• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಆಸ್ಪತ್ರೆಗೆ ಆಸ್ಟ್ರೇಲಿಯಾದಿಂದ ಬಂದ 5 ಆಮ್ಲಜನಕ ಸಾಂದ್ರಕ ಹಸ್ತಾಂತರ

cknewsnow desk by cknewsnow desk
July 20, 2021
in CHIKKABALLAPUR, COVID-19
Reading Time: 1 min read
0
ಗುಡಿಬಂಡೆ ಆಸ್ಪತ್ರೆಗೆ ಆಸ್ಟ್ರೇಲಿಯಾದಿಂದ ಬಂದ 5 ಆಮ್ಲಜನಕ ಸಾಂದ್ರಕ ಹಸ್ತಾಂತರ
1.1k
VIEWS
FacebookTwitterWhatsuplinkedinEmail

by GS Bharath Gudibande

ಗುಡಿಬಂಡೆ: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ವೆಸ್ಟ್ರನ್ ಆಸ್ಟ್ರೇಲಿಯಾದ ಕನ್ನಡಪರ ಸಂಘದ ವತಿಯಿಂದ ನೀಡಲಾದ ಐದು ಆಮ್ಲಜನಕ ಸಾಂದ್ರಕಗಳನ್ನು ಮಂಗಳವಾರ ಆಸ್ಪತ್ರೆಯ ವೈದ್ಯರಿಗೆ ಹಸ್ತಾಂತರ ಮಾಡಲಾಯಿತು.

ಆಸ್ಪತ್ರೆಯಲ್ಲಿ ವೆಸ್ಟ್ರನ್ ಆಸ್ಟ್ರೇಲಿಯಾದ ಕನ್ನಡಪರ ಸಂಘ, ಆರ್ಟ್ ಆಫ್ ಲಿವಿಂಗ್, ಐಎಹೆಚ್‌ವಿ ಸಂಸ್ಥೆ ಮತ್ತು ತಾಲೂಕು ಜಯ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಘದ ನರೇಂದ್ರ ಮತ್ತಿತರರು ನೀಡಿದರು.

ಈ ಸಂದರ್ಭದಲ್ಲಿ ವೈದ್ಯರ ಜತೆಗೂಡಿ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ಮಾತನಾಡಿದ ಗುಡಿಬಂಡೆ ತಹಸೀಲ್ದಾರ್‌ ತಹಶೀಲ್ದಾರ್ ಸಿಬ್ಗತ್ ವುಲ್ಲಾ, “ಪ್ರಪಂಚದ ಯಾವ ಮೂಲೆಯಲ್ಲೇ ಇದ್ದರೂ, ಹುಟ್ಟೂರಿನ ಮೇಲೆ ಪ್ರೀತಿ ಇರುತ್ತದೆ ಎಂಬುದಕ್ಕೆ ಈ ಆಮ್ಲಜನಕ ಸಾಂದ್ರಕಗಳೆ ಸಾಕ್ಷಿ. ಇವು ಇಲ್ಲಿವರೆಗೂ ಬರಲು ಶ್ರಮಿಸಿದ ಆಸ್ಟ್ರೇಲಿಯಾದ ಕನ್ನಡ ಮತ್ತು ಸಂಘದ ನರೇಂದ್ರ ಅವರಿಗೆ ನಮ್ಮೆಲ್ಲರ ಅಭಿನಂದನೆಗಳು” ಎಂದರು.

ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡಿಗನಾಗಿರು.. ಎಂಬ ಕವಿವಾಣಿಯಂತೆ ನಮ್ಮ ಕನ್ನಡಿಗರು ಪ್ರಪಂಚದ ವಿವಿಧ ದೇಶಗಳಲ್ಲಿ ಇದ್ದರೂ ನಮ್ಮ ಕನ್ನಡದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಇತರೆ ರಾಷ್ಟ್ರಗಳಲ್ಲಿರುವ ಕನ್ನಡಿಗರ ರಕ್ಷಣೆಗೆ ನಿಂತಿರುವುದು ಶ್ಲಾಘನೀಯ. ಇದೇ ರೀತಿ ತಮ್ಮ ಸೇವೆ ಮುಂದುವರೆಯಲಿ ಎಂದು ಅವರು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಮಾತನಾಡಿ, 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ವೆಸ್ಟ್ರನ್ ಆಸ್ಟ್ರೇಲಿಯಾದಿಂದ ಭಾರತಕ್ಕೆ ಅದರಲ್ಲೂ ಗುಡಿಬಂಡೆ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕಗಳನ್ನು ಕಳುಹಿಸಿರುವುದು ಹೆಮ್ಮೆಯ ವಿಚಾರ. ಆಮ್ಲಜನಕ ಸಾಂದ್ರಕಗಳು ಕೇವಲ ಕೋವಿಡ್ ಸೋಂಕಿತರಿಗೆ ಮಾತ್ರವಲ್ಲದೆ, ಇತರೆ ರೋಗಿಗಳಿಗೂ ಉಪಯೋಗವಾಗಲಿವೆ. ಸಾವಿರಾರು ಕಿ.ಮೀ ದೂರದಿಂದ ಗುಡಿಬಂಡೆಗೆ ಇವುಗಳನ್ನು ಕಳುಹಿಸಲು ಶ್ರಮಿಸಿದವರಿಗೆ ನಮ್ಮ ಧನ್ಯವಾದಗಳು ಎಂದರು.

ನಂತರ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಬುಲೆಟ್ ಶ್ರೀನಿವಾಸ್ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಆಮ್ಲಜನಕಕ್ಕೆ ಹಾಹಾಕಾರ ಉಂಟಾಗಿತ್ತು. ಈಗ 3ನೇ ಅಲೆ ಭೀತಿಯ ಎದುರಾಗಿದೆ. ತಾಲೂಕು ಆಸ್ಪತ್ರೆಗೆ ಅಗತ್ಯವಾಗಿ ಬೇಕಿರುವ ಆಮ್ಲಜನಕ ಸಾಂದ್ರಕಗಳನ್ನು ವೆಸ್ಟ್ರನ್ ಆಸ್ಟ್ರೇಲಿಯದಿಂದ ಕಳುಹಿಸಿದ್ದಾರೆ. ಇದನ್ನು ವೈದ್ಯರು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ದ್ವಾರಕನಾಥನಾಯ್ಡು, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕೆ.ಎನ್.ನವೀನ್ ಕುಮಾರ್, ಅರಣ್ಯ ಇಲಾಖೆಯ ಹುಲಿಗೆಪ್ಪ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಯುವ ವಿಭಾಗದ ಅಧ್ಯಕ್ಷ ನವೀನ್ ರಾಜ್ ಕನ್ನಡಿಗ, ಕನ್ನಡಸೇನೆ ಅಧ್ಯಕ್ಷ ಅಂಬರೀಶ್, ತಾಲೂಕು ಬಜರಂಗದಳ ಸಂಚಾಲಕ ಜಿ.ಎ.ಅಮರೇಶ್, ಸ್ಥಳೀಯರಾದ ಗೋಪಿ, ವೆಸ್ಟ್ರನ್ ಆಸ್ಟ್ರೇಲಿಯಾದ ನರೇಂದ್ರ ಮತ್ತವರ ಕುಟುಂಬ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Tags: chikkaballapuracovid19gudibandeoxygen concentratorswestern Australia kannada sangha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಬಾಗೇಪಲ್ಲಿಗೆ ಹೊಸ ವಲಯ ಅರಣ್ಯಾಧಿಕಾರಿ

ಬಾಗೇಪಲ್ಲಿಗೆ ಹೊಸ ವಲಯ ಅರಣ್ಯಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

3 years ago
ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ!!

ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ!!

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ