• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
July 16, 2021
in COVID-19, STATE
Reading Time: 1 min read
0
ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್
1000
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದರು.

ತರಬೇತಿಯನ್ನು ವಿಷಯ ತಜ್ಞರು ನೀಡುತ್ತಿದ್ದು, ಇದನ್ನು ದಾಖಲೆಯಾಗಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ಇಲ್ಲಿ ನೀಡುವ ತರಬೇತಿಯನ್ನು ವೀಡಿಯೋ ರೆಕಾರ್ಡ್ ಮಾಡಿಸಿ ದಾಖಲಿಸಬೇಕು. ಇತರೆ ವೈದ್ಯರಿಗೂ ಈ ವಿಷಯ ತಿಳಿಸಬೇಕು ಎಂದು ಅವರು ಸೂಚಿಸಿದರು.

ಡಾ.ದೇವಿಶೆಟ್ಟಿ ಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿವೆ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ ಎಂದು ಅವರು ವಿವರಿಸಿದರು.

ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು. ಬೆಂಗಳೂರು ನಗರ ಜಿಲ್ಲೆ ಕೋವಿಡ್ ಲಸಿಕಾಕರಣದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕಾಗಿ ಎಲ್ಲ ಸಿಬ್ಬಂದಿಗೆ ಧನ್ಯವಾದ ಎಂದರು.

ಮಕ್ಕಳಿಗೆ ಚಿಕಿತ್ಸೆ

ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ನಾವೇ ಉಂಟುಮಾಡಿದಂತಾಗುತ್ತದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70 ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ ಎಂದರು ಅವರು.

ಪ್ರಧಾನಿಗಳು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ನಮ್ಮ ಮುಖ್ಯಮಂತ್ರಿಗಳು ದಿನಕ್ಕೆ 5 ಲಕ್ಷ ಲಸಿಕೆಗೆ ಬೇಡಿಕೆ ಇಟ್ಟಿದ್ದಾರೆ. ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ 2.40 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದೇವೆ ಎಂದು ಸಿಎಂ ಮನವಿ ಮಾಡಿದ್ದಾರೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.

ಹೆಚ್ಚು ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ. ಲಸಿಕೆ ಹೆಚ್ಚು ನೀಡಲು ಹಾಗೂ ಕಂಟೇನ್ ಮೆಂಟ್ ನಿಯಮ ಪಾಲಿಸಲು ಸೂಚಿಸಿದ್ದಾರೆ. ಈಗಾಗಲೇ ಮೂಲಸೌಕರ್ಯ ಹೆಚ್ಚಳಕ್ಕೆ 23 ಸಾವಿರ ಕೋಟಿ ರೂ. ಅನ್ನು ಕೇಂದ್ರ ನೀಡಿದೆ. ಇದನ್ನು ಗ್ರಾಮೀಣ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಳಸಲು ಸಲಹೆ ನೀಡಲಾಗಿದೆ ಎಂದು ಅವರು ತಿಳಿಸಿದರು.

Tags: covid third wavecovid19dr k sudhakarkarnatakatraining for doctors
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಹದಿನೈದು ಎಕರೆ ಅರಣ್ಯ ಒತ್ತುವರಿಗೆ ಮೋಕ್ಷ

ಹದಿನೈದು ಎಕರೆ ಅರಣ್ಯ ಒತ್ತುವರಿಗೆ ಮೋಕ್ಷ

Leave a Reply Cancel reply

Your email address will not be published. Required fields are marked *

Recommended

REPUBLIC OF CHIKKABALLAPURA: ಪತ್ರಕರ್ತರಿಗೂ ಕಿಮ್ಮತ್ತಿಲ್ಲ, ಅಧಿಕಾರಿಗಳದ್ದೇ ಎಲ್ಲ!!

ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್: ಗಡಿಭಾಗಗಳಲ್ಲಿ ಸಾಧ್ಯವಾದಷ್ಟು ಪರೀಕ್ಷೆ

5 years ago
ಬ್ಲ್ಯಾಕ್‌ ಫಂಗಸ್‌ ಪೀಡಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

ಬ್ಲ್ಯಾಕ್‌ ಫಂಗಸ್‌ ಪೀಡಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ