• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಬಲ; ಚಿಕ್ಕಬಳ್ಳಾಪುರ ಜಿಪಂನಲ್ಲಿ ಕಮಲಕ್ಕೆ ಅಧಿಕಾರ

cknewsnow desk by cknewsnow desk
July 13, 2021
in CHIKKABALLAPUR, STATE
Reading Time: 1 min read
0
ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಬಲ; ಚಿಕ್ಕಬಳ್ಳಾಪುರ ಜಿಪಂನಲ್ಲಿ ಕಮಲಕ್ಕೆ ಅಧಿಕಾರ
1.1k
VIEWS
FacebookTwitterWhatsuplinkedinEmail

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವ ಡಾ.ಸುಧಾಕರ್‌

by M Krishnappa Chikkaballapura

ಚಿಕ್ಕಬಳ್ಳಾಪುರ: ಭಾರತೀಯ ಜನತಾ ಪಕ್ಷ ಇಡೀ ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷ. ಆದರೆ ಹಳೆ ಮೈಸೂರು ಭಾಗದಲ್ಲಿ ಇನ್ನೂ ಹೆಚ್ಚು ಸಂಘಟನೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರಗಳಿದ್ದು, ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಪಕ್ಕದ ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ಒಬ್ಬರೂ ಶಾಸಕರಿಲ್ಲ. ಇಂತಹ ಸಂದರ್ಭದಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿದ್ದು, ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಬಗ್ಗೆ ನಿರ್ಣಯ ಕೈಗೊಳ್ಳಬೇಕಿದೆ. ಇದಕ್ಕಾಗಿ ಯಾವ ಮುಖಂಡರನ್ನು ಕರೆಸಿಕೊಳ್ಳಬೇಕು, ಯಾವ ರೀತಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಬೇಕೆಂದು ಆಲೋಚಿಸಬೇಕು ಎಂದರು ಸಚಿವರು.

ಕೇಂದ್ರ ಸಂಪುಟ ವಿಸ್ತರಣೆಯಲ್ಲಿ 27 ಮಂದಿ ಒಬಿಸಿ, 20 ಎಸ್‍ಸಿ, ಎಸ್‍ಟಿ ವರ್ಗದವರಿಗೆ ಅವಕಾಶ ನೀಡಲಾಗಿದೆ. ಅಲ್ಪಸಂಖ್ಯಾತರಿಗೆ ಅವಕಾಶ ಕೊಡಲಾಗಿದೆ. ಇದೇ ನಿಜವಾದ ಸಾಮಾಜಿಕ ನ್ಯಾಯ. ಬಿಜೆಪಿಯನ್ನು ಟೀಕಿಸುವವರು ಇದನ್ನು ಕಣ್ಣು ಬಿಟ್ಟು ನೋಡಬೇಕು. ಸಂಪುಟದಲ್ಲಿ 11 ಮಹಿಳೆಯರೂ ಇದ್ದಾರೆ. ಕಾಂಗ್ರೆಸ್ ಈ ರೀತಿ ಇರಲಿಲ್ಲ. ಬಿಜೆಪಿ ಯಾಕೆ ಬೇಕು ಎಂಬುದನ್ನು ಜನರಿಗೆ ಈ ಮೂಲಕ ಹೇಳಬೇಕು.

ಡಾ.ಕೆ.ಸುಧಾಕರ್

ಬಿಜೆಪಿ ಇಡೀ ಜಗತ್ತಿದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಇದಕ್ಕಿಂತ ದೊಡ್ಡ ಸಂಖ್ಯೆಯ ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷ ಜಗತ್ತಿನಲ್ಲೇ ಬೇರೆ ಇಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಿಂತನೆಯಿಂದ ಜನಸಂಘ, ನಂತರ ಅದು ರಾಜಕೀಯ ರೂಪ ಪಡೆದ ಪಕ್ಷವಿದು. 18 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಹಂತಹಂತವಾಗಿ ಶಕ್ತಿ ಹೆಚ್ಚಿದೆ. ಇದಕ್ಕೆ ಸಾಮಾನ್ಯ ಕಾರ್ಯಕರ್ತರು ಕಾರಣರಾಗಿದ್ದು, ಎಲ್ಲರ ನಿಸ್ವಾರ್ಥ ಸೇವೆ, ಹೋರಾಟದಿಂದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದ ಆಡಳಿತ ನಡೆಯುತ್ತಿದೆ ಎಂದರು ಡಾ.ಸುಧಾಕರ್.

2.50 ಕೋಟಿಗೂ ಹೆಚ್ಚು ಲಸಿಕೆ

ಹೆಪಟೈಟಿಸ್-ಬಿ ಲಸಿಕೆ ಆವಿಷ್ಕಾರವಾದ ಬಳಿಕ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಕೋವಿಡ್ ಲಸಿಕೆ ದೇಶದಲ್ಲೇ ತಯಾರಾಗಿ ಬೇಗ ಲಭ್ಯವಾಯಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ಇಚ್ಛಾಶಕ್ತಿ ಇದ್ದಿದ್ದರಿಂದಲೇ ಲಸಿಕೆ ಬೇಗ ದೊರೆತಿದೆ. ಬೇರೆ ದೇಶಗಳಿಗಿಂತ ಹೆಚ್ಚು ಲಸಿಕೆಯನ್ನು ವೇಗವಾಗಿ ನೀಡಲಾಗಿದೆ. ರಾಜ್ಯದಲ್ಲಿ 2.50 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ಕೇಂದ್ರ ಸರಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುತ್ತಿದೆ ಎಂದರು.

ಲಸಿಕೆ ಬಗ್ಗೆ ವಿರೋಧ ಪಕ್ಷಗಳು ಅಪಹಾಸ್ಯ ಮಾಡಿದ್ದವು. ಇದು ಬಿಜೆಪಿ, ಮೋದಿ ಲಸಿಕೆಯಾಗಿದ್ದು, ಇದನ್ನು ಪಡೆದರೆ ಶಕ್ತಿ, ಹೃದಯ ಸಮಸ್ಯೆ ಬರುತ್ತದೆ ಎಂಬ ತಪ್ಪು ಗ್ರಹಿಕೆ ಮೂಡಿಸಲು ಯತ್ನಿಸಿ ಅಪಪ್ರಚಾರ ಮಾಡಿದರು. ಹೆಚ್ಚಿನವರು ಪಡೆಯದಿದ್ದರಿಂದ ಲಸಿಕೆ ತಯಾರಿಕಾ ಪ್ರಕ್ರಿಯೆಯನ್ನು ಕಂಪನಿಗಳು ನಿಧಾನ ಮಾಡಿದವು. ಈಗ ವಿಳಂಬವಾಗಿರುವುದಕ್ಕೆ ವಿರೋಧ ಪಕ್ಷಗಳೇ ನೇರ ಹೊಣೆಯಾಗಿವೆ. ಕಾಂಗ್ರೆಸ್ ನವರು ಶಾಸಕರ ಅನುದಾನ ಬಳಸಿ ಲಸಿಕೆ ಕೊಡಲು ಮುಂದಾಗುವ ಮೂಲಕ ಕೇವಲ ಪ್ರಚಾರದ ಗಿಮಿಕ್ ಮಾಡಿದರು ಎಂದು ಅವರು ನುಡಿದರು.

ರಾಜ್ಯ ಸರಕಾರ ನೇಕಾರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತರಿಗೆ, ಕಾರ್ಮಿಕರಿಗೆ ಆರ್ಥಿಕ ನೆರವು ನೀಡಿದೆ. ಇಂತಹ ಸಂದಿಗ್ಧದಲ್ಲಿ ಕಾಂಗ್ರೆಸ್ ರಚನಾತ್ಮಕವಾಗಿ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ. ಆದರೆ ಮಾತಿನಲ್ಲಿ ಮಾತ್ರ ಸಹಕಾರ ಎನ್ನುತ್ತಾರೆ ಎಂದರು.

ತಮಿಳುನಾಡಿನ ಕುಯುಕ್ತಿ

ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಕುಯುಕ್ತಿ ಬುದ್ಧಿ ತೋರಿಸಿದೆ. ರಾಜ್ಯದಿಂದ ಕಾವೇರಿ ನೀರು ನೀಡುವುದಕ್ಕೆ ತಕರಾರಿಲ್ಲ. ಪ್ರತಿ ವರ್ಷ ರಾಜ್ಯದಿಂದ ಕಾವೇರಿ ನೀರು ಕೊಡುತ್ತಿದ್ದೇವೆ. ಅಲ್ಲದೆ ನಾವು ಹೆಚ್ಚಾಗಿಯೇ ನೀರು ನೀಡುತ್ತಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ನೀರಿನ ಪಾಲು ಕಡಿಮೆಯಾಗುವುದಿಲ್ಲ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮೊದಲಾದ ಜಿಲ್ಲೆಗಳಿಗೆ ನೀರು ಪೂರೈಸಲು ಅಣೆಕಟ್ಟು ಕಟ್ಟಿದರೆ ತೊಂದರೆಯಾಗುವುದಿಲ್ಲ. ತಮಿಳುನಾಡಿನ ಈ ನಡೆಗೆ ನಾನು ಬೇಸರವಿದೆ. ಇದರಿಂದಾಗಿ ಎರಡೂ ರಾಜ್ಯಗಳ ಸ್ನೇಹ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಸಿಎಂ ಸ್ಟಾಲಿನ್ ಅವರು ಕ್ಯಾಬಿನೆಟ್ ನಿರ್ಧಾರ ವಾಪಸ್ ಪಡೆದು ಅನ್ಯೋನ್ಯವಾಗಿ ಸಹೋದರರಂತೆ ವರ್ತಿಸಬೇಕು. ಎರಡೂ ರಾಜ್ಯಗಳು ಒಂದೇ ದೇಶದಲ್ಲಿವೆ. ಆ ಮನೋಭಾವದಿಂದ ಅವರು ನಡೆದುಕೊಳ್ಳಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ

ಎರಡನೇ ಅಲೆ ಇಳಿಮುಖವಾಗಿರುವ ಹಿನ್ನೆಲಯಲ್ಲಿ ಅನ್‌ಲಾಕ್ ಮಾಡಲಾಗಿದೆ ಎಂದರೆ ಕೊರೊನಾ ಸಂಪೂರ್ಣ ನಿವಾರಣೆಯಾಗಿದೆ ಎಂದರ್ಥವಲ್ಲ. ಆರ್ಥಿಕ ಚಟುವಟಿಕೆಗಳಿಗೆ, ಜನಜೀವನಕ್ಕೆ ನೆರವಾಗಲಿದೆ ಎಂದು ಮಾತ್ರ ಅನ್‌ಲಾಕ್ ಮಾಡಲಾಗಿದೆ. ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಿ ಎಂದು ಸಚಿವರು ಜನರಿಗೆ ಮನವಿ ಮಾಡಿದರು.

ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಮಾತ್ರ ಅವಕಾಶ. ಜಾತ್ರೆ, ದೊಡ್ಡ ಸಭೆ ಮಾಡುವಂತಿಲ್ಲ. ಇನ್ನು, ಮದುವೆಯಲ್ಲಿ 100 ಜನರು ಮಾತ್ರ ಪಾಲ್ಗೊಳ್ಳಬೇಕು. ಹೆಚ್ಚು ಜನರು ಸೇರುವುದು ಮುಂದುವರಿದರೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಠಿಣ ಕ್ರಮಗಳ ಜಾರಿ ಜನರ ನಡವಳಿಕೆ ಮೇಲೆ ಆಧಾರಿತವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾರ್ಯಕಾರಣಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ರಾಜ್ಯ ಕಾರ್ಯದರ್ಶಿ ಮತ್ತು ಬೆಂಗಳೂರು ಗ್ರಾಮಾಂತರ ವಿಭಾಗದ ಪ್ರಭಾರಿ ಕೇಶವಪ್ರಸಾದ್,ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಜಿಲ್ಲೆಯ ಉಸ್ತುವಾರಿ ಕೃಷ್ಣಾರೆಡ್ಡಿ, ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಮೋರ್ಚಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲಾ ಮಂಡಲದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲೆಯ ಪ್ರಕೋಷ್ಠದ ಸಂಚಾಲಕರು ಸಹಸಂಚಾಲಕರು ಭಾಗವಹಿಸಿದ್ದರು.

Tags: bjpbjp executive meetchikkaballapuradr k sudhakarkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕಲ್ಲು ಖದೀಮರ ಕಣ್ಣಿಗೆ ಬಿದ್ದಿದ್ದ ವರ್ಲಕೊಂಡ ಬೆಟ್ಟದ ಅಭಿವೃದ್ದಿಗೆ ಶ್ರೀ ವರಾಹಗಿರಿ ಅಭಿವೃದ್ಧಿ ಸೇವಾ ಟ್ರಸ್ಟ್

ಕಲ್ಲು ಖದೀಮರ ಕಣ್ಣಿಗೆ ಬಿದ್ದಿದ್ದ ವರ್ಲಕೊಂಡ ಬೆಟ್ಟದ ಅಭಿವೃದ್ದಿಗೆ ಶ್ರೀ ವರಾಹಗಿರಿ ಅಭಿವೃದ್ಧಿ ಸೇವಾ ಟ್ರಸ್ಟ್

Leave a Reply Cancel reply

Your email address will not be published. Required fields are marked *

Recommended

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

3 years ago
ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ

ಕೂರಲು, ಏಳಲು ಆಗುವುದಿಲ್ಲ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ: ಹೆಚ್.ಡಿ.ದೇವೇಗೌಡರು

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ