• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

cknewsnow desk by cknewsnow desk
July 18, 2021
in STATE
Reading Time: 2 mins read
0
ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್
1.3k
VIEWS
FacebookTwitterWhatsuplinkedinEmail

ಜಿಟಿಜಿಟಿ ಮಳೆಯ ನಡುವೆ ರಮ್ಯತಾಣಗಳಲ್ಲಿ ಪ್ರವಾಸಿಗರ ವಿಹಾರ

‌

by GS Bharath Gudibande

ಗುಡಿಬಂಡೆ: ನಮ್ಮ ಹೆಮ್ಮೆಯ ದೇಶ ಭಾರತದ ನಕ್ಷೆಯಂತೆ ಕಾಣುವ ಅಮಾನಿ ಭೈರಸಾಗರ ಕೆರೆ, ಟ್ರೆಕಿಂಗ್ ಮಾಡಲು 7 ಸುತ್ತಿನ ಕೋಟೆಯುಳ್ಳ ಸುರಸದ್ಮಗಿರಿ, ಸುತ್ತಲೂ ಬಗೆಬಗೆಯ ವನ್ಯಜೀವಿಗಳಿರುವ ಕಾಡು, ಅಕ್ಕಪಕ್ಕದಲ್ಲೇ ಐತಿಹಾಸಿಕ ತಾಣಗಳು, ಅನತಿ ದೂರದಲ್ಲೇ ಜೀವವೈವಿಧ್ಯ ತಾಣ ಆದಿನಾರಾಯಣ ಬೆಟ್ಟ, ಪೂರ್ವಕ್ಕೆ ವರಾಹ ರೂಪದಲ್ಲಿ ಗಂಭೀರವಾಗಿ ಕಾಣುವ ವರ್ಲಕೊಂಡೆ ಬೆಟ್ಟ.. ಮೇಲಾಗಿ ಕಣ್ಣು ಹಾಯಿಸಿದಷ್ಟೂ ದೂರ ಬೆಟ್ಟಗಳ ನಯನಮನೋಹರ ಸಾಲು..

ಹೀಗೆ ಅನೇಕ ವಿಶೇಷಗಳ ಸುಂದರ ತಾಣವೊಂದು ರಾಜಧಾನಿ ಬೆಂಗಳೂರಿಗೆ ಕೇವಲ 95 ಕಿ.ಮೀ. ದೂರದಲ್ಲಿದೆ.

ಹೌದು. ಆಂಧ್ರ ಪ್ರದೇಶಕ್ಕೆ ಅಂಟಿಕೊಂಡಿರುವ ಗುಡಿಬಂಡೆಯೇ ಆ ಸೊಬಗಿನ ತಾಣ. ಬೆಂಗಳೂರಿನ ವಾರಾಂತ್ಯದ ವಿಹಾರಿಗಳಿಗೆ, ಮುಖ್ಯವಾಗಿ ಟ್ರೆಕ್ಕಿಂಗ್‌ ಪ್ರಿಯರಿಗೆ, ಟೆಕ್ಕಿಗಳಿಗೆ ಹಾಟ್‌ ಫೇವರೀಟ್‌ ಆಗಿರುವ ತಾಣವೂ ಹೌದು. ಬೆಂಗಳೂರಿಗರಿಗೆ ಲಾಂಗ್‌ಡ್ರೈವ್‌ ನೆನಪಾದರೆ ತಕ್ಷಣವೇ ಕಣ್ಣೆದುರು ಬರುವ ಐತಿಹಾಸಿಕ ಮನಮೋಹಕ ಪಟ್ಟಣವಾಗಿದೆ ಗುಡುಬಂಡೆ.

ಅನ್‌ಲಾಕ್ ಆದ ಪ್ರವಾಸಿಗರು

ಕೋವಿಡ್‌ ಕಾರಣಕ್ಕೆ ಮನೆಗಳಲ್ಲೇ ಲಾಕ್‌ ಆಗಿದ್ದ ಪ್ರವಾಸಿಗರು ಈಗ ಅನ್‌ಲಾಕ್‌ ಆಗಿದ್ದಾರೆ. ಅವರ ಜೋಶ್‌ ಇಮ್ಮಿಡಿಸಿದೆ. ಪರಿಣಾಮ ಗುಡಿಬಂಡೆಯತ್ತ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಈ ವೀಕೆಂಡ್‌ ಬಹಳ ವಿಶೇಷವಾಗಿದೆ. ಜಿಟಿಜಿಟಿ ಮಳೆಯ ನಡುವೆ ಬೆಂಗಳೂರಿನ ಜನ ಅಮಾನಿ ಭೈರಸಾಗರ ಮತ್ತು ಸುರಸದ್ಮಗಿರಿಯಲ್ಲಿ ವಿಹಾರ ನಡೆಸುತ್ತಿದ್ದಾರೆ. ಅದರಲ್ಲೂ ಸುರಸದ್ಮಗಿರಿಗೆ ಮೋಡಗಳು ಮುತ್ತಿಕ್ಕುವ ಹಾಗೂ ಬೆಟ್ಟದ ಮೋಡಗಳ ಹೊದಿಕೆಯಲ್ಲಿ ಪುಳಕಿರಾಗುತ್ತಿದ್ದಾರೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ, ಊಟಿಯ ದೊಡ್ಡಬೆಟ್ಟದಲ್ಲಿ ಸಿಗುವಂಥ ಅವರ್ಣನೀಯ ಅನುಭೂತಿ ಗುಡಿಬಂಡೆ ಬೆಟ್ಟದಲ್ಲಿ ಸಿಗುತ್ತಿದೆ ಎನ್ನುತ್ತಾರೆ ಪ್ರವಾಸಿಗರು. ಅಲ್ಲದೆ, ನಂದಿಬೆಟ್ಟ, ಆವುಲಬೆಟ್ಟಕ್ಕೂ ದಾಖಲೆಯ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಬೆಂಗಳೂರು ಹತ್ತಿರ ದೊಡ್ಡ ಟೂರಿಸ್ಟ್‌ ಸರ್ಯೂಟ್‌ ಆಗಿ ಹೊರಹೊಮ್ಮುತ್ತಿದೆ.

ವೀಕೆಂಡ್‌ನಲ್ಲಿ ಅಂದಾಜು 200 ಕಾರು, ನೂರಾರು ಬೈಕ್‌ಗಳಲ್ಲಿ ಸುಮಾರು ಎರಡರಿಂದ ಮೂರು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಗುಡಿಬಂಡೆಗೆ ಭೇಟಿ ನೀಡುತ್ತಿದ್ದಾರೆ.

ನಾನು ಮೊದಲ ಸಲ ಗುಡಿಬಂಡೆಗೆ ಬಂದಿದ್ದೇನೆ. ಅದ್ಬುತ ಸ್ಥಳ. ವೀಕೆಂಡ್ ಸಂದರ್ಭದಲ್ಲಿ ಇಲ್ಲಿಗೆ ಬಂದು ನಮ್ಮ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬಹುದು. ಏಳುಸುತ್ತಿನ ಕೋಟೆ, ಭಾರತದ ಭೂ ನಕ್ಷೆಯಂತಿರುವ ಕೆರೆ ಮನಮೋಹಕವಾಗಿದೆ. ಇಲ್ಲಿ ಎಲ್ಲ ತಾಣಗಳು ಬಹಳ ಚೆನ್ನಾಗಿವೆ.

ಹರೀಶ್ ಪಾಲ್ ಬೆಂಗಳೂರಿನ ಪ್ರವಾಸಿಗ

ಕೆಲಸದ ಒತ್ತಡದಿಂದ ಇರುವವರ ರಿಲ್ಯಾಕ್ಸ್‌ಗೆ ಗುಡಿಬಂಡೆ ಬೆಸ್ಟ್‌ ಪ್ಲೇಸ್.‌ ಪ್ರಕೃತಿಯ ಸೊಬಗು ನೋಡಿ ಆನಂದಿಸಲು ಗುಡಿಬಂಡೆ ತಾಲೂಕಿಗೆ ಒಮ್ಮೆ ಭೇಟಿ ನೀಡಲೇಬೇಕು. ಇವತ್ತಿನ ತುಂತುರು ಮಳೆ, ಹಿತವಾದ ವಾತಾವರಣ, ಈ ಮನಮೋಹಕ ಪರಿಸರಕ್ಕೆ ನಮ್ಮ ಮನಸ್ಸು ಸೋತಿದೆ.

ರವಿ ಬೆಂಗಳೂರಿನ ಪ್ರವಾಸಿಗ

ಕೋವಿಡ್‌ ಆತಂಕ

ವೀಕೆಂಡ್‌ ಬಂದರೆ ಪ್ರವಾಸಿಗರು ಭಾರೀ ಪ್ರಮಾಣದಲ್ಲಿ ಗುಡಿಬಂಡೆಗೆ ಬರುತ್ತಿದ್ದಾರೆ. ಪ್ರವಾಸಿಗರು ಬರುವುದಕ್ಕೆ ಯಾವ ಅಡ್ಡಿಯೂ ಇಲ್ಲ. ಆದರೆ, ಅವರಲ್ಲಿ ಬಹುತೇಕರು ಕೋವಿಡ್‌ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮೂರನೇ ಅಲೆ ಭೀತಿಯೂ ಇರುವುದರಿಂದ ಪಟ್ಟಣದ ಜನ ಹೆಚ್ಚು ಆತಂಕ್ಕೆ ಗುರಿಯಾಗಿದ್ದಾರೆ. ಪ್ರವಾಸಿಗರು ಕೋವಿಡ್‌ ನಿಯಮ ಪಾಲಿಸುತ್ತಿಲ್ಲ. ಮಾಸ್ಕ್‌ ಧರಿಸುತ್ತಿಲ್ಲ. ಅಲ್ಲದೆ, ಕೆಲವರು ಅಲ್ಲಲ್ಲಿಯೇ ಮಾಸ್ಕ್‌ಗಳನ್ನು, ಪ್ಲಾಸ್ಟಿಕ್‌ ವಸ್ತುಗಳನ್ನು ಬಿಸಾಡುತ್ತಿದ್ದಾರೆ. ಹೀಗಾಗಿ ಸ್ಥಳೀಯ ಆಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ.

ಪ್ರವಾಸಿ ಸ್ಥಳಗಳಲ್ಲಿ ಶೌಚಾಲಯ, ಕಸದ ಡಬ್ಬಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇದರಿಂದ ಪ್ರವಾಸಿಗರಿಗೆ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗಳನ್ನು ಬಗೆಹರಿಸಬೇಕು.

ಗೋಪಿ ಗುಡಿಬಂಡೆ ನಿವಾಸಿ

ಚಿಕ್ಕಬಳ್ಳಾಪುರ ಟೂರಿಸಂ ಸರ್ಕ್ಯೂಟ್‌

ಅನೇಕ ಐತಿಹಾಸಿಕ, ಪ್ರಾಕೃತಿಕ ಪ್ರವಾಸಿ ತಾಣಗಳನ್ನು ಹೊಂದಿರುವ ಇಡೀ ಚಿಕ್ಕಬಳ್ಳಾಪುರ ಅಷ್ಟೂ ತಾಣಗಳ ಸಂಪರ್ಕ ಕಲ್ಪಿಸುವ ಚಿಕ್ಕಬಳ್ಳಾಪುರ ಟೂರಿಸಂ ಸರ್ಕ್ಯೂಟ್‌ ರೂಪಿಸಬೇಕು ಎಂಬ ಬೇಡಿಕೆ ಜಿಲ್ಲೆಯ ಜನರಲ್ಲಿದೆ. ನಂದಿಬೆಟ್ಟ, ಆವಲಬೆಟ್ಟ, ಗುಡಿಬಂಡೆ ಬೆಟ್ಟ, ವರ್ಲಕೊಂಡೆ ಬೆಟ್ಟ. ಗಡಿದಂ, ಗುಮ್ಮನಾಯಕನಪಾಳ್ಯ, ದೇವಿಕುಂಟೆ ಕೋಟೆ, ವಿಧುರಾಶ್ವಥ, ನಂದಿ, ಕೈವಾರ ಇತ್ಯಾದಿ ತಾಣಗಳನ್ನು ಒಳಗೊಂಡ ಟೂರಿಸಂ ಸರ್ಕ್ಯೂಟ್‌ ರೂಪಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ಪ್ರಯತ್ನ ಮಾಡಬೇಕಿದೆ.

Tags: amani byrasagara lakebangalorechikkaballapurachikkaballapura tourism circuitgudibandeKarnataka tourismlong driveweekend travel
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

2022-23ರಿಂದ ಕನ್ನಡದಲ್ಲೂ ಎಂಜಿನಿಯರಿಂಗ್

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ