• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ವಿಜ್ಞಾನವೆಂದರೆ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ವೃತ್ತಿಯಷ್ಟೇ ಆಗಿರಲಿಲ್ಲ; ಬದುಕು, ಬದ್ಧತೆ ಎಲ್ಲವೂ ಆಗಿತ್ತು

P K Channakrishna by P K Channakrishna
July 2, 2021
in STATE, TECH
Reading Time: 1 min read
1
ವಿಜ್ಞಾನವೆಂದರೆ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ವೃತ್ತಿಯಷ್ಟೇ ಆಗಿರಲಿಲ್ಲ; ಬದುಕು, ಬದ್ಧತೆ ಎಲ್ಲವೂ ಆಗಿತ್ತು
954
VIEWS
FacebookTwitterWhatsuplinkedinEmail

ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲವಾದರೂ ಅವರ ಅಂಕಣ, ಬರಹ ಅಜರಾಮರ. ಭಾರತದ ವಿಜ್ಞಾನ ಮತ್ತು ರಕ್ಷಣೆಯ ಕಥೆಯನ್ನು ಅದ್ಭುತವಾಗಿ ಹೇಳುತ್ತಿದ್ದ ಅವರು ಇನ್ನು ನೆನಪು ಮಾತ್ರ. ಆದರೆ ಅವರು ಬರೆದಿಟ್ಟು ಹೋದದ್ದು ನಮ್ಮೆದುರೇ ಇದೆ.

ಬೆಂಗಳೂರು: ತೀವ್ರ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದ ಸುಧೀಂದ್ರ ಹಾಲ್ದೊಡ್ಡೇರಿ ಅವರು ಪತ್ರಕರ್ತರೊಬ್ಬರ ಪುತ್ರ.

ಬದುಕಿನುದ್ದಕ್ಕೂ ಬರೆಯುತ್ತಲೇ ಇದ್ದ ಅವರು ನಮಗೆ ಬಿಟ್ಟುಹೋಗಿರುವುದು ಅಗಾಧ ಬರವಣಿಗೆ ಮತ್ತು ವಿಜ್ಞಾನವನ್ನೇ.

ಸುಧೀಂದ್ರ ಹಾಲ್ದೊಡ್ಡೇರಿ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಾಲ್ದೊಡ್ಡೇರಿ ಗ್ರಾಮಕ್ಕೆ ಸೇರಿದವರು, (ಹುಟ್ಟಿ ಬೆಳೆದದ್ದೆಲ್ಲ ಬೆಂಗಳೂರಿನ ಜಯನಗರ). ಅವರ ತಂದೆ ಎಚ್.ಆರ್.ನಾಗೇಶರಾವ್ ಅವರು ʼಸಂಯುಕ್ತ ಕರ್ನಾಟಕʼ ಪತ್ರಿಕೆಯಲ್ಲಿ ಸ್ಥಾನಿಕ ಸಂಪಾದಕ ಸೇರಿ ಹಲವು ಮಹತ್ವದ ಹುದ್ದೆಗಳಲ್ಲಿ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತರು. ತಂದೆಯಿಂದ ಬಂದ ಬಳುವಳಿಯಂತೆ ಸುಧೀಂದ್ರ ಹಾಲ್ದೊಡ್ಡೇರಿ ತಮ್ಮ ಕೊನೆಗಾಲದವರೆಗೂ ಬರೆಯುತ್ತಲೇ ಇದ್ದರು.

ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಲ್ಲಿ ವಿಜ್ಞಾನಿಯಾಗಿ, ಎನ್ಎ‌ಎಲ್ ಹಿರಿಯ ಎಂಜಿನಿಯರ್ ಆಗಿ, ಅಂಕಣಕಾರರಾಗಿಯೂ ರಾಜ್ಯದ ಮನೆಮಾತಾಗಿದ್ದ ಸುಧೀಂದ್ರ ಹಾಲ್ದೊಡ್ಡೇರಿ ಇವತ್ತು (2021 ಜುಲೈ 2) ಮಧ್ಯಾಹ್ನ ವಿಧಿವಶರಾಗಿದ್ದಾರೆ.

61 ವರ್ಷ ವಯಸ್ಸಿನ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ವಾರದ ಹಿಂದೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಬದುಕಿ ಉಳಿಯುವ ಬಗ್ಗೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದರು. ಮಿದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಕಷ್ಟವಾಗಿತ್ತು, ಕ್ರಮೇಣ ಅವರ ಮಿದುಳು ಪೂರ್ಣವಾಗಿ ನಿಷ್ಕ್ರಿಯಗೊಂಡಿತ್ತು.

ಅವರ ನಿಧನದಿಂದ ಕರ್ನಾಟಕ ವಿಜ್ಞಾನ ವಲಯದಲ್ಲಿ ಶೂನ್ಯತೆ ಆವರಿಸಿದೆ. ಅವರ ಅಕಾಲಿಕ ಅಗಲಿಕೆಯಿಂದ ವಿಜ್ಞಾನ ಕ್ಷೇತ್ರವಲ್ಲದೆ ಮಾಧ್ಯಮ ಕ್ಷೇತ್ರವೂ ಮೌನವಾಗಿದೆ.

ಕನ್ನಡಪ್ರಭ, ವಿಜಯ ಕರ್ನಾಟಕ ಸೇರಿದಂತೆ ಬಹುತೇಕ ಪತ್ರಿಕೆಗಳಿಗೆ ಅವಿಶ್ರಾಂತವಾಗಿ ವಿಜ್ಞಾನ ಅಂಕಣ ಬರೆಯುತ್ತಿದ್ದ ಸುಧೀಂದ್ರ ಹಾಲ್ದೊಡ್ಡೇರಿ ಅವರು, ಅಪಾರ ಓದುಗರನ್ನು ಹೊಂದಿದ್ದರು. ಮಾತ್ರವಲ್ಲದೆ, ಪತ್ರಿಕೆಗಳಿಗೆ ಹೊಸ, ಯುವ ಓದುಗರನ್ನು ಸೃಷ್ಟಿ ಮಾಡಿಕೊಟ್ಟಿದ್ದರು. ಸರಳವಾಗಿ ವಿಜ್ಞಾನ, ತಂತ್ರಜ್ಞಾನ & ರಕ್ಷಣಾ ವಲಯಕ್ಕೆ ಸಂಬಂಧಿಸಿದ ಸಂಕೀರ್ಣ ವಿಷಯಗಳನ್ನು ಸುಲಭವಾಗಿ ಅರ್ಥವಾಗುವಂತೆ ತಿಳಿಗನ್ನಡದಲ್ಲೇ ಸೊಗಸಾಗಿ ಬರೆಯುತ್ತಿದ್ದ ಅವರ ಲೇಖನಗಳು ಓದುಗರ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದವು. ಹೊಸ ತಲೆಮಾರಿನ ವಿಜ್ಞಾನಿಗಳಿಗೆ ಅವರ ಅಂಕಣಗಳು ಆಕರ ಸಾಮಗ್ರಿಯಾಗುತ್ತಿದ್ದವು.

1998ರಲ್ಲಿ ಪ್ರಕಟವಾದ ಮೊದಲ ಲೇಖನ

ಸುಧೀಂದ್ರ ಹಾಲ್ದೊಡ್ಡೇರಿ ಅವರನ್ನು 1998ರಿಂದಲೂ ನಿಕಟವಾಗಿ ಬಲ್ಲ ಹಿರಿಯ ಪತ್ರಕರ್ತ ಬಿ.ಎಸ್.ಜಯಪ್ರಕಾಶ ನಾರಾಯಣ (ಜೇಪಿ), ಅವರ ಕುರಿತ ಕೆಲ ಸ್ವಾರಸ್ಯಕರ ಸಂಗತಿಗಳನ್ನು ಸಿಕೆನ್ಯೂಸ್‌ ನೌ ಜತೆ ಹಂಚಿಕೊಂಡಿದ್ದಾರೆ.

“1998ರಲ್ಲಿ ನಾನು ಕನ್ನಡಪ್ರಭದಲ್ಲಿ ಮ್ಯಾಗಝಿನ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೆ. ಒಂದು ದಿನ ಸುಧೀಂದ್ರ ಹಾಲ್ದೊಡ್ಡೇರಿ ಬಂದರು. ಆವತ್ತೇ ನನಗೆ ಅವರ ಪರಿಚಯವಾಗಿದ್ದು. ಒಂದು ಲೇಖನ ತಂದು ಕೊಟ್ಟುಹೋದರು. ವೈಎನ್‌ಕೆ ಅವರು ಆಗ ಕನ್ನಡಪ್ರಭದ ಸಂಪಾದಕರು. ಅವರ ಲೇಖನ ಸಂಪಾದಕರಿಗೆ ಇಷ್ಟವಾಗಿ ಆ ವಾರದ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾಯಿತು. ಅದರ ಹೆಡ್‌ಲೈನ್‌ ನನಗೆ ಈಗಲೂ ನೆನಪಿದೆ. “ತಂತ್ರಜ್ಞಾನದ ಬೆನ್ನೇರಿ ಬಂತು ಕಲ್ಪನಾ ವಿಲಾಸ” ಅಂತ ಆ ಹೆಡ್‌ಲೈನ್.‌ ಸುಧೀಂದ್ರ ಹಾಲ್ದೊಡ್ಡೇರಿ ಪತ್ರಿಕೆಯೊಂದರಲ್ಲಿ ಬರೆದ ಮೊತ್ತ ಮೊದಲ ಲೇಖನ ಅದು. ಅದಾದ ಮೇಲೆ ಅವರು ನಿರಂತರವಾಗಿ ಬರೆಯುತ್ತಲೇ ಇದ್ದರು.

ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕನ್ನಡವೆಂದರೆ ಪಂಚಪ್ರಾಣ. ಕನ್ನಡದ ಕೆಲಸವೆಂದರಂತೂ ಇತರೆ ಎಲ್ಲ ಕೆಲಸವನ್ನೂ ಬಿಟ್ಟು ಮಾಡುತ್ತಿದ್ದರು. ಕನ್ನಡಕ್ಕಾಗಿ ಯಾರೇ ಕರೆದರೂ ಹೋಗುತ್ತಿದ್ದರು. ಕನ್ನಡ ಗೆಳೆಯರ ಬಳಗದ ಜತೆ ಅವರ ಬಾಂಧವ್ಯ ನಿಕಟವಾಗಿತ್ತು. ಕನ್ನಡ ಸಾಹಿತ್ಯವನ್ನು ಅಗಾಧವಾಗಿ ಓದಿಕೊಂಡಿದ್ದರು. ವಿಜ್ಞಾನವನ್ನು ಎಳೆಮಕ್ಕಳಿಗೂ ಅರ್ಥವಾಗುವಂತೆ ಕಥೆಯಂತೆ ಸೊಗಸಾಗಿ ಬರೆಯುತ್ತಿದ್ದರು. ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದ ನಂತರವಂತೂ ಅವಿಶ್ರಾಂತವಾಗಿ ಬರೆಯಲಾರಂಭಿಸಿದರು. ಒಂದೆಡೆ ಓದು, ಇನ್ನೊಂದೆಡೆ ಬರವಣಿಗೆ ಅವರನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ದು ನಿಲ್ಲಿಸಿದವು ಎನ್ನುತ್ತಾರೆ ಜೇಪಿ.

ವಿಜ್ಞಾನಿಯಾಗಿ ಸುಧೀಂದ್ರ ಹಾಲ್ದೊಡ್ಡೇರಿ ಅವರು ಅನೇಕ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಲಘು ಯುದ್ಧ ವಿಮಾನ (LCA) ಯೋಜನೆಯಲ್ಲಿ ಅವರ ಸಕ್ರಿಯ ಪಾತ್ರವಿದೆ. ಅದೇ ಸಂದರ್ಭದಲ್ಲಿ ರಕ್ಷಣಾ ಮಂತ್ರಿಯಗಿದ್ದ ಜಾರ್ಜ್‌ ಫೆರ್ನಾಂಡೀಸ್‌ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದರು ಅವರು. ಸುಧೀಂದ್ರ ಹಾಲ್ದೊಡ್ಡೇರಿ ಅವರು ಬರೆದ ಲೇಖನಗಳಲ್ಲಿ ಭಾರತದ ವೈಜ್ಞಾನಿಕ ಬೆಳವಣಿಗೆ ಮತ್ತೂ ಭಾರತವು ರಕ್ಷಣಾ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿದ ಕಥನವೂ ಇದೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜ್ಞಾನಿಯಾಗಿ ಜ್ಯೋತಿಷ್ಯವನ್ನು ಒಪ್ಪುತ್ತಿರಲಿಲ್ಲ. ಬೆಳಬೆಳಗ್ಗೆ ಜ್ಯೋತಿಷ್ಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಸುದ್ದಿ ಚಾನೆಲ್‌ಗಳೆಂದರೆ ಅವರಿಗೆ ಸರಿ ಕಾಣುತ್ತಿರಲಿಲ್ಲ. ವಿಜ್ಞಾನಿ ಮತ್ತು ಜ್ಯೋತಿಷಿಯನ್ನು ಅಕ್ಕಪಕ್ಕ ಕೂರಿಸಿ ಪ್ರಶ್ನಿಸುವುದನ್ನು ಅವರು ವಿರೋಧಿಸುತ್ತಿದ್ದರು. ಗ್ರಹಣ ಮತ್ತಿತರೆ ಯಾವುದೇ ವಿಷಯ ಇಟ್ಟುಕೊಂಡು ಚಾನೆಲ್‌ಗಳು ಜ್ಯೋತಿಷಿಯನ್ನು ಪಕ್ಷ ಕೂರಿಸಿ ಚರ್ಚೆಗೆ ಕರೆದರೆ ಸುಧೀಂದ್ರ ಹಾಲ್ದೊಡ್ಡೇರಿ ಅವರು ಅಂಥ ಚಾನೆಲ್‌ ಕಡೆ ಹೋಗುತ್ತಿರಲಿಲ್ಲ, ಕೊನೆಪಕ್ಷ ಪ್ರತಿಕ್ರಿಯೆಯನ್ನೂ ಕೊಡುತ್ತಿರಲಿಲ್ಲ ಎಂದು ಹೇಳುತ್ತಾರೆ ಜೇಪಿ.

ವಿಜ್ಞಾನವೆಂದರೆ ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ವೃತ್ತಿಯಷ್ಟೇ ಆಗಿರಲಿಲ್ಲ; ಬದಲಿಗೆ ಬದುಕು, ಬದ್ಧತೆ ಎಲ್ಲವೂ ಆಗಿತ್ತು.

ದುಃಖದ ಸಂಗತಿ ಎಂದರೆ, ಅವರಿಗೆ ಇಂದು (ಶುಕ್ರವಾರ) ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾಗಿದ್ದಾರೆ.

Lead photo courtesy: DD Chandana News@DDChandanaNews

Tags: drdodrdo scientisthalKannada writerSciencesudhindra haldodderisudhindra haldodderi passes away
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

Comments 1

  1. Pingback: ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನದ ವಿಷಯಗಳ ಬಗ್ಗೆ ಬರೆದಿರುವ ಸುಧೀಂದ್ರ ಹಾಲ್ದೊಡ್ಡೇರಿ - cknewsnow

Leave a Reply Cancel reply

Your email address will not be published. Required fields are marked *

Recommended

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್- ಮೋದಿ ಮಾತುಕತೆ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್- ಮೋದಿ ಮಾತುಕತೆ

4 years ago
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ