• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ

cknewsnow desk by cknewsnow desk
July 18, 2021
in CHIKKABALLAPUR, STATE
Reading Time: 2 mins read
0
ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ
1.3k
VIEWS
FacebookTwitterWhatsuplinkedinEmail

ಮನೆಗಳಿಗೆ ನುಗ್ಗಿದ ನೀರು, ಇಡೀ ರಾತ್ರಿ ಜನರ ಜಾಗರಣೆ, ಕುಸಿದ ಗೋಡೆಗೆ ಸಿಕ್ಕಿ ಕಾರು ಜಖಂ

by M Krishnappa Chikkaballapura

ಚಿಕ್ಕಬಳ್ಳಾಪುರ: ನಗರದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಜನರು ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ರಸ್ತೆಗಳು ಜಲಾವೃತವಾಗಿದ್ದವು. ವಾಹನಗಳ ಮೇಲೆ ಗೋಡೆಗಳು ಕುಸಿದುಬಿದ್ದು ಜಖಂಗೊಂಡಿವೆ.

ನಗರದ 9ನೇ ವಾರ್ಡಿನ ಶೆಟ್ಟಿಹಳ್ಳಿ ಬಡಾವಣೆಯ ಒಳಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಬಡಾವಣೆಯ ಕೆಲ ಮನೆಗಳಿಗೆ ರಾತ್ರಿ 10 ಗಂಟೆಯಿಂದಲೇ ನುಗ್ಗಿದ ಒಳಚರಂಡಿ ನೀರಿನಿಂದಾಗಿ ರಾತ್ರಿ ಇಡೀ ನಿದ್ದೆ ಇಲ್ಲದೆ ಜನರು ಪರಿತಪಿಸುವಂತಾಯಿತು. ಬೆಳಗ್ಗೆ 8 ಗಂಟೆಯಾದರೂ ಮನೆಗಳಿಗೆ ನುಗ್ಗಿದ್ದ ನೀರನ್ನು ಸ್ಥಳೀಯ ನಿವಾಸಿಗಳು ಹೊರಹಾಕುತ್ತಲೇ ಇದ್ದರು.

ನಗರದ ಜಿಲ್ಲಾಸ್ಪತ್ರೆಯ ಮುಂಭಾಗದ ಪ್ರದೇಶ, ಶೆಟ್ಟಿಹಳ್ಳಿ ಬಡಾವಣೆ, ಜೈಭೀಮ್ ನಗರ, ಕಲ್ಲಪ್ಪ ಲೇಔಟ್ ಗೂಡು ಮಾರ್ಕೆಟ್ ರಸ್ತೆ ಪ್ರದೇಶಗಳು ತಗ್ಗು ಪ್ರದೇಶದಲ್ಲಿದ್ದು, ಅಲ್ಲೆಲ್ಲ ನೀರು ನುಗ್ಗಿದೆ. ವಾಹನ ಸಂಚಾರ ಮತ್ತು ಜನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿದೆ.

8ನೇ ವಾರ್ಡ್‌ನಲ್ಲಿರುವ ಅಂಜನಮ್ಮ ಎಂಬುವವರ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ದವಸ ಧಾನ್ಯವೆಲ್ಲಾ ನೀರು ಪಾಲಾಗಿದೆ. ಅಲ್ಲದೆ, ವಿದ್ಯುತ್ ಕಂಬಗಳು ಉರುಳಿ ತೇವಾಂಶದಿಂದ ಎಲ್ಲಿ ವಿದ್ಯುತ್‌ ಅವಘಡ ಉಂಟಾಗುವುದೋ ಎಂಬ ಭಯದಲ್ಲಿ ಇಡೀ ರಾತ್ರಿ ಕಳೆದಿದ್ದಾರೆ. ನಗರದ ಬಹುತೇಕ ಪ್ರದೇಶದಲ್ಲಿ ಇದೇ ಸ್ಥಿತಿ ಇತ್ತು.

ನಗರಸಭೆ ಸದಸ್ಯ ಮಟಮಪ್ಪ ಬೆಳಗ್ಗೆಯೇ ಸ್ಥಳಕ್ಕೆ ಧಾವಿಸಿ ನೀರನ್ನು ಅಲ್ಲಿಂದ ತೆರವುಗೊಳಿಸಲು ನೆರವಾದರು. ನಗರಸಭೆ ಅದ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮನೆಗಳಿಗೆ ನುಗ್ಗಿದ್ದ ನೀರಿನ ಅವಾಂತರದಿಂದ ತಾತ್ಕಾಲಿಕವಾಗಿ ನೀರು ಅಲ್ಲಿಂದ ತೆರವುಗೊಳಿಸುವಂತೆ ಕೂಡಲೇ ಆನಂದ ರೆಡ್ಡಿ ನಗರಸಭೆ ಸಿಬ್ಬಂದಿಗೆ ಸೂಚಿಸಿದರು. ಅದೇ ರೀತಿ ನಗರದ ಬಹುತೇಕ ಕಡೆಗಳಲ್ಲಿ ಮಳೆಯಿಂದ ಸೃಷ್ಟಿಯಾಗಿದ ಅವಾಂತರಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರಲ್ಲದೆ ಕೆಲ ಕಡೆಗಳಲ್ಲಿ ಈ ಹಿಂದೆಯೇ ಒಳಚರಂಡಿಗಳ ನಿರ್ಮಾಣ ವ್ಯವಸ್ಥಿತವಾಗಿರದ ಹಾಗೂ ಕೆಲ ಕಡೆ ತಗ್ಗು ಪ್ರದೇಶಗಳಲ್ಲಿಯೇ ಮನೆಗಳನ್ನು  ನಿರ್ಮಾಣ ಮಾಡಿಕೊಂಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಮಳೆ ನೀರು ಸರಾಗವಾಗಿ ಚರಂಡಿಗಳಲ್ಲಿ  ಹರಿಯುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗದಂತೆ ತಕ್ಷಣ ಕ್ರಮ ವಹಿಸಲಾಗುವುದು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲಾಗುವುದು. ಈ ಬಗ್ಗೆ ಇಂದೇ ಅಧಿಕಾರಿಗಳ ಜತೆ ಚರ್ಚಿಸಲಾಗುವುದು.

ಡಿ.ಎಸ್.ಆನಂದರೆಡ್ಡಿ ಬಾಬು ನಗರಸಭೆ ಅಧ್ಯಕ್ಷ

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮಟಮಪ್ಪ, ಯತೀಶ್, 8ನೇ ವಾರ್ಡಿನ ಯುವ ಮುಖಂಡ  ಪಾಪು ಇನ್ನಿತರರು ಇದ್ದರು.

Tags: chikkaballapuraChikkaballapura rainsheavy rainkarnatakamonsoonwall collapse
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..

ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌, ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

5 years ago
ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ