• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದ ಸಂಸದ ಡಿ.ಕೆ.ಸುರೇಶ್

cknewsnow desk by cknewsnow desk
June 23, 2021
in POLITICS, STATE
Reading Time: 1 min read
0
ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ, ಕೂಡಲೇ ಅಡುಗೆ ಎಣ್ಣೆ ದರ ನಿಯಂತ್ರಿಸಿ ಎಂದು ಪಿಎಂ, ಸಿಎಂ, ಆಹಾರ ಸಚಿವರಿಗೆ ಪತ್ರ ಬರೆದ ಸಂಸದ ಡಿ.ಕೆ ಸುರೇಶ್
923
VIEWS
FacebookTwitterWhatsuplinkedinEmail

ಶಾಸಕ ಜಮೀರ್‌ಗೆ ಸರಿಯಾಗಿ ಟಾಂಗ್‌ ಕೊಟ್ಟಸುರೇಶ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಕೂಸು ಹುಟ್ಟುವ ಮುನ್ನವೆ ಕುಲಾವಿ ಅನ್ನವಂಥ ಸ್ಥಿತಿ ನಿರ್ಮಾಣವಾಗಿದೆೆ. ಸಿಎಂ ಹುದ್ದೆ ಯಾರಿಗೆ ಎಂಬುದರ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಇಂದು ಸಂಸದ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಬ್ರದರ್‌ ಡಿ ಕೆ ಸುರೇಶ್ ಈ ಬಗ್ಗೆ ಮಾತನಾಡಿದ್ದಾರೆ.

‘ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರೂ ಆದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಭವಿಷ್ಯದ ಸಿಎಂ ವಿಚಾರವಾಗಿ ಪಕ್ಷದಲ್ಲಿ ಎದ್ದಿರುವ ಚರ್ಚೆ ಸಂಬಂಧ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು ಹೇಳಿದ್ದಿಷ್ಟು:

  • ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದರು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ.
  • ‘ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಸಿಎಂ ಸ್ಥಾನ ಖಾಲಿಯೂ ಇಲ್ಲ. ಕಾಂಗ್ರೆಸ್ ನ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023 ಕ್ಕೆ ಚುನಾವಣೆ ಇದೆ. ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಾವು ಭಾವಿಸಿದ್ದೇವೆ. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ.’
  • ಅದು ಶಾಸಕರ ಅಭಿಪ್ರಾಯವೇ ಹೊರತು ನನ್ನ ಅಭಿಪ್ರಾಯವಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ ಅವರು, ‘ಅವರು ಅವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು, ನಾನು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಬಹುದು. ಆದರೆ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕಲ್ಲ, ಅದು ಮುಖ್ಯ.’
  • ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಶಾಸಕರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಸುರೇಶ್ ಅವರು, ‘ಚುನಾವಣೆ ನೇತೃತ್ವದ ಬಗ್ಗೆ ಚರ್ಚೆ ಮಾಡಲು ಸಮಯ ಬಹಳ ದೂರವಿದೆ. ಈಗ ಕರೋನಾ ಇದ್ದು, ಅದನ್ನು ನಿಭಾಯಿಸಲು ಏನು ಮಾಡಬೇಕು ಎಂಬುದನ್ನು ಅವರು ಹೇಳಬೇಕು.’
  • ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿದರು ಎಂಬಂತೆ, ವಿರೋಧ ಪಕ್ಷದವರು ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರಲು ಕಾರಣ ಏನು? ಇದು ಗೊಂದಲ ಸೃಷ್ಟಿಸುವುದಿಲ್ಲವೇ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿದ ಅವರು, ‘ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ. ಕೆಲವರು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಮನಸ್ಥಿತಿ ಉಳ್ಳವರು. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ. ಅವರು ಕಾಂಗ್ರೆಸ್ ಶಿಸ್ತನ್ನು ಕಲಿತಿರುತ್ತಾರೆ. ಅಧಿಕಾರಕ್ಕಾಗಿಯೇ ಕಾಂಗ್ರೆಸ್ ಗೆ ಬಂದವರನ್ನು, ಅದಕ್ಕೆ ಜೋತು ಬಿದ್ದವರನ್ನು ಯಾರು, ಏನೂ ಮಾಡಲು ಸಾಧ್ಯವಿಲ್ಲ.’
  • ಅಶಿಸ್ತು ತೋರಿದವರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ‘ಶಿಸ್ತು, ಅಶಿಸ್ತಿನ ವಿಚಾರವನ್ನು ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ಯಾರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೋ ಅವರು ಅಶಿಸ್ತನ್ನು ಅಭ್ಯಾಸ ಮಾಡಿಕೊಂಡಿದ್ದು, ನಿಜವಾದ ಕಾಂಗ್ರೆಸಿಗರು ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ.’
  • ಶಾಸಕಾಂಗ ಪಕ್ಷದ ನಾಯಕರು ಇದನ್ನು ನಿಯಂತ್ರಿಸಬೇಹುದಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ ಅವರು, ‘ನಾನು ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು, ಪಕ್ಷದ ರಾಜ್ಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ನೇಮಕವಾಗಿದ್ದಾರೆ. ಅವರಿಬ್ಬರೂ ಅವರವರ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯದಲ್ಲಿರುವವರಿಗೆ ಏನು ಕೆಲಸ? ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇದೆ. ಕರೋನಾ ಸಮಯದಲ್ಲಿ ಆಡಳಿತ ಪಕ್ಷದ ವೈಫಲ್ಯ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಎಂ ಹುದ್ದೆ ಸೇರಿ ಸದ್ಯಕ್ಕೆ ಯಾವುದೇ ಸ್ಥಾನ ಖಾಲಿ ಇಲ್ಲ. ಖಾಲಿ ಆದಾಗ ಯಾರ್ಯಾರು ಚರ್ಚೆಗೆ ಬರುತ್ತಾರೋ ಅವರಿಗೆಲ್ಲ ಆಗ ಸವಾಲು ಮಾಡೋಣ.’

Tags: CongressDK Shivakumardk sureshkarnatakaleadership disputePoliticsZameer Ahmed Khan
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಡಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಬ್: ಸ್ಮಾರ್ಟ್ ಶಿಕ್ಷಣಕ್ಕೆ ಪ್ರೋತ್ಸಾಹಿಸಿರುವುದು ಒಳ್ಳೆಯ ಕೆಲಸ ಎಂದ ಎಸ್.ಎನ್.ಸುಬ್ಬಾರೆಡ್ಡಿ

ಗಡಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಬ್: ಸ್ಮಾರ್ಟ್ ಶಿಕ್ಷಣಕ್ಕೆ ಪ್ರೋತ್ಸಾಹಿಸಿರುವುದು ಒಳ್ಳೆಯ ಕೆಲಸ ಎಂದ ಎಸ್.ಎನ್.ಸುಬ್ಬಾರೆಡ್ಡಿ

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ