• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..

cknewsnow desk by cknewsnow desk
July 18, 2021
in STATE
Reading Time: 1 min read
0
ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..
996
VIEWS
FacebookTwitterWhatsuplinkedinEmail

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆ. ಸೋಮವಾರದಿಂದ ಪರೀಕ್ಷೆ ಆರಂಭವಾಗಲಿದೆ.

ರಾಜ್ಯದಲ್ಲಿ ಈ ಸಲ 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದರಲ್ಲಿ ಬಾಲಕರು 4,72,643 ಇದ್ದರೆ, 4,03,938 ಬಾಲಕಿರು ಇದ್ದಾರೆ. ಇನ್ನು 7,83,955 ಪ್ರೆಶರ್ಸ್ ಇದ್ದು, 977 ಪುನಾವರ್ತಿತ ವಿದ್ಯಾರ್ಥಿಗಳು ಇದ್ದಾರೆ. ಜತೆಗೆ, 21,817 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಲ್ಲದೆ, 9419 ಖಾಸಗಿ ‌ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒ ಟ್ಟು 4,884 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 73,066 ಪರೀಕ್ಷಾ ಕೊಠಡಿಗಳವೆ.

ಜುಲೈ 19ರಿಂದ 22ರವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿಭದ್ರತೆ ಮಾಡಲಾಗಿದೆ. ಮುಖ್ಯವಾಗಿ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ ಮಾಡಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಕೊನೆಗೊಳ್ಳಲಿದೆ.

ಪರೀಕ್ಷಾ ವಿಧಾನ ಮೊದಲಿನಂತೆ ಇರುವುದಿಲ್ಲ. ಕೆಪಿಎಸ್ಸಿ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 40 ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ. ಕಾಲಾವಕಾಶ ಮೂರು ಗಂಟೆ. ಈ ಅವಧಿಯಲ್ಲಿ ‌ಮೂರು ವಿಷಯಗಳಿಗೆ ಪರೀಕ್ಷೆ ಬರೆಯಬೇಕಿದೆ.

ರಾಜ್ಯದ 1,4929 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಆಯಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಮೂಲಕ ಡೌನ್‍ಲೋಡ್ ಮಾಡಿಕೊಂಡಿದ್ದು, ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದಿದ್ದಾರೆ. ಎಲ್ಲ ಮಕ್ಕಳು ಪ್ರವೇಶ ಪತ್ರ ಪಡೆದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಪರೀಕ್ಷೆಗೆ ಹಾಜರಾಗಲು ಸಿದ್ಧರಾಗಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿದ ಯಾವುದೇ ವಿದ್ಯಾರ್ಥಿ ಪ್ರವೇಶ ಪತ್ರ ಪಡೆಯಲು ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ಬಿಇಒ/ಡಿಡಿಪಿಐಗಳನ್ನು ಸಂಪರ್ಕಿಸಿ ಪಡೆಯಬಹುದು. ಇದರ ಸಮನ್ವಯಕ್ಕಾಗಿ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಸೋಮವಾರ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರವೇ ಎಲ್ಲ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಆವರಣವನ್ನು ಸ್ಯಾನಿಟೈಜ್ ಮಾಡಲಾಗುತ್ತದೆ. ಪರೀಕ್ಷೆ ಮುಗಿದ ನಂತರವೂ ಸ್ಯಾನಿಟೈಜ್ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್ ತಿಳಿಸಿದ್ದಾರೆ.‌

ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಈಗಾಗಲೇ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದವರನ್ನಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್‌ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಲಿದ್ದಾರೆ. ಕಳೆದ ವರ್ಷದ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ದ್ವಿಗುಣಗೊಳಿಸಲಾಗಿದೆ. ಪರೀಕ್ಷಾ ಕೊಠಡಿಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಈ ಬಾರಿ ಪರೀಕ್ಷೆ ಸರಳೀಕೃತವಾಗಿರಲಿದೆ.

ಸುರೇಶ್‌ ಕುಮಾರ್ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

ವಿಶೇಷ ಕೊಠಡಿ

ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಲಾಗಿದೆ. ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್‌ ಪ್ರವೇಶಿಸುವರು. ಆರೋಗ್ಯ ಕೌಂಟರ್‌ ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್ ಸ್ಯಾನರ್, ಪಲ್ಸ್‌ ಆಕ್ಸಿಮೀಟರ್‌, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರಲಿವೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್‌ ಗಳಲ್ಲೇ ಮಾಸ್ಕ್‌ ನೀಡಲಾಗುತ್ತದೆ.

ತುರ್ತು ಚಿಕಿತ್ಸಾ ವಾಹನ

ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್‌ ಶೀಲ್ಡ್‌ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಆಯಾ ಜಿಲ್ಲಾಧಿಕಾರಿಗಳು ಗಡಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವ್ಯವಹರಿಸಿ ಕ್ರಮ ವಹಿಸಲಾಗಿದೆ.

ಕೋವಿಡ್‌ ಕೇರ್‌ ಸೆಂಟರ್

ಪರೀಕ್ಷಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್‌ ಕೇರ್‌ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂದು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್‌ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡು ಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್‌ ಕೇರ್‌ ಸೆಂಟರ್‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್‌ ಕೇರ್‌ ಕೇಂದ್ರದಲ್ಲಿ ಒಂದು ಅಂಬುಲೆನ್ಸ್‌ ವಾಹನ ಕಾಯ್ದಿರಿಸಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೇಟ್‌ʼಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ನೀಡಲಾಗಿದೆ. ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಯಾವುದೇ ಪ್ರಕರಣಗಳಿಗೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಆಯಾ ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್‌ʼಗಳನ್ನು ಮುಚ್ಚಿಸಲು ಮತ್ತು ಸೆಕ್ಷನ್-144 ಜಾರಿಗೊಳಿಸಲು ಕ್ರಮ ವಹಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಸಮಯದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರು ಪರೀಕ್ಷಾ ಕೇಂದ್ರದ ಬಳಿ ಸಂಚಾರ ಒತ್ತಡವಾದಂತೆ ಕ್ರಮ ವಹಿಸಲಿದ್ದಾರೆ.

Tags: covid19. karnataka fight back coronaprimary educations suresh kumarsslc examination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಕಿಯಲ್ಲಿ ಸುಟ್ಟುಹೋದ ನೋಟಿನ ಕಂತೆಗಳು; ಬಾಗೇಪಲ್ಲಿ ವ್ಯಾಪಾರಿ ಮಳಿಗೆಯಲ್ಲಿ ವಿದ್ಯುತ್ ದುರಂತ

ಬೆಂಕಿಯಲ್ಲಿ ಸುಟ್ಟುಹೋದ ನೋಟಿನ ಕಂತೆಗಳು; ಬಾಗೇಪಲ್ಲಿ ವ್ಯಾಪಾರಿ ಮಳಿಗೆಯಲ್ಲಿ ವಿದ್ಯುತ್ ದುರಂತ

Leave a Reply Cancel reply

Your email address will not be published. Required fields are marked *

Recommended

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ನಾಳೆಯಿಂದ (ಮೇ 10) 18-44 ವರ್ಷ ವಯೋಮಾನದ ಎಲ್ಲರಿಗೂ ಕೋವಿಡ್ ಲಸಿಕೆ; ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಸಿಗಲಿದೆ ವ್ಯಾಕ್ಸಿನ್: ಸಚಿವ ಡಾ.ಕೆ.ಸುಧಾಕರ್

5 years ago
ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

ಜೈವಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚು ಸಹಕಾರ: ನಿರ್ಮಲಾ ಸೀತಾರಾಮನ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ