• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಗಾಗಿ ದಿಲ್ಲಿಯಲ್ಲಿ ಡಾ.ಕೆ.ಸುಧಾಕರ್‌ ರೌಂಡ್ಸ್

cknewsnow desk by cknewsnow desk
August 2, 2021
in CHIKKABALLAPUR, NATION, STATE
Reading Time: 2 mins read
0
ಚಿಕ್ಕಬಳ್ಳಾಪುರ ಜಿಲ್ಲೆಗಾಗಿ ದಿಲ್ಲಿಯಲ್ಲಿ ಡಾ.ಕೆ.ಸುಧಾಕರ್‌ ರೌಂಡ್ಸ್
1.1k
VIEWS
FacebookTwitterWhatsuplinkedinEmail

ಕೈಗಾರಿಕಾ ಹಬ್ ಆಗಿ ಚಿಕ್ಕಬಳ್ಳಾಪುರ ಅಭಿವೃದ್ಧಿ, ಮೆಟ್ರೊ-ಉಪನಗರ ರೈಲು; ಎತ್ತಿನಹೊಳೆಗೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ; 2024ರ ವೇಳೆಗೆ ಪ್ರತಿ ಹಳ್ಳಿಗೆ ನೀರು; ಚಿಕ್ಕಬಳ್ಳಾಪುರ-ಚಿಂತಾಮಣಿ ಬೈಪಾಸ್; ನಂದಿಬೆಟ್ಟ ರಸ್ತೆ ವಿಸ್ತರಣೆ ಸೇರಿ ಹಲವು ಯೋಜನೆಗಳಿಗಾಗಿ ಕೇಂದ್ರ ಸಚಿವರುಗಳಿಗೆ ಮನವಿ

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಅಭಿವೃದ್ಧಿಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಂಗಳವಾರ ವಿವಿಧ ಖಾತೆಗಳ ಕೇಂದ್ರ ಸಚಿವರನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಭೇಟಿಯಾಗಿದ್ದಾರೆ.

ತಮ್ಮ ಇಲಾಖೆಯ ನಿಮಿತ್ತ ದಿಲ್ಲಿಯಲ್ಲಿ ನೀತಿ ಆಯೋಗ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪಾಲ್‌ ಅವರನ್ನು ಭೇಟಿಯಾದ ನಂತರ ಕೇಂದ್ರ ಕೈಗಾರಿಕೆ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಜಿಲ್ಲೆಯ ವಿವಿಧ ಯೋಜನೆಗಳ ಬಗ್ಗೆ ಬೇಡಿಕೆ ಸಲ್ಲಿಸಿದ್ದಾರೆ.

ಕೈಗಾರಿಕಾ ಹಬ್ ಆಗಿ ಚಿಕ್ಕಬಳ್ಳಾಪುರ ಅಭಿವೃದ್ಧಿ

ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲೇ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಬೆಳೆಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ವಾಣಿಜ್ಯ-ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವರು, ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಈ ಜಿಲ್ಲೆ ಚಿಕ್ಕಬಳ್ಳಾಪುರವು ಹೆಚ್ಚು ಕೈಗಾರಿಕಾಭಿವೃದ್ಧಿ ಕಂಡಿಲ್ಲ. ಈ ಜಿಲ್ಲೆ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಬಂದರು ನಗರಗಳಾದ ಚೆನ್ನೈ ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ಜಿಲ್ಲೆಯ ಗಡಿಭಾಗಕ್ಕೆ 10 ಕಿ.ಮೀ. ದೂರದಲ್ಲೇ ವಿಮಾನ ನಿಲ್ದಾಣವಿದೆ. ಹಾಗೆಯೇ ರೈಲು ಸಂಪರ್ಕವನ್ನೂ ಹೊಂದಿದೆ. ಉದ್ಯಮಗಳಲ್ಲಿ ದುಡಿಯುವ ಪ್ರತಿಭಾವಂತರು ಚಿಕ್ಕಬಳ್ಳಾಪುರದಲ್ಲಿದ್ದು, ಬೆಂಗಳೂರಿನಲ್ಲಿರುವ ಉದ್ಯಮಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದಾರೆ. ಭೂಮಿ, ಎತ್ತಿನಹೊಳೆ ಮೂಲಕ ಸಿಗುವ ನೀರು ಮೊದಲಾದ ನೈಸರ್ಗಿಕ ಸಂಪನ್ಮೂಲಗಳನ್ನು ಜಿಲ್ಲೆ ಹೊಂದಿದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೈಗಾರಿಕಾ ಹಬ್ ನಿರ್ಮಾಣದಿಂದ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗಲಿದೆ. ಜತೆಗೆ ಮಾಲಿನ್ಯ, ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ. ಆದ್ದರಿಂದ ಈ ಭಾಗದಲ್ಲಿ ಕೈಗಾರಿಕಾ ಹಬ್ ಆರಂಭಿಸಬೇಕೆಂದು ಡಾ.ಸುಧಾಕರ್‌ ಕೇಂದ್ರ ಸಚಿವರನ್ನು ಕೋರಿದ್ದಾರೆ.

ಮೆಟ್ರೊ, ಉಪನಗರ ರೈಲು

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ವೇಳೆ, ಮೆಟ್ರೊ ಹಾಗೂ ಉಪನಗರ ರೈಲು ಯೋಜನೆಗಳ ಮಾರ್ಗಗಳನ್ನು ಚಿಕ್ಕಬಳ್ಳಾಪುರವರೆಗೆ ವಿಸ್ತರಣೆ ಮಾಡಬೇಕೆಂದು ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.

  • ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಡಾ.ಸುಧಾಕರ್‌ ಮನವಿ.

ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಕೊಡಿ

ಇದೇ ವೇಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಚಿವ ಡಾ.ಕೆ.ಸುಧಾಕರ್ ಭೇಟಿ ಮಾಡಿ; ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರೊದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾ ನದಿ ನೀರನ್ನು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ಹಂಚಿಕೆ ಮಾಡಿ ವಿಸ್ತರಿಸಬೇಕು ಎಂದು ಸಚಿವರು ಮನವಿ ಮಾಡಿದರು.

2024ರ ವೇಳೆಗೆ ಪ್ರತಿ ಹಳ್ಳಿಗೆ ನೀರು

ಎತ್ತಿನಹೊಳೆ ಯೋಜನೆಯಿಂದ ಒಂದು ಕೋಟಿಗೂ ಹೆಚ್ಚು ಜನರಿಗೆ ನೆರವಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್ಚು ಅನುಕೂಲವಾಗಲಿದೆ. ಆದ್ದರಿಂದ ಈ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡುವುದು ಸೂಕ್ತವಾಗಿದೆ. ಜೊತೆಗೆ ಈ ಮೂರು ಜಿಲ್ಲೆಗಳಲ್ಲಿ ಕೆರೆಗಳ ಹೂಳೆತ್ತಲು ಮಹಾತ್ಮಗಾಂಧಿ ನರೇಗಾ, ಜಲಶಕ್ತಿ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ಒಟ್ಟು ಮಾಡಿ ವಿಶೇಷ ಅನುದಾನ ನೀಡಬೇಕು. ಹಾಗೆಯೇ ಆಂಧ್ರ ಪ್ರದೇಶದಿಂದ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಮಧ್ಯಪ್ರವೇಶಿಸಿ ನೆರವಾಗಬೇಕು. ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಆಶಯದಂತೆಯೇ 2024ರ ವೇಳೆಗೆ ಪ್ರತಿ ಹಳ್ಳಿಗೆ ನೀರು ಒದಗಿಸುವುದು ನನ್ನ ದೂರದೃಷ್ಟಿಯೂ ಆಗಿದೆ” ಎಂದು ಡಾ.ಸುಧಾಕರ್‌ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ವಿವರಿಸಿದರು.

  • ಕೇಂದ್ರ ಸಾರಿಗೆ ಸಚಿವರಿಗೆ ಮನವಿ ಪತ್ರ ನೀಡಿದ ಡಾ.ಕೆ.ಸುಧಾಕರ್.

ಬೈಪಾಸ್ ರಸ್ತೆ ನಿರ್ಮಾಣಕ್ಕೆ ಮನವಿ

ರಾಷ್ಟ್ರೀಯ ಹೆದ್ದಾರಿ-234ನಲ್ಲಿ ಚಿಕ್ಕಬಳ್ಳಾಪುರ-ಚಿಂತಾಮಣಿ ಬೈಪಾಸ್ ನಿರ್ಮಾಣ ಕುರಿತು ಡಾ.ಕೆ.ಸುಧಾಕರ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.

ಈ ಯೋಜನೆ ಕುರಿತ ಡಿಪಿಆರ್ ಅನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದು, ಇದು ಚಿಕ್ಕಬಳ್ಳಾಪುರದ ಸಂಚಾರ ದಟ್ಟಣೆ ನಿವಾರಿಸಲಿದೆ. ಕೃಷಿ ಹಾಗೂ ಕೈಗಾರಿಕಾ ಸಂಬಂಧಿತ ಉತ್ಪನ್ನಗಳನ್ನು ಸಾಗಿಸಲು ಇದು ನೆರವಾಗಲಿದೆ. ಮುಖ್ಯವಾಗಿ ತರಕಾರಿ, ಹೂವು, ಹಣ್ಣು ಮೊದಲಾದ ಕೃಷಿ ಆಧಾರಿತ ಕೈಗಾರಿಕೆಗೆ ಇದು ಹೆಚ್ಚು ಅನುಕೂಲವಾಗಲಿದೆ. ಈ ಬೈಪಾಸ್, ಎನ್‍ಎಚ್-234ರಲ್ಲಿ 395 ಕಿ.ಮೀ. ನಿಂದ ಆರಂಭವಾಗಿ 407 ಕಿ.ಮೀ.ಗೆ ಮುಕ್ತಾಯಗೊಳ್ಳಲಿದೆ. ಒಟ್ಟು 12.756 ಕಿ.ಮೀ. ಉದ್ದದ ರಸ್ತೆಯ ಈ ಯೋಜನೆ ಇದಾಗಿದೆ. ಚಿಂತಾಮಣಿ ಬೈಪಾಸ್ 428 ಕಿ.ಮೀ. ನಿಂದ ಆರಂಭವಾಗಿ 442 ಕಿ.ಮೀ.ಗೆ ಮುಕ್ತಾಯಗೊಳ್ಳಲಿದೆ. ಇದು ಒಟ್ಟು 14.370 ಕಿ.ಮೀ. ಉದ್ದದ ರಸ್ತೆಯ ಯೋಜನೆಯಾಗಿದೆ ಎಂದು ಸಚಿವರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ. ಆದ್ದರಿಂದ ಡಿಪಿಆರ್ ಅನ್ನು ಶೀಘ್ರ ಪರಿಗಣಿಸಿ ಅಗತ್ಯ ಕ್ರಮಗಳನ್ನು ವಹಿಸಬೇಕೆಂದು ಸಚಿವರು ಕೋರಿದ್ದಾರೆ.

ಗೌರಿಬಿದನೂರು ರಸ್ತೆ ಶೀಘ್ರ ಮುಗಿಸಲು ಮನವಿ

ಎನ್‍ಎಚ್-234 ರಲ್ಲಿ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರವರೆಗೆ ಸೇತುವೆ, ರಸ್ತೆ ಮೊದಲಾದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಯನ್ನು 2015 ರ ಜುಲೈ ನಿಂದ ಆರಂಭಿಸಿದ್ದು, 2017ರ ಮಧ್ಯಭಾಗಕ್ಕೆ ಮುಗಿಯಬೇಕಿತ್ತು. ಆದರೆ ದುರದೃಷ್ಟದಂತೆ 2018ರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು, ಮುಖ್ಯವಾಗಿ ರೈತರು ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಕಷ್ಟಪಡುತ್ತಿದ್ದಾರೆ. 2021ರ ಜೂನ್ ಗೆ ಕಾಮಗಾರಿ ಪೂರ್ಣಗೊಳ್ಳುವುದಾಗಿ ತಿಳಿಸಿದ್ದರೂ, ಸ್ಥಳದಲ್ಲಿ ಯಾವುದೇ ಕಾಮಗಾರಿ ಆರಂಭವಾಗಿಲ್ಲ. ಕೂಡಲೇ ಕಾಮಗಾರಿ ಆರಂಭಿಸಲು ಸೂಕ್ತ ಪರಿಶೀಲನೆ, ಸಭೆಗಳನ್ನು ನಡೆಸಬೇಕೆಂದು ಕೆಲ ತಜ್ಞರು ಹೇಳಿದ್ದಾರೆ. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ನಂದಿಬೆಟ್ಟ ರಸ್ತೆ ವಿಸ್ತರಣೆ

ನಂದಿಬೆಟ್ಟ ಜನಪ್ರಿಯ ಪ್ರವಾಸಿ ತಾಣವಾಗಿದ್ದು, ಪ್ರಮುಖ ಆತಿಥ್ಯ ಕ್ಷೇತ್ರವಾಗಿ ಬೆಳೆಯುತ್ತಿದೆ. ಆದರೆ ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಿರಿದಾಗಿದೆ. ಆದ್ದರಿಂದ ಎನ್‍ಎಚ್-7 ಹಾಗೂ ನಂದಿಬೆಟ್ಟ ಸಂಪರ್ಕಿಸುವ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ವಿಸ್ತರಣೆ ಮಾಡುವಂತೆ ಸಚಿವ ಡಾ.ಕೆ.ಸುಧಾಕರ್ ಮನವಿ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ವಿಜ್ಞಾನಗಳ ಸಂಸ್ಥೆ ಹಾಗೂ ನರ್ಸಿಂಗ್ ಸಂಸ್ಥೆ ಆರಂಭಿಸಬೇಕು ಎಂದು  ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಜೊತೆಗಿನ ಚರ್ಚೆ ವೇಳೆ ಪ್ರಸ್ತಾವ ಸಲ್ಲಿಸಲಾಯಿತು.

  • ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಆವರಿಗೆ ಮನವಿ ಸಲ್ಲಿಸಿದ ಡಾ.ಸುಧಾಕರ್.

Tags: chikkaballapuradr ksudhakarHealthkarnatakanamma metrosuburban rail for chikkaballapurayettinahole
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
NDA 2.0: ಇಂದು ಕೇಂದ್ರ ಸಂಪುಟ ವಿಸ್ತರಣೆ: ರಾಜ್ಯದಲ್ಲಿ ಯಾರಿಗೆ ಅವಕಾಶ?

NDA 2.0: ಇಂದು ಕೇಂದ್ರ ಸಂಪುಟ ವಿಸ್ತರಣೆ: ರಾಜ್ಯದಲ್ಲಿ ಯಾರಿಗೆ ಅವಕಾಶ?

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ