- ಪೌರ ಕಾರ್ಮಿಕರು, ಜಲಗಾರರು, ಗೃಹರಕ್ಷಕ ದಳದ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಖಾಸಗಿ ಶಾಲೆಗಳ ಶಿಕ್ಷಕರು, ಖಾಸಗಿ ಕಾಲೇಜು ಉಪನ್ಯಾಸಕರಿಗೆ ದಿನಸಿ ಕಿಟ್
by Ra Na Gopala Reddy Bagepalli
ಬಾಗೇಪಲ್ಲಿ: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೋವಿಡ್ ವಾರಿಯರ್ಸ್ʼಗಳಾದ ಪೌರ ಕಾರ್ಮಿಕರು, ಜಲಗಾರರು, ಗೃಹರಕ್ಷಕ ದಳದ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಖಾಸಗಿ ಶಾಲೆಗಳ ಶಿಕ್ಷಕರು, ಖಾಸಗಿ ಕಾಲೇಜು ಉಪನ್ಯಾಸಕರಿಗೆ ಬೆಂಗಳೂರು ಉಪನಗರ ವರ್ತುಲ ರಸ್ತೆ ಪ್ರಾಧಿಕಾರ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಿ.ಮುನಿರಾಜು ಅವರು ದಿನಸಿ ಪದಾರ್ಥಗಳ ಕಿಟ್‌ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಲಾಕ್‍ಡೌನ್ ಸಂದರ್ಭದಲ್ಲಿ ಜನರನ್ನು ನಿಯಂತ್ರಣ ಮಾಡುವಲ್ಲಿ ಕೊರೋನ ವಾರಿಯರ್ಸ್ ಕಾರ್ಯ ಮಹತ್ತರವಾದುದು. ಅವರ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ, ಅವರಿಗೆ ಅಗತ್ಯವಾದ ನೆರವು ನೀಡಡುವುದು ಎಲ್ಲರ ಕರ್ತವ್ಯ’ ಎಂದರು.
ಕೋವಿಡ್ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಇವರೆಲ್ಲರೂ ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲೂ ಮಹಿಳಾ ಸಿಬ್ಬಂದಿ ಧೈರ್ಯದಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲೂಕು ಬಿಜೆಪಿ ಮಂಡಲಾಧ್ಯಕ್ಷ ಆರ್.ಪ್ರತಾಪ್, ಗುಡಿಬಂಡೆ ಬಿಜೆಪಿ ಮಂಡಲಾಧ್ಯಕ್ಷ ಗಂಗಿರೆಡ್ಡಿ ನಾಗೇಶ್, ಮುಖಂಡರಾದ ನಾಗಪ್ಪ, ವೆಂಕಟೇಶ್, ನಿರ್ಮಲಾ, ಮಂಜುಳಾ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.