• About
  • Advertise
  • Careers
  • Contact
Friday, October 30, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಸ್ಕೂಲ್ ಆಫ್ ಮೈನಿಂಗ್ಸ್

cknewsnow desk by cknewsnow desk
July 5, 2021
in STATE
Reading Time: 1 min read
0
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?
940
VIEWS
FacebookTwitterWhatsuplinkedinEmail

ನದಿ ಮರಳನ್ನು ಸಂಸ್ಕರಿಸಿ ಗ್ರೇಡ್ ಆಧಾರದಲ್ಲಿ ಮಾರಾಟ ಮಾಡಲಾಗುವುದು ಎಂದ ಮುರುಗೇಶ್‌ ನಿರಾಣಿ

ತುಮಕೂರು: ಗಣಿಗಾರಿಕೆ ನಿರ್ವಾಹಣೆ, ಮಾಲೀಕರು ಮತ್ತು ಕಾರ್ಮಿಕರಿಗೆ ತರಬೇತಿ, ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಬಳ್ಳಾರಿಯಲ್ಲಿ ‘ಸ್ಕೂಲ್ ಆಫ್ ಮೈನಿಂಗ್’ ಪ್ರಾರಂಭಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಘೋಷಿಸಿದ್ದಾರೆ.

ಸೋಮವಾರ ಇಲ್ಲಿನ ‌ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ದೇಶದಲ್ಲೇ ಎರಡನೇ ಸ್ಕೂಲ್ ಆಫ್ ಮೈನಿಂಗ್ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುಮಾರು 50 ಎಕರೆ ಜಮೀನಿನಲ್ಲಿ ತೆರೆಯಲು ನಿರ್ಧರಿಸಲಾಗಿದೆ. ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ದವಾಗಿದೆ ಎಂದರು ಅವರು.

ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಇಲಾಖೆಯ ಸಿಬ್ಬಂದಿ, ಗಣಿ ಮಾಲೀಕರು, ಸಿಬ್ಬಂದಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಅವೈಜ್ಞಾನಿಕ ಗಣಿಗಾರಿಕೆ ತಡೆಯುವುದು, ಜತೆಗೆ ಎಲ್ಲಾ ರೀತಿಯ ಗಣಿಗಾರಿಕೆಗೆ ತರಬೇತಿ ಪ್ರಾರಂಭಿಸಲಾಗುವುದು. ಮೈನಿಂಗ್ ಆಪರೇಟಿಂಗ್ ಮತ್ತು ಉದ್ದಿಮೆದಾರರಿಗೆ ವೈಜ್ಞಾನಿಕವಾಗಿ ಗಣಿಗಾರಿಕೆಯನ್ನು ಹೇಗೆ ನಿರ್ವಹಿಬೇಕೆಂದು ತರಬೇತಿ ನೀಡುವುದೇ ಇದರ ಮುಖ್ಯ
ಉದ್ದೇಶ ಎಂದರು ಸಚಿವರು.

ಗಣಿ ಅದಾಲತ್‍

ಪ್ರತಿಯೊಂದು ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ. ನಾಲ್ಕು ಕಂದಾಯ ವಿಭಾಗ ಸೇರಿದಂತೆ ಐದು ಕಡೆ ಗಣಿ ಅದಾಲತ್‍ಗಳನ್ನು ಪ್ರಾರಂಭಿಸಲಿದ್ದೇವೆ. ಇದರಿಂದ ಉದ್ದಿಮೆದಾರರು ಇಲಾಖೆ ಇಲಾಖೆಗೆ ಅರ್ಜಿಗಳನ್ನು ಹಿಡಿದುಕೊಂಡು ಅಲೆಯುವುದು ತಪ್ಪುತ್ತದೆ ಎಂದು ಸಚಿವರು ತಿಳಿಸಿದರು.

ಏಕಗವಾಕ್ಷಿ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನ ಮಾಡಲಾಗುವುದು. ಸಣ್ಣ ಸಣ್ಣ ಉದ್ದಿಮೆದಾರರು ಇಲಾಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಇದು ಬಹಳಷ್ಟು ಅನುಕೂಲಕರವಾಗಿದೆ. ಏಕಗವಾಕ್ಷಿ ಯೋಜನೆಯಡಿ ಇಲಾಖೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿಕೊಳ್ಳಲಾಗುವುದು ಎಂದು ಅವರು ಸಲಹೆ ಮಾಡಿದರು.

ಗಣಿಗಾರಿಕೆಯಲ್ಲಿ ಸರಳೀಕರಣ ಮಾಡುವ ಸುದ್ದುದೇಶ ನಮ್ಮ ಮುಂದಿದೆ. ಇಲಾಖೆಯಲ್ಲಿ ಸುಮಾರು 6 ಸಾವಿರ ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. 2016ಕ್ಕಿಂತ ಮುಂಚೆ ಅರ್ಜಿ ಸಲ್ಲಿಸಿ ಎನ್‍ಒಸಿ ಪಡೆದವರಿಗೆ ಗಣಿಗಾರಿಕೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಉಳಿದಿರುವ ಅರ್ಜಿಗಳನ್ನು ಮುಂದಿನ ಮೂರು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು. ರಾಜ್ಯದಲ್ಲಿ ಉದ್ದಿಮೆದಾರ ಸ್ನೇಹಿ ರಾಜ್ಯವನ್ನಾಗಿ ಮಾಡಲು ನಾವು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಎಂದರು.

ಅದಿರು ರಫ್ತು ಇಲ್ಲದೆ ಬೊಕ್ಕಸಕ್ಕೆ ಭಾರೀ ನಷ್ಟ

ರಾಜ್ಯದಲ್ಲಿ ರಫ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾಗುತ್ತಿದೆ. ಹೀಗಾಗಿ ವಿದೇಶಕ್ಕೆ ಅದಿರನ್ನು ರಪ್ತು ಮಾಡಲು ವಿಧಿಸಲಾಗಿರುವ ನಿರ್ಬಂಧ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‍ʼಗೆ ಮೇಲ್ಮನವಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟ್‍ನಲ್ಲಿ ನಮಗೆ ಎಲ್ಲ ರೀತಿಯ ಕಾನೂನಿನ ನೆರವು ಸಿಗುತ್ತಿದೆ ಎಂದು ಅವರು ಹೇಳಿಕೊಂಡರು.

ರಪ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುವುದರ ಜೊತೆಗೆ ಕಡಿಮೆ ದರದಲ್ಲಿ ಸರಕು ಖರೀದಿಸಿ ಹೆಚ್ಚಿನ ದರದಲ್ಲಿ ಸ್ಟೀಲ್ ಮಾರಾಟ ಮಾಡಲಾಗುತ್ತದೆ. ಸರಕು ಖರೀದಿಸುವ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಸ್ಟೀಲ್ ಮಾರಾಟ ಮಾಡುತ್ತವೆ. ನಮಗೆ ವಿದೇಶಕ್ಕೆ ಅದಿರು ರಫ್ತು ಮಾಡಲು ಅವಕಾಶ ಕೊಟ್ಟರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗಣಿ ಅಭಿವೃದ್ದಿ ನಿಧಿಯಿಂದ ಮೂರು ವರ್ಷಗಳಲ್ಲಿ ಕೈಗೊಳ್ಳಬಹುದಾದ ಕಾರ್ಯ ಯೋಜನೆಗಳ ಕುರಿತಾಗಿ ನೀಲನಕ್ಷೆಯನ್ನು ರೂಪಿಸಲಾಗಿದೆ. ಸದ್ಯ 32 ಕೋಟಿ ರೂ. ಹಣ ಉಳಿದಿದೆ. ಇದರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ. ಕುಡಿಯುವ ನೀರು ಸರಕಾರಿ ಶಾಲೆಗಳ ದತ್ತು ಪಡೆಯುವುದು, ಸಮುದಾಯ ಭವನ ನಿರ್ಮಾಣ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಸೇರಿದಂತೆ ಹಲವು ರೀತಿ ಯೋಜನೆಗಳನ್ನು ರೂಪಿಸಬಹುದು. ಈ ಬಗ್ಗೆ ಸಭೆ ಕರೆದು ಜನಪ್ರತಿನಿಧಿಗಳಿಗೆ ಹಂಚಿಕೆ ಮಾಡುವುದಾಗಿ ನಿರಾಣಿ ತಿಳಿಸಿದರು.

ಹೊಸ ಮರಳು ನೀತಿ

ದೇಶಕ್ಕೆ ಮಾದರಿಯಾಗುವಂತಹ ಮರಳು ನೀತಿಯನ್ನು ಇಲಾಖೆ ಸಿದ್ದಪಡಿಸಿದೆ. ಬೇರೆ ರಾಜ್ಯದವರು ಕರ್ನಾಟಕವನ್ನು ಮಾದರಿಯಾಗಿಟ್ಟುಕೊಂಡು ಅನುಷ್ಠಾನ ಮಾಡುವಂತಹ ನೀತಿ ಇದಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಯವರೊಂದದಿಗೆ ಚರ್ಚಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 350 ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈಗಿರುವ ಮರಳು ನೀತಿಗೆ ತಿದ್ದುಪಡಿ ಮಾಡಿ ನದಿ ಮರಳನ್ನು ಸಂಸ್ಕರಿಸಿ ಗ್ರೇಡ್ ಆಧಾರದಲ್ಲಿ ಮಾರಾಟ ಮಾಡಲು ಯೋಜಿಸಲಾಗಿದೆ ಎಂದರು ಅವರು.

ಕೆಲವು ಕಡೆ ಡಿಜಿಎಂಎಸ್ ಲೈಸೆನ್ಸ್ ಪಡೆಯದೇ ಕಾರ್ಯನಿರ್ವಹಣೆ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ 90 ದಿನಗಳೊಗೆ ಅರ್ಜಿ ಸಲ್ಲಿಸಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಲಾಗುವುದು. ಅವೈಜ್ಞಾನಿಕ ಪೆನಾಲ್ಟಿ ನಿಗದಿಪಡಿಸಲಾಗಿದೆ. ದಂಡ ನಿಗದಿಪಡಿಸುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಚಿವ ಮಾಧುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮುಂತಾದವರು ಇದ್ದರು.

Tags: bellarykarnatakamurugesh niranischool of mining
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಹಿರಿಯ ಪತ್ರಕರ್ತ, ಮಾಜಿ ಸಿಎಂ ಎಚ್‌ಡಿಕೆ ಮಾಧ್ಯಮ ಅಧಿಕಾರಿ ಸದಾನಂದ ಇನ್ನಿಲ್ಲ

ಹಿರಿಯ ಪತ್ರಕರ್ತ, ಮಾಜಿ ಸಿಎಂ ಎಚ್‌ಡಿಕೆ ಮಾಧ್ಯಮ ಅಧಿಕಾರಿ ಸದಾನಂದ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

ಜನವರಿಯಿಂದ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಪರೀಕ್ಷೆ ಉಚಿತ; ಆರೋಗ್ಯ-ವೈದ್ಯ ಶಿಕ್ಷಣ ಇಲಾಖೆ ವಿಲೀನ

ಜನವರಿಯಿಂದ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಪರೀಕ್ಷೆ ಉಚಿತ; ಆರೋಗ್ಯ-ವೈದ್ಯ ಶಿಕ್ಷಣ ಇಲಾಖೆ ವಿಲೀನ

6 years ago
ರಾಜಕೀಯವಾಗಿ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್‌

ರಾಜಕೀಯವಾಗಿ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್‌

3 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ