬಾರದು. 30ರಿಂದ 40 ಎಂಸಿಎಫ್‌ಟಿ ಸಾಮರ್ಥ್ಯದ ಕೆರೆಗಳನ್ನು ಮೊದಲು ತುಂಬಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ಡಿವೈಎಸ್‌ಪಿ ರವಿಶಂಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Tags: bangalore sewage waterchikkaballapurahn valley projectjc madhuswamykandavara lakekc valley projectkolarminor irrigation minister
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉನ್ನತ ಶಿಕ್ಷಣದಲ್ಲಿ ಟೆಕ್‌ ಕ್ರಾಂತಿ: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳ ವಿತರಣೆ

ಉನ್ನತ ಶಿಕ್ಷಣದಲ್ಲಿ ಟೆಕ್‌ ಕ್ರಾಂತಿ: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳ ವಿತರಣೆ

Leave a Reply Cancel reply

Your email address will not be published. Required fields are marked *

Recommended

ಮೈಸೂರು ಅರಮನೆಯ ಪ್ರಖರತೆ ನಡುವೆ ಚಿರಂಜೀವಿ ರಾಹುಲ್ ವೆಲ್ಲಾಲ್ ಗಾಯನದ ಕೋಲ್ಮಿಂಚು

ಮೈಸೂರು ಅರಮನೆಯ ಪ್ರಖರತೆ ನಡುವೆ ಚಿರಂಜೀವಿ ರಾಹುಲ್ ವೆಲ್ಲಾಲ್ ಗಾಯನದ ಕೋಲ್ಮಿಂಚು

6 years ago
ಶುಭಾರಂಭದ ಸಂಕ್ರಮಣ

ಶುಭಾರಂಭದ ಸಂಕ್ರಮಣ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ