• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಿಕ್ಕಬಳ್ಳಾಪುರ-ಕೋಲಾರ ಕೆರೆಗಳಿಗೆ ಹರಿಸುವ ತ್ಯಾಜ್ಯ ನೀರು 3ನೇ ಹಂತದ ಶುದ್ಧೀಕರಣ

cknewsnow desk by cknewsnow desk
July 1, 2021
in STATE
Reading Time: 2 mins read
0
ಚಿಕ್ಕಬಳ್ಳಾಪುರ-ಕೋಲಾರ ಕೆರೆಗಳಿಗೆ ಹರಿಸುವ ತ್ಯಾಜ್ಯ ನೀರು 3ನೇ ಹಂತದ ಶುದ್ಧೀಕರಣ
1.1k
VIEWS
FacebookTwitterWhatsuplinkedinEmail

ಮಾಲಿನ್ಯ ನಿಯಮ ಉಲ್ಲಂಘಿಸುವ ಕ್ರಷರ್‌ಗಳ ಮೇಲೆ ಕಠಿಣ ಕ್ರಮ: ಕ್ರಷರ್‌ ಸೇರಿ ಕೈಗಾರಿಕೆ, ಆಸ್ಪತ್ರೆ, ಔಷಧಿ ತಯಾರಿಕಾ ಕಂಪನಿಗಳಿಗೆ ನೇರ ಭೇಟಿ & ತಪಾಸಣೆ: ಸಚಿವ ಸಿ.ಪಿ.ಯೋಗೇಶ್ವರ

ಬೆಂಗಳೂರು: ನೆರೆಯ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಪೂರೈಕೆ ಮಾಡುವ ಬೆಂಗಳೂರು ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಿ ಪೂರೈಕೆ ಮಾಡಬೇಕು ಎಂದು ಪರಿಸರ ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂಗಳೂರಿನಲ್ಲಿ ಅಧಿಕಾರಿಗಳ ಜತೆ ಪರಿಸರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಮೂರನೇ ಹಂತದ ಸಂಸ್ಕರಣೆ ಮಾಡದೇ ಕೆರೆಗಳಿಗೆ ನೀರು ತುಂಬಿಸಬಾರದು ಎಂದು ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ಕೆ.ಸಿ.ವ್ಯಾಲಿ ಯೋಜನೆಯಡಿ ಕೋಲಾರ ಜಿಲ್ಲೆಯ 129 ಕೆರೆಗಳನ್ನು ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈಗಾಗಲೇ 84 ಕೆರೆಗಳನ್ನು ತುಂಬಿಸಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆ 84 ಕೆರೆಗಳನ್ನು ತುಂಬಿಸಲಾಗುತ್ತಿದೆ. ಆದರೆ ಮೊದಲ ಹಾಗೂ ಎರಡನೇ ಹಂತದಲ್ಲಿ ತ್ಯಾಜ್ಯ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೇ ಕೆರೆಗಳನ್ನು ತುಂಬಿಸಿರುವುದರಿಂದ ಆ ಭಾಗದ ಅಂತರ್ಜಲ ವಿಷವಾಗಿ ಮಾರ್ಪಾಡಾಗಿದೆ. ಹೀಗಾಗಿ ಇನ್ನು ಮುಂದೆ ವೈಜ್ಞಾನಿಕವಾಗಿ ಮೂರನೇ ಹಂತದಲ್ಲಿ ತ್ಯಾಜ್ಯನೀರು ಸಂಸ್ಕರಣೆ ಮಾಡಿದ ನಂತರವೇ ಕೆರೆಗಳಿಗೆ ನೀರು ತುಂಬಿಸಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

ಇಸ್ರೇಲ್‍ ತಂತ್ರಜ್ಞಾನ ಬಳಸಿ ತ್ಯಾಜ್ಯ ನೀರು ಸಂಸ್ಕರಣೆ ಮಾಡಿದರೇ ನೀರಿನ ಗುಣಮಟ್ಟ ಉತ್ತಮವಾಗಲಿದ್ದು, ಕೃಷಿಗೂ ಬಳಸಬಹುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ನಾನೇ ಖುದ್ದು ಕೆರೆಗಳಿಗೆ ಭೇಟಿ ನೀಡಿ ಪರಿಶೀಲಿಸುವೆ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕ್ರಷರ್‌ ಮತ್ತು ಕೈಗಾರಿಕೆಗಳ ಮೇಲೆ ಕ್ರಮ

ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸದಿರುವ ಕಲ್ಲು ಕ್ರಷರ್‌ಗಳೂ ಸೇರಿದಂತೆ ಕೈಗಾರಿಕೆಗಳು, ಆಸ್ಪತ್ರೆಗಳು, ಔಷಧಿ ತಯಾರಿಕಾ ಕಂಪನಿಗಳಿಗೆ ಮೂಗುದಾರ ಹಾಕಲಾಗುವುದು. ಈ ಬಗ್ಗೆ ನೇರವಾಗಿ ತಪಾಸಣೆ ಅಭಿಯಾನ ಆರಂಭಿಸುವುದಾಗಿ ಸಚಿವ ಸಿ.ಪಿ.ಯೋಗೇಶ್ವರ ತಿಳಿಸಿದರು.

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಇರುವ ವಿವಿಧ ರೀತಿಯ ಕೈಗಾರಿಕೆಗಳು ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೇ ನದಿ-ಕೆರೆ ಸೇರಿ ಜಲ ಮೂಲಗಳಿಗೆ ನೇರವಾಗಿ ಹಾಕುತ್ತಿರುವುದು ಹಾಗೂ ಖಾಲಿ ಜಮೀನುಗಳಿಗೆ ತುಂಬುತ್ತಿರುವುದರ ಬಗ್ಗೆ ಅನೇಕ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಮುಂದಿನ ವಾರದಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡುವುದಾಗಿ ಅವರು ಹೇಳಿದರು.

ಯಾವುದೇ ರೀತಿಯ ಕೈಗಾರಿಕೆಗಳು ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದರೆ ಮುಲಾಜಿಲ್ಲದೇ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು. ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

ತ್ಯಾಜ್ಯ ವಿಲೇವಾರಿಗೂ ಪರ್ಮಿಟ್

ಗಣಿ ಮತ್ತು ಭೂ-ವಿಜ್ಞಾನ ಇಲಾಖೆಯಲ್ಲಿ ಮರಳು, ಕಲ್ಲು, ಗ್ರ್ಯಾನೇಟ್‍ ಸಾಗಿಸಲು ಪರ್ಮಿಟ್‍ ನೀಡುತ್ತಿದ್ದು, ಅದೇ ರೀತಿಯಲ್ಲಿ ಪರಿಸರ ಇಲಾಖೆಯಲ್ಲೂ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿಖರವಾದ ತೂಕ ಮಾಡಿ ಪರ್ಮಿಟ್‍ ನೀಡುವ ವ್ಯವಸ್ಥೆ ಜಾರಿಗೆ ತರುವುದಾಗಿ ಸಚಿವರು ತಿಳಿಸಿದರು.

ಪರಿಸರ ಇಲಾಖೆಯ ಅಧಿಕಾರಿಗಳು ಇನ್ನು ಮುಂದೆ ಯಾವುದೇ ಮುಲಾಜಿಲ್ಲದೇ ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ತಾವು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ನೀಡುವುದಾಗಿ ಎಚ್ಚರಿಕೆ ನೀಡಿದರು.

17 ನದಿಗಳ ಪುನಶ್ಚೇತನದ ಬಗ್ಗೆ ಚರ್ಚೆ

ನಗರ-ಪಟ್ಟಣ ಹಾಗೂ ಹಳ್ಳಿಗಳ ಜನವಸತಿ ಪ್ರದೇಶದಿಂದ ಹಾಗೂ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೇ ನದಿಗಳಿಗೆ ನೀರು ಬಿಡಲಾಗಿದ್ದು, ಎಲ್ಲಾ ನದಿಗಳು ಕಲುಷಿತಗೊಂಡು ನೀರು ಬಳಸಲು ಯೋಗ್ಯವಲ್ಲದ ಪರಿಸ್ಥಿತಿಯಲ್ಲಿದೆ. ಹೀಗಾಗಿ ನಗರಾಭಿವೃದ್ಧಿ ಇಲಾಖೆಯೊಂದಿಗೆ ಸಭೆ ನಡೆಸಿ ಜನ ವಸತಿ ಪ್ರದೇಶ ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ಸಂಸ್ಕರಣೆ ಮಾಡಿದ ನಂತರ ಉಧ್ಯಾನವನ ಹಾಗೂ ಇತರೆ ಸೌಲಭ್ಯಗಳಿಗೆ ನೀರನ್ನು ಬಳಸಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎಂದು ಸಚಿವರು ಹೇಳಿದರು.

ಮೈಸೂರಿನ ಲಕ್ಷ್ಮಣತೀರ್ಥ ನದಿ ಮೀತಿ-ಮೀರಿ ಕಲುಷಿತಗೊಂಡಿದ್ದು, ಬಳಕೆಗೆ ಯೋಗ್ಯವಿಲ್ಲದಂತೆ ಆಗಿದೆ. ಇದೇ ರೀತಿಯಲ್ಲಿ ರಾಜ್ಯದ ಎಲ್ಲಾ ನದಿಗಳು ಸಹ ಕಲುಷಿತಗೊಂಡಿವೆ ಎಂದರು ಸಚಿವರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿನದಲ್ಲಿರುವ 9 ಲ್ಯಾಬೋರೇಟರಿಗಳನ್ನು ಮೇಲ್ದರ್ಜೆಗೆರಿಸಲು ನಿರ್ಧಾರ ಕೈಗೊಳ್ಳಲಾಯಿತು. ಬೆಂಗಳೂರು-ಮೈಸೂರು-ಹಾಸನ-ಮಂಗಳೂರು-ಬೆಳಗಾವಿ-ಧಾರವಾಡ-ಕಲಬುರಗಿ-ರಾಯಚೂರು ಹಾಗೂ ದಾವಣಗೆರೆಯಲ್ಲಿ ಎಲ್ಲಾ ಲ್ಯಾಬೋರೇಟರಿಗಳನ್ನು ಮೇಲ್ದರ್ಜೆಗೇರಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 174 ಹುದ್ದೆಗಳನ್ನು ಮೊದಲ ಹಂತದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಉಳಿದ 150ಕ್ಕೂ ಹೆಚ್ಚಿನ ಹುದ್ದೆಗಳನ್ನು ಎರಡನೇ ಹಂತದಲ್ಲಿ ಭರ್ತಿ ಮಾಡುವುದಾಗಿ ಅವರು ತಿಳಿಸಿದರು.

ಕೈಗಾರಿಕೆಗಳ ಸಮ್ಮತಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು, ಶುಲ್ಕ ಪಾವತಿಗೆ ಮೂರು ತಿಂಗಳ ಸಮಯವನ್ನು ವಿಸ್ತರಿಸಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬ್ರೀಜೇಶ್‍ ಕುಮಾರ್‍, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


  • ಮೇಲಿನ ಚಿತ್ರ: ಮಾಲಿನ್ಯ ನಿಯಂತ್ರಣ ಮಂಡಳಿ ತಪಾಸಣಾ ವಾಹನಗಳಿಗೆ ಚಾಲನೆ ನೀಡಿದ ಸಚಿವ ಸಿ.ಪಿ.ಯೋಗೇಶ್ವರ.

Tags: 3rd level waste water treatmentBangalore waste waterchikkaballapuracp yogeshwarahn valley projectkc valley projectkolarpollution control board
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕೋವಿಡ್ ವಾರಿಯರ್ಗಳಾಗಿ ಶಿಕ್ಷಕರು; ಮುಖ್ಯಮಂತ್ರಿಗೆ ಮನವಿ

ಕೋವಿಡ್ ವಾರಿಯರ್ಗಳಾಗಿ ಶಿಕ್ಷಕರು; ಮುಖ್ಯಮಂತ್ರಿಗೆ ಮನವಿ

Leave a Reply Cancel reply

Your email address will not be published. Required fields are marked *

Recommended

ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

6 years ago
4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ

ಯಡಿಯೂರಪ್ಪ, ವಿಜಯೇಂದ್ರ ಆಪ್ತರ ಮೇಲೆ ಐಟಿ ದಾಳಿಗೆ ಕಾರಣ ಯಾರು?

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ