• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ ಅನ್ಲಾಕ್ 4.O; ಜುಲೈ 26ರಿಂದ ಪದವಿ ಕಾಲೇಜು ಆರಂಭ

P K Channakrishna by P K Channakrishna
July 18, 2021
in COVID-19, STATE
Reading Time: 2 mins read
0
ಕೋವಿಡ್ ಅನ್ಲಾಕ್ 4.O; ಜುಲೈ 26ರಿಂದ ಪದವಿ ಕಾಲೇಜು ಆರಂಭ
970
VIEWS
FacebookTwitterWhatsuplinkedinEmail

ಸ್ಯಾಂಡಲ್‌ವುಡ್‌ಗೆ ಗುಡ್‌ನ್ಯೂಸ್;‌ 50% ಸೀಟು ಭರ್ತಿಗೆ ಗ್ರೀನ್‌ ಸಿಗ್ನಲ್

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ವಾಣಿಜ್ಯ ವ್ಯವಹಾರಕ್ಕೆ ಮತ್ತಷ್ಟು ಸಡಿಲಕೆ ಮಾಡಲಾಗಿದ್ದು, ರಾಜ್ಯದಲ್ಲಿ ಕೋವಿಡ್‌ ಅನ್‌ಲಾಕ್ 4.O  ಮಾರ್ಗಸೂಚಿಯನ್ನು ಭಾನುವಾರ ಹೊರಡಿಸಲಾಗಿದೆ.

ಹೊಸ ಮಾರ್ಗಸೂಚಿ ಸೋಮವಾರದಿಂದ ಜಾರಿಗೆ ಬರಲಿದ್ದು, ಅರ್ಧ ಪ್ರಮಾಣದಲ್ಲಿ ಚಲನ ಚಿತ್ರಮಂದಿರಗಳು ತೆರೆದುಕೊಳ್ಳಲಿವೆ. ಮುಖ್ಯವಾಗಿ ಜುಲೈ 26ರಿಂದ ಪದವಿ ಕಾಲೇಜುಗಳು ಆರಂಭವಾಗಲಿವೆ.

ಭಾನುವಾರ ತಮ್ಮ ನಿವಾಸದಲ್ಲಿ ಹಿರಿಯ ಸಚಿವರು, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್‌ ಸೋಂಕು ಇಳಿಮುಖ ಆಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಮತ್ತಷ್ಟು ರಿಯಾಯಿತಿ ನೀಡುವ ನಿರ್ಧಾರ ಕೈಗೊಂಡರು. ಜತೆಗೆ, ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಅವಧಿಯಲ್ಲೂ ಒಂದು ಗಂಟೆ ಕಡಿತಗೊಳಿಸಿ, ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ ರಾತ್ರಿ ಕರ್ಫ್ಯೂ ವಿಧಿಸಿ ನಿರ್ಣಯ ಕೈಗೊಂಡಿದ್ದಾರೆ.

ಈಗಾಗಲೇ ಆನ್‌ಲೈನ್‌ ಮೂಲಕ ನಡೆಯುತ್ತಿರುವ ಪದವಿ ತರಗತಿಗಳನ್ನು ಭೌತಿಕವಾಗಿ ಆರಂಭಿಸಲು ಸರಕಾರ ನಿರ್ಧರಿಸಿದ್ದು, ಜುಲೈ 26ರಿಂದ ನೇರ ಅಥವಾ ಆಫ್‌ಲೈನ್ ತರಗತಿಗಳು ಶುರುವಾಗಲಿವೆ. ತರಗತಿಗಳಿಗೆ ಹಾಜರಾಗಲಿಚ್ಛಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆಯ ಮೊದಲ ಡೋಸ್ ಪಡೆದಿರಲೇಬೇಕು. ಇನ್ನು ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈಜುಕೊಳ ತೆರೆಯಲು ಅನುಮತಿ‌‌ ನೀಡಲಾಗಿಲ್ಲ. ಆದರೆ ಸಿನಿಮಾ ಮಂದಿರಗಳಲ್ಲಿ ಕೋವಿಡ್‌ ನಿಯಮಗಳನ್ನು ಕಟುನಿಟ್ಟಾಗಿ ನೋಡಿಕೊಳ್ಳಬೇಕು ಮತ್ತು ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಉಳಿದಂತೆ ಬಾರ್‌ಗಳಲ್ಲಿ ಮದ್ಯ ಸೇವನೆಗೆ ಈವರೆಗೆ ವಿಧಿಸಲಾಗಿದ್ದ ಶೇ.50 ರಷ್ಟು ಮಿತಿ ಮುಂದುವರಿಸಲಾಗಿದೆ. ರಾತ್ರಿ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಕಡಿತ ಮಾಡಿದ ಕಾರಣಕ್ಕೆ ಬಾರ್‌ಗಳಲ್ಲಿ ಮುಂದಿನ ದಿನಗಳಲ್ಲಿ ರಾತ್ರಿ 10 ಗಂಟೆ ತನಕ ಮದ್ಯ ಸೇವನೆಗೆ ಅವಕಾಶ ಕೊಡಲಾಗಿದೆ. ಆದರೆ, ಪಬ್‌ಗಳಲ್ಲಿ ಮದ್ಯ ಸೇವನೆ, ರಾತ್ರಿ ಪಾರ್ಟಿಗಳಿಗೆ ಅವಕಾಶ ಇಲ್ಲ. ಹಾಗೆಯೇ ಒಳಾಂಗಣ ಚಿತ್ರೀಕರಣ, ಕ್ರೀಡಾಂಗಣಗಳಿಗೂ ಅವಕಾಶ ನೀಡಲಾಗಿಲ್ಲ. ಮದುವೆಗೆ 100 ಜನರ ಮಿತಿ ಇದ್ದು, ಅಂತ್ಯಕ್ರಿಯೆಯಲ್ಲಿ 20 ಜನರಷ್ಟೇ ಪಾಲ್ಗೊಳ್ಳುವ ನಿಯಮವನ್ನು ಮುಂದುವರಿಸಲಾಗಿದೆ.

ಡಾ.ಸುಧಾಕರ್‌ ಇರಲಿಲ್ಲ

ಅತ್ಯಂತ ಮಹತ್ವದ ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಭಾಗಿಯಾಗಿರಲಿಲ್ಲ. ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಅಶೋಕ್‌, ಅರವಿಂದ ಲಿಂಬಾವಳಿ ಮಾತ್ರ ಭಾಗಿಯಾಗಿದ್ದರು. ಮುಖ್ಯ ಕಾರ್ಯದರ್ಶಿ ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ಎಸ್.‌ ರಮಣರೆಡ್ಡಿ ಮುಂತಾದವರು ಉಪಸ್ಥಿತರಿದ್ದರು. ಸುಧಾಕರ್‌ ಗೈರಿಗೆ ಕಾರಣ ಗೊತ್ತಾಗಿಲ್ಲ.

ಮುಖ್ಯಮಂತ್ರಿ @BSYBJP ರವರು ಇಂದು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಉಪಮುಖ್ಯಮಂತ್ರಿ @drashwathcn, ಸಚಿವರುಗಳಾದ @RAshokaBJP, @ArvindLBJP, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.#KarnatakaFightsCorona pic.twitter.com/jz1fCG5TIW

— CM of Karnataka (@CMofKarnataka) July 18, 2021

Colleges and institutions of Department of Higher Education are permitted to re-open from 26/7/2021. Only students, teaching, non-teaching/other staff who have taken at least one dose of COVID-19 vaccine will be permitted. Attendance of students is optional.

2/3 pic.twitter.com/YLWPzZr4Ii

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) July 18, 2021
Tags: bs yediyurappacovid19degree college reopenkannada cinema reopenkarnataka fight back coronatemples reopenunlock 4.o
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ನಿಧನ

ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ನಿಧನ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

ಗುಡಿಬಂಡೆ; ಸಾಧಕರಿಗೆ ರಾಜ್ಯೋತ್ಸವ ಗೌರವ

2 years ago
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

50% ಆಸನ ಭರ್ತಿ: ʼಯುವರತ್ನʼ ಚಿತ್ರತಂಡದ ಮನವಿ ಪುಸ್ಕರಿಸದ ಸರಕಾರ; ಯಾವ ಕಾರಣಕ್ಕೂ ಕೋವಿಡ್‌ ಹೊಸ ಮಾರ್ಗಸೂಚಿ ಬದಲಾವಣೆ ಇಲ್ಲ ಎಂದ ಡಾ.ಸುಧಾಕರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ