• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಇನ್ನು 10 ದಿನದಲ್ಲಿ ರಾಜ್ಯದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಕೋವಿಡ್‌ ವ್ಯಾಕ್ಸಿನ್‌

cknewsnow desk by cknewsnow desk
June 30, 2021
in COVID-19, STATE
Reading Time: 1 min read
1
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ
935
VIEWS
FacebookTwitterWhatsuplinkedinEmail

ಅಗಸ್ಟ್‌ನಲ್ಲಿ360 ಆಕ್ಸಿಜನ್ ಘಟಕ ಕಾರ್ಯಾರಂಭ; ಆಮ್ಲಜನಕ ಟ್ಯಾಂಕ್ಗೆ ಜಾಗತಿಕ ಟೆಂಡರ್, ಆಮ್ಲಜನಕ-ಲಸಿಕೆ ವ್ಯವಸ್ಥೆ ಪರಿಶೀಲನೆ ನಡೆಸಿದ ಡಿಸಿಎಂ

ಬೆಂಗಳೂರು: ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆ ನೀಡುವುದು ಹಾಗೂ ಅಗಸ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿ 2,800 ಟನ್ ಆಕ್ಸಿಜನ್  ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯದಲ್ಲಿನ ಆಮ್ಲಜನಕ ವ್ಯವಸ್ಥೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವ ಸಂಬಂಧ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.

ಸೋಮವಾರ 94,000 ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಯಿತು. ರಾಜ್ಯದೆಲ್ಲೆಡೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಜವಾಬ್ದಾರಿ ವಹಿಸಲಾಗಿದ್ದು, ಇನ್ನು ಹತ್ತು ದಿನದಲ್ಲಿ ಎಂಜಿನಿಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಡಿಪ್ಲೊಮೋ, ಜಿಸಿಐಟಿ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚುರುಕಾಗಿ ಲಸಿಕೆ ಕೊಡಲಾಗುವುದು. ಅಲ್ಲದೆ, ಮುಖ್ಯಮಂತ್ರಿಗಳ ಕೌಶಲ್ಯ ಯೋಜನೆ ಅಡಿ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಜೂನ್ ತಿಂಗಳಲ್ಲಿ 60 ಲಕ್ಷ ಲಸಿಕೆ ನೀಡಲಾಗಿದ್ದು, ಜುಲೈನಲ್ಲಿ ಇನ್ನು ಹೆಚ್ಚು ಕೊಡಲಾಗುವುದು. ಈಗಾಗಲೇ ಕೇಂದ್ರದಿಂದ ಉತ್ತಮವಾಗಿ ಲಸಿಕೆ ಪೂರೈಕೆ ಆಗುತ್ತಿದ್ದು, ಖಾಸಗಿ ಕ್ಷೇತ್ರದಿಂದಲೂ ವ್ಯಾಕ್ಸಿನ್ ಪಡೆದು ಜನರಿಗೆ ಕೊಡಲಾಗುವುದು. ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲೇ ರಾಜ್ಯವೂ 3ನೇ ಸ್ಥಾನದಲ್ಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಆಕ್ಸಿಜನ್ ಉತ್ಪಾದನೆ & ಸಂಗ್ರಹ

ಎರಡನೇ ಅಲೆಯ ಸಂಕಷ್ಟ ದೃಷ್ಟಿಯಲ್ಲಿ ಇಟ್ಟುಕೊಂಡು ಮೂರನೇ ಅಲೆಗೆ ಸರ್ವ ಸನ್ನದ್ಧವಾಗಿದೆ ಸರಕಾರ. ಆಮ್ಲಜನಕ ಕೊರತೆ ಆಗದಂತೆ ಕಟ್ಟೆಚ್ಚರ ವಹಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ (ಸರಕಾರಿ & ಖಾಸಗಿ) ಇಲಾಖೆಗಳ ವ್ಯಾಪ್ತಿಯಲ್ಲಿ 400 ಮೆ.ಟನ್ ಆಮ್ಲಜನಕ ಉತ್ಪಾದನೆ ಆಗುವುದಿದೆ. ಕೆಲವೆಡೆ ಈಗಾಗಲೇ ಉತ್ಪಾದನೆ ಆಗುತ್ತಿದ್ದರೆ, ಇನ್ನು ಕೆಲವೆಡೆ ಘಟಕಗಳನ್ನು ಅಳವಡಿಸಲಾಗುತ್ತಿದೆ. ಇನ್ನು ಕೇಂದ್ರ ಸರಕಾರ, ಪಿಎಂ ಕೇರ್, ಸಿಎಸ್ಆರ್ ಹಾಗೂ ರಾಜ್ಯ ಸರಕಾರ ಖರೀದಿ ಮಾಡಿರುವ 40 ಸೇರಿ 187 ಆಮ್ಲಜನಕ ಘಟಕಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಇವುಗಳ ಅಳವಡಿಕೆ ಕಾರ್ಯ ವಿವಿಧ ಹಂತಗಳಲ್ಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೆಲ ಘಟಕಗಳು ಈ ತಿಂಗಳ ಒಳಗಾಗಿ ಉತ್ಪಾದನೆ ಆರಂಭಿಸುವುದಿದ್ದು, ಉಳಿದವು ಆಗಸ್ಟ್ ನಲ್ಲಿ ಪೂರ್ಣ ಉತ್ಪಾದನೆ ಶುರು ಮಾಡಲಿವೆ. ವೈದ್ಯಕೀಯ ಶಿಕ್ಷಣ ಇಲಾಖೆಗೆ ಕೇಂದ್ರವು ನೀಡಿರುವ 17 ಸೇರಿ ಸಿ ಎಸ್ ಆರ್ ನಿಂದ ಬಂದಿರುವವು ಸೇರಿ 40 ಆಕ್ಸಿಜನ್ ಜನರೇಟರ್ ಗಳಿವೆ. ಇದಲ್ಲದೆ, ರಾಜ್ಯ ಸರಕಾರ 35 ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಆಕ್ಸಿಜನ್ ಜನರೇಟರ್ ಗಳ ಅಳವಡಿಕೆ ಮತ್ತು ಸಂಗ್ರಹಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಇಲ್ಲಿಯೂ ಕೂಡ ಅಗಸ್ಟ್ ನಿಂದಲೇ ಆಮ್ಲಜನಕ ಉತ್ಪಾದನೆಯಾಗಲಿದೆ. ಒಟ್ಟು 360 ಘಟಕಗಳಿಂದ ಆಮ್ಲಜನಕ ಲಭ್ಯವಾಗಲಿದೆ. ಜತೆಗೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಿಪತ್ತು ಪರಿಹಾರ ನಿಧಿ, ಸಿಎಸ್ಆರ್ ನೆರವು ಇತ್ಯಾದಿಗಳಿಂದ ಘಟಕಗಳನ್ನು ಹಾಕಲಾಗಿದೆ. ಬುಧವಾರದ ಹೊತ್ತಿಗೆ ಆ ಮಾಹಿತಿ ಸಿಗುತ್ತದೆ. ರಾಜ್ಯದಲ್ಲಿ ನಿಖರವಾಗಿ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಉತ್ಪಾದನೆ ಆಗುತ್ತದೆ ಎಂಬುದನ್ನು ತಿಳಿದುಕೊಂಡು ಮತ್ತಷ್ಟು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಆಮ್ಲಜನಕ ಸಂಗ್ರಹಕ್ಕೂ ಕ್ರಮ

ಆಮ್ಲಜಕನ ಉತ್ಪಾದನೆ ಜತೆಗೆ ಅದರ ಅತ್ಯುತ್ತಮ ಸಂಗ್ರಹಣಾ ವ್ಯವಸ್ಥೆಗೂ ಆದ್ಯತೆ ನೀಡಲಾಗಿದೆ ಎಂದ ಡಿಸಿಎಂ, ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲೇ 1806ಮೆ.ಟನ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 500 ಮೆ.ಟನ್ ಆಮ್ಲಜನಕವನ್ನು ಹೆಚ್ಚುವರಿ ಸಂಗ್ರಹ ಮಾಡುವ ಗುರಿ ಇದ್ದು, ಅದಕ್ಕೆ ಬೇಕಾದ ಎಲ್ಲ ಕ್ರಮವನ್ನು ಈಗಾಗಲೇ ವಹಿಸಲಾಗಿದೆ. ಅಗಸ್ಟ್ ತಿಂಗಳ ಒಳಗೆ ಇದೆಲ್ಲ ಪೂರ್ಣವಾಗಿ ಅನುಷ್ಠಾನಕ್ಕೆ ಬರಲಿದೆ ಎಂದರು.

ಜಾಗತಿಕ ಟೆಂಡರ್

ಆರೋಗ್ಯ ಇಲಾಖೆಯಲ್ಲಿ 1806 ಟನ್ ಸಂಗ್ರಹ ಸಾಮರ್ಥ್ಯದ ಯೋಜನೆಗೆ ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕ ಕೂಡಲೇ ಜಾಗತಿಕ ಟೆಂಡರ್ ಕರೆಯಲಾಗುವುದು. ನಮ್ಮ ದೇಶದಲ್ಲಿ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ ಗಳನ್ನು ತಯಾರಿಸುವ ಎರಡೇ ಕಂಪನಿಗಳಿರುವ ಕಾರಣಕ್ಕೆ ಗ್ಲೋಬಲ್ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಹೇಳಿದರು.

ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ 6 ಮೆ.ಟನ್ ಹಾಗೂ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ತಲಾ 20 ಮೆ.ಟನ್ ಸಂಗ್ರಹ ಮಾಡುವ ಗುರಿ ಇದೆ. ಕೆಲ ಮೆಡಿಕಲ್ ಕಾಲೇಜ್ ಗಳಲ್ಲಿ 40-50 ಮೆ.ಟನ್ ಸಂಗ್ರಹ ಸಾಮರ್ಥ್ಯವುಳ್ಳ ಆಕ್ಸಿಜನ್ ಟ್ಯಾಂಕರ್ ಗಳಿವೆ. ಇಂಥ ಟ್ಯಾಂಕರ್ ಗಳನ್ನು ತಯಾರಿಸಲು ಈ ಟೆಂಡರ್ ಕರೆಯಲಾಗುತ್ತಿದೆ. ಈ ಎಲ್ಲ ಲೆಕ್ಕದಂತೆ 2,500-2,800 ಟನ್ ಆಕ್ಸಿಜನ್ ಸಂಗ್ರಹ ಮಾಡುವ ವ್ಯವಸ್ಥೆ ರಾಜ್ಯದಲ್ಲಿ ಆಗಲಿದೆ. ಜತೆಗೆ ಜಂಬೋ ಮತ್ತು ಡ್ಯೂರಾ ಸಿಲಿಂಡರ್ ಗಳ ಮೂಲಕ 45 ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಅಲ್ಲದೆ, 9 ಜಿಲ್ಲೆಗಳಲ್ಲಿ ಆಕ್ಸಿಜನ್ ರೀ ಫಿಲ್ಲಿಂಗ್ ಸೌಲಭ್ಯ ಇಲ್ಲ, ಅದನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಜತೆಗೆ, ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲೇ ಆಕ್ಸಿಜನ್ ಸಂಗ್ರಹ ಘಟಕಗಳಿಲ್ಲ. ಕೂಡಲೇ ಅಳವಡಿಸಿಕೊಳ್ಳಬೇಕು ಎಂದು ಸರಕಾರ ನೊಟೀಸ್ ಜಾರಿ ಮಾಡಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಆಕ್ಸಿಜನ್ ಬೆಡ್ ಸಂಖ್ಯೆಯೂ ಹೆಚ್ಚಳ

ರಾಜ್ಯದಲ್ಲಿ ಈಗ 58,000 ಆಕ್ಸಿಜನ್ ಬೆಡ್ ಗಳಿದ್ದು, ಈ ಪ್ರಮಾಣವನ್ನು 84,000ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ. ಜತೆಗೆ, ಎಲ್ಲ ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು ಘಟಕಗಳನ್ನು ಆದ್ಯತೆಯ ಮೇರೆಗೆ ಅಳವಡಿಸಲಾಗುತ್ತಿದೆ ಎಂದ ಅವರು, ನೀಡಿದರು.

ಅರಿವಳಿಕೆ ತಜ್ಞ ಡಾ.ರಾಘವೇಂದ್ರ ನೇತೃತ್ವದ ಆಮ್ಲಜನಕ ನಿರ್ವಹಣೆ ಸಮಿತಿ ವರದಿ ನೀಡಿದ್ದು ಆ ಪ್ರಕಾರ ಮೂಲಸೌಕರ್ಯ ಕಲ್ಪಿಸಲು ಕ್ರಮ ಜರುಗಿಸಲಾಗಿದೆ ಎಂದರು. ಆರೋಗ್ಯ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ಜಾವೇದ ಅಕ್ತರ್, ಲಸಿಕೆ ಉಸ್ತುವಾರಿ ಅಧಿಕಾರಿ ವಂದಿತಾ ಶರ್ಮಾ, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅನಿಲ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Tags: covid19deputy chief ministerdr cn ashwath narayankarnataka fight back coronaoxygen generationoxygen storage
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಷ್ಟ್ರೀಯ ಶಿಕ್ಷಣ ನೀತಿ: ಉಪ ಮುಖ್ಯಮಂತ್ರಿಗೆ ಉಪಯುಕ್ತ ಸಲಹೆ ಕೊಟ್ಟ ಸುತ್ತೂರು ಶ್ರೀಗಳು

ರಾಷ್ಟ್ರೀಯ ಶಿಕ್ಷಣ ನೀತಿ: ಉಪ ಮುಖ್ಯಮಂತ್ರಿಗೆ ಉಪಯುಕ್ತ ಸಲಹೆ ಕೊಟ್ಟ ಸುತ್ತೂರು ಶ್ರೀಗಳು

Comments 1

  1. Kavitha HG says:
    5 years ago

    Good story for students

    Reply

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಕೊರೊನಾ ಲಸಿಕೆ ತಯಾರಿ ಇಡೀ ದೇಶವೇ ಹೆಮ್ಮೆಪಡುವಂಥ ಸಂಗತಿ, ವ್ಯಾಕ್ಸಿನ್ ವಿತರಣೆಗೆ ಸಕಲ ಸಿದ್ಧತೆ‌ ಮಾಡಲಾಗುತ್ತಿದೆ ಎಂದ ಆರೋಗ್ಯ ಸಚಿವ ಡಾ.ಸುಧಾಕರ್

6 years ago
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ