• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ

cknewsnow desk by cknewsnow desk
July 16, 2021
in COVID-19, NATION
Reading Time: 1 min read
1
ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ನಂತರ ಪರಿಸ್ಥಿತಿ ಕಳವಳಕಾರಿ ಎಂದರು ಪ್ರಧಾನಿ
957
VIEWS
FacebookTwitterWhatsuplinkedinEmail

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಮಹಾರಾಷ್ಟ್ರ ಮತ್ತು ಒಡಿಶಾ ಮುಖ್ಯಮಂತ್ರಿಗಳ ಜತೆ ಮೋದಿ ಚರ್ಚೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂಬಂಧಿತ ಪರಿಸ್ಥಿತಿಯ ಕುರಿತು ಚರ್ಚಿಸಲು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಗೃಹ ಸಚಿವರು, ಆರೋಗ್ಯ ಸಚಿವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ಎದುರಿಸಲು ಎಲ್ಲ ಸಾಧ್ಯ ನೆರವು ಒದಗಿಸಿದ ಪ್ರಧಾನಮಂತ್ರಿಯವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಹೇಳಿದರಲ್ಲದೆ, ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಸೋಂಕು ತಡೆಯಲು ಕೈಗೊಂಡಿರುವ ಕ್ರಮಗಳು ಮತ್ತು ಲಸಿಕಾ ಕಾರ್ಯಕ್ರಮದ ಪ್ರಗತಿಯ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಲಸಿಕಾ ಕಾರ್ಯತಂತ್ರದ ಕುರಿತಂತೆ ತಮ್ಮ ಪ್ರತಿಕ್ರಿಯೆಯನ್ನೂ ನೀಡಿದರು.

ಮುಖ್ಯಮಂತ್ರಿಗಳು ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದರು ಮತ್ತು ಭವಿಷ್ಯದಲ್ಲಿ ಸಂಭಾವ್ಯ ಪ್ರಕರಣಗಳ ಹೆಚ್ಚಳದ ನಿರ್ವಹಣೆಯ ಕುರಿತಂತೆ ಸಲಹೆ ನೀಡಿದರು. ಕೋವಿಡ್ ನಂತರ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅಂತಹ ಪ್ರಕರಣಗಳಲ್ಲಿ ನೆರವು ಒದಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಅವರು ಚರ್ಚಿಸಿದರು. ಸೋಂಕು ಹೆಚ್ಚಳವಾಗದಂತೆ ನಿಯಂತ್ರಿಸಲು ತಾವು ಎಲ್ಲ ಸಾಧ್ಯ ಕಾರ್ಯ ಮಾಡುವ ಭರವಸೆಯನ್ನು ನೀಡಿದರು.

ಕೇಂದ್ರ ಗೃಹ ಸಚಿವರು ಈ ಆರು ರಾಜ್ಯಗಳು ಜುಲೈ ತಿಂಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಪೈಕಿ ಶೇಕಡ 80ಕ್ಕಿಂತ ಹೆಚ್ಚು ಪ್ರಕರಣಗಳನ್ನು ಹೊಂದಿದ್ದು, ಕೆಲವು ರಾಜ್ಯಗಳು ಅತಿ ಹೆಚ್ಚು ಪಾಸಿಟಿವಿಟಿ ದರವನ್ನೂ ಹೊಂದಿವೆ ಎಂದು ಉಲ್ಲೇಖಿಸಿದರು. ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ, ದೇಶದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಚರ್ಚಿಸಿದರು ಮತ್ತು ಕೋವಿಡ್ ಸೂಕ್ತ ನಡವಳಿಕೆ ಮತ್ತು ನಿಗ್ರಹ ಕ್ರಮಗಳನ್ನು ಅತಿ ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಲ್ಲಿ ಮರು ಜಾರಿ ಮಾಡುವ ಅಗತ್ಯ ಕುರಿತಂತೆ ಮಾತನಾಡಿದರು. ಈ ಜಿಲ್ಲೆಗಳಲ್ಲಿ ಕಾರ್ಯಚಟುವಟಿಕೆ ಮುಕ್ತಗೊಳಿಸುವುದನ್ನು ಹಂತಹಂತವಾಗಿ ಮತ್ತು ಕ್ರಮೇಣ ಮಾಡುವ ಕುರಿತು ಸಲಹೆ ಮಾಡಿದರು.

ತಮ್ಮ ಸಮಾರೋಪ ನುಡಿಗಳಲ್ಲಿ ಪ್ರಧಾನಮಂತ್ರಿಯವರು, ಸಾಂಕ್ರಾಮಿಕದ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಪರಸ್ಪರ ಸಹಕಾರ ಮತ್ತು ಅರಿವನ್ನು ಶ್ಲಾಘಿಸಿದರು. ಮೂರನೇ ಅಲೆಯ ಬಗ್ಗೆ ನಿರಂತರವಾಗಿ ಹೇಳಲಾಗುತ್ತಿರುವ ಆತಂಕದ ಸನ್ನಿವೇಶದಲ್ಲಿ ನಾವಿದ್ದೇವೆ ಎಂದೂ ತಿಳಿಸಿದರು. ಇಳಿಕೆಯಾಗುತ್ತಿರುವ ಪ್ರಕರಣಗಳ ಸಂಖ್ಯೆಯಿಂದಾಗಿ ತಜ್ಞರು ಸಕಾರಾತ್ಮಕ ಸಂಕೇತಗಳನ್ನು ನೀಡುತ್ತಿದ್ದರೂ, ಕೆಲವು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಇನ್ನೂ ಆತಂಕ ಒಡ್ಡಿವೆ. ಕಳೆದ ವಾರದಲ್ಲಿ ಶೇ.80ರಷ್ಟು ಪ್ರಕರಣಗಳು ಮತ್ತು ಶೇ.84ರಷ್ಟು ದುರದೃಷ್ಟಕರ ಸಾವುಗಳು ಈ ಸಭೆಯಲ್ಲಿ ಹಾಜರಿರುವ ರಾಜ್ಯಗಳಿಂದಲೇ ಬಂದಿವೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಎರಡನೆಯ ಅಲೆ ಬಂದಿದ್ದ ರಾಜ್ಯಗಳಲ್ಲಿ ಮೊದಲಿಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆರಂಭದಲ್ಲಿ ತಜ್ಞರು ನಂಬಿದ್ದರು. ಆದರೆ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಸಂಖ್ಯೆಯು ಗಂಭೀರ ಆತಂಕಕ್ಕೆ ಕಾರಣವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಕೊರೊನಾ ಇನ್ನೂ ಮುಗಿದಿಲ್ಲ, ನಿರ್ಬಂಧ ತೆರವಿನ ಬಳಿಕ ಪರಿಸ್ಥಿತಿ ಆತಂಕಕಾರಿಯಾಗಿದೆ. ಇದೇ ರೀತಿಯ ಪ್ರವೃತ್ತಿ ಎರಡನೇ ಅಲೆಗೂ ಮುನ್ನ ಜನವರಿ – ಫೆಬ್ರವರಿಯಲ್ಲಿ ಕಾಣಿಸಿಕೊಂಡಿತ್ತು ಎಂದು ಪ್ರಧಾನಮಂತ್ರಿ ಎಚ್ಚರಿಸಿದರು. ಹೀಗಾಗಿಯೇ ಪ್ರಕರಣಗಳು ಹೆಚ್ಚಳವಾಗುತ್ತಿರುವ ರಾಜ್ಯಗಳಲ್ಲಿ ನಾವು ಸಕಾರಾತ್ಮಕ ಕ್ರಮಗಳನ್ನು ಕೈಗೊಂಡು 3ನೇ ಅಲೆಯನ್ನು ತಡೆಯಬೇಕಾಗಿದೆ ಎಂದು ಪ್ರಧಾನಮಂತ್ರಿ ಸೂಚಿಸಿದರು.

ದೀರ್ಘ ಸಮಯದವರೆಗೆ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಕೊರೊನಾ ವೈರಾಣುವಿನ ರೂಪಾಂತರದ ಸಾಧ್ಯತೆಯೂ ಹೆಚ್ಚಾಗಿರುತ್ತದೆ ಮತ್ತು ಹೊಸ ರೂಪಾಂತರಿಗಳ ಅಪಾಯವೂ ಹೆಚ್ಚಾಗುತ್ತದೆ ಎಂಬ ತಜ್ಞರ ಅಭಿಪ್ರಾಯವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಆದ್ದರಿಂದ, ಸೂಕ್ಷ್ಮ ಕಂಟೈನ್ಮೆಂಟ್ ವಲಯಗಳ ಜೊತೆಗೆ ನಾವು ಪರೀಕ್ಷೆ, ಪತ್ತೆ, ಚಿಕಿತ್ರೆ ಮತ್ತು ಲಸಿಕೆ ಕಾರ್ಯತಂತ್ರ ಮುಂದುವರಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹೆಚ್ಚಿನ ಸಂಖ್ಯೆಯ ಪ್ರಕರಣ ಇರುವ ಜಿಲ್ಲೆಗಳ ಬಗ್ಗೆ ಗಮನ ಹರಿಸಬೇಕು. ಇಡೀ ರಾಜ್ಯಗಳಲ್ಲಿ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ಮೋದಿ ಒತ್ತಿ ಹೇಳಿದರು. ಅತಿ ಹೆಚ್ಚಿನ ಸೋಂಕಿನ ಪ್ರದೇಶಗಳಲ್ಲಿ ಲಸಿಕೆ ಒಂದು ವ್ಯೂಹಾತ್ಮಕ ಸಾಧನ ಎಂದು ಬಣ್ಣಿಸಿದ ಪ್ರಧಾನಮಂತ್ರಿಯವರು, ಲಸಿಕೆಯ ಸಮರ್ಥ ಬಳಕೆಯ ಬಗ್ಗೆ ಪ್ರತಿಪಾದಿಸಿದರು. ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ಸಾಮರ್ಥ್ಯ ಸುಧಾರಣೆಗೆ ಈ ಸಮಯ ಬಳಸಿಕೊಳ್ಳುತ್ತಿರುವ ರಾಜ್ಯಗಳನ್ನು ಪ್ರಧಾನಮಂತ್ರಿ ಪ್ರಶಂಸಿಸಿದರು.

Reviewing the COVID-19 situation with Chief Ministers. https://t.co/NKHL3Mz0yk

— Narendra Modi (@narendramodi) July 16, 2021

ಐಸಿಯು ಹಾಸಿಗೆಗಳು ಮತ್ತು ಪರೀಕ್ಷಾ ಸಾಮರ್ಥ್ಯದಂತಹ ವೈದ್ಯಕೀಯ ಮೂಲಸೌಕರ್ಯ ಹೆಚ್ಚಳಕ್ಕೆ ಒದಗಿಸಲಾಗುತ್ತಿರುವ ಆರ್ಥಿಕ ನೆರವಿನ ಬಗ್ಗೆಯೂ ಪ್ರಧಾನಮಂತ್ರಿ ಮಾತನಾಡಿದರು. ಇತ್ತೀಚಿಗೆ ಅನುಮೋದಿಸಲಾದ 23,000 ತುರ್ತು ಕೋವಿಡ್ ಸ್ಪಂದನಾ ಪ್ಯಾಕೇಜ್ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ವೈದ್ಯಕೀಯ ಮೂಲಸೌಕರ್ಯವರ್ಧನೆಗೆ ಈ ನಿಧಿ ಬಳಸುವಂತೆ ತಿಳಿಸಿದರು.

ರಾಜ್ಯಗಳು ಮೂಲಸೌಕರ್ಯದ ಕಂದಕ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಇದನ್ನು ಸರಿದೂಗಿಸಬೇಕು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಐಟಿ ವ್ಯವಸ್ಥೆ, ನಿಯಂತ್ರಣ ಕೊಠಡಿ ಮತ್ತು ಕಾಲ್ ಸೆಂಟರ್ ಗಳನ್ನು ಬಲಪಡಿಸುವಂತೆ ತಿಳಿಸಿದ ಅವರು, ಇದರಿಂದ ನಾಗರಿಕರು ಸಂಪನ್ಮೂಲಗಳು ಮತ್ತು ದತ್ತಾಂಶವನ್ನು ಪಾರದರ್ಶಕ ರೀತಿಯಲ್ಲಿ ಪಡೆಯುತ್ತಾರೆ ಮತ್ತು ರೋಗಿಗಳು ತೊಂದರೆಯಿಂದ ದೂರವಾಗುತ್ತಾರೆ ಎಂದರು. ಸಭೆಯಲ್ಲಿ ಹಾಜರಿರುವ ರಾಜ್ಯಗಳಿಗೆ 332 ಪಿ.ಎಸ್.ಎ. ಸ್ಥಾವರಗಳನ್ನು ಹಂಚಿಕೆ ಮಾಡಲಾಗಿದ್ದು, ಇದರಲ್ಲಿ 53 ಕಾರ್ಯಾರಂಭ ಮಾಡಿವೆ ಎಂದು ಮೋದಿ ಹೇಳಿದರು. ಸ್ಥಾವರಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿಸಿದರು. ಮಕ್ಕಳು ಸೋಂಕಿತರಾಗದಂತೆ ತಡೆಯುವ ಅಗತ್ಯವನ್ನು ಪ್ರತಿಪಾದಿಸಿದ ಪ್ರಧಾನಮಂತ್ರಿಯವರು, ಈ ಸಂಬಂಧ ಎಲ್ಲ ಸಾಧ್ಯ ಸಿದ್ಧತೆ ಮಾಡುವಂತೆ ತಿಳಿಸಿದರು.

  • ವರದಿ:ಪಿಐಬಿ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

Comments 1

  1. Kavitha HG says:
    4 years ago

    Good luck students

    Reply

Leave a Reply Cancel reply

Your email address will not be published. Required fields are marked *

Recommended

kochimul appointment scam: ಕೋಚಿಮುಲ್‌ ನೇಮಕಾತಿ ಕರ್ಮಕಾಂಡ

kochimul appointment scam: ಕೋಚಿಮುಲ್‌ ನೇಮಕಾತಿ ಕರ್ಮಕಾಂಡ

1 year ago
ಮುಖ್ಯಮಂತ್ರಿ ಮಾಂಸಾಹಾರ ಬಿಟ್ಟಿದ್ದು ಯಾವಾಗ?

ಮುಖ್ಯಮಂತ್ರಿ ಮಾಂಸಾಹಾರ ಬಿಟ್ಟಿದ್ದು ಯಾವಾಗ?

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ